ಸಿದ್ದರಾಮೇಶ್ವರ ಮಹಾಸಂಸ್ಥಾನದ ಸ್ವಾಮೀಜಿಗಳ ಮೇಲೆ ಹಲ್ಲೆ: ಆರೋಪಿ ಅರೆಸ್ಟ್ – Kannada News | Tumakuru: Siddarameshwara Matha Head Assaulted Over Temple Arch Dispute
ಹಲ್ಲೆಗೊಳಗಾದ ಸ್ವಾಮೀಜಿImage Credit source: Tv9 Kannada ತುಮಕೂರು, ಫೆಬ್ರವರಿ 27: ಸಿದ್ಧರಾಮೇಶ್ವರ ದೇವಾಲಯದ ಗೋಪುರ ಮಾಡಲು ಬಿಡುತ್ತಿಲ್ಲ ಎಂದು ಆರೋಪಿಸಿ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಗೋಡೆಕೆರೆಯ ಸಿದ್ದರಾಮೇಶ್ವರ ಮಹಾಸಂಸ್ಥಾನದ ಮಠಾಧಿಪತಿಗಳ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೃತ್ಯುಂಜಯ ಸ್ವಾಮೀಜಿಗಳ ಮೇಲೆ ದಾಳಿ ಸಂಬಂಧ ಸ್ಥಳೀಯ ಹಾಗೂ ಮಠದಲ್ಲಿ ಸ್ವಾಮೀಜಿಗಳ ಜೊತೆ ಓಡಾಡಿಕೊಂಡಿದ್ದ ಸಿದ್ಧರಾಮಯ್ಯ ಎಂಬಾತನನ್ನು ಬಂಧಿಸಲಾಗಿದೆ. ಫೆಬ್ರವರಿ 11ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳಿಗ್ಗೆ ಸುಮಾರು 5.30ರ ಹೊತ್ತಿಗೆ ಮೃತ್ಯುಂಜಯ…