ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು – Kannada News | Youth Heart Attack: Gym Workout Fatal in Palamaneru, Precautions Vital
ಚಿತ್ತೂರು, ಫೆ.27: ಆರೋಗ್ಯ ವೃದ್ಧಿಸಿಕೊಳ್ಳಲು ಜಿಮ್ ಸೇರಿದ್ದ ಯುವ ಅಧಿಕಾರಿಯೊಬ್ಬರು, ಸೇರಿದ ಕೇವಲ ಒಂದು ವಾರದಲ್ಲೇ ವ್ಯಾಯಾಮದ ವೇಳೆ ಸಾವನ್ನಪ್ಪಿರುವ ದಾರುಣ ಘಟನೆ ಪಲಮನೇರು ಎಂಬಲ್ಲಿ ನಡೆದಿದೆ. ಮೃತರನ್ನು ಚಿತ್ತೂರು ಜಿಲ್ಲೆಯ ಪಲಮನೇರು ಪಟ್ಟಣದ ಡಿಸಿಸಿ ಬ್ಯಾಂಕ್ (DCC Bank) ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ (Assistant Manager) ಕೆಲಸ ಮಾಡುತ್ತಿದ್ದ ವಿಶ್ವನಾಥ್ ಎಂದು ಗುರುತಿಸಲಾಗಿದೆ. ಪ್ರತಿ ದಿನದಂತೆ ಇಂದು ಬೆಳಿಗ್ಗೆ ವಿಶ್ವನಾಥ್ ಜಿಮ್‌ಗೆ ಹೋಗಿ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ….