ಲಂಚ ಪಡೆಯುವಾಗ ಬಿಜೆಪಿ ಶಾಸಕ ಲಾಕ್: ಚಂದ್ರು ಲಮಾಣಿಯಿಂದ ಧಮ್ಕಿ; ಗುತ್ತಿಗೆದಾರ ನೀಡಿದ ದೂರಿನಲ್ಲೇನಿದೆ? – Kannada News | BJP MLA arrested while accepting bribe; Chandru Lamani issues threat; what complaint did the contractor file
ಬಿಜೆಪಿ ಶಾಸಕ ಚಂದ್ರು ಲಮಾಣಿ Image Credit source: moneycontrol ಗದಗ, ಫೆಬ್ರವರಿ 21: ಗುತ್ತಿಗೆದಾರರು ರಾಜ್ಯ ಸರ್ಕಾರದ ವಿರುದ್ಧ ಕೆರಳಿದ್ದಾರೆ. ಕಮಿಷನ್ ದಂಧೆ ಜೋರಾಗಿದೆ ಅಂತ ಆರೋಪ ಮಾಡುತ್ತಿದ್ದಾರೆ. ಇದನ್ನೇ ಬಿಜೆಪಿ ನಾಯಕರು ಅಸ್ತ್ರ ಮಾಡ್ಕೊಂಡು ವಾಗ್ದಾಳಿ ಮಾಡುತ್ತಿದ್ದಾರೆ. ಇಂತಹ ಹೊತ್ತಲ್ಲಿ ಗದಗ ಜಿಲ್ಲೆಯ ಶಿರಹಟ್ಟಿಯ ಬಿಜೆಪಿ ಶಾಸಕ ಚಂದ್ರು ಲಮಾಣಿ (Chandru Lamani), ಗುತ್ತಿಗೆದಾರನಿಂದ ಕಮಿಷನ್ ಪಡೆಯುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಸದ್ಯ ಇದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಫೆ 18ರಂದೇ…