ಮಹಿಳಾ ಅಧಿಕಾರಿ ಮನೆಯಲ್ಲಿ ಹಿಡನ್ ಕ್ಯಾಮರಾ ಇಟ್ಟಿದ್ದ ಕೇಸ್: ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ ಹೆಚ್ಚು ಬೆತ್ತಲೆ ವಿಡಿಯೋ! – Kannada News | Hidden Camera Blackmail Case in Belagavi: Fake Journalists Arrested After 100 Private Videos Found on Mobiles
ಬೆಳಗಾವಿ, ಫೆಬ್ರವರಿ 21: ಬೆಳಗಾವಿಯಲ್ಲಿ (Belagavi) ಮಹಿಳಾ ಅಧಿಕಾರಿಯ ಮನೆಯಲ್ಲಿ ಹಿಡನ್ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋಗಳನ್ನು ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್‌ನ ಮತ್ತೊಂದು ಕರಾಳ ಮುಖ ಇದೀಗ ಬಯಲಾಗಿದೆ. ಪ್ರಕರಣ ಸಂಬಂಧ ಬಂಧಿತ ನಕಲಿ ಪತ್ರಕರ್ತರ ಮೊಬೈಲ್‌ಗಳನ್ನು ಪರಿಶೀಲಿಸಿದ ವೇಳೆ 100ಕ್ಕೂ ಹೆಚ್ಚು ಬೆತ್ತಲೆ ಹಾಗೂ ಖಾಸಗಿ ವಿಡಿಯೋಗಳು ಪತ್ತೆಯಾಗಿರುವುದು ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ಈ ಹಿಂದೆ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು 50 ಲಕ್ಷ…