ದೇವನಹಳ್ಳಿ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಚಲಿಸುತ್ತಿದ್ದ ವಾಹನದಲ್ಲಿ ದಿಢೀರ್ ಬೆಂಕಿ, ಪ್ರಯಾಣಿಕರು ಪಾರು!
ದೇವನಹಳ್ಳಿ,ಮಾ.31: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಮಂಗಳವಾರ (ಮಾ.31) ನಡೆದಿದೆ. ಕಾರು ಹೆದ್ದಾರಿಯಲ್ಲಿ ವೇ ಗವಾಗಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನ ಚಾಲಕ ಮತ್ತು ಪ್ರಯಾಣಿಕರು ಹೆದ್ದಾರಿ ಮಧ್ಯೆಯೇ ಕಾರನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ. ಅವರು ಇಳಿಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಕಾರಿನಾದ್ಯಂತ ಆವರಿಸಿದ್ದು, ನೋಡ ನೋಡುತ್ತಿದ್ದಂತೆ ಇಡೀ ಕಾರು ಬೆಂಕಿಗಾಹುತಿಯಾಗಿದೆ. ಇನ್ನು ಇದನ್ನು…