All posts by nagaraj11081993

‘ಟಾಕ್ಸಿಕ್’ ಟೀಸರ್ ನೋಡಿ ಆ ತಮಿಳು ಸಿನಿಮಾ ನೆನಪಿಸಿಕೊಳ್ಳುತ್ತಿರುವುದೇಕೆ? – Kannada News | Toxic movie teaser released, Some people comparing it with Mahaan movie story

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಇಂದು (ಫೆಬ್ರವರಿ 20) ಬಿಡುಗಡೆ ಆಗಿದೆ. ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು, ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ವೀವ್ಸ್​ಗಳನ್ನು ಪಡೆದುಕೊಂಡಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಯಶ್ ಅವರ ಕ್ಯಾರೆಕ್ಟರ್ ಟೀಸರ್ ರೀತಿಯೇ ಈ ಟೀಸರ್ ಸಹ ಮಾಸ್ ಆಗಿ ಮೂಡಿಬಂದಿದೆ. ಟೀಸರ್​​ನಲ್ಲಿ ಯಶ್ ಅವರ ಎರಡು ಭಿನ್ನ ಲುಕ್​​ಗಳನ್ನು ತೋರಿಸಲಾಗಿದ್ದು, ಅಭಿಮಾನಿಗಳು ಯಶ್ ಅವರ ಲುಕ್​​ಗಳಿಗೆ ಮಾಸ್ ಅಪೀಲ್​​ಗೆ ಉಘೆ ಎಂದಿದ್ದಾರೆ. ಆದರೆ ಟೀಸರ್ ನೋಡಿದ ಕೆಲವರಿಗೆ ತಮಿಳಿನ ಒಂದು ಸಿನಿಮಾ ನೆನಪಾಗುತ್ತಿದೆಯಂತೆ.

‘ಟಾಕ್ಸಿಕ್’ ಟೀಸರ್​​ನ ಕೊನೆಯಲ್ಲಿ ಯಶ್ ಅವರು ಯಂಗ್ ಲುಕ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ, ಟೀಸರ್​​ನ ಕೊನೆಯಲ್ಲಿ ‘ಐ ಆಮ್ ಹೋಮ್ ಡ್ಯಾಡಿ’ ಎಂಬ ಡೈಲಾಗ್, ಇದು ಅಪ್ಪ ಮತ್ತು ಮಗನ ನಡುವಿನ ಕಿತ್ತಾಟದ ಕತೆಯೆಂಬ ಅನುಮಾನವನ್ನು ಹುಟ್ಟಿಸುತ್ತಿದೆ. ಟೀಸರ್​​ನ ಕೊನೆಯ ಕೆಲವು ಸೆಕೆಂಡುಗಳು ನೋಡಿದ ಕೆಲವೇ ಕೆಲವು ಸಿನಿಮಾ ಪ್ರೇಮಿಗಳು ತಮಿಳಿನ ಒಂದು ಸಿನಿಮಾವನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ.

ತಮಿಳಿನ ಸ್ಟಾರ್ ನಟ ಚಿಯಾನ್ ವಿಕ್ರಂ ನಟಿಸಿದ್ದ ‘ಮಹಾನ್’ ಸಿನಿಮಾಕ್ಕೂ ‘ಟಾಕ್ಸಿಕ್’ ಸಿನಿಮಾಕ್ಕೂ ಹೋಲಿಕೆ ಇರಬಹುದಾ ಎಂಬ ಚರ್ಚೆ ಸಣ್ಣದಾಗಿ ನಡೆಯುತ್ತಿದೆ. ‘ಮಹಾನ್’ ಸಿನಿಮಾನಲ್ಲಿ ಚಿಯಾನ್ ವಿಕ್ರಂ ಮಗ (ನಟಿಸಿರುವುದು ಸಹ ಚಿಯಾನ್ ವಿಕ್ರಂ ಮಗ ಧ್ರುವ್) ಮತ್ತು ಪತ್ನಿಯನ್ನು ತ್ಯಜಿಸಿ ಲಿಕ್ಕರ್ ಮಾಫಿಯಾ ಸೇರಿಕೊಳ್ಳುತ್ತಾನೆ. ದೊಡ್ಡ ಡಾನ್ ಆಗಿ ಬೆಳೆಯುತ್ತಾನೆ. ಕೊನೆಗೆ ಅವನ ಮಗನೇ ಅವನಿಗೆ ಎದುರಾಗಿ ನಿಂತು ಆತನ ಸಾಮ್ರಾಜ್ಯವನ್ನು ನೆಲಸಮಗೊಳಿಸುತ್ತಾನೆ.

ಇದನ್ನೂ ಓದಿ:‘ವಿಂಟೇಜ್ ಯಶ್ ಈಸ್ ಬ್ಯಾಕ್’; ‘ಟಾಕ್ಸಿಕ್ ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

‘ಟಾಕ್ಸಿಕ್’ನಂತೆಯೇ ‘ಮಹಾನ್’ ಸಿನಿಮಾನಲ್ಲಿ ಸಹ ಮಗನ ಪಾತ್ರಧಾರಿ ಸಖತ್ ವೈಲೆಂಟ್ ಆಗಿರುತ್ತಾನೆ. ಆತನ ಲುಕ್ ಸಹ ‘ಟಾಕ್ಸಿಕ್’ ಟೀಸರ್​​ನ ಕೊನೆಯಲ್ಲಿ ಬರುವ ಯಶ್ ಅವರ ಲುಕ್ ಅನ್ನು ತುಸು ಹೋಲುತ್ತಿದೆ. ‘ಮಹಾನ್’ ಸಿನಿಮಾನಲ್ಲಿ ಅಪ್ಪ-ಮಗನ ನಡುವೆ ಕಿತ್ತಾಟ ಏರ್ಪಡುತ್ತದೆ. ಅಪ್ಪನ ಹತ್ತಿರದವರನ್ನು ಕೊಂದು ಹಾಕುತ್ತಾನೆ ಮಗ, ಅಪ್ಪನ ಲಿಕ್ಕರ್ ಸಾಮ್ರಾಜ್ಯವನ್ನು ದೂಳಿಪಟ ಮಾಡುತ್ತಾನೆ. ‘ಟಾಕ್ಸಿಕ್’ನಲ್ಲಿ ಸಹ ಯಶ್ ಅವರ ಸಾಮ್ರಾಜ್ಯವನ್ನು ಧ್ವಂಸ ಮಾಡಲೆಂದು ಮಗ ಪ್ರಯತ್ನಿಸುವಂತಿದೆ. ಏನೇ ಆಗಲಿ ಸಿನಿಮಾದ ಕತೆ ಸಿನಿಮಾ ಬಿಡುಗಡೆ ಆದ ಬಳಿಕವಷ್ಟೆ ತಿಳಿಯಲಿದೆ.

‘ಟಾಕ್ಸಿಕ್’ ಸಿನಿಮಾವನ್ನು ಗೀತು ಮೋಹನ್​​ದಾಸ್ ನಿರ್ದೇಶನ ಮಾಡಿದ್ದು, ಸಿನಿಮಾಕ್ಕೆ ಕೆವಿಎನ್ ಮತ್ತು ಯಶ್ ಅವರ ಮಾನ್​​ಸ್ಟರ್ ಮೈಂಡ್ಸ್ ಬಂಡವಾಳ ಹೂಡಿದೆ. ಸಿನಿಮಾನಲ್ಲಿ ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ನಯನತಾರ, ಹುಮಾ ಖುರೇಷಿ, ತಾರಾ ಸುತಾರಿಯಾ ಅವರುಗಳು ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ಮಾರ್ಚ್ 19ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Video: ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ – Kannada News | Sambit Patra Launches Sharp Attack on Rahul Gandhi Amid Youth Congress Protest

ನವದೆಹಲಿ, ಫೆಬ್ರವರಿ 20: ಕಾಂಗ್ರೆಸ್ ಕಾರ್ಯಕರ್ತರು ಅರೆ ಬರೆ ಬಟ್ಟೆ ಧರಿಸಿ ಎಐ ಇಂಪ್ಯಾಕ್ಟ್​ ಶೃಂಗಸಭೆಗೆ ಬಂದಿದ್ದವರ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಕಿಡಿ ಕಾರಿದ್ದಾರೆ. ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳು ಎಂದು ಕರೆದಿರುವ ಪಾತ್ರ,ದೇಶ ಎಲ್ಲೆಲ್ಲಿ ಪ್ರಗತಿ ಹೊಂದುತ್ತದೆಯೋ, ಎಲ್ಲೆಲ್ಲಿ ಸಂತೋಷ ಇರುತ್ತದೆಯೋ ಅದನ್ನು ಹಾಳು ಮಾಡಲು ಕಾಂಗ್ರೆಸ್ ಸಿದ್ಧವಿರುತ್ತದೆ. ಕಾಂಗ್ರೆಸ್ ಟಾಪ್​ಲೆಸ್​, ಬ್ರೈನ್​​ಲೆಸ್ ಹಾಗೂ ಶೇಮ್​​ಲೆಸ್. ಇದು ಜಾಗತಿಕ ಎಈ ಇಂಪ್ಯಾಕ್ಟ್​ ಶೃಂಗಸಭೆಯಾಗಿತ್ತು. ಬಿಜೆಪಿಯ ಶೃಂಗಸಭೆಯಲ್ಲ ಎನ್ನುವ ಬುದ್ಧಿವಂತಿಕೆ ಕಾಂಗ್ರೆಸ್​​ಗೆ ಇಲ್ಲ. ಇಡೀ ಪ್ರಪಂಚದಿಂದ ನಾಯಕರು ಇದಕ್ಕೆ ಆಗಮಿಸಿದ್ದರು. ಸರ್ಕಾರ ಅಲ್ಲ ದೇಶದ ಮರ್ಯಾದಿಯನ್ನು ಕಳೆಯುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಎಂದು ಗುಡುಗಿದ್ದಾರೆ.

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡಿದ್ದಕ್ಕಾಗಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವುದನ್ನು ದೃಶ್ಯಗಳು ತೋರಿಸಿವೆ.ಭಾರತ-ಯುಎಸ್ ವ್ಯಾಪಾರದ ಚೌಕಟ್ಟು ಒಪ್ಪಂದವನ್ನು ವಿರೋಧಿಸಿ ತಮ್ಮ ಶರ್ಟ್‌ಗಳನ್ನು ತೆಗೆದ ಕೆಲವು ಕೋಪಗೊಂಡ ಜನರು ಸಹ ಪ್ರತಿಭಟನೆ ನಡೆಸಿದ್ದಾರೆ.ಎಐ ಶೃಂಗಸಭೆಯನ್ನು ಅಡ್ಡಿಪಡಿಸುವ ಪ್ರಯತ್ನವನ್ನು ಭಾರತದ ಬೆಳವಣಿಗೆಯ ಕಥೆಯ ಬಗ್ಗೆ ಕಾಂಗ್ರೆಸ್‌ನ “ಅಸೂಯೆ”ಯ ಪರಿಣಾಮ ಎಂದು ಬಿಜೆಪಿ ಕರೆದಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಸರ್ಕಾರದ ಮುಖ್ಯಕಾರ್ಯದರ್ಶಿ ವಿರುದ್ಧ ಲಂಚ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಸಿಸಿಬಿ ವಶಕ್ಕೆ – Kannada News | Bengaluru CCB detained Snehamayi krishna in Alleged bribe Against Karnataka Governmnet CS Shalini Rajaneesh

ಬೆಂಗಳೂರು/ಮೈಸೂರು, (ಫೆಬ್ರವರಿ 20): ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajaneesh) ವಿರುದ್ಧ ಕೋಟ್ಯಾಂತರ ರೂಪಾಯಿ ಲಂಚ (Bribe) ಆರೋಪ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ  (snehamayi krishna) ವಿರುದ್ಧ ದೂರು ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಹಿ ಕೃಷ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡಾ ಮಾಜಿ ಆಯುಕ್ತ ಡಿಬಿ ನಟೇಶ್ ಬಡ್ತಿ ಪಡೆಯಲು ಶಾಲಿನಿ ರಜನೀಶ್ ಗೆ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿಕೃಷ್ಣ ಗಂಭೀರ ಆರೋಪ ಮಾಡಿದ್ದರು. ಈ ಆರೋಪ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ನಟೇಶ್ ದೂರು ನೀಡಿದ್ದು, ಈ ದೂರಿನ ಅನ್ವಯ ಸಿಸಿಬಿಯ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ.

Source link

ಸೆಕೆಂಡ್ ಕೇಸ್ ಆಫ್ ಸೀತಾರಾಮ್ ವಿಮರ್ಶೆ: ಕುತೂಹಲದ ಕಥೆ, ಕೊನೆವರೆಗೂ ರೋಚಕತೆ – Kannada News | Second Case of Seetharam Review Vijay Raghavendra film gives suspense thriller entertainment package

ಸರಣಿ ಕೊಲೆಗಳ ಬಗ್ಗೆ ಸಾಕಷ್ಟು ಸಿನಿಮಾಗಳು ಬಂದಿವೆ. ಅವುಗಳ ನಡುವೆಯೂ ಒಂದು ಭಿನ್ನ ಪ್ರಯತ್ನವಾಗಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಗಮನ ಸೆಳೆಯುತ್ತದೆ. ವಿಜಯ್ ರಾಘವೇಂದ್ರ (Vijay Raghavendra), ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಬಿಡುಗಡೆ ಆಗಿದ್ದು, ಸಸ್ಪೆನ್ಸ್ ಥ್ರಿಲ್ಲರ್ ಮನರಂಜನೆ ಬಯಸುವ ಪ್ರೇಕ್ಷಕರಿಗೆ ಇಷ್ಟ ಆಗುತ್ತದೆ. ದೇವಿ ಪ್ರಸಾದ್ ಶೆಟ್ಟಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸಾತ್ವಿಕ್ ಹೆಬ್ಬಾರ್ ಮತ್ತು ದೇವಿ ಪ್ರಸಾದ್ ಶೆಟ್ಟಿ ಅವರು ಜೊತೆಯಾಗಿ ಬಂಡವಾಳ ಹೂಡಿದ್ದಾರೆ. ಒಟ್ಟಾರೆ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ (Second Case of Seetharam) ಸಿನಿಮಾ ಹೇಗಿದೆ ತಿಳಿಯಲು ಈ ವಿಮರ್ಶೆ ಓದಿ..

ಮಲೆನಾಡಿನ ಒಂದು ಊರಿನಲ್ಲಿ ಹಲವು ಕೊಲೆಗಳು ನಡೆಯುತ್ತವೆ. ಆ ಕೊಲೆಗಳನ್ನು ಒಬ್ಬ ಸೈಕೋ ಕಿಲ್ಲರ್ ಮಾಡುತ್ತಿದ್ದಾನೆ ಎಂಬ ಅನುಮಾನ ಮೂಡುತ್ತದೆ. ಸಿನಿಮಾದ ಆರಂಭದಿಂದ ಕೊನೇ ತನಕ ಹಲವು ಪಾತ್ರಗಳ ಮೇಲೆ ಅನುಮಾನ ಮೂಡುತ್ತದೆ. ಅಂತಿಮವಾಗಿ ಆ ಸೈಕೋ ಕಿಲ್ಲರ್ ಯಾರು? ಅವನ ಉದ್ದೇಶ ಏನು ಎಂಬುದನ್ನು ತಿಳಿಯಲು ಕ್ಲೈಮ್ಯಾಕ್ಸ್ ತನಕ ಕಾಯಬೇಕು. ಎಲ್ಲ ದೃಶ್ಯಗಳನ್ನೂ ಕುತೂಹಲಭರಿತವಾಗಿ ಕಟ್ಟಿಕೊಡಲಾಗಿದೆ.

ಈ ಸಿನಿಮಾದಲ್ಲಿ ಇರುವ ಎಲ್ಲ ಪ್ರಮುಖ ಪಾತ್ರಗಳ ಹಿಂದೆ ಒಂದೊಂದು ಕಥೆ ಇದೆ. ಪ್ರತಿ ಕಥೆ ತೆರೆದುಕೊಂಡಾಗಲೆಲ್ಲ ಕೌತುಕ ಹೆಚ್ಚಾಗುತ್ತದೆ. ಇವನೇ ಕೊಲೆಗಾರ ಅಂತ ಪ್ರೇಕ್ಷಕರು ಅಂದುಕೊಳ್ಳುವುದರೊಳಗೆ ಇನ್ನೊಂದು ಆಯಾಮ ಓಪನ್ ಆಗುತ್ತದೆ. ಆ ರೀತಿಯ ಒಂದಷ್ಟು ಟ್ವಿಸ್ಟ್​​ಗಳ ಮೂಲಕ ಇಡೀ ಸಿನಿಮಾವನ್ನು ನಿರ್ದೇಶಕರು ನಿರೂಪಿಸಿದ್ದಾರೆ. ಅದು ಈ ಸಿನಿಮಾದ ಪ್ಲಸ್ ಪಾಯಿಂಟ್.

ನಟ ವಿಜಯ್ ರಾಘವೇಂದ್ರ ಅವರಿಗೆ ಈ ಸಿನಿಮಾದಲ್ಲಿ ಸಿಕ್ಕಿರುವ ಪಾತ್ರ ಹೇಳಿ ಮಾಡಿಸಿದಂತಿದೆ. ಪೊಲೀಸ್ ಇನ್ಸ್​ಪೆಕ್ಟರ್ ಪಾತ್ರವನ್ನು ಅವರು ನಿಭಾಯಿಸಿದ್ದಾರೆ. ಇಲ್ಲಿ ಪೊಲೀಸ್ ಎಂದರೆ ಕೂಗಾಡುತ್ತಾ ಆರ್ಭಟಿಸುವ ವ್ಯಕ್ತಿ ಅಲ್ಲ. ಎಲ್ಲವನ್ನೂ ತಾಳ್ಮೆಯಿಂದ ನೋಡುವ, ಆಲೋಚಿಸಿ ನಿರ್ಧಾರ ತೆಗೆದುಕೊಳ್ಳುವ ಪೊಲೀಸ್ ಅಧಿಕಾರಿಯಾಗಿ ವಿಜಯ್ ರಾಘವೇಂದ್ರ ಕಾಣಿಸಿಕೊಂಡಿದ್ದಾರೆ. ಆ್ಯಕ್ಷನ್ ದೃಶ್ಯಗಳು ಇದ್ದರೂ ಕೂಡ ಸೂಪರ್ ಹೀರೋ ರೀತಿ ವರ್ತಿಸುವುದಿಲ್ಲ. ಎಷ್ಟು ಸಾಧ್ಯವೋ ಅಷ್ಟು ನೈಜವಾಗಿ ಆ ಪಾತ್ರ ಮೂಡಿಬಂದಿದೆ.

ಇಡೀ ಸಿನಿಮಾದಲ್ಲಿ ಪ್ರೇಕ್ಷಕರಿಗೆ ಇಷ್ಟ ಆಗುವುದು ರೋಚಕವಾದ ಕಥೆ. ಪ್ರೇಕ್ಷಕರನ್ನು ಹಿಡಿದಿಡಲು ಬೇಕಾದ ಮುಖ್ಯ ಅಂಶವೇ ಕಥೆ ಎಂಬುದನ್ನು ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ಎಲ್ಲವನ್ನೂ ಅಚ್ಚುಕಟ್ಟಾಗಿ ಕೇವಲ 2 ಗಂಟೆ ಅವಧಿಯಲ್ಲಿ ಹೇಳಿ ಮುಗಿಸಿದ್ದಾರೆ. ಮೊದಲಾರ್ಧಕ್ಕಿಂತಲೂ ದ್ವಿತೀಯಾರ್ಧದಲ್ಲಿ ವೇಗ ಹೆಚ್ಚಿದೆ. ಪಟಪಟನೆ ಸಾಗುವ ಚಿತ್ರಕಥೆಯಿಂದಾಗಿ ಈ ಸಿನಿಮಾ ಇನ್ನಷ್ಟು ರೋಚಕತೆ ಪಡೆದುಕೊಂಡಿದೆ.

ಇದನ್ನೂ ಓದಿ: ವಿಜಯ್ ರಾಘವೇಂದ್ರ ಟಾರ್ಚರ್​​ಗೆ ಸುಸ್ತಾದ ಅನುಶ್ರೀ; ಕೊನೆಗೂ ಮೂಡಿತು ನಗು

ನವನೀತ್ ಶಾಮ್ ಅವರ ಸಂಗೀತದಿಂದಾಗಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಚಿತ್ರದ ರೋಚಕತೆ ಹೆಚ್ಚಿದೆ. ಛಾಯಾಗ್ರಾಹಕ ಹೇಮಂತ್ ಆಚಾರ್ಯ ಅವರ ಕೆಲಸ ಕೂಡ ಮೆಚ್ಚುಗೆ ಪಡೆಯುತ್ತದೆ. ಸರಣಿ ಕೊಲೆಯ ಕಥೆಗೆ ಒಂದಷ್ಟು ಭಾವುಕತೆಯನ್ನು ಬೆರಸಿದ್ದರಿಂದ ಈ ಚಿತ್ರದ ತೂಕ ಹೆಚ್ಚಿದೆ. ಕೆಲವು ದೃಶ್ಯಗಳಲ್ಲಿ ಲಾಜಿಕ್ ಇಲ್ಲದಿರುವುದು ಸೇರಿದಂತೆ ಸಣ್ಣ ಪುಟ್ಟ ನ್ಯೂನ್ಯತೆಗಳು ಕೂಡ ಈ ಸಿನಿಮಾದಲ್ಲಿ ಇವೆ. ಅವುಗಳ ನಡುವೆಯೂ ಒಂದು ಉತ್ತಮ ಚಿತ್ರವಾಗಿ ಪ್ರೇಕ್ಷಕರನ್ನು ಸೆಳೆದುಕೊಳ್ಳುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ; ಸರ್ಕಾರ ವಿರುದ್ಧ ಜನಾಕ್ರೋಶ! – Kannada News | Karnataka Government Hospitals Halt CT, MRI Services Amidst 140 Crore Bill Arrears

ಬೆಂಗಳೂರು, ಫೆಬ್ರವರಿ 20: ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತಿದ್ದ ಉಚಿತ ಸಿಟಿ (CT) ಮತ್ತು ಎಂಆರ್‌ಐ (MRI) ಸ್ಕ್ಯಾನಿಂಗ್ ಸೇವೆಗಳು ಸ್ಥಗಿತಗೊಂಡಿವೆ. ಆರೋಗ್ಯ ಇಲಾಖೆಯಿಂದ ಖಾಸಗಿ ಸಹಭಾಗಿತ್ವದಲ್ಲಿ ಸೇವೆ ನೀಡುತ್ತಿದ್ದ ಸಂಸ್ಥೆಗಳಿಗೆ 140 ಕೋಟಿ ರೂಪಾಯಿಗಳ ಬಿಲ್ ಬಾಕಿ ಉಳಿದಿರುವುದೇ ಈ ಸ್ಥಗಿತಕ್ಕೆ ಪ್ರಮುಖ ಕಾರಣವಾಗಿದೆ ಎಂದು ತಿಳಿದುಬಂದಿದೆ. ಈ ನಿರ್ಧಾರವು ರಾಜ್ಯದ 13 ಜಿಲ್ಲೆಗಳಲ್ಲಿ ಮತ್ತು 5 ಜಿಲ್ಲಾಸ್ಪತ್ರೆಗಳಲ್ಲಿ ರೋಗಿಗಳಿಗೆ ನೇರವಾಗಿ ಪರಿಣಾಮ ಬೀರಿದೆ.

ಸರ್ಕಾರಿ ಆಸ್ಪತ್ರೆಗಳು ಬಡವರಿಗೆ ಉಚಿತ ಸೇವೆ ಒದಗಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತವೆ. ಆದರೆ, ಈ ಸೇವೆಗಳ ಸ್ಥಗಿತದಿಂದ ಬಡ ರೋಗಿಗಳು ಖಾಸಗಿ ಆಸ್ಪತ್ರೆಗಳಲ್ಲಿ 8,000 ರಿಂದ 9,000 ರೂಪಾಯಿಗಳಷ್ಟು ಅಧಿಕ ಶುಲ್ಕ ಭರಿಸಿ ಸ್ಕ್ಯಾನ್ ಮಾಡಿಸಿಕೊಳ್ಳುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಇದು ಬಡ ಜನರಿಗೆ ದೊಡ್ಡ ಆರ್ಥಿಕ ಹೊರೆಯನ್ನು ಉಂಟುಮಾಡಿದೆ. ಸಾರ್ವಜನಿಕರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಉಚಿತ ಆರೋಗ್ಯ ಸೇವೆಗಳಿಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದಾರೆ. ಬಸ್ ಪಾಸ್, ಭಾಗ್ಯಲಕ್ಷ್ಮಿ, ಗೃಹಲಕ್ಷ್ಮಿ ಯೋಜನೆಗಳಂತಹ ಇತರ ಯೋಜನೆಗಳಿಗಿಂತ ಆರೋಗ್ಯ ಮತ್ತು ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಗಮನ ಹರಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಏಪ್ರಿಲ್​ನಿಂದ ಚಾಲನೆ ಸಾಧ್ಯತೆ; ಓಮನ್, ಬ್ರಿಟನ್ ಒಪ್ಪಂದಗಳೂ ಏಪ್ರಿಲ್​ನಲ್ಲೇ? – Kannada News | India US interim trade deal to be implemented from 2026 April, along with deals with UK and Oman

ನವದೆಹಲಿ, ಫೆಬ್ರುವರಿ 20: ಏಪ್ರಿಲ್ ತಿಂಗಳಲ್ಲಿ ಮೂರು ವ್ಯಾಪಾರ ಒಪ್ಪಂದಗಳು ಚಾಲನೆಗೆ ಬರುವ ಸಾಧ್ಯತೆ ಇದೆ. ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ನೀಡಿರುವ ಮಾಹಿತಿ ಪ್ರಕಾರ, ಭಾರತ ಹಾಗೂ ಅಮೆರಿಕ ಮಧ್ಯೆ ಏರ್ಪಟ್ಟಿರುವ ಮಧ್ಯಂತರ ವ್ಯಾಪಾರ ಒಪ್ಪಂದ (India US Interim Trade Deal) ಏಪ್ರಿಲ್​ನಲ್ಲಿ ಜಾರಿಗೆ ಬರಬಹುದು. ಬ್ರಿಟನ್ ಮತ್ತು ಓಮನ್ ಜೊತೆಗೆ ಏರ್ಪಟ್ಟಿರುವ ಭಾರತದ ಟ್ರೇಡ್ ಡೀಲ್​ಗಳು ಕೂಡ ಏಪ್ರಿಲ್ ತಿಂಗಳಲ್ಲೇ ಚಾಲನೆಗೆ ಬರಬಹುದು. ಇನ್ನು, ನ್ಯೂಜಿಲೆಂಡ್ ಜೊತೆಗಿನ ವ್ಯಾಪಾರ ಒಪ್ಪಂದವು ಸೆಪ್ಟೆಂಬರ್ ತಿಂಗಳಲ್ಲಿ ಅನುಷ್ಠಾನಕ್ಕೆ ಬರಲಿದೆ ಎಂದು ಹೇಳಲಾಗುತ್ತಿದೆ.

ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ರೂಪಿಸಲಾಗುವ ನಿಯಮಗಳು…

ಭಾರತ ಮತ್ತು ಅಮೆರಿಕ ನಡುವೆ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಫ್ರೇಮ್​ವರ್ಕ್ (Framework for Interim Trade deal) ಅಂತಿಮಗೊಳಿಸಲಾಗಿದೆ ಎಂದು ಕೆಲ ವಾರಗಳ ಹಿಂದೆ ಜಂಟಿ ಹೇಳಿಕೆಯಲ್ಲಿ ಘೋಷಣೆ ಮಾಡಲಾಗಿದೆ. ಈ ಒಪ್ಪಂದದ ಕಾನೂನು ನಿಯಮಗಳನ್ನು ಅಂತಿಮಗೊಳಿಸಲು ಎರಡೂ ದೇಶಗಳ ತಂಡಗಳು ಮೂರು ದಿನಗಳ ಮಾತುಕತೆ ನಡೆಸಲಿವೆ. ಇದು ಫೆಬ್ರುವರಿ 23, ಸೋಮವಾರ ಆರಂಭವಾಗುತ್ತದೆ.

ಇದನ್ನೂ ಓದಿ: ಕರ್ನಾಟಕದ ಕೈತಪ್ಪಿತಾ ಏರೋಸ್ಪೇಸ್ ಘಟಕ ಯೋಜನೆ?; ಬೆಳಗಾವಿ ಮೂಲದ ಏಕಸ್ ಗ್ರೂಪ್​ನಿಂದ ತಮಿಳುನಾಡಿನಲ್ಲಿ ಕ್ಲಸ್ಟರ್ ನಿರ್ಮಾಣ

ಒಪ್ಪಂದದ ಚೌಕಟ್ಟನ್ನು ಆಧಾರವಾಗಿಟ್ಟುಕೊಂಡು ಲೀಗಲ್ ಅಗ್ರೀಮೆಂಟ್ ಅನ್ನು ರೂಪಿಸಲಾಗುತ್ತಿದೆ. ಮಾರ್ಚ್​ನಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಬಹುದು. ಹೊಸ ಹಣಕಾಸು ವರ್ಷದ ಆರಂಭವಾದ ಏಪ್ರಿಲ್ 1ರಿಂದ ಮಧ್ಯಂತರ ಒಪ್ಪಂದ ಅಧಿಕೃತವಾಗಿ ಜಾರಿಗೆ ಬರಬಹುದು.

ಭಾರತದ ಮೇಲೆ ಅಮೆರಿಕ ಶೇ. 25ರಷ್ಟು ಪ್ರತಿಸುಂಕ ವಿಧಿಸುತ್ತಿದೆ. ತೀರಾ ಇತ್ತೀಚಿನವರೆಗೂ ರಷ್ಯನ್ ತೈಲ ಖರೀದಿಗೆ ದಂಡವಾಗಿ ಹೆಚ್ಚುವರಿ ಶೇ. 25 ಟ್ಯಾರಿಫ್ ಹಾಕುತಿತ್ತು. ಒಟ್ಟು ಟ್ಯಾರಿಫ್ ಶೇ. 25 ಇತ್ತು. ಆದರೆ, ರಷ್ಯನ್ ತೈಲ ಖರೀದಿಗೆ ಹಾಕುತ್ತಿದ್ದ ಶೇ. 25 ಟ್ಯಾರಿಫ್ ದಂಡವನ್ನು ಹಿಂಪಡೆದುಕೊಂಡಿದೆ. ಈಗ ಶೇ. 25 ಟ್ಯಾರಿಫ್ ಮಾತ್ರವೇ ಜಾರಿಯಲ್ಲಿ ಇರುವುದು.

ಇದನ್ನೂ ಓದಿ: ಪ್ಯಾಕ್ಸ್ ಸಿಲಿಕಾಗೆ ಭಾರತ ಸೇರ್ಪಡೆ; ಅಮೆರಿಕ ಸಂತಸ; ಏನಿದು ಹೊಸ ಒಪ್ಪಂದ?

ಏಪ್ರಿಲ್ 1ರಿಂದ ಈ ಶೇ. 25 ಪ್ರತಿಸುಂಕವನ್ನು ಶೇ. 18ಕ್ಕೆ ಇಳಿಸಲಾಗುತ್ತದೆ. ಭಾರತವು ಅಮೆರಿಕದ ಕೃಷಿ, ಡೈರಿ ಮತ್ತಿತರ ಕೆಲ ಸೂಕ್ಷ್ಮ ಸೆಕ್ಟರ್ ಹೊರತುಪಡಿಸಿ ಉಳಿದ ಆಮದುಗಳ ಮೇಲೆ ಟ್ಯಾರಿಫ್ ಅನ್ನು ತೆಗೆದುಹಾಕಲಿದೆ ಅಥವಾ ಕಡಿಮೆ ಮಾಡಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಪ್ರಸಿದ್ಧ ಹಾಸನಾಂಬೆ ಉತ್ಸವದಲ್ಲೂ ಅಕ್ರಮ: ಗೋಲ್ಮಾಲ್ ಬಗ್ಗೆ ಲೋಕಾಯುಕ್ತ ತನಿಖೆ – Kannada News | Hassan Hasaanamba Utsava Tender Scam: Lokayukta Probes 15 Lakh Lighting Irregularities

ಹಾಸನ, ಫೆಬ್ರವರಿ 20: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಶಕ್ತಿದೇವತೆ ಹಾಸನಾಂಬೆ (Hasanamba). ಕಳೆದ ವರ್ಷ ಲಕ್ಷಾಂತರ ಭಕ್ತರ ದಂಡೇ ಹರಿದುಬಂದಿತ್ತು. ಆ ಮೂಲಕ ಇತಿಹಾಸ ಸೃಷ್ಟಿಯಾಗಿತ್ತು. ಇದೀಗ ಹಾಸನಾಂಬೆ ಉತ್ಸವ ವೇಳೆಯ ವಿದ್ಯುತ್ ದೀಪಾಲಂಕಾರದ ಟೆಂಡರ್​​ನಲ್ಲಿ​ ಗೋಲ್ಮಾಲ್​ ನಡೆದಿದ್ದು, ಲಕ್ಷಾಂತರ ರೂ ಅಕ್ರಮ ಆರೋಪ ಕೇಳಿಬಂದಿದೆ. ಈ ಬಗ್ಗೆ ಆರ್​ಟಿಐ ಕಾರ್ಯಕರ್ತ ಮನು ದೂರು ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

ಮುಜರಾಯಿ ಇಲಾಖೆಯ ಗ್ರೇಡ್ ಒನ್ ದೇವಾಲಯದಲ್ಲಿ ಅಕ್ರಮ ನಡೆದಿದೆ ಎನ್ನಲಾಗುತ್ತಿದೆ. ಪ್ರತಿ ವರ್ಷ ಒಬ್ಬನೇ ಗುತ್ತಿಗೆದಾರನಿಗೆ ಗುತ್ತಿಗೆ ನೀಡಲಾಗುತ್ತಿದೆ. ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ಸರಿಯಾದ ದಾಖಲೆಯನ್ನೇ ನೀಡಿಲ್ಲ. ಭಕ್ತರ ಹಣವನ್ನು ದುಂದು ವೆಚ್ಚ ಮಾಡಲಾಗಿದೆ. ಕೇವಲ ದೀಪಾಲಂಕಾರ ಮಾತ್ರವಲ್ಲ ಎಲ್ಲದರಲ್ಲೂ ಹಣ ದುರ್ಬಳಕೆ ಮಾಡಿರುವ ಬಗ್ಗೆ ಮನು ದೂರು ನೀಡಿದ್ದಾರೆ.

ಲೋಕಾಯುಕ್ತರ ಪ್ರಶ್ನೆಗೆ ಅಧಿಕಾರಿಗಳು ತಬ್ಬಿಬ್ಬು

ಸದ್ಯ ಆರ್​ಟಿಐ ಕಾರ್ಯಕರ್ತ ಮನು ದೂರು ಆಧರಿಸಿ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲೇ ಲೋಕಾಯುಕ್ತ ಅಧಿಕಾರಿ ಗಾಯಿತ್ರಿ ಅವರಿಂದ ತನಿಖೆ ನಡೆಸಿದ್ದು, ದೂರುದಾರ ಮನು ಸೇರಿ ಮಹಾನಗರ ಪಾಲಿಕೆ ಇಂಜಿನಿಯರ್ ಸುಜಾತಾ ಹಾಗೂ ನಿವೃತ್ತ ಇಂಜಿನಿಯರ್ ರಂಗಸ್ವಾಮಿ ವಿಚಾರಣೆ ನಡೆಸಿದ್ದಾರೆ. ದೂರುದಾರನ ಸಮ್ಮುಖದಲ್ಲೇ ಸಂಪೂರ್ಣ ಮಾಹಿತಿ ಪಡೆದ ಅಧಿಕಾರಿಗಳು, ಸರಿಯಾದ ದಾಖಲೆ ನೀಡದ ಬಗ್ಗೆ ತನಿಖಾಧಿಕಾರಿ ಅಸಮಾಧಾನ ಕೂಡ ವ್ಯಕ್ತಪಡಿಸಿದ್ದಾರೆ. ಸರಿಯಾದ ದಾಖಲೆ ನೀಡದಿದ್ದರೇ ಇದನ್ನೇ ವರದಿ ಮಾಡಬೇಕಾಗುತ್ತೆ ಎಂದು ವಾರ್ನಿಂಗ್ ನೀಡಿದ್ದು, ಈ ವೇಳೆ ಅಧಿಕಾರಿಗಳ ಪ್ರಶ್ನೆಗೆ ಮಹಾನಗರ ಪಾಲಿಕೆ ಅಧಿಕಾರಿಗಳು ತಬ್ಬಿಬ್ಬಾದರು.

15 ಲಕ್ಷಕ್ಕೂ ಅಧಿಕ ಮೊತ್ತದ ಅವ್ಯವಹಾರ

ಇನ್ನು ನಿಯಮ ಪಾಲನೆ ಮಾಡದೆ ವಿದ್ಯುತ್ ದೀಪಾಲಂಕಾರ ಗುತ್ತಿಗೆ ನೀಡಲಾಗಿದೆ. ವಿದ್ಯುತ್ ದೀಪಾಲಂಕಾರಕ್ಕೆ‌ಹಲವು ಗುತ್ತಿಗೆದಾರರು ಅರ್ಜಿ ಹಾಕಿದ್ದರೂ ಒಬ್ಬರಿಗೆ ಮಾತ್ರ ಅಧಿಕಾರಿಗಳು ನೆರವು ನೀಡಿದ್ದಾರೆ. ದೀಪಾಲಂಕಾರ ಒಂದರಲ್ಲೇ 15 ಲಕ್ಷಕ್ಕೂ ಅಧಿಕ ಮೊತ್ತದ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಹಾಸನಾಂಬ ಹುಂಡಿಯಲ್ಲಿ ಇಂಡೋನೇಷ್ಯಾ, ಮಾಲ್ಡೀವ್ಸ್, ಅಮೆರಿಕ ಕರೆನ್ಸಿ! ರಾಶಿ ರಾಶಿ ಹಣ

ಹಾಸನಾಂಬೆ ಉತ್ಸವದಲ್ಲಿ ಅನುಭವ ಹೊಂದಿದವರಿಗೆ ಮಾತ್ರ ಆದ್ಯತೆ ಎನ್ನುವ ನಿಯಮ ಸೇರಿಸಿ ಲೈಟಿಂಗ್, ಹೂವಿನ ಅಲಂಕಾರ ಸೇರಿ ಎಲ್ಲಾ ಕೆಲಸಕ್ಕೂ ಒಬ್ಬರಿಗೆ ಗುತ್ತಿಗೆ ನೀಡಲಾಗಿದೆ. ಖರೀದಿ ಮಾಡಿದರು ಅಷ್ಟು ಹಣ ಆಗಲ್ಲ, ಅಷ್ಟೊಂದು ದುಂದು ವೆಚ್ಚ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ದೆಹಲಿ ಮೆಟ್ರೋ ಎದುರು ಹಾರಿ ಬಾಲಕ ಆತ್ಮಹತ್ಯೆ – Kannada News | Delhi Teen Dies After Jumping in Front of Metro Train

ನವದೆಹಲಿ, ಫೆಬ್ರವರಿ 20: ವೈಯಕ್ತಿಕ ಸಮಸ್ಯೆಗಳಿಂದ ಬೇಸತ್ತು ಬಾಲಕನೊಬ್ಬ ದೆಹಲಿ ಮೆಟ್ರೋ(Delhi Metro) ಎದುರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಂದು ಬೆಳಗ್ಗೆ ಪಶ್ಚಿಮ ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬೆಳಗ್ಗೆ 11.7ಕ್ಕೆ ನಿಲ್ದಾಣ ನಿಯಂತ್ರಕರಿಂದ ವ್ಯಕ್ತಿಯೊಬ್ಬ ಹಳಿಗಳ ಮೇಲೆ ಹಾರಿದ ಬಗ್ಗೆ ಮಾಹಿತಿ ಬಂದಿತ್ತು. ದ್ವಾರಕಾ ಕಡೆಯಿಂದ ಬರುತ್ತಿದ್ದ ಮೆಟ್ರೋ ರೈಲು ಆತನ ಮೇಲೆ ಹರಿದಿದೆ. ಪೊಲೀಸರು ಬರುವ ಮೊದಲೇ ಮೃತದೇಹವನ್ನು ಹಳಿಗಳಿಂದ ತೆಗೆಯಲಾಗಿತ್ತು.

ಮೃತ ವ್ಯಕ್ತಿಯನ್ನು ನಜಾಫ್‌ಗಢ ನಿವಾಸಿ ಎಂದು ಗುರುತಿಸಲಾಗಿದೆ. ಆತ 12ನೇ ತರಗತಿ ಪೂರ್ಣಗೊಳಿಸಿದ್ದು, ಉತ್ತಮ್ ನಗರದ ಖಾಸಗಿ ಸಂಸ್ಥೆಯಲ್ಲಿ ಕೋಚಿಂಗ್ ತರಗತಿಗಳಿಗೆ ಹಾಜರಾಗುತ್ತಾ ಹೆಚ್ಚಿನ ಅಧ್ಯಯನಕ್ಕೆ ತಯಾರಿ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಿಂದಾಗಿ ನೀಲಿ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಸಹ ಸ್ವಲ್ಪ ಸಮಯದವರೆಗೆ ಸ್ಥಗಿತಗೊಂಡಿದ್ದವು.

ಪ್ರಾಥಮಿಕ ತನಿಖೆಯಲ್ಲಿ ಆತ ವೈಯಕ್ತಿಕ ಸಮಸ್ಯೆಗಳಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ. ಆತನ ತಂದೆ ಡಿಟಿಸಿಯಲ್ಲಿ ಗುತ್ತಿಗೆ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ, ಪೋಷಕರಿಗೆ ಆತನೊಬ್ಬನೇ ಆ ಎಂದು ಡಿಸಿಪಿ ಮೆಟ್ರೋ ಕುಶಾಲ್ ಪಾಲ್ ಸಿಂಗ್ ಹೇಳಿದ್ದಾರೆ.

ಮತ್ತಷ್ಟು ಓದಿ: Viral Video: ಛೀ.. ಥೂ.. ದೆಹಲಿ ಮೆಟ್ರೋ ಪ್ಲಾಟ್​ಫಾರ್ಮ್​ನಲ್ಲಿ ಮೂತ್ರ ವಿಸರ್ಜಿಸಿ ಸಿಕ್ಕಿಬಿದ್ದ ವ್ಯಕ್ತಿ

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ರವಾನಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 194 ರ ಅಡಿಯಲ್ಲಿ ತನಿಖಾ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2025ರ ನವೆಂಬರ್ 24ರಂದು ರೋಹಿಣಿ ವೆಸ್ಟ್ ಮೆಟ್ರೋ ನಿಲ್ದಾಣಕ್ಕೆ ಬರುತ್ತಿದ್ದ ರೈಲಿನ ಮುಂದೆ ಹಾರಿ 37 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು.ಮೃತ ವ್ಯಕ್ತಿಯನ್ನು ರೋಹಿಣಿ ಸೆಕ್ಟರ್ 2 ರ ನಿವಾಸಿ ಹೇಮಂತ್ ನೇಗಿ ಎಂದು ಗುರುತಿಸಲಾಗಿತ್ತು. ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ರೋಹಿಣಿ ವೆಸ್ಟ್ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 3 ರ ಬಳಿ ಪ್ರಯಾಣಿಕರೊಬ್ಬರು ರೈಲಿನ ಮುಂದೆ ಹಾರಿದ್ದಾರೆ ಎಂದು ಸಂಜೆ 5.03 ರ ಸುಮಾರಿಗೆ ಪಿಸಿಆರ್ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ತಂಡ ಸ್ಥಳಕ್ಕೆ ತಲುಪಿದಾಗ ಗಾಯಾಳುಗಳನ್ನು ಈಗಾಗಲೇ ಆಂಬ್ಯುಲೆನ್ಸ್‌ನಲ್ಲಿ ಬಿಎಸ್‌ಎ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅವರು ಗಾಜಿಯಾಬಾದ್‌ನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ದೆಹಲಿಯ ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಶರ್ಟ್ ಬಿಚ್ಚಿ ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ – Kannada News | Indian Youth Congress stages shirtless protest at AI Impact summit

ನವದೆಹಲಿ, ಫೆಬ್ರವರಿ 20: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಶರ್ಟ್ ಬಿಚ್ಚಿ, ಮೋದಿ ಹಾಗೂ ಟ್ರಂಪ್ ಫೋಟೋಗಳಿರುವ ಅಂಗಡಿಯನ್ನು ಕೈಯಲ್ಲಿ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಆ ಕಾರ್ಯಕರ್ತರು ಹೇಗೆ ಶೃಂಗಸಭೆಯ ಆವರಣದೊಳಗೆ ಪ್ರತಿಭಟನೆ ನಡೆಸಿದರು, ಈ ವೇಳೆ ಭದ್ರತಾ ಸಿಬ್ಬಂದಿ ಏನು ಮಾಡುತ್ತಿದ್ದರು ಎಂಬ ಪ್ರಶ್ನೆ ಎದ್ದಿದೆ. ಹಲವು ದೇಶಗಳ ನಾಯಕರು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿರುವುದರಿಂದ ಕಾಂಗ್ರೆಸ್​​ನಿಂದ ನಡೆದ ಈ ಪ್ರತಿಭಟನೆ ಮೋದಿ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಪ್ರತಿಭಟನಾಕಾರರು ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ಘೋಷಣೆಗಳನ್ನು ಕೂಗಿದರು. ‘ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ’ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ಕೆಲವು ನಿಮಿಷಗಳ ಕಾಲ ನಡೆಯಿತು. ಕೊನೆಗೆ ಅವರನ್ನು ಒತ್ತಾಯವಾಗಿ ಸಭಾಂಗಣದಿಂದ ಹೊರಗೆ ಕರೆದೊಯ್ಯಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮರಳು ಮಾಫಿಯಾ ಕುರಿತು ಸ್ವಯಂಪ್ರೇರಿತ PIL: ಪ್ರತಿಕ್ರಿಯಿಸಲು ರಾಜ್ಯ ಸರ್ಕಾರಕ್ಕೆ 4 ವಾರ ಕಾಲಾವಕಾಶ ಕೊಟ್ಟ ಹೈಕೋರ್ಟ್​​ – Kannada News | Karnataka Sand Mafia PIL: HC Gives Govt 4 Weeks to Respond on Illegal Mining

ಕರ್ನಾಟಕ ಹೈಕೋರ್ಟ್​​Image Credit source: Tv9 Kannada

ಬೆಂಗಳೂರು, ಫೆಬ್ರವರಿ 20: ರಾಜ್ಯದ ವಿವಿಧ ನದಿ ಪಾತ್ರಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಆರೋಪಗಳ ಕುರಿತು ಸ್ವಯಂಪ್ರೇರಿತವಾಗಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (PIL) ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ನಾಲ್ಕು ವಾರಗಳ ಅವಧಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚಾ ಅವರ ವಿಭಾಗೀಯ ಪೀಠ ಈ ಬಗ್ಗೆ ಸೂಚಿಸಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕ್ಕೆ ಮುಂದೂಡಿದೆ.

ಜನವರಿ 28ರಂದು ಪ್ರಕಟವಾದ ಮಾಧ್ಯಮ ವರದಿಗಳನ್ನು ಪರಿಗಣಿಸಿ ಜನವರಿ 31ರಂದು ಹೈಕೋರ್ಟ್ ವಿಭಾಗೀಯ ಪೀಠವು ಸ್ವಯಂಪ್ರೇರಿತ PIL ದಾಖಲಿಸಲು ಆದೇಶಿಸಿತ್ತು. ಇದೊಂದು ಗಂಭೀರ ವಿಷಯವಾಗಿದೆ. ಕೇಂದ್ರ ಸಂಸ್ಥೆ, ವಿಶೇಷವಾಗಿ ರಚಿಸಲಾದ ತನಿಖಾ ಸಂಸ್ಥೆ ಅಥವಾ ವಿಶೇಷ ತನಿಖಾ ತಂಡದಿಂದ ಮೂಲಕ ನ್ಯಾಯಾಲಯ ಮೇಲ್ವಿಚಾರಣೆಯಲ್ಲಿ ಇದರ ತನಿಖೆಯ ಅಗತ್ಯವಿದೆ ಎಂದು ಪೀಠ ಅಭಿಪ್ರಾಯಪಟ್ಟಿತ್ತು.

ಇದನ್ನೂ ಓದಿ: ಗೃಹ ಸಚಿವರೇ ಅಸಹಾಯಕರಾಗಿದ್ದಾರೆ; ಅಕ್ರಮ ಮರಳು ಸಾಗಣೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್

ಜನವರಿ 27ರಂದು ವಿಧಾನಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಅಕ್ರಮ ಮರಳು ಗಣಿಗಾರಿಕೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಹೇಳಿದ್ದರು. ಇದನ್ನು ಉಲ್ಲೇಖಿಸಿದ ವಿಭಾಗೀಯ ಪೀಠ, ರಾಜ್ಯದ ಗೃಹ ಸಚಿವರೇ ಮರಳು ಮಾಫಿಯಾಗಳ ವಿರುದ್ಧ ಕ್ರಮ ಕೈಗೊಳ್ಳಲು ಅಸಹಾಯಕತೆಯನ್ನು ವ್ಯಕ್ತಪಡಿಸಿದರೆ, ರಾಜ್ಯದ ಆಡಳಿತದಿಂದ ಈ ಅಕ್ರಮ ಚಟುವಟಿಕೆಯನ್ನು ನಿಯಂತ್ರಿಸುವ ನಿರೀಕ್ಷೆ ಇಡಲು ಸಾಧ್ಯವಿಲ್ಲ ಎಂದು ಜನವರಿ 31ರ ಆದೇಶದಲ್ಲಿ ತಿಳಿಸಿತ್ತು.

ಮರಳು ತೆಗೆಯಲು ಟೆಂಡರ್‌ಗಳನ್ನು ಆಹ್ವಾನಿಸಿದ್ದರೂ ಅವುಗಳ ತೆರವು ಆಗಿಲ್ಲ ಎಂಬ ಮಾಧ್ಯಮಗಳ ವರದಿಯನ್ನೂ ಗಮನಿಸಿರುವ ಪೀಠ, ಈ ದೊಡ್ಡ ಹಣದ ವ್ಯವಹಾರದಲ್ಲಿ ಅನೇಕ ‘ದೊಡ್ಡ ಮೀನುಗಳು’ ಭಾಗಿಯಾಗಿದ್ದು, ಗಣಿಗಾರಿಕೆಯನ್ನು ಕಾನೂನುಬದ್ಧಗೊಳಿಸಲು ಆಸಕ್ತಿ ತೋರಿಸುತ್ತಿಲ್ಲ ಎಂದು ಹೇಳಿತ್ತು. ಇದಲ್ಲದೆ, ಕೃಷ್ಣಾ ನದಿ ತಟ ಪ್ರದೇಶದಲ್ಲಿ ರಾತ್ರಿ ವೇಳೆ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂಬ ವರದಿಗಳು, ಧೂಳು ಬೆಳೆಗಳ ಮೇಲೆ ಕುಳಿತು ರೈತರಿಗೆ ಹಾನಿ ಉಂಟಾಗುತ್ತಿದೆ ಎಂಬ ದೂರುಗಳು ಸೇರಿದಂತೆ ಹಲವು ವಿಷಯಗಳನ್ನು ಪೀಠ ಉಲ್ಲೇಖಿಸಿದೆ. ರಾಯಚೂರು ಜಿಲ್ಲೆಯ ಮಹಿಳಾ ಶಾಸಕಿ ಕರೇಮ್ಮ ಜಿ. ನಾಯಕ್ ಅವರು ತಮ್ಮ ಕ್ಷೇತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಕುರಿತು ಪ್ರಶ್ನೆ ಎತ್ತಿದ ಬಳಿಕ ಮರಳು ಮಾಫಿಯಾದಿಂದ ಜೀವ ಬೆದರಿಕೆ ಬಂದಿರುವುದಾಗಿ ಹೇಳಿದ ವರದಿಗಳನ್ನೂ ನ್ಯಾಯಪೀಠ ತನ್ನ ಆದೇಶದಲ್ಲಿ ಪ್ರಸ್ತಾಪಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link