ವಿಂಡೀಸ್ ದಾಂಡಿಗರ ಆರ್ಭಟ… 6 ರನ್ಗಳಿಂದ ವಿಶ್ವ ದಾಖಲೆ ಮಿಸ್ – Kannada News | West Indies smashes 2nd Highest Score in T20 World Cups
ಟಿ20 ವಿಶ್ವಕಪ್ನ 44ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಬ್ಯಾಟರ್ಗಳು ಅಕ್ಷರಶಃ ಅಬ್ಬರಿಸಿದ್ದಾರೆ. ಅದು ಕೂಡ ಬರೋಬ್ಬರಿ 254 ರನ್ ಚಚ್ಚುವ ಮೂಲಕ. ಮುಂಬೈನ ವಾಂಖೆಡೆ ಸ್ಡೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಪರ ಶಿಮ್ರಾನ್ ಹೆಟ್ಮೆಯರ್ ಕೇವಲ 34 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 85 ರನ್ ಬಾರಿಸಿದರು. ಇನ್ನು ರೋವ್ಮನ್ ಪೊವೆಲ್…