ಲಂಚ ಕೇಸ್: ಬಿಜೆಪಿ ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ? ಸ್ವಾಮೀಜಿ ಆಡಿಯೋ ವೈರಲ್ – Kannada News | BJP MLA Chandru Lamani Arrested In Bribe Case: Swamiji Audio Goes Viral
ಗದಗ, (ಫೆಬ್ರವರಿ 22): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ. ತಮ್ಮದೇ ಸಮುದಾಯದ ಶಾಸಕರ ವಿರುದ್ಧ ಬಂಜಾರ ಸಮಾಜದ ಸ್ವಾಮೀಜಿ ಮಸಲತ್ತು ಮಾಡಿದ್ದಾರೆ…