ಕದ್ದ ಚಿನ್ನವನ್ನು ಗೋಲ್ಡ್ ಲೋನ್ ಕಂಪನಿಗೆ ಮಾರುವ ವೇಳೆ ರೆಡ್ ಹ್ಯಾಂಡ್ ಆಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ – Kannada News | Karnataka Gold Crime: Hubballi Woman and KGF Soil Thieves Arrested*
ರಾಣೇಬೆನ್ನೂರು, ಫೆ.19: ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಿದ್ದ ಬಂಗಾರವನ್ನು ಮಾರಾಟ ಮಾಡಲು ನಗರದ ಗೋಲ್ಡ್ ಲೋನ್ ಕಂಪನಿಗೆ ಬಂದಿದ್ದ ಮಹಿಳೆಯೊಬ್ಬಳನ್ನು ರಾಣೇಬೆನ್ನೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಹುಬ್ಬಳ್ಳಿ ಮೂಲದ ಶ್ರೀದೇವಿ ಸಂಜೀವ ಕಟ್ಟೇಕಾರ ಎಂದು ಗುರುತಿಸಲಾಗಿದೆ. ಈಕೆ ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಿದ್ದ ಸುಮಾರು 236 ಗ್ರಾಂ ಚಿನ್ನಾಭರಣಗಳನ್ನು (ಅಂದಾಜು 16 ಲಕ್ಷ ರೂ. ಮೌಲ್ಯ) ಮಾರಾಟ ಮಾಡಲು ರಾಣೇಬೆನ್ನೂರಿನ ಖಾಸಗಿ ಗೋಲ್ಡ್ ಕಂಪನಿಗೆ ಬಂದಿದ್ದಳು. ಚಿನ್ನ ಮಾರಾಟ ಮಾಡಲು ಬಂದ ಮಹಿಳೆಯ ನಡವಳಿಕೆ ಮತ್ತು ಆಕೆಯ…