Headlines

nagaraj11081993

ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಭವಿಷ್ಯದ ಬಗ್ಗೆ ಮಾತಾಡಿದ ಕೋಡಿಮಠದ ಸ್ವಾಮೀಜಿ – Kannada News | Kodi Mutt Swamiji talks about Kannada actor Darshan court case

ನಟ ದರ್ಶನ್ (Darshan) ಅವರು ಪರಪ್ಪನ ಅಗ್ರಹಾರ ಜೈಲು ಸೇರಿ ಹಲವು ದಿನಗಳು ಕಳೆದಿವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿ ಆಗಿದ್ದಾರೆ. ಅವರ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಕೋಡಿಮಠದ ಶ್ರೀಗಳು (Kodi Mutt Swamiji) ಪ್ರತಿಕ್ರಿಯೆ ನೀಡಿದ್ದಾರೆ. ‘ಸಿಂಹಪುರಿಯ ಸಿಂಹ’ ಸಿನಿಮಾ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ದರ್ಶನ್ ಬಗ್ಗೆ ಸ್ವಾಮೀಜಿ ಮಾತನಾಡಿದರು. ‘ಈ ವಿಷಯ ಕೋರ್ಟ್​​ನಲ್ಲಿ ಇದೆ. ಆ ಬಗ್ಗೆ ನಾವು ಮಾತನಾಡಬಾರದು. ಮಾತಾಡಿದರೆ ನಾವು ನ್ಯಾಯಾಲಯಕ್ಕೆ ವಿರುದ್ಧ ಹೋದಂತೆ ಆಗುತ್ತದೆ. ನ್ಯಾಯಾಲಯದಲ್ಲಿ…

Read More

ಲಾಭದ ಆಸೆ ತೋರಿಸಿ ಕೋಟ್ಯಾಂತರ ರೂ. ಪಂಗನಾಮ: 74 ವರ್ಷದ ವ್ಯಕ್ತಿ ಕಳೆದುಕೊಂಡ ಹಣದ ಮೊತ್ತ ಕೇಳಿದ್ರೆ ಶಾಕ್​​ ಆಗ್ತೀರ! – Kannada News | 74 Year Old Mangaluru Man Duped of 1.77 Crore in Online Investment Scam

ಮಂಗಳೂರು, ಫೆಬ್ರವರಿ 26: ಆನ್​​ಲೈನ್​​ ಹೂಡಿಕೆ ಹೆಸರಲ್ಲಿ ವಂಚಕರು ಮಕ್ಮಲ್​​ ಟೋಪಿ ಹಾಕುವ ಸಾಲು ಸಾಲು ಪ್ರಕರಣಗಳು ವರದಿಯಾಗುತ್ತಿದ್ದರೂ ಜನರು ಮಾತ್ರ ಈ ಬಗ್ಗೆ ಎಚ್ಚೆತ್ತುಕೊಳ್ಳುತ್ತಿಲ್ಲ. ಈ ಬಗ್ಗೆ ಪೊಲೀಸರು, ಗೃಹ ಇಲಾಖೆ ಅದೆಷ್ಟೇ ಜಾಗೃತಿ ನಡೆಸಿದರೂ ಮೋಸದ ಜಾಲಕ್ಕೆ ಸಿಲುಕಿ ಹಣ ಕಳೆದುಕೊಳ್ಳುವರ ಸಂಖ್ಯೆ ಕಡಿಮೆಯಾಗಿಲ್ಲ. ಇದಕ್ಕೆ ಉದಾಹರಣೆ ಎನ್ನುವಂತೆ ಆನ್‌ಲೈನ್ ಅಮೆರಿಕನ್ ಕಮಾಡಿಟೀಸ್ ಹೂಡಿಕೆಯಲ್ಲಿ ಹೆಚ್ಚಿನ ಲಾಭ ದೊರೆಯುವ ಆಸೆಗೆ ಬಿದ್ದ 74 ವರ್ಷದ ಮಂಗಳೂರಿನ ವ್ಯಕ್ತಿಯೋರ್ವರು ಬರೋಬ್ಬರಿ 1.77 ಕೋಟಿ ಹಣವನ್ನು ಕಳೆದುಕೊಂಡಿದ್ದಾರೆ….

Read More

ಪಿಎಂ ಕಿಸಾನ್ ಯೋಜನೆಗೆ 7 ವರ್ಷ; 22ನೇ ಕಂತಿನ ಹಣ ಸದ್ಯದಲ್ಲೇ – Kannada News | Pm kisan samman nidhi yojana completes 7 years beneficiaries waiting for 22nd installment

ನವದೆಹಲಿ, ಫೆಬ್ರುವರಿ 26: ರೈತರಿಗೆ ವರ್ಷಕ್ಕೆ 6,000 ರೂ ನೀಡುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Yojana) ಶುರುವಾಗಿ ಮೊನ್ನೆಗೆ (ಫೆ. 24) ಏಳು ವರ್ಷ ಪೂರ್ಣವಾಗಿದೆ. 2019ರ ಫೆಬ್ರುವರಿ 24ರಂದು ಈ ಯೋಜನೆ ಆರಂಭವಾಯಿತು. ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ಹಣವನ್ನು ರೈತರಿಗೆ ನೀಡುವ ಸ್ಕೀಮ್ ಇದು. ಈ ಏಳು ವರ್ಷದಲ್ಲಿ ಇಲ್ಲಿಯವರೆಗೆ 21 ಕಂತುಗಳಲ್ಲಿ ಕೋಟ್ಯಂತರ ರೈತರಿಗೆ ಹಣ ಬಿಡುಗಡೆ ಮಾಡಲಾಗಿದೆ. 21ನೇ ಕಂತಿನ ಹಣವನ್ನು 2025ರ ನವೆಂಬರ್…

Read More

Ranji Final 2025-26: 5 ವಿಕೆಟ್​ಗಳ ಗೊಂಚಲು ಪಡೆದ ಪ್ರಸಿದ್ಧ್ ಕೃಷ್ಣ – Kannada News | Ranji Final 2025 26: JK Scores 584, Prasidh Krishna’s Fifer Steals Hubballi Show!

ಹುಬ್ಬಳ್ಳಿಯಲ್ಲಿ ನಡೆದ 2025-26 ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಜೆಕೆ ತಂಡವು ಮೊದಲ ಇನ್ನಿಂಗ್ಸ್​ನಲ್ಲಿ 584 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ಆಡುತ್ತಿರುವ ಜಮ್ಮು ಮತ್ತು ಕಾಶ್ಮೀರ ತಂಡವು, ಅನುಭವಿ ಬೌಲಿಂಗ್ ವಿಭಾಗವನ್ನು ಹೊಂದಿರುವ ಕರ್ನಾಟಕ ತಂಡವನ್ನು ಸಮರ್ಥವಾಗಿ ಎದುರಿಸಿತು. ತಂಡದ ಪರ ಶುಭಂ ಪುಂಡಿರ್ ಶತಕ ಬಾರಿಸಿದರೆ, ನಾಯಕ…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ! – Kannada News | Lunar Eclipse 2026: Astrological Predictions for Virgo by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಕೇತುಗ್ರಸ್ತ ಚಂದ್ರಗ್ರಹಣದ ಕನ್ಯಾ ರಾಶಿಯವರ ಮೇಲೆ ಯಾವ ರೀತಿ ಪ್ರಭಾವ ಬೀರಲಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಕನ್ಯಾ ರಾಶ್ಯಾಧಿಪತಿ ಬುಧ ಗ್ರಹಣವನ್ನು ವೀಕ್ಷಿಸುತ್ತಿದ್ದಾನೆ. ಉತ್ತರ, ಹಸ್ತಾ, ಚಿತ್ತಾ ನಕ್ಷತ್ರದವರಿಗೆ ಇದು ಅನ್ವಯಿಸುತ್ತದೆ. ಗ್ರಹಣವು 12ನೇ ಮನೆ, ದುಃಸ್ಥಾನದಲ್ಲಿ ಸಂಭವಿಸುವುದರಿಂದ ಕನ್ಯಾ ರಾಶಿಯವರು ಬಹಳಷ್ಟು ಜಾಗ್ರತೆಯಿಂದ ಇರಬೇಕು. ಅಧಿಕ ಖರ್ಚು, ಕಣ್ಣಿನ ಸಮಸ್ಯೆ, ರಕ್ತದೊತ್ತಡದ ಸಮಸ್ಯೆ, ನಿದ್ರಾಹೀನತೆ, ಆತಂಕ, ಮತ್ತು ಆತುರದ ನಿರ್ಧಾರಗಳಿಂದ ದೂರವಿರುವುದು…

Read More

‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ತಡೆ: ಹೈಕೋರ್ಟ್ ನೀಡಿದ ಕಾರಣವೇನು? – Kannada News | This is the reason why High Court stayed the release of The Kerala Story 2

ಲವ್ ಜಿಹಾದ್ ಕುರಿತ ಕಥೆ ಹೊಂದಿರುವ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಈ ವಾರ ಬಿಡುಗಡೆ ಆಗುತ್ತಿಲ್ಲ. ಫೆಬ್ರವರಿ 27ರಂದು ರಿಲೀಸ್ ಮಾಡಲು ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಈ ಸಿನಿಮಾದ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ ನೀಡಿದೆ. ಇದರಿಂದಾಗಿ ಚಿತ್ರತಂಡಕ್ಕೆ ಆಘಾತ ಆಗಿದೆ. ಚಿತ್ರದ ಟೀಸರ್ ಬಿಡುಗಡೆ ಆದ ಬಳಿಕ ಅನೇಕರಿಂದ ವಿರೋಧ ವ್ಯಕ್ತವಾಗಿತ್ತು. ಕೆಲವರು ಚಿತ್ರದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದರು. ವಿಚಾರಣೆ ನಡೆಸಿರುವ ಕೇರಳ…

Read More

ನಕಲಿ ಪ್ರಶ್ನೆಪತ್ರಿಕೆ ಹಾವಳಿ: ವಿದ್ಯಾರ್ಥಿಗಳೇ ನಂಬಿ ಮೋಸ ಹೋಗದಿರಿ ಎಂದ KSEAB – Kannada News | KSEAB Alerts Students Against Fake 2nd PUC Question Papers

ಬೆಂಗಳೂರು, ಫೆಬ್ರವರಿ 26: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಕೌಂಟ್​​ಡೌನ್​​ ನಡುವೆ ಕೆಲವು ದುಷ್ಕರ್ಮಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆಪತ್ರಿಕೆಗಳನ್ನು ಹಂಚುತ್ತಿರುವ ಆರೋಪ ಕೇಳಿಬಂದಿದೆ. ಈ ಕುರಿತು ಪ್ರತಿಕ್ರಿಯಿಸಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ, ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ಪ್ರಶ್ನೆಪತ್ರಿಕೆ ನಕಲಿ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸಂಬಂಧಪಟ್ಟವರನ್ನು ಪತ್ತೆಹಚ್ಚಲು ಸೈಬರ್ ಪೊಲೀಸರಿಗೆ ದೂರು ನೀಡೋದಾಗಿಯೂ ತಿಳಿಸಿದ್ದಾರೆ. ಕರ್ನಾಟಕ ಬೋರ್ಡ್ SSLC ಪರೀಕ್ಷೆಗಳು ಮಾರ್ಚ್ 18ರಿಂದ ಆರಂಭವಾಗಲಿದ್ದರೆ,…

Read More

ಮತ್ತೆ ಕಾಡಾನೆ ಕಿರಿಕ್: ರಸ್ತೆ ಮಧ್ಯೆ ಸಾರಿಗೆ ಬಸ್​​ಗಳನ್ನ ತಡೆದು ನಿಲ್ಲಿಸಿದ ಒಂಟಿ ಸಲಗ – Kannada News | Wild elephant Stops Buses in Ambikanagar And bommanahalli Road at Uttara Kananda

ಕಾರವಾರ, (ಫೆಬ್ರವರಿ 26): ಚಾಮರಾಜನಗರ ಮಾತ್ರವಲ್ಲ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲೂ ಕಾಡಾನೆ (Wild elephant) ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಾಡಾನೆವೊಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಹೋಗುವ ವಾಹನಗಳನ್ನು ತಡೆದ ನಿಲ್ಲಿಸಿದೆ. ಹೌದು..ಉತ್ತರ ಕನ್ನಡ ಜಿಲ್ಲೆಯ ಅಂಬಿಕಾನಗರ–ಬೊಮ್ಮನಹಳ್ಳಿ ಮಾರ್ಗದಲ್ಲಿ ಒಂಟಿ ಸಲಗ ರಸ್ತೆಯಲ್ಲಿ ನಿಂತು ಸಾರಿಗೆ ಬಸ್ ಅನ್ನ​ ಅಡ್ಡಹಾಕಿ ತಡೆದು ನಿಲ್ಲಿಸಿದೆ. ಇದರಿಂದ ಬಸ್​​ನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ. ಬಳಿಕ ಬಸ್​​ ಚಾಲಕ ಮೇಲಿಂದ ಮೇಲೆ ಹಾರ್ನ್ ಮಾಡಿದ್ದರಿಮದ ಕಾಡಾನೆ ರಸ್ತೆ ಬಿಟ್ಟು ಸೈಡಿಗೆ ತೆರಳಿದ್ದು,…

Read More

Viral News: ಶಾಲೆಯಲ್ಲಿ ಆಟವಾಡುತ್ತಿದ್ದಾಗಲೇ ಹೃದಯಾಘಾತದಿಂದ 9 ವರ್ಷದ ಬಾಲಕಿ ಸಾವು! – Kannada News | 9 Year Old Girl Dies Of Heart Attack in Rajasthan School During Playtime

ಜೈಪುರ, ಫೆಬ್ರವರಿ 26: ರಾಜಸ್ಥಾನದ ಗೋಟನ್‌ನಲ್ಲಿರುವ ಖಾಸಗಿ ಶಾಲೆಯ ಆಟದ ಮೈದಾನದಲ್ಲಿ ಆಟವಾಡುತ್ತಿದ್ದಾಗ 9 ವರ್ಷದ ಬಾಲಕಿ ಹೃದಯಾಘಾತದಿಂದ (Heart Attack) ಕುಸಿದುಬಿದ್ದು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಆಕೆ ಆಡುವಾಗ ಕುಸಿದುಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೃದಯಾಘಾತದಿಂದ ಮೃತಪಟ್ಟ ಮಗುವನ್ನು 5ನೇ ತರಗತಿಯ ವಿದ್ಯಾರ್ಥಿನಿ ದಿವ್ಯಾ ಎಂದು ಗುರುತಿಸಲಾಗಿದೆ. ಫೆಬ್ರವರಿ 23ರಂದು ಬೆಳಿಗ್ಗೆ 7.48ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬೆಳಗಿನ ಪ್ರಾರ್ಥನೆಗೆ ಇನ್ನೂ ಸಮಯವಿತ್ತು. ಹೀಗಾಗಿ ಹಲವಾರು ಮಕ್ಕಳು ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದರು. ದಿವ್ಯಾ…

Read More

ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮಲ್ಲಿಕಾರ್ಜುನ ಮುತ್ಯಾನ ಬಗ್ಗೆ ಹೇಳಿದ್ದಿಷ್ಟು – Kannada News | Mallikarjuna Mutya POCSO Case: Video statement released by girl’s parents

ಯಾದಗಿರಿ, ಫೆಬ್ರವರಿ 26: ಮಲ್ಲಿಕಾರ್ಜುನ ಮುತ್ಯಾ (Mallikarjun Mutya) ವಿರುದ್ಧ ಪೋಕ್ಸೋ ಕೇಸ್​ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯ ಪರಾರಿಯಾಗಿರುವ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ಬೆನ್ನಲ್ಲೇ ಇತ್ತ ಮಹಾರಾಷ್ಟ್ರದ ಸೊಲ್ಲಾಪುರದಿಂದ ಅಪ್ರಾಪ್ತ ಬಾಲಕಿ‌ ಪೋಷಕರಿಂದು ಕೂಡ ವಿಡಿಯೋ ಹೇಳಿಕೆ ಬಿಡುಗಡೆ ಮಾಡಲಾಗಿದೆ. ನಮ್ಮ ಕುಟುಂಬ ಮಲ್ಲಿಕಾರ್ಜುನ ಮುತ್ಯಾ ಅವರ ಭಕ್ತರೇ ಇದ್ದೇವೆ. ಸುಮಾರು ಮೂರು ನಾಲ್ಕು ವರ್ಷದಿಂದ ಮಲ್ಲಿಕಾರ್ಜುನ ದರ್ಶನಾಶೀರ್ವಾದ ಪಡೆಯಲು ಹೋಗುತ್ತೇವೆ. ಮಗಳ ಹುಟ್ಟುಹಬ್ಬಕ್ಕೆ ಆಶೀರ್ವಾದ ಪಡೆಯಲು ಕುಟುಂಬಸ್ಥರು ಅಪ್ಪಾಜಿ‌…

Read More