ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್: ಮದ್ಯ, ಗಾಂಜಾ ಸೇವನೆ ವಿಡಿಯೋ ವೈರಲ್ – Kannada News | Hubballi Sub Jail Video Goes Viral: Undertrial Prisoners Seen Consuming Liquor and Ganja Days After DGP Alok Kumar’s Visit
ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್Image Credit source: tv9 ಹುಬ್ಬಳ್ಳಿ, ಫೆಬ್ರವರಿ 21: ಧಾರವಾಡ (Dharawad) ಜಿಲ್ಲೆ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವ ಆರೋಪ ಕೇಳಿಬಂದಿದ್ದು, ಜೈಲಿನೊಳಗಿನ ಅಕ್ರಮ ಸೌಲಭ್ಯಗಳ ವಿಡಿಯೋ ವೈರಲ್ ಆಗಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹಣ ಕೊಟ್ಟರೆ ಸಬ್ ಜೈಲಿನಲ್ಲಿ ಎಲ್ಲಾ ಸೌಲಭ್ಯಗಳು ಸಿಗುತ್ತವೆ ಎಂಬ ಆರೋಪಗಳು ಕೇಳಿಬಂದಿದ್ದು, ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿವೆ. ವೈರಲ್ ಆಗಿರುವ ವಿಡಿಯೋದಲ್ಲಿ ವಿಚಾರಣಾಧೀನ ಕೈದಿಗಳು ಮೊಬೈಲ್ ಫೋನ್ ಬಳಸುತ್ತಿರುವುದು,…