All posts by nagaraj11081993

Gold Rates: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ

Gold Rates: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 31: ನಿನ್ನೆ ಕಡಿಮೆಗೊಂಡಿದ್ದ ಚಿನ್ನದ ಬೆಲೆ (Gold Rates) ಇವತ್ತು ಮಂಗಳವಾರ ಗ್ರಾಮ್​ಗೆ 185 ರೂಗಳಷ್ಟು ಏರಿಕೆಯಾಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆಯೂ ಮಂಗಳವಾರ ಹೆಚ್ಚಿದೆ. ಬೆಂಗಳೂರಿನಲ್ಲಿ ಇದರ ಬೆಲೆ ಮತ್ತೊಮ್ಮೆ 250 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,49,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,36,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 31ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,929 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,685 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,197 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,929 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,685 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,685 ರೂ
  • ಚೆನ್ನೈ: 13,670 ರೂ
  • ಮುಂಬೈ: 13,685 ರೂ
  • ದೆಹಲಿ: 13,700 ರೂ
  • ಕೋಲ್ಕತಾ: 13,685 ರೂ
  • ಕೇರಳ: 13,685 ರೂ
  • ಅಹ್ಮದಾಬಾದ್: 13,690 ರೂ
  • ಜೈಪುರ್: 13,700 ರೂ
  • ಲಕ್ನೋ: 13,700 ರೂ
  • ಭುವನೇಶ್ವರ್: 13,685 ರೂ

ಇದನ್ನೂ ಓದಿ: ವಿವಿಧ ಪೋಸ್ಟ್ ಆಫೀಸ್ ಸ್ಕೀಮ್ಸ್; ಏಪ್ರಿಲ್-ಜೂನ್ ಕ್ವಾರ್ಟರ್​ಗೆ ಬಡ್ಡಿದರ ಘೋಷಣೆ; ಇಲ್ಲಿದೆ ಪಟ್ಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 574 ರಿಂಗಿಟ್ (13,370 ರುಪಾಯಿ)
  • ದುಬೈ: 505 ಡಿರಾಮ್ (12,911 ರುಪಾಯಿ)
  • ಅಮೆರಿಕ: 141.50 ಡಾಲರ್ (13,278 ರುಪಾಯಿ)
  • ಸಿಂಗಾಪುರ: 183.70 ಸಿಂಗಾಪುರ್ ಡಾಲರ್ (13,348 ರುಪಾಯಿ)
  • ಕತಾರ್: 504 ಕತಾರಿ ರಿಯಾಲ್ (12,991 ರೂ)
  • ಸೌದಿ ಅರೇಬಿಯಾ: 515 ಸೌದಿ ರಿಯಾಲ್ (12,882 ರುಪಾಯಿ)
  • ಓಮನ್: 54.05 ಒಮಾನಿ ರಿಯಾಲ್ (13,177 ರುಪಾಯಿ)
  • ಕುವೇತ್: 41.66 ಕುವೇತಿ ದಿನಾರ್ (12,744 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 250 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 250 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Bihar Stampede: ಬಿಹಾರದ ಶೀತಲ ದೇವಸ್ಥಾನದಲ್ಲಿ ಕಾಲ್ತುಳಿತ, 8 ಮಹಿಳೆಯರು ಸಾವು

ಪಾಟ್ನಾ, ಮಾರ್ಚ್​ 31: ಬಿಹಾರದ ನಳಂದದಲ್ಲಿರುವ ಶೀತಲ ದೇವಸ್ಥಾನದಲ್ಲಿ ಕಾಲ್ತುಳಿತ ಉಂಟಾಗಿದ್ದು, 8 ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. 6ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಚೈತ್ರ ಮಾಸದ ಕೊನೆಯ ಮಂಗಳವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಅಪಘಾತದಿಂದ ಮಹಿಳೆಯರು ಸೇರಿದಂತೆ ಅನೇಕ ಜನರು ತೊಂದರೆಗೀಡಾಗಿದ್ದಾರೆ. ದುರಂತದ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ, ಗ್ರಾಮಸ್ಥರೊಂದಿಗೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯ ನಡೆಸಿದರು. ಕಳೆದ ವರ್ಷ, ಆಂಧ್ರಪ್ರದೇಶದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಕಾದಶಿಯಂದು ಕಾಲ್ತುಳಿತ ಉಂಟಾಗಿ 9 ಮಂದಿ ಭಕ್ತರು ಉಸಿರು ಚೆಲ್ಲಿದ್ದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಒಂದು ಗಂಟೆ ಮಳೆ ಬಂದ್ರೆ 20 ಸಲ ಪವರ್ ಕಟ್ ಮಾಡ್ತಾರೆ’: ಬೆಂಗಳೂರಿನ ಖ್ಯಾತ ಹೃದಯ ತಜ್ಞರ ಎಕ್ಸ್ ಪೋಸ್ಟ್ ವೈರಲ್!

ಬೆಂಗಳೂರು, ಮಾರ್ಚ್​ 31: ಮಾರ್ಚ್​ನಲ್ಲಿ ಬಿಸಿಲಿನ ಬೇಗೆ ಅನುಭವಿಸಿದ ನಿವಾಸಿಗಳಿಗೆ ಭಾನುವಾರ ಸುರಿದ ಸಾಧಾರಣ ಮಳೆಯೊಂದಿಗೆ (weather) ಸ್ವಲ್ಪ ಮಟ್ಟಿಗಿನ ತಂಪಿನ ಅನುಭವ ಸಿಕ್ಕಿತು. ಗುಡುಗು ಸಹಿತ ಮಳೆಯು ನಗರವನ್ನು ತಂಪುಗೊಳಿಸಿದರೂ, ವಿದ್ಯುತ್ ವ್ಯತ್ಯಯ ಜನರನ್ನು ಸಂಕಷ್ಟಕ್ಕೆ ದೂಡಿತ್ತು. ಈ ಬಗ್ಗೆ ತಮ್ಮ ಅಸಮಾಧಾನ ಹಂಚಿಕೊಂಡ ಬೆಂಗಳೂರಿನ ಖ್ಯಾತ ಹೃದಯ ತಜ್ಞ ಡಾ. ದೀಪಕ್ ಕೃಷ್ಣಮೂರ್ತಿ, X ಪೋಸ್ಟ್ ಹಂಚಿಕೊಂಡಿದ್ದಾರೆ.

ಪೋಸ್ಟ್​ನಲ್ಲೇನಿದೆ?

ಒಂದು ಗಂಟೆಯ ಮಳೆ ಸುರಿದರೆ 20 ಬಾರಿ ವಿದ್ಯುತ್ ಹೋಗಿ ಬಂದಿದೆ ಎಂದು ತಮ್ಮ ಪೋಸ್ಟ್​ನಲ್ಲಿ ಬರೆದಿರುವ ದೀಪಕ್, ನಾವು ಕೃತಕ ಬುದ್ಧಿಮತ್ತೆ (AI) ಬಗ್ಗೆ ಮಾತನಾಡುತ್ತೇವೆ, ಆದರೆ ಮೂಲಭೂತ ತಂತ್ರಜ್ಞಾನ ಮತ್ತು ವ್ಯವಸ್ಥೆಗಳು ಇನ್ನೂ ಅನಾದಿಕಾಲದ್ದೇ ಆಗಿದೆ. ಇವು ನಂಬಿಕೆಗೆ ಅರ್ಹವಲ್ಲ ಎಂದು ಟೀಕಿಸಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅನೇಕರ ಗಮನ ಸೆಳೆದಿದೆ.

ನೆಟ್ಟಿಗರ ರಿಯಾಕ್ಷನ್ ಏನು?

ಡಾ. ದೀಪಕ್ ಕೃಷ್ಣಮೂರ್ತಿ ಸಾಮಾಜಿಕ ಜಾಲತಾಣ X ನಲ್ಲಿ ಹಂಚಿಕೊಂಡ ಪೋಸ್ಟ್‌ಗೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಆಶ್ಚರ್ಯ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ತಮ್ಮದೇ ಅನುಭವಗಳನ್ನು ಹಂಚಿಕೊಂಡು ಅಸಮಾಧಾನ ಹೊರಹಾಕಿದ್ದಾರೆ.

ಒಬ್ಬ ಬಳಕೆದಾರ, ಬೆಂಗಳೂರುದಲ್ಲಿ BESCOM ಅತ್ಯುತ್ತಮ ಸೇವೆ ನೀಡುತ್ತದೆ. ನಮ್ಮ ಪ್ರದೇಶದಲ್ಲಿ ಸಮಸ್ಯೆ ತಿಳಿಸಿದ ಕೂಡಲೇ, ಮಧ್ಯರಾತ್ರಿಯಲ್ಲಿಯೂ ಪರಿಹಾರ ಕೊಡುತ್ತಾರೆ ಎಂದು ಬರೆದು ವಿದ್ಯುತ್ ಇಲಾಖೆ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನೊಬ್ಬರು, ಭಾರತದ ಅತ್ಯಂತ ಓವರ್‌ಹೈಪ್ ಆಗಿರುವ ನಗರ ಬೆಂಗಳೂರು. ಹೊರಗಿನವರು ಇದನ್ನು ತಂತ್ರಜ್ಞಾನದ ನಗರ ಎಂದು ಮಾತ್ರ ನೋಡುತ್ತಾರೆ. ಆದರೆ ಇದರ ಇನ್ನೊಂದು ಮುಖವನ್ನೂ ನೋಡಬೇಕು ಎಂದು ಟೀಕಿಸಿದ್ದಾರೆ.

ಒಬ್ಬ ಬಳಕೆದಾರ ಅತ್ಯಂತ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದು, ನಾವು ಎಐ ಬಳಸಿ ಮಳೆಯ ಹನಿಗಳನ್ನು ಗಾಳಿಯಲ್ಲೇ ಪತ್ತೆಹಚ್ಚಿ, ನೆಲಕ್ಕೆ ಬೀಳುವ ಮುನ್ನವೇ ವಿದ್ಯುತ್ ಕಡಿತ ಮಾಡುತ್ತೇವೆ ಎಂದು ಇಲಾಖೆಯ ಕಾಲೆಳೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಿವಿಧ ಪೋಸ್ಟ್ ಆಫೀಸ್ ಸ್ಕೀಮ್ಸ್; ಏಪ್ರಿಲ್-ಜೂನ್ ಕ್ವಾರ್ಟರ್​ಗೆ ಬಡ್ಡಿದರ ಘೋಷಣೆ; ಇಲ್ಲಿದೆ ಪಟ್ಟಿ

ನವದೆಹಲಿ, ಮಾರ್ಚ್ 31: ಸರ್ಕಾರದಿಂದ ನಡೆಸಲಾಗುವ ಸಣ್ಣ ಉಳಿತಾಯ ಯೋಜನೆಗಳಿಗೆ (Small Savings Schemes) ಬಡ್ಡಿದರವನ್ನು ಪ್ರತೀ ಕ್ವಾರ್ಟರ್​ಗೆ ಪರಿಷ್ಕರಿಸುತ್ತದೆ. 2026ರ ಏಪ್ರಿಲ್​ನಿಂದ ಜೂನ್​ವರೆಗಿನ ತ್ರೈಮಾಸಿಕ ಅವಧಿಗೆ (April-June quarter) ಬಡ್ಡಿದರ ಪರಿಷ್ಕರಿಸಿದೆ. ಹಿಂದಿನ ಕ್ವಾರ್ಟರ್ ಆದ ಜನವರಿ-ಮಾರ್ಚ್ ಅವಧಿಯಲ್ಲಿ ಇದ್ದ ದರಗಳನ್ನೇ ಮುಂದುವರಿಸಲಾಗಿದೆ. ಸತತ ಎಂಟು ಕ್ವಾರ್ಟರ್​ಗಳಿಂದಲೂ ಬಡ್ಡಿದರ ಯಥಾಸ್ಥಿತಿಯಲ್ಲಿದೆ. ಕೊನೆಯ ಬಾರಿ ಬಡ್ಡಿದರದಲ್ಲಿ ಬದಲಾವಣೆ ಆಗಿದ್ದು 2024ರ ಜನವರಿ-ಮಾರ್ಚ್ ಕ್ವಾರ್ಟರ್​ನಲ್ಲಿ.

2026ರ ಏಪ್ರಿಲ್-ಜೂನ್ ಕ್ವಾರ್ಟರ್​ಗೆ ಸಣ್ಣ ಉಳಿತಾಯ ಯೋಜನೆಗಳ ವಾರ್ಷಿಕ ಬಡ್ಡಿದರ

  • ಸುಕನ್ಯಾ ಸಮೃದ್ಧಿ ಯೋಜನೆ: ಶೇ. 8.2 ವಾರ್ಷಿಕ ಬಡ್ಡಿದರ
  • ಪಬ್ಲಿಕ್ ಪ್ರಾವಿಡೆಂಟ್ ಫಂಡ್ (ಪಿಪಿಎಫ್): ಶೇ. 7.1 ಬಡ್ಡಿ
  • ಕಿಸಾನ್ ವಿಕಾಸ್ ಪತ್ರ ಸ್ಕೀಮ್: ಶೇ. 7.5 ಬಡ್ಡಿ
  • ರಾಷ್ಟ್ರೀಯ ಉಳಿತಾಯ ಪತ್ರ (ಎನ್​ಎಸ್​ಸಿ): ಶೇ. 7.7 ಬಡ್ಡಿ
  • ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (ಎಂಐಎಸ್): ಶೇ. 7.4 ಬಡ್ಡಿ
  • ಪೋಸ್ಟ್ ಆಫೀಸ್ ಸೇವಿಂಗ್ಸ್ ಅಕೌಂಟ್: ಶೇ. 4 ಬಡ್ಡಿದರ
  • ಪೋಸ್ಟ್ ಆಫೀಸ್ 1 ವರ್ಷದ ಠೇವಣಿ: ಶೇ. 6.9 ಬಡ್ಡಿದರ
  • ಪೋಸ್ಟ್ ಆಫೀಸ್ 2 ವರ್ಷದ ಠೇವಣಿ: ಶೇ. 7 ಬಡ್ಡಿದರ
  • ಪೋಸ್ಟ್ ಆಫೀಸ್ 3 ವರ್ಷದ ಠೇವಣಿ: ಶೇ. 7.1 ಬಡ್ಡಿದರ
  • ಪೋಸ್ಟ್ ಆಫೀಸ್ 5 ವರ್ಷದ ಠೇವಣಿ: ಶೇ. 7.5 ಬಡ್ಡಿದರ
  • ಪೋಸ್ಟ್ ಆಫೀಸ್ 5 ವರ್ಷದ ಆರ್​ಡಿ: ಶೇ. 6.70 ಬಡ್ಡಿದರ
  • ಹಿರಿಯ ನಾಗರಿಕರ ಉಳಿತಾಯ ಯೋಜನೆ: ಶೇ. 8.2 ಬಡ್ಡಿದರ

ಇದನ್ನೂ ಓದಿ: ಹೆಚ್ಚು ನಾಮಿನಿಗಳು, ಸೊನ್ನೆ ಲೋನ್ ಪ್ರೀಪೇಮೆಂಟ್ ಚಾರ್ಜ್; ಜನಸಾಮಾನ್ಯರು ಗಮನಿಸಬೇಕಾದ ಹೊಸ ನಿಯಮಗಳಿವು

ಇಲ್ಲಿ ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆಂದು ರೂಪಿಸಲಾದ ಸೀನಿಯರ್ ಸಿಟಿಜನ್ ಸೇವಿಂಗ್ಸ್ ಸ್ಕೀಮ್ ಮತ್ತು ಸುಕನ್ಯಾ ಸಮೃದ್ಧಿ ಯೋಜನೆಗಳಿಗೆ ಗರಿಷ್ಠ ಬಡ್ಡಿದರ ಸಿಗುತ್ತದೆ. ರಾಷ್ಟ್ರೀಯ ಉಳಿತಾಯಪತ್ರ ಮತ್ತು ಕಿಸಾನ್ ವಿಕಾಸ್ ಪತ್ರ ಯೋಜನೆಗಳಿಗೂ ಉತ್ತಮ ಬಡ್ಡಿದರ ಸಿಗುತ್ತದೆ.

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಹೇಗೆ ನಿಗದಿ?

ಸಣ್ಣ ಉಳಿತಾಯ ಯೋಜನೆಗಳಿಗೆ ಪ್ರತೀ ತ್ರೈಮಾಸಿಕದಲ್ಲಿ ಬಡ್ಡಿದರವನ್ನು ನಿಗದಿ ಮಾಡಲು ಶ್ಯಾಮಲಾ ಗೋಪಿನಾಥ್ ಕಮಿಟಿ ಶಿಫಾರಸು ಮಾಡಿರುವ ಸೂತ್ರವನ್ನು ಉಪಯೋಗಿಸಲಾಗುತ್ತದೆ. ಈ ಸೂತ್ರವು ಮಾರುಕಟ್ಟೆ ಜೋಡಿತವಾಗಿರುತ್ತದೆ.

ಇದನ್ನೂ ಓದಿ: ಕ್ರೆಡಿಟ್ ಕಾರ್ಡ್ ಇಎಂಐ, ಝೀರೋ ಕಾಸ್ಟ್ ಇಎಂಐ ಹಿಂದಿರುವ ಸೀಕ್ರೆಟ್ ವಿಚಾರಗಳು ಏನು ಗೊತ್ತಾ?

ಗವರ್ನ್ಮೆಂಟ್ ಸೆಕ್ಯೂರಿಟಿಗಳ ಯೀಲ್ಡ್, ಹಣದುಬ್ಬರ ಮತ್ತು ಆರ್​ಬಿಐ ಮಾನಿಟರಿ ಪಾಲಿಸಿಯ ಅಂಶಗಳು ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರದ ಮೇಲೆ ಪ್ರಭಾವ ಬೀರಬಹುದು. 2016ರಿಂದಲೂ ಸರ್ಕಾರ ಇಂತಹದ್ದೊಂದು ಸೂತ್ರ ಇಟ್ಟುಕೊಂಡು ಪ್ರತೀ ಕ್ವಾರ್ಟರ್​ಗೆ ಬಡ್ಡಿದರ ಪರಿಷ್ಕರಣೆ ಮಾಡುತ್ತದೆ. ಈ ಹಿಂದೆ ವಾರ್ಷಿಕವಾಗಿ ಬಡ್ಡಿದರ ಪರಿಷ್ಕರಿಸಲಾಗುತ್ತಿತ್ತು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮದುವೆ ಸಂಭ್ರಮದ ವೇಳೆ ದೈವಕ್ಕೆ ಅವಮಾನ ಆರೋಪ: ಮುಸ್ಲಿಂ ಯುವಕನಿಂದ ಕ್ಷಮೆಯಾಚನೆ

ಮಡಿಕೇರಿ, ಮಾರ್ಚ್​​ 31: ಕೊಡಗು ಜಿಲ್ಲೆಯಲ್ಲಿ ದೈವ ಮತ್ತು ದೈವ ನರ್ತಕರನ್ನು ಅವಹೇಳನ ಮಾಡಿದ ಘಟನೆ ಸಂಬಂಧ ನಾಪೊಕ್ಲು ಪೊಲೀಸ್ ಠಾಣೆಯಲ್ಲಿ ಯುವಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಬೆನ್ನಲ್ಲೇ ಆರೋಪಿ ಫೈಜಲ್ ಸಾಮಾಜಿಕ ಜಾಲತಾಣದ ಮೂಲಕ ಕ್ಷಮೆಯಾಚಿಸಿದ್ದಾರೆ. ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಮಾಡಿರಲಿಲ್ಲ. ವಿವಾಹವೊಂದರ ನಂತರ ಖಾಸಗಿಯಾಗಿ ಮಾತನಾಡಿದ ಮಾತುಗಳು ವೈರಲ್ ಆಗಿಬಿಟ್ಟವು. ಇದರಿಂದ ಯಾವುದೇ ಸಮುದಾಯಕ್ಕೆ ನೋವಾಗಿದ್ದರೆ, ತಾವು ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಂಗಳೂರು ಕರಗ ಮಹೋತ್ಸವ: ಸಂಪಂಗಿಕೆರೆ ಶಕ್ತಿ ಪೀಠದಲ್ಲಿ ಹಸಿ ಕರಗ ನೋಡಲು ಭಕ್ತಸಾಗರ

ಬೆಂಗಳೂರು, ಮಾರ್ಚ್​​ 31: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಕೌಂಟ್‌ಡೌನ್ ಆರಂಭವಾಗಿದೆ. ಇದರ ಮೊದಲ ಭಾಗವಾಗಿ ಇಂದು ಬೆಳಗ್ಗೆ ಸಂಪಂಗಿ ರಾಮನಗರದಲ್ಲಿರುವ ಸಂಪಂಗಿಕೆರೆಯ ಶಕ್ತಿಪೀಠದಲ್ಲಿ ಹಸಿ ಕರಗ ಶಕ್ತ್ಯೋತ್ಸವ ಅದ್ಧೂರಿಯಾಗಿ ಜರುಗಿದೆ. ಎ. ಜ್ಞಾನೇಂದ್ರ ಸ್ವಾಮಿಯವರು 16ನೇ ಬಾರಿಗೆ ಯಶಸ್ವಿಯಾಗಿ ಹಸಿ ಕರಗವನ್ನು ಹೊತ್ತಿದ್ದು, ರಾಜಬೀದಿಗಳಲ್ಲಿ ಸಂಚರಿಸಿ ಜಿಬಿಎ ಮುಖ್ಯ ಕಚೇರಿ ತಲುಪಿದರು. ಅಲ್ಲಿ ಪೂಜೆ ಸಲ್ಲಿಸಿ, ಕೆ.ಆರ್. ಮಾರುಕಟ್ಟೆ ರಸ್ತೆಯ ಮೂಲಕ ತಿಗಳರಪೇಟೆಯಲ್ಲಿರುವ ಶ್ರೀ ಧರ್ಮರಾಯಸ್ವಾಮಿ ದೇವಾಲಯಕ್ಕೆ ತೆರಳಿದ್ದಾರೆ. ನಾಳೆ ಮಧ್ಯರಾತ್ರಿ ಚೈತ್ರ ಪೌರ್ಣಮಿಯಂದು ಹೂವಿನ ಕರಗದ ರೂಪದಲ್ಲಿ ಹೊರಬಂದು ಕೆಂಪೇಗೌಡರು ನಿರ್ಮಿಸಿರುವ 25 ಪೇಟೆಗಳಲ್ಲಿ ಲಕ್ಷಾಂತರ ಜನರಿಗೆ ದರ್ಶನ ನೀಡುತ್ತಾರೆ. ನಂತರ ನಾಡಿದ್ದು ಬೆಳಗ್ಗೆ 6 ಗಂಟೆಯ ಒಳಗಾಗಿ ಧರ್ಮರಾಯಸ್ವಾಮಿ ದೇವಾಲಯವನ್ನು ತಲುಪುತ್ತಾರೆ. ಈ ಮೂಲಕ ಮೂರು ದಿನಗಳ ಕರಗ ಮಹೋತ್ಸವ ಸಂಪನ್ನಗೊಳ್ಳಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Optical Illusion: ಈ ಚಿತ್ರದಲ್ಲಿ ಹುಲಿಗಳ ನಡುವೆ ಅಡಗಿರುವ ಜೀಬ್ರಾವನ್ನು ಕಂಡು ಹಿಡಿಯಬಲ್ಲಿರಾ

ಕೆಲವರಿಗೆ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಸೇರಿದಂತೆ ಒಗಟುಗಳನ್ನು ಬಿಡಿಸುವುದೆಂದರೆ ಖುಷಿಯೋ ಖುಷಿ. ಸಮಯ ಸಿಕ್ಕಾಗಲೆಲ್ಲಾ ಇಂತಹ ಒಗಟುಗಳನ್ನು ಬಿಡಿಸುವತ್ತ ಆಸಕ್ತಿ ಹೆಚ್ಚಿನವರು ತೋರಿಸುತ್ತಾರೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಹುಲಿಗಳ ನಡುವೆ ಇರುವ ಜೀಬ್ರಾವನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ನೀವು ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ.

ಈ ಚಿತ್ರದಲ್ಲಿ ಏನು ಕಾಣಿಸುತ್ತದೆ?

ಈ ಇಲ್ಯೂಷನ್ ಚಿತ್ರವು ಟ್ರಿಕ್ಕಿ ಒಗಟಿನ ಚಿತ್ರವಾಗಿದೆ. ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ಮೊದಲು ನೋಡಿದಾಗ ಕಾಡಿನ ನೋಟವಿದೆ. ಇಲ್ಲಿ ಹುಲಿಗಳ ನಡುವೆ ಜೀಬ್ರಾವಿದೆ. ಆದರೆ ನಿಮ್ಮ ಕಣ್ಣಿಗೆ ಎಲ್ಲವೂ ಹುಲಿಗಳಂತೆ ಕಾಣುತ್ತದೆ. ಆದರೆ, ಆ ಹುಲಿಗಳ ಮಧ್ಯದಲ್ಲಿ ಜೀಬ್ರಾ ಕೂಡ ಇದೆ. ಈ ಚಿತ್ರದಲ್ಲಿರುವ ಸವಾಲು ಆ ಜೀಬ್ರಾವನ್ನು ಕಂಡುಹಿಡಿಯುವುದು. ನೀವು 9 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಪ್ರಯತ್ನಿಸಿ.

ಇದನ್ನೂ ಓದಿ: ಈ ಚಿತ್ರದಲ್ಲಿ ಮರೆ ಮಾಡಲಾಗಿರುವ ಬಾಳೆಹಣ್ಣನ್ನು ಗುರುತಿಸಬಲ್ಲಿರಾ

ಜೀಬ್ರಾ ನಿಮ್ಮ ಕಣ್ಣಿಗೆ ಕಾಣಿಸಿತೇ?

ತೀಕ್ಷ್ಣ ಕಣ್ಣುಗಳನ್ನು ಹೊಂದಿರುವವರು ಮಾತ್ರ ಗುಪ್ತ ವಸ್ತು ಸೇರಿದಂತೆ ಪ್ರಾಣಿ ಹುಡುಕಲು ಸಾಧ್ಯ. ನೀವು ಎಷ್ಟೇ ಪ್ರಯತ್ನಿಸಿದರೂ ಈ ಚಿತ್ರದಲ್ಲಿರುವ ಜೀಬ್ರಾವನ್ನು ಪತ್ತೆ ಹಚ್ಚಲು ಸಾಧ್ಯ. ಈ ಪ್ರಾಣಿ ನಿಮ್ಮ ಕಣ್ಣಿಗೆ ಬಿದ್ದಿಲ್ಲ ಎಂದಾದರೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ಈ ಕೆಳಗಿನ ಚಿತ್ರದಲ್ಲಿ ಜೀಬ್ರಾ ಎಲ್ಲಿದೆ ಎಂದು ಗುರುತಿಸಿದ್ದೇವೆ. ನಿಮ್ಮ ಕಣ್ಣಿಗೆ ಕಾಣಿಸಿತು ಎಂದು ನಾವು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ತೀವ್ರ ಗತಿಯಲ್ಲಿ ಕುಸಿದ ‘ಧುರಂಧರ್ 2’ ಗಳಿಕೆ; ಆ ದಾಖಲೆ ಮುರಿಯೋದು ಕಷ್ಟ?

‘ಧುರಂಧರ್ 2’ ಸಿನಿಮಾ ಒಳ್ಳೆಯ ರೀತಿಯಲ್ಲಿ ಪ್ರದರ್ಶನ ನೀಡುತ್ತಿದೆ. ಡಿಸೆಂಬರ್‌ನಲ್ಲಿ ತಮ್ಮ ಮೊದಲ ಚಿತ್ರದೊಂದಿಗೆ ಆದಿತ್ಯ ಧರ್ 1,300 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದರು. ಕೆಲವೇ ತಿಂಗಳುಗಳ ನಂತರ, 1,000 ಕೋಟಿ ಕ್ಲಬ್‌ಗೆ ಪ್ರವೇಶಿಸುವ ಮೂಲಕ ಅವರು ಮತ್ತೊಮ್ಮೆ ಸುದ್ದಿ ಆಗಿದ್ದಾರೆ. ‘ಧುರಂಧರ್ 2’ ಚಿತ್ರವು ಕೇವಲ 12 ದಿನಗಳಲ್ಲಿ ಇಡೀ ಬಾಕ್ಸ್ ಆಫೀಸ್ ಅನ್ನು ಅಲುಗಾಡಿಸಿದೆ. ಎರಡನೇ ಶನಿವಾರ ಮತ್ತು ಭಾನುವಾರದಂದು ನಡೆದ ಕಲೆಕ್ಷನ್​​ಗೆ ಹೋಲಿಸಿದರೆ ಎರಡನೇ ಸೋಮವಾರ ಚಿತ್ರದ ಗಳಿಕೆ ಗಮನಾರ್ಹವಾಗಿ ಕುಸಿದಿದೆ.

‘ಧುರಂಧರ್ 2’ ಚಿತ್ರವು ತನ್ನ 12ನೇ ದಿನದಂದು ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ತುಂಬಾ ಕಡಿಮೆ ಗಳಿಕೆ ಮಾಡಿದೆ. ‘ಧುರಂಧರ್ 2’ ಚಿತ್ರ ಸೋಮವಾರ 25 ಕೋಟಿ ರೂಪಾಯಿ ಗಳಿಸಲಷ್ಟೇ ಶಕ್ತವಾಗಿದೆ. ಈ ಚಿತ್ರ 2 ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರುವುದು ಅನುಮಾನ ಎನ್ನಲಾಗುತ್ತಿದೆ. 12 ನೇ ದಿನದ ಆಕ್ಯುಪೆನ್ಸಿ ಶೇಕಡಾ 23.4 ರಷ್ಟಿತ್ತು. ಚಿತ್ರದ ಭಾನುವಾರದ ಗಳಿಕೆಗೆ ಹೋಲಿಕೆ ಮಾಡಿದರೆ (68 ಕೋಟಿ ರೂಪಾಯಿ) ಸೋಮವಾರದ ಕಲೆಕ್ಷನ್ ಭಾರೀ ಹಿನ್ನಡೆ ಆಗಿದೆ.

‘ಧುರಂಧರ್ 2’ ಚಿತ್ರದ ಒಟ್ಟು ಗಳಿಕೆ 875.17 ಕೋಟಿ ಆದರೆ, ಗ್ರಾಸ್ ಕಲೆಕ್ಷನ್ ಸಾವಿರ ಕೋಟಿ ರೂಪಾಯಿ ದಾಟಿದೆ. ವಿಶ್ವ ಮಟ್ಟದಲ್ಲಿ ಸಿನಿಮಾ 1392 ಕೋಟಿ ಗಳಿಸಿದೆ. ವಿದೇಶದಿಂದ ಸಿನಿಮಾಗೆ 300ಕ್ಕೂ ಅಧಿಕ ಕೋಟಿ ರೂಪಾಯಿ ಹರಿದು ಬಂದಿದೆ. ಏತನ್ಮಧ್ಯೆ, 12ನೇ ದಿನ ಅತಿ ಹೆಚ್ಚು ಗಳಿಕೆ ಮಾಡಿದ ಹಿಂದಿ ಚಲನಚಿತ್ರಗಳ ಪಟ್ಟಿಯಲ್ಲಿ ‘ಧುರಂಧರ್ 2’ ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ‘ಧುರಂಧರ್ 2’ ನೋಡಿದ ಬಳಿಕ ನಿರ್ದೇಶಕ ಆದಿತ್ಯ ಧಾರ್​​ ಎಚ್ಚರಿಸಿದ ವಿವೇಕ್ ಅಗ್ನಿಹೋತ್ರಿ

‘ಧುರಂಧರ್ 2’ ವಿಶ್ವ ಮಟ್ಟದ ಗಳಿಕ 1400 ಕೋಟಿ ರೂಪಾಯಿ ಆಸುಪಾಸಿನಲ್ಲಿದೆ. ಈ ಚಿತ್ರದ ಗಳಿಕೆ ನಿಧಾನಗತಿ ಅನುಸರಿಸಿದ್ದರಿಂದ 2 ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರುವುದು ಚಿತ್ರಕ್ಕೆ ಕಷ್ಟ ಆಗಬಹುದು ಎಂದು ಹೇಳಲಾಗುತ್ತಾ ಇದೆ. ದಂಗಲ್ ಸಿನಿಮಾದ ಗಳಿಕೆ 2 ಸಾವಿರ ಕೋಟಿ ರೂಪಾಯಿ ಇದೆ. ಈ ದಾಖಲೆಯನ್ನು ಸಿನಿಮಾ ಮುರಿಯುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Karnataka 1st PUC Results 2026 Declared: ಕರ್ನಾಟಕ ಪ್ರಥಮ ಪಿಯು ಫಲಿತಾಂಶ ಪ್ರಕಟ

ಬೆಂಗಳೂರು, ಮಾರ್ಚ್​ 31: ಕರ್ನಾಟಕ ರಾಜ್ಯಾದ್ಯಂತ 2026ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ 2026ನೇ ಸಾಲಿನ ಪ್ರಥಮ ಪಿಯುಸಿ (1st PUC) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಇಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಪರೀಕ್ಷೆಗೆ ಹಾಜರಾಗಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್‌ಲೈನ್ ಮೂಲಕ ವೀಕ್ಷಿಸಬಹುದಾಗಿದೆ. ಇದೇ ಫೆಬ್ರವರಿ-ಮಾರ್ಚ್​ ತಿಂಗಳಲ್ಲಿ ನಡೆದ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.

ಫಲಿತಾಂಶ ಪ್ರಕಟಣೆಯಲ್ಲಿ ಕೊಂಚ ಬದಲಾವಣೆ

ಈ ಬಾರಿ ಫಲಿತಾಂಶ ಪ್ರಕಟಿಸುವ ವಿಧಾನದಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಒಂದೇ ವೇಳೆ ಫಲಿತಾಂಶ ಲಭ್ಯವಾಗಿಲ್ಲ. ಹಂತ ಹಂತವಾಗಿ ಫಲಿತಾಂಶಗಳನ್ನು ಬಿಡುಗಡೆ ಮಾಡುವ ಕ್ರಮವನ್ನು ಮಂಡಳಿ ಅನುಸರಿಸಿದೆ. ಇದರ ಪರಿಣಾಮವಾಗಿ, ಕೆಲವು ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮೊದಲು ಫಲಿತಾಂಶ ಲಭ್ಯವಾಗುವ ಸಾಧ್ಯತೆ ಇದೆ. ವಿಶೇಷವಾಗಿ ದಕ್ಷಿಣ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳ ಕಾಲೇಜುಗಳಿಗೆ ಮೊದಲ ಹಂತದಲ್ಲೇ ಫಲಿತಾಂಶ ತಲುಪುವ ಸಾಧ್ಯತೆ ಇದ್ದು, ಇತರ ಪ್ರದೇಶಗಳ ವಿದ್ಯಾರ್ಥಿಗಳು ಸ್ವಲ್ಪ ಸಮಯ ಕಾಯಬೇಕಾಗಬಹುದು.

 

ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ 2026: ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ?

ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಲು ಈ ಸರಳ ಹಂತಗಳನ್ನು ಅನುಸರಿಸಿ;

  • ಹಂತ 1: ಮೊದಲಿಗೆ ಕರ್ನಾಟಕ ಪರೀಕ್ಷಾ ಫಲಿತಾಂಶದ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
  • ಹಂತ 2: ಮುಖಪುಟದಲ್ಲಿ ಕಾಣಿಸುವ ‘1st PUC Annual Exam Result 2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಹಂತ 3: ಈಗ ಹೊಸ ಪುಟ ತೆರೆಯುತ್ತದೆ, ಅಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು (Registration Number) ನಮೂದಿಸಿ.
  • ಹಂತ 4: ನಿಮ್ಮ ವಿಷಯದ ಸ್ಟ್ರೀಮ್ (Science/Arts/Commerce) ಅನ್ನು ಆಯ್ಕೆ ಮಾಡಿ.
  • ಹಂತ 5: ಎಲ್ಲಾ ವಿವರಗಳನ್ನು ಭರ್ತಿ ಮಾಡಿದ ನಂತರ ‘Submit’ ಬಟನ್ ಮೇಲೆ ಕ್ಲಿಕ್ ಮಾಡಿ.
  • ಹಂತ 6: ನಿಮ್ಮ ಫಲಿತಾಂಶವು ಪರದೆಯ ಮೇಲೆ ಕಾಣಿಸುತ್ತದೆ. ಭವಿಷ್ಯದ ಉಲ್ಲೇಖಕ್ಕಾಗಿ ಇದನ್ನು ಡೌನ್‌ಲೋಡ್ ಮಾಡಿಕೊಳ್ಳಿ ಅಥವಾ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ರಿಸಲ್ಟ್ ನೋಡುವುದು ಎಲ್ಲಿ

  • karresults.nic.in
  • kseab.karnataka.gov.in
    ಈ ಎರಡು ವೆಬ್​ಸೈಟ್​ಗಳಲ್ಲಿ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.

ವೆಬ್‌ಸೈಟ್ ಮೇಲೆ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಫಲಿತಾಂಶ ಪ್ರಕಟಣೆಯಲ್ಲಿ ಕೊಂಚ ಬದಲಾವಣೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಮಂಡಳಿ ಸೂಚಿಸಿದ್ದು, ದಿನದ ಅವಧಿಯಲ್ಲಿ ಎಲ್ಲರಿಗೂ ಫಲಿತಾಂಶ ಲಭ್ಯವಾಗಲಿದೆ ಎಂದು ಸ್ಪಷ್ಟಪಡಿಸಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಡ್ಯಾನ್ಸ್ ಮಾಡುತ್ತಾ ಬಂದು ಬಾಲಕನ ಕೆನ್ನೆಗೆ ಹೊಡೆದ ರೋಬೋಟ್

ಬೀಜಿಂಗ್, ಮಾರ್ಚ್​ 31: ಡ್ಯಾನ್ಸ್​ ಮಾಡುತ್ತಾ ಬಂದು ರೋಬೋಟ್ ಬಾಲಕನ ಕೆನ್ನೆಗೆ ಹೊಡೆದಿರುವ ಘಟನೆ ಚೀನಾದಲ್ಲಿ ನಡೆದಿದೆ. ಮಾರ್ಚ್​ 21ರಂದು ಚೀನಾದ ಶಾಂಕ್ಸಿಯಲ್ಲಿ ನಡೆದ ತಂತ್ರಜ್ಞಾನ ಪ್ರದರ್ಶನದಲ್ಲಿ ಈ ಘಟನೆ ನಡೆದಿದೆ.ರೋಬೋಟ್ ಯುನಿಟ್ರೀ ರೊಬೊಟಿಕ್ಸ್ ಅಭಿವೃದ್ಧಿಪಡಿಸಿದ G1 ಹ್ಯೂಮನಾಯ್ಡ್ ಮಾದರಿ ಎಂದು ಹೇಳಲಾಗುತ್ತಿದೆ. ಸುಮಾರು 35 ಕಿಲೋಗ್ರಾಂಗಳಷ್ಟು ತೂಕ ಮತ್ತು ಸುಮಾರು 13,500 ಡಾಲರ್ ಬೆಲೆಯ ಈ ಯಂತ್ರವನ್ನು ಪ್ರಾಥಮಿಕವಾಗಿ ಸಂಶೋಧನೆ, ಶೈಕ್ಷಣಿಕ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ನಿರ್ಮಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link