ದ್ವಿತೀಯ ಪಿಯು ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಿಗೆ ಆತಂಕ: ಪ್ರಶ್ನೆ ಪತ್ರಿಕೆ ಬೇಕಾದರೆ ಮೆಸೇಜ್ ಮಾಡಿ ಎಂಬ ಪೋಸ್ಟ್ ವೈರಲ್! – Kannada News | Karnataka PUC Paper Leak Fear: Students and Parents Warned Against Online Scams
ಬೆಂಗಳೂರು, ಫೆ.26: ಫೆಬ್ರವರಿ 28ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು (PUC exam 2026) ಆರಂಭವಾಗಲಿವೆ. ಆದರೆ, ಪರೀಕ್ಷೆಗೆ ಕೇವಲ ಎರಡು ದಿನ ಬಾಕಿ ಇರುವಾಗ ಇನ್ಸ್ಟಾಗ್ರಾಮ್ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಬಗ್ಗೆ ಪೋಸ್ಟ್ ಒಂದು ಹರಿದಾಡುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ‘ಡಾ. ಕನ್ನಡಿಗ’ ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವುದಾಗಿ ಪೋಸ್ಟ್ ಮಾಡಿದ್ದಾನೆ. “ಯಾವುದಾದರೂ ಪ್ರಶ್ನೆ ಪತ್ರಿಕೆ ಬೇಕು ಅಂದ್ರೆ ಮೆಸೇಜ್ ಮಾಡಿ. ಅಮೌಂಟ್…