ಬೆಂಗಳೂರು ಕರಗ ಮಹೋತ್ಸವ: ಸಂಪಂಗಿಕೆರೆ ಶಕ್ತಿ ಪೀಠದಲ್ಲಿ ಹಸಿ ಕರಗ ನೋಡಲು ಭಕ್ತಸಾಗರ
ಬೆಂಗಳೂರು, ಮಾರ್ಚ್ 31: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಕೌಂಟ್ಡೌನ್ ಆರಂಭವಾಗಿದೆ. ಇದರ ಮೊದಲ ಭಾಗವಾಗಿ ಇಂದು ಬೆಳಗ್ಗೆ ಸಂಪಂಗಿ ರಾಮನಗರದಲ್ಲಿರುವ ಸಂಪಂಗಿಕೆರೆಯ ಶಕ್ತಿಪೀಠದಲ್ಲಿ ಹಸಿ ಕರಗ ಶಕ್ತ್ಯೋತ್ಸವ ಅದ್ಧೂರಿಯಾಗಿ ಜರುಗಿದೆ. ಎ. ಜ್ಞಾನೇಂದ್ರ ಸ್ವಾಮಿಯವರು 16ನೇ ಬಾರಿಗೆ ಯಶಸ್ವಿಯಾಗಿ ಹಸಿ ಕರಗವನ್ನು ಹೊತ್ತಿದ್ದು, ರಾಜಬೀದಿಗಳಲ್ಲಿ ಸಂಚರಿಸಿ ಜಿಬಿಎ ಮುಖ್ಯ ಕಚೇರಿ ತಲುಪಿದರು. ಅಲ್ಲಿ ಪೂಜೆ ಸಲ್ಲಿಸಿ, ಕೆ.ಆರ್. ಮಾರುಕಟ್ಟೆ ರಸ್ತೆಯ ಮೂಲಕ ತಿಗಳರಪೇಟೆಯಲ್ಲಿರುವ ಶ್ರೀ ಧರ್ಮರಾಯಸ್ವಾಮಿ ದೇವಾಲಯಕ್ಕೆ ತೆರಳಿದ್ದಾರೆ. ನಾಳೆ ಮಧ್ಯರಾತ್ರಿ ಚೈತ್ರ ಪೌರ್ಣಮಿಯಂದು ಹೂವಿನ…