All posts by nagaraj11081993

CSK vs RR: ಒಂದಂಕಿ ದಾಟದ 8 ಬ್ಯಾಟರ್ಸ್​; ಕಷ್ಟಪಟ್ಟು 100 ರನ್ ಗಡಿ ದಾಟಿದ ಸಿಎಸ್​ಕೆ

CSK vs RR: ಒಂದಂಕಿ ದಾಟದ 8 ಬ್ಯಾಟರ್ಸ್​; ಕಷ್ಟಪಟ್ಟು 100 ರನ್ ಗಡಿ ದಾಟಿದ ಸಿಎಸ್​ಕೆ

ಐಪಿಎಲ್ 2026 ರ ಮೂರನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇಂದು ಮುಖಾಮುಖಿಯಾಗಿವೆ. ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದೊಂದಿಗೆ, ಮಾಜಿ ಐಪಿಎಲ್ ಚಾಂಪಿಯನ್‌ ತಂಡಗಳು ಲೀಗ್‌ನ 19 ನೇ ಸೀಸನ್‌ನಲ್ಲಿ ತಮ್ಮ ಅಭಿಯಾನವನ್ನು ಪ್ರಾರಂಭಿಸಿವೆ. ಅದರಂತೆ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ, ರಾಜಸ್ಥಾನ್ ಬೌಲಿಂಗ್ ದಾಳಿಗೆ ತತ್ತರಿ ಕೇವಲ 127 ರನ್​ಗಳಿಗೆ ತನ್ನ ಇನ್ನಿಂಗ್ಸ್ ಮುಗಿಸಿದೆ. ತಂಡದ ಪರ 8ನೇ ಕ್ರಮಾಂಕದಲ್ಲಿ ಬಂದ ಜೆಮಿ ಓವರ್ಟನ್ ಅತ್ಯಧಿಕ 42 ರನ್​ಗಳ ಇನ್ನಿಂಗ್ಸ್ ಆಡಿದರೆ, ಕಾರ್ತಿಕ್ ಶರ್ಮಾ 18 ರನ್​ಗಳ ಕಾಣಿಕೆ ನೀಡಿದರು. ಉಳಿದಂತೆ ತಂಡದ 8 ಬ್ಯಾಟ್ಸ್‌ಮನ್​ಗಳಿಗೆ ಒಂದಂಕಿ ಮೊತ್ತವನ್ನು ದಾಟಲು ಸಾಧ್ಯವಾಗಲಿಲ್ಲ.

ಪವರ್​ಪ್ಲೇನಲ್ಲಿ 4 ವಿಕೆಟ್

ಗುವಾಹಟಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿದ ಸಿಎಸ್​ಕೆಗೆ ಉತ್ತಮ ಆರಂಭ ಸಿಗಲಿಲ್ಲ. ಪವರ್‌ಪ್ಲೇನಲ್ಲಿಯೇ ತಂಡ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 41 ರನ್ ಕಲೆಹಾಕಿತು. ಇದು ತಂಡವನ್ನು ಆರಂಭದಲ್ಲೇ ಒತ್ತಡಕ್ಕೆ ಸಿಲುಕಿಸಿತು. ಆರಂಭಿಕರಾದ ನಾಯಕ ರುತುರಾಜ್ ಗಾಯಕ್ವಾಡ್ ಹಾಗೂ ಸಂಜು ಸ್ಯಾಮ್ಸನ್​ಗೆ 10 ರನ್​ಗಳ ಗಡಿ ದಾಟಲು ಸಾಧ್ಯವಾಗಲಿಲ್ಲ.

ಮೊದಲ ವಿಕೆಟ್ ರೂಪದಲ್ಲಿ ಸಂಜು ಸ್ಯಾಮ್ಸನ್ ಪೆವಿಲಿಯನ್​ತ್ತ ಹೆಜ್ಜೆ ಹಾಕಿದರು. ಸಂಜು ತಮ್ಮ ಇನ್ನಿಂಗ್ಸ್​ನಲ್ಲಿ 7 ಎಸೆತಗಳನ್ನು ಎದುರಿಸಿ 6 ರನ್​ಗಳಿಗೆ ಔಟಾದರು. ಸಂಜು ವಿಕೆಟ್ ಪತನದ ನಂತರ ಇನ್ನಿಂಗ್ಸ್ ನಿಭಾಯಿಸುವ ಜವಾಬ್ದಾರಿ ಹೊಂದಿದ್ದ ರುತುರಾಜ್ ಕೂಡ ಸಂಜು ಔಟಾದ ಮುಂದಿನ ಓವರ್​ನಲ್ಲೇ ಅಂದರೆ ಮೂರನೇ ಓವರ್​ನ ಕೊನೆಯ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು. ರುತುರಾಜ್ ತಮ್ಮ ಇನ್ನಿಂಗ್ಸ್​ನಲ್ಲಿ 11 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಸಹಿತ 6 ರನ್ ಬಾರಿಸಿ ಔಟಾದರು.

ಓವರ್ಟನ್ ಏಕಾಂಗಿ ಹೋರಾಟ

ರುತುರಾಜ್ ವಿಕೆಟ್ ಪತನದ ಬಳಿಕ ಯುವ ಬ್ಯಾಟರ್ ಆಯುಷ್ ಮ್ಹಾತ್ರೆ ಕೂಡ ಖಾತೆ ತೆರೆಯದೆ ಔಟಾದರೆ, ಮ್ಯಾಟ್ ಶಾರ್ಟ್ ಕೂಡ 2 ರನ್​ಗಳಿಗೆ ಸುಸ್ತಾದರು. ಶಿವಂ ದುಬೆ ಕೂಡ 6 ರನ್​​ಗಳಿಗೆ ಬ್ಯಾಟ್ ಎತ್ತಿಟ್ಟರು. ತಂಡದ ಪರ ಏಕಾಂಗಿ ಹೋರಾಟ ನೀಡಿದ ಜೆಮಿ ಓವರ್ಟನ್ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದು 42 ರನ್​ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಓವರ್ಟನ್ ಅವರ ಈ ಇನ್ನಿಂಗ್ಸ್, ಸಿಎಸ್​ಕೆ ತಂಡವನ್ನು 100 ರನ್​ಗಳ ಗಡಿ ದಾಟಿಸಿತು. ಇಲ್ಲದಿದ್ದರೆ, ಸಿಎಸ್​ಕೆ ಎರಡಂಕಿ ಮೊತ್ತವನ್ನು ದಾಟುತ್ತಿರಲಿಲ್ಲ. ಇತ್ತ ರಾಜಸ್ಥಾನ್ ಪರ ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್ ಹಾಗೂ ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಣ್ಣ ವಯಸ್ಸಿನ ವರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಈ ಅಭ್ಯಾಸಗಳು ಕಾರಣ!

ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತ (Heart Attack) ವಯಸ್ಸಾದವರಲ್ಲಿ ಮಾತ್ರವಲ್ಲ ಸಣ್ಣ ವಯಸ್ಸಿನವರಲ್ಲಿಯೂ ಕಂಡುಬರುತ್ತಿರುವುದನ್ನು ನೀವು ಕಂಡಿರಬಹುದು. ಜೊತೆಗೆ ಹೃದಯ ಸಂಬಂಧಿತ ಸಮಸ್ಯೆಗಳು, ಹೈ ಬ್ಲಡ್ ಪ್ರೆಶರ್, ಕೊಲೆಸ್ಟ್ರಾಲ್ ಹೆಚ್ಚಾಗುವುದು, ಬ್ಲಾಕೇಜ್ ಮತ್ತು ಹೃದಯ ಬಡಿತದಲ್ಲಿ ಏರುಪೇರಾಗುತ್ತಿರುವ ಸಮಸ್ಯೆ ಕಂಡುಬರುತ್ತಿದೆ. ಇದಕ್ಕೆ ಜೀವನಶೈಲಿಯ ಬದಲಾವಣೆ, ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಹೆಚ್ಚುತ್ತಿರುವ ಒತ್ತಡ ಮತ್ತು ದೈಹಿಕ ಚಟುವಟಿಕೆಗಳ ಕೊರತೆ ಪ್ರಮುಖ ಕಾರಣಗಳಾಗಿವೆ. ಅದರಲ್ಲಿಯೂ ದೀರ್ಘಕಾಲ ಕುಳಿತು ಕೆಲಸ ಮಾಡುವವರು, ಸದಾ ಒತ್ತಡದಲ್ಲಿ ಇರುವವರು ಅಥವಾ ಕುಟುಂಬದಲ್ಲಿ ಹೃದಯ ರೋಗ ಸಂಬಂಧಿ ಸಮಸ್ಯೆ ಇರುವವರು ಹೆಚ್ಚಿನ ಅಪಾಯದಲ್ಲಿದ್ದಾರೆ. ಯುವಕರಲ್ಲಿ ಹೆಚ್ಚುತ್ತಿರುವ ಈ ಸಮಸ್ಯೆ ಆರೋಗ್ಯದ ಕಡೆ ನಿರ್ಲಕ್ಷ್ಯ ತೋರಬಾರದು. ಅದರ ಬದಲು ಈ ರೀತಿಯಾಗುವುದಕ್ಕೆ ಕಾರಣವೇನು, ಲಕ್ಷಣಗಳು ಹೇಗಿರುತ್ತವೆ ಎಂಬುದನ್ನು ತಿಳಿದುಕೊಂಡು ಈ ರೀತಿಯ ಸಮಸ್ಯೆ ಹೆಚ್ಚಾಗದಂತೆ ತಡೆಯಬೇಕು.

ಸಣ್ಣ ವಯಸ್ಸಿನಲ್ಲಿ ಹೃದಯಾಘಾತವಾಗುವುದಕ್ಕೆ ಕಾರಣ:

  • ದೀರ್ಘಕಾಲ ಕುಳಿತುಕೊಳ್ಳುವುದು ಮತ್ತು ವ್ಯಾಯಾಮ ಮಾಡದಿರುವುದು
  • ಜಂಕ್ ಫುಡ್ ಮತ್ತು ಹೆಚ್ಚು ಎಣ್ಣೆಯ ಆಹಾರ ಸೇವನೆ
  • ನಿದ್ರೆಯ ಕೊರತೆ ಮತ್ತು ರಾತ್ರಿ ತಡವಾಗಿ ಮಲಗುವುದು
  • ನಿರಂತರ ಒತ್ತಡ, ಕೋಪ ಮತ್ತು ಮಾನಸಿಕ ಒತ್ತಡ
  • ಧೂಮಪಾನ ಮತ್ತು ಮದ್ಯಪಾನ ಮಾಡುವುದು

ಹೃದಯಾಘಾತವಾಗುವ ಮುನ್ನ ಕಂಡುಬರುವ ಲಕ್ಷಣಗಳು:

  • ಎದೆಯಲ್ಲಿ ನೋವು ಅಥವಾ ಒತ್ತಡ
  • ಕೈ, ಕತ್ತು ಅಥವಾ ಬೆನ್ನಿನ ಭಾಗದಲ್ಲಿ ನೋವು
  • ಉಸಿರಾಟದ ತೊಂದರೆ
  • ಅಚಾನಕ್ ಆಗಿ ಹೆಚ್ಚು ಬೆವರು ಬರುವುದು
  • ತಲೆಸುತ್ತು ಮತ್ತು ದುರ್ಬಲತೆ
  • ವಾಂತಿ

ಇದನ್ನೂ ಓದಿ: ಹಠಾತ್ ಆಗಿ ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್

ಹೇಗೆ ಮುನ್ನೆಚ್ಚರಿಕೆ ವಹಿಸಬೇಕು?

  • ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಿ
  • ಪ್ರತಿದಿನ ವ್ಯಾಯಾಮ ಅಥವಾ ವಾಕಿಂಗ್ ಮಾಡುವ ಅಭ್ಯಾಸ ಮಾಡಿಕೊಳ್ಳಿ
  • ಸಮತೋಲನ ಮತ್ತು ಆರೋಗ್ಯಕರ ಆಹಾರ ಸೇವನೆ ಮಾಡಬೇಕು
  • ಜಂಕ್ ಫುಡ್ ನಿಂದ ಆದಷ್ಟು ದೂರವಿರಿ
  • ಒತ್ತಡ ಕಡಿಮೆ ಮಾಡಲು ಯೋಗ ಮತ್ತು ಧ್ಯಾನ ಮಾಡಿರಿ
  • ಚೆನ್ನಾಗಿ ನಿದ್ರೆ ಮಾಡಿ
  • ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರತ್ಯೇಕ ಘಟನೆ: ರಜೆ ತಂದ ಆಪತ್ತು; ಈಜಲು ತೆರಳಿದ್ದ ಐವರು ಬಾಲಕರು ನೀರುಪಾಲು

ಬೆಳಗಾವಿ, ಮಾರ್ಚ್​ 30: ಈಜಲು ತೆರಳಿದ್ದ ಇಬ್ಬರು ಬಾಲಕರು (boys) ನೀರುಪಾದ (death) ಘಟನೆ ಜಿಲ್ಲೆ ಹುಕ್ಕೇರಿ ತಾಲೂಕಿನ ಹಳೆಗುಡಗನಟ್ಟಿ ಗ್ರಾಮದ ಬಳಿಯ ಹಿಡಕಲ್​ ಡ್ಯಾಮ್​ನ ಹಿನ್ನೀರಲ್ಲಿ ನಡೆದಿದೆ. ಕೃಷ್ಣಾ ಖಾನಾಪುರಿ(14) ಮತ್ತು ಪ್ರಜ್ವಲ್ ಗೋಕಾರ್(13) ಮೃತ ಬಾಲಕರು. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

ನಡೆದಿದ್ದೇನು?

ಹಿಡಕಲ್ ಜಲಾಶಯ ಹಿನ್ನೀರಿನಲ್ಲಿ ಬಾಲಕರು ಈಜುಲು ತೆರಳಿದ್ದರು. ಈ ವೇಳೆ ಈಜಲು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇಬ್ಬರ ಶವಗಳನ್ನ ಸ್ಥಳೀಯರು ಮತ್ತು ಪೊಲೀಸರು ಹೊರತೆಗೆದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ಎತ್ತಿನ ಮೈತೊಳೆಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ದುರ್ಮರಣ

ಎತ್ತಿನ ಮೈತೊಳೆಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ದುರ್ಮರಣ ಹೊಂದಿರುವಂತಹ ಘಟನೆ ಗದಗ ತಾಲೂಕಿನ ಹಾತಲಗೇರಿ ಗ್ರಾಮದಲ್ಲಿ ನಡೆದಿದೆ. ಮುತ್ತಪ್ಪ ಮುರ್ಲಾಪುರ(20) ಮೃತ ಯುವಕ. ಗದಗ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಮಕ್ಕಳ ಪಾಲಿಗೆ ಮೃತ್ಯುಕೂಪವಾದ ಕೃಷಿಹೊಂಡ: ಈಜಲು ಹೋದ ನಾಲ್ವರು ಜಲಸಮಾಧಿ

ಸಂಬಂಧಿಕರ ಮನೆಗೆ ಬಂದಿದ್ದ ಮುಳುಗುಂದ ಗ್ರಾಮದ ಮುತ್ತಪ್ಪ ಮುರ್ಲಾಪುರ ಈ ವೇಳೆ ಎತ್ತಿನ ಮೈ ತೊಳೆಯಲು ಕೆರೆಗೆ ಹೋದಾಗ ದುರ್ಘಟನೆ ಸಂಭವಿಸಿದೆ. ಆಯಾತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಯುವಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.

ಕೃಷಿಹೊಂಡಕ್ಕೆ ಬಿದ್ದು ಬಾಲಕಿ ಸಾವು

ಆಟವಾಡುವ ವೇಳೆ ಆಯತಪ್ಪಿ ಕೃಷಿಹೊಂಡಕ್ಕೆ ಬಿದ್ದು ಬಾಲಕಿ ಸಾವನ್ನಪ್ಪಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚನ್ನಗಾನಹಳ್ಳಿಯಲ್ಲಿ ನಡೆದಿದೆ. ಕೀರ್ತನಾ(10) ಮೃತ ಬಾಲಕಿ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈಜಲು ಹೋಗಿದ್ದ SSLC ವಿದ್ಯಾರ್ಥಿ ಸಾವು

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಯಲಿಯೂರು ಗ್ರಾಮದಲ್ಲಿ ಸ್ನೇಹಿತರ ಜತೆ ಈಜಲು ಹೋಗಿದ್ದ SSLC ವಿದ್ಯಾರ್ಥಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕುಶಾಲ್​(16) ಮೃತ ವಿದ್ಯಾರ್ಥಿ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿಯಿಂದ ಮೃತದೇಹಕ್ಕೆ ಶೋಧ ಕಾರ್ಯ ನಡೆದಿದೆ.

ಇದನ್ನೂ ಓದಿ: ಸ್ನೇಹಿತರನ್ನು ಮೀಟ್ ಮಾಡಲು ಬಂದಿದ್ದ ವಿದ್ಯಾರ್ಥಿ ದುರಂತ ಅಂತ್ಯ: 12ನೇ ಮಹಡಿಯಿಂದ ಬಿದ್ದು ಸಾವು

ನಿನ್ನೆ ಶಾಲೆಯ ವಿಶೇಷ ತರಗತಿ ಮುಗಿಸಿಕೊಂಡು ಮನೆಗೆ ತೆರಳಿದ್ದ ವಿದ್ಯಾರ್ಥಿ ಕುಶಾಲ್, ಬಳಿಕ ಸ್ನೇಹಿತರ ಜೊತೆಗೆ ಕೆರೆಗೆ ತೆರಳಿದ್ದು, ಕೆರೆಯ ಆಳ ಪ್ರದೇಶದಲ್ಲಿ ಮುಳುಗಿದ್ದಾನೆ. ಕೂಡಲೇ ಸ್ಥಳದಲ್ಲಿದ್ದ ಸ್ನೇಹಿತರು ಹಾಗೂ ಕುರಿಗಾಯಿಯಿಂದ ರಕ್ಷಿಸಲು ಯತ್ನಿಸಲಾಗಿದೆ. ಆದರೆ ಕುಶಾಲ್ ದೇಹ ನಾಪತ್ತೆಯಾಗಿದೆ.

ಪೋಷಕರ ಗಮನಕ್ಕೆ

ಸದ್ಯ ಬೇಸಿಗೆ ರಜೆ ಆರಂಭವಾಗಿದೆ. ಹೀಗಾಗಿ ಪೋಷಕರು ತಮ್ಮ ಚಿಕ್ಕ ಮಕ್ಕಳ ಚಲನವಲನಗಳ ಬಗ್ಗೆ ಗಮನಹರಿಸಬೇಕಿದೆ. ಒಮ್ಮೆ ಹೋದ ಜೀವ ಮತ್ತೆ ವಾಪಸ್ ಬರಲ್ಲ. ಹಾಗಾಗಿ ಮಕ್ಕಳನ್ನ ಬಾವಿ, ಕೆರೆ-ಕಟ್ಟೆಗಳು, ಕೃಷಿ ಹೊಂಡಗಳು, ಸ್ವಿಮ್ಮಿಂಗ್ ಪೂಲ್, ನದಿ ಬಳಿ ಬಿಡದಿರುವುದು ಉತ್ತಮ. ಒಂದು ಸಣ್ಣ ನಿರ್ಲಕ್ಷ್ಯದಿಂದ ಮಕ್ಕಳ ಜೀವವೇ ಹೋಗಬಹುದು ಜಾಗರೂಕರಾಗಿರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

CSK vs RR: ಒಂದೇ ಓವರ್​ನಲ್ಲಿ 2 ವಿಕೆಟ್; ಸಿಎಸ್​ಕೆ ವಿರುದ್ಧ ಜಡೇಜಾ ಪ್ರತೀಕಾರ

2012 ರಲ್ಲಿ ಸಿಎಸ್​ಕೆ ತಂಡವನ್ನು ಸೇರಿ ಈ ತಂಡದ ಪರ ಬರೋಬ್ಬರಿ 12 ಆವೃತ್ತಿಗಳನ್ನು ಆಡಿದ್ದ ರವೀಂದ್ರ ಜಡೇಜಾ, ಈ ಆವೃತ್ತಿಯಲ್ಲಿ ತನ್ನ ಮಾತೃ ತಂಡ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿದ್ದಾರೆ. ವಾಸ್ತವವಾಗಿ ಈ ವರ್ಷ ನಡೆದ ಮಿನಿ ಹರಾಜಿಗೂ ಮುನ್ನ ಸಿಎಸ್​ಕೆ ತಂಡ, ರವೀಂದ್ರ ಜಡೇಜಾ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡದೊಂದಿಗೆ ಟ್ರೇಡ್ ಮಾಡಿಕೊಂಡಿತ್ತು. ಜಡೇಜಾ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ಸಂಜು ಸ್ಯಾಮ್ಸನ್ ಅವರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿತ್ತು.

ಈ ರೀತಿ ಟ್ರೇಡ್ ಮೂಲಕ ರಾಜಸ್ಥಾನ್ ತಂಡವನ್ನು ಸೇರಿಕೊಂಡಿದ್ದ ಜಡೇಜಾ, ಈ ಲೀಗ್​ನಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಸಿಎಸ್​ಕೆ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ್ದಾರೆ. ತಂಡವನ್ನು ಮೂರು ಬಾರಿ ಚಾಂಪಿಯನ್‌ ಮಾಡುವಲ್ಲಿ ಶ್ರಮಿಸಿದ್ದ ತನ್ನನ್ನು ಕೈಬಿಟ್ಟ ಸಿಎಸ್​ಕೆ ವಿರುದ್ಧ ಸೇಡು ತೀರಿಸಿಕೊಂಡಿರುವ ಜಡೇಜಾ, ಸಿಎಸ್​ಕೆ ವಿರುದ್ಧ ಆಡಿದ ಮೊದಲ ಪಂದ್ಯದ ಮೊದಲ ಓವರ್​ನಲ್ಲೇ ಎರಡು ಪ್ರಮುಖ ವಿಕೆಟ್‌ಗಳನ್ನು ಉರುಳಿಸಿ ಸರಿಯಾದ ತಿರುಗೇಟು ನೀಡಿದ್ದಾರೆ.

ಸಿಎಸ್​ಕೆ ಇನ್ನಿಂಗ್ಸ್​ನ 8ನೇ ಓವರ್ ಬೌಲ್ ಮಾಡಲು ಬಂದ ಜಡೇಜಾ, ಈ ಓವರ್​ನ ಎರಡನೇ ಎಸೆತದಲ್ಲಿ ಸರ್ಫರಾಜ್ ಖಾನ್ ಅವರನ್ನು ಎಲ್​ಬಿಡಬ್ಲ್ಯೂ ಬಲೆಗೆ ಬೀಳಿಸಿದರು. ಸರ್ಫರಾಜ್ ವಿಕೆಟ್ ಪತನದ ಬಳಿಕ ಬಂದ ಶಿವಂ ದುಬೆ ಬಂದ ಕೂಡಲೇ ಜಡೇಜಾ ಅವರ ಎಸೆತವನ್ನು ಸಿಕ್ಸರ್​ಗಟ್ಟಿದರು. ಮತ್ತದೇ ಸಿಕ್ಸರ್​ಗೆ ಕೈ ಹಾಕಿದ ದುಬೆ ಕ್ಯಾಚಿತ್ತು ನಿರ್ಗಮಿಸಿದರು. ಅಂದರೆ ಜಡೇಜಾ ತಾವು ಬೌಲ್ ಮಾಡಿದ ಮೊದಲ ಓವರ್​ನಲ್ಲೇ ಪ್ರಮುಖ 2 ವಿಕೆಟ್‌ಗಳನ್ನು ಉರುಳಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

CSK vs RR: ಸಿಎಸ್​ಕೆ ಪರ ಮೊದಲ ಪಂದ್ಯದಲ್ಲೇ ಎಡವಿದ ಸಂಜು ಸ್ಯಾಮ್ಸನ್

Source link

CSK vs RR: W,W,W, W.. ಸಿಎಸ್​ಕೆ ಪೆವಿಲಿಯನ್ ಪರೇಡ್ ಶುರು

Source link

ದಳಪತಿ ವಿಜಯ್ 603 ಕೋಟಿ ರೂಪಾಯಿ ಆಸ್ತಿ ವಿವರ ಬಹಿರಂಗ: ಪತ್ನಿ ಬಳಿ ಎಷ್ಟಿದೆ?

ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಬರೆಯಲು ಹೊರಟಿರುವ ತಮಿಳು ವೆಟ್ರಿ ಕಳಗಂ (TVK) ಪಕ್ಷದ ಸ್ಥಾಪಕ, ನಟ ದಳಪತಿ ವಿಜಯ್ (Thalapathy Vijay) ಅವರು ಸೋಮವಾರ (ಮಾರ್ಚ್ 30) ತಮ್ಮ ಮೊದಲ ಚುನಾವಣಾ ಅಫಿಡವಿಟ್ ಸಲ್ಲಿಸಿದ್ದಾರೆ. ಈ ಅಫಿಡವಿಟ್‌ನಲ್ಲಿ ಅವರು ಘೋಷಿಸಿಕೊಂಡಿರುವ ಆಸ್ತಿಯ ಮೊತ್ತ ಕೇಳಿ ಅಭಿಮಾನಿಗಳು ಹಾಗೂ ರಾಜಕೀಯ ವಲಯ ದಂಗಾಗಿದೆ. 52 ವರ್ಷ ವಯಸ್ಸಿನ ವಿಜಯ್ ಅವರು ಸುಮಾರು 603.20 ಕೋಟಿ ರೂಪಾಯಿ ಮೌಲ್ಯದ ಒಟ್ಟು ಆಸ್ತಿಯನ್ನು (Thalapathy Vijay Net Worth) ಹೊಂದಿರುವುದಾಗಿ ತಿಳಿಸಿದ್ದಾರೆ.

ವಿಜಯ್ ಅವರ ಒಟ್ಟು ಆಸ್ತಿಯಲ್ಲಿ 404.58 ಕೋಟಿ ರೂಪಾಯಿ ಮೊತ್ತದ ಚರಾಸ್ತಿ ಹಾಗೂ 198.62 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಸೇರಿದೆ. ಕೊಡೈಕೆನಾಲ್‌ನಲ್ಲಿ ಕೃಷಿ ಭೂಮಿ, ಚೆನ್ನೈನ ವಿವಿಧೆಡೆ ವಾಣಿಜ್ಯ ಮಳಿಗೆಗಳು ಮತ್ತು ವಸತಿ ಕಟ್ಟಡಗಳನ್ನು ಅವರು ಹೊಂದಿದ್ದಾರೆ. ಇನ್ನು, ವಿಜಯ್ ಅವರ ಪತ್ನಿ ಸಂಗೀತಾ ಅವರ ಹೆಸರಿನಲ್ಲಿ 15.76 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ.

ವಿಜಯ್ ಅವರು ಐಷಾರಾಮಿ ಜೀವನಶೈಲಿಗೆ ಹೆಸರಾಗಿದ್ದು, ಅವರ ಬಳಿ ಬಿಎಂಡಬ್ಲ್ಯು 530, ಟೊಯೋಟಾ ಲೆಕ್ಸಸ್, ಟೊಯೋಟಾ ವೆಲ್‌ಫೈರ್ ಮತ್ತು ಬಿಎಂಡಬ್ಲ್ಯು ಐ7 ಮುಂತಾದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಕಾರುಗಳಿವೆ. ಅವರ ಕೈಯಲ್ಲಿ 2 ಲಕ್ಷ ರೂ. ನಗದು ಹಾಗೂ ವಿವಿಧ ಬ್ಯಾಂಕ್‌ ಖಾತೆಗಳಲ್ಲಿ 213 ಕೋಟಿ ರೂಪಾಯಿಗೂ ಅಧಿಕ ಠೇವಣಿ ಇದೆ. 883 ಗ್ರಾಂ ಚಿನ್ನ ಮತ್ತು 15 ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳನ್ನು ಅವರು ಘೋಷಿಸಿದ್ದಾರೆ.

ವಿಜಯ್ ಅವರ ಅಫಿಡವಿಟ್‌ನಲ್ಲಿ ಗಮನ ಸೆಳೆದ ಪ್ರಮುಖ ಅಂಶವೆಂದರೆ ಅವರ ಸಾಲದ ವಿವರ. ಇಷ್ಟೊಂದು ದೊಡ್ಡ ಮೊತ್ತದ ಆಸ್ತಿ ಹೊಂದಿದ್ದರೂ ಬ್ಯಾಂಕ್ ಅಥವಾ ಯಾವುದೇ ಹಣಕಾಸು ಸಂಸ್ಥೆಗಳಿಗೆ ಅವರು ಒಂದು ರೂಪಾಯಿ ಕೂಡ ಸಾಲ ಬಾಕಿ ಉಳಿಸಿಕೊಂಡಿಲ್ಲ. 2024-25ರ ಆರ್ಥಿಕ ವರ್ಷದಲ್ಲಿ ಅವರು 184.53 ಕೋಟಿ ರೂಪಾಯಿ ಆದಾಯವನ್ನು ಐಟಿ ರಿಟರ್ನ್ಸ್‌ನಲ್ಲಿ ತೋರಿಸಿದ್ದಾರೆ.

ಇದನ್ನೂ ಓದಿ: ಇಫ್ತಾರ್​​ಕೂಟದಲ್ಲಿ ಭಾಗಿ ಆದ ದಳಪತಿ ವಿಜಯ್; ವಿವಾದದಿಂದ ತಪ್ಪಿಸಿಕೊಳ್ಳಲು ಹೊಸ ಐಡಿಯಾ

ವಿಜಯ್ ಅವರು 1992ರಲ್ಲಿ ಚೆನ್ನೈನ ಲೊಯೊಲಾ ಕಾಲೇಜಿನಲ್ಲಿ ಬಿಎಸ್‌ಸಿ ಪದವಿಯನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. 1989 ಮತ್ತು 1991ರಲ್ಲಿ 10 ಮತ್ತು 12ನೇ ತರಗತಿಯನ್ನು ಖಾಸಗಿಯಾಗಿ ಪೂರೈಸಿದ್ದಾರೆ. ಅವರ ಮೇಲೆ ಯಾವುದೇ ಕ್ರಿಮಿನಲ್ ಪ್ರಕರಣಗಳು ಬಾಕಿ ಇಲ್ಲ ಹಾಗೂ ಯಾವುದೇ ಪ್ರಕರಣದಲ್ಲಿ ಶಿಕ್ಷೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮಿಳುನಾಡು ವಿಧಾನಸಭೆಗೆ ಏಪ್ರಿಲ್ 23ರಂದು ಚುನಾವಣೆ ನಡೆಯಲಿದೆ. ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೊಸ ಚರ್ಚೆ ಹುಟ್ಟುಹಾಕಿದ KPS ಮ್ಯಾಗ್ನೆಟ್ ಶಾಲೆ ಯೋಜನೆ: ಆರಂಭಕ್ಕೂ ಮುನ್ನವೇ ಅಪಸ್ವರ ಏಕೆ?

ತುಮಕೂರು, ಮಾರ್ಚ್​ 30: ಅದೊಂದು ಕಾಲವಿತ್ತು. ಶಾಲೆ ಎಂದರೇ ಸಾಕು ಮಕ್ಕಳು ಕಿ.ಮೀಗಳಷ್ಟು ದೂರ ಹೆಜ್ಜೆ ಹಾಕಬೇಕಿತ್ತು. ಊರಿಂದೂರಿಗೆ ಬಂದು ಪಾಠ ಕೇಳಬೇಕಿತ್ತು. ನಂತರದಲ್ಲಿ ನಮ್ಮೂರ ಶಾಲೆ ಎಂಬಂತೆ ಹಳ್ಳಿಹಳ್ಳಿಯಲ್ಲೂ ಸರ್ಕಾರಿ ಶಾಲೆ ತೆರೆಯಲಾಗಿತ್ತು. ಮಕ್ಕಳು ಖುಷಿಯಾಗಿ ಪಾಠ ಕೇಳುತಿದ್ದರು. ಆದ್ರೀಗ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಶಾಲೆಯ (KPS Magnet Schools) ನೀತಿ ಆರಂಭಕ್ಕೂ ಮುನ್ನವೇ ಒಂದಷ್ಟು ಅಪಸ್ವರದ ಚರ್ಚೆ ಸೃಷ್ಟಿಸಿದೆ.

ವಿವಿಧೋದ್ದೇಶಿತ ಶಾಲಾ ನೀತಿಗೆ ವಿರೋಧ 

ಕೆಪಿಎಸ್ ಶಾಲೆ, ಕರ್ನಾಟಕ ಸಾರ್ವಜನಿಕ ಶಾಲೆಗಳ ಮ್ಯಾಗ್ನೆಟ್ ಯೋಜನೆ. ಇದು ರಾಜ್ಯದ ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಣೆ ಮತ್ತು ಏಕೀಕರಣಕ್ಕಾಗಿ ಹಮ್ಮಿಕೊಂಡಿರುವ ನೀತಿ. ಸುಮಾರು ಒಂದರಿಂದ ಐದು ಕಿ.ಮೀ ವ್ಯಾಪ್ತಿಯ ಸಣ್ಣ ಶಾಲೆಗಳನ್ನು ವಿಲೀನಗೊಳಿಸಿ, ಸುಮಾರು 1,200ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಾಮರ್ಥ್ಯದ ಆಧುನಿಕ ಸೌಲಭ್ಯಗಳಿರುವ ಶಾಲೆಗಳನ್ನು ನಿರ್ಮಿಸುವ ಗುರಿಯಾಗಿದೆ. ಆ ಮೂಲಕ ಪೂರ್ವ ಹಾಗೂ ಪ್ರಾಥಮಿಕದಿಂದ ಪಿಯುಸಿವರೆಗೆ ಒಂದೇ ಸೂರಿನಡಿ ಶಿಕ್ಷಣ ಮತ್ತು ಆಧುನಿಕ ಮೂಲಸೌಕರ್ಯಗಳನ್ನು ಒದಗಿಸುವ ಉದ್ದೇಶ ಹೊಂದಿದೆ. ಈ ರೀತಿಯ ವಿವಿಧೋದ್ದೇಶಿತ ಶಾಲಾ ನೀತಿಗೆ ಈಗ ತುಮಕೂರಿನಲ್ಲಿ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ವರ್ಷಗಳಿಂದ ಅಭಿವೃದ್ಧಿ ಕಾಣದೆ ಉಳಿದ ಬಾಲಕಿಯರ ವಸತಿ ನಿಲಯ; ಮೌಢ್ಯವನ್ನೇ ನೆಪ ಮಾಡಿಕೊಂಡಿತಾ ಸರ್ಕಾರ?

ತುಮಕೂರು ಜಿಲ್ಲೆಯಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ನೀತಿಗೆ ದಿನದಿಂದದಿನಕ್ಕೆ ವಿರೋಧದ ಕೂಗು ಜೋರಾಗುತ್ತಿದೆ. ವಿಲೀನ ನೀತಿ ಪ್ರಕಾರವಾಗಿ ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ಮುಚ್ಚುವ ಕ್ರಮದ ವಿರುದ್ಧ ಶಾಲಾ ಮಕ್ಕಳು, ಪೋಷಕರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ತುಮಕೂರು ನಗರ, ಶಿರಾ, ಕೊರಟಗೆರೆ ಸೇರಿದಂತೆ ಹಲವು ತಾಲ್ಲೂಕಿನ ಭಾಗಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಕಾರಣ, ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ನಮ್ಮೂರ ಸರ್ಕಾರಿ ಶಾಲೆಗಳಿಗೆ ಬೀಗ ಹಾಕುವ ಮುಖಾಂತರ ಮುಚ್ಚಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಈ ರೀತಿ ಜಿಲ್ಲೆಯಲ್ಲಿ ಒಟ್ಟು 1200 ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ವಿದ್ಯಾರ್ಥಿಗಳು ಮತ್ತು ಪೋಷಕರ ಜೊತೆ ಪ್ರತಿಭಟನೆ

ಇನ್ನು ಈ ಹೋರಾಟಕ್ಕೆ ಎಐಡಿಎಸ್ಒ ಸಂಘಟನೆ ಜೊತೆಯಾಗಿದೆ. ಹಳ್ಳಿಹಳ್ಳಿಯ ಸಣ್ಣ ಸರ್ಕಾರಿ ಶಾಲೆಗಳ ಉಳಿವಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರ ಜೊತೆ ಪ್ರತಿಭಟನೆ ನಡೆಸುತ್ತಿದೆ. ಗ್ರಾಮಸ್ಥರು ನಮ್ಮ ಶಾಲೆ ಮುಚ್ಚಲು ಬಿಡುವುದಿಲ್ಲ ಎಂದು ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕೂಗು ಹಂತ ಹಂತವಾಗಿ ಜಿಲ್ಲೆಯಾದ್ಯಂತ ವಿರೋಧದ ಅಲೆ ಹೆಚ್ಚಾಗುತ್ತಿದ್ದು, ಸರ್ಕಾರದ ನಿರ್ಧಾರ ಹಿಂಪಡೆಯುವಂತೆ ಆಗ್ರಹ ಹೆಚ್ಚಾಗಿದೆ.

ಇದನ್ನೂ ಓದಿ: ಚಲಿಸುವ ಬಸ್ ಕಿಟಕಿಯಲ್ಲಿ ಬ್ಯಾಗ್ ಇಡಲು ಹೋಗಿ ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿನಿ ಕಾಲು: ಸೆರೆಯಾಯ್ತು ಭೀಕರ ದೃಶ್ಯ

ಸದ್ಯ ದಿನದಿಂದ ದಿನಕ್ಕೆ ಕೆಪಿಎಸ್ ಮ್ಯಾಗ್ನೆಟ್ ಶಾಲಾ ನೀತಿಗೆ ತುಮಕೂರಿನಲ್ಲಿ ವಿರೋಧ ಹೆಚ್ಚಾಗುತ್ತಿದೆ. ಸರ್ಕಾರ ಈ ಚಿಂತನೆ ನಿಲ್ಲಿಸುವಂತೆ ಒತ್ತಾಯ ಕೇಳಿಬರುತ್ತಿದೆ. ಸದ್ಯ ಈ ಬೆಳವಣಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಸ್ವರೂಪ ಪಡೆಯುವ ಸಾಧ್ಯತೆಯಿದ್ದು, ಸರ್ಕಾರ ಈ ವಿಚಾರವಾಗಿ ಯಾವ ನಿರ್ಧಾರ ಕೈಗೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗಲ್ಫ್ ಬಿಕ್ಕಟ್ಟಿನಲ್ಲೂ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಆಗಲು ಬಿಡುತ್ತಿಲ್ಲ: ಸರ್ಕಾರದಿಂದ ಸ್ಪಷ್ಟನೆ

ನವದೆಹಲಿ, ಮಾರ್ಚ್ 30: ಇರಾನ್ ಯುದ್ಧ ನಿಲ್ಲದ ಹಿನ್ನೆಲೆಯಲ್ಲಿ ರಸಗೊಬ್ಬರ, ಎಲ್​ಪಿಜಿ, ಪೆಟ್ರೋಲ್, ಡೀಸಲ್, ಗ್ಯಾಸ್ ಪೂರೈಕೆ ಬಗ್ಗೆ ಜನರ ಆತಂಕ ಮುಂದುವರಿದಿದೆ. ಸರ್ಕಾರ ದಿನವೂ ಜನರಿಗೆ ಈ ಅಗತ್ಯ ವಸ್ತುಗಳ ಪೂರೈಕೆ ಸ್ಥಿತಿ ಬಗ್ಗೆ ಮಾಹಿತಿ ಒದಗಿಸುತ್ತಿದೆ. ಪೆಟ್ರೋಲಿಯಂ, ನೈಸರ್ಗಿಕ ಅನಿಲ, ಬಂದರು, ಹಡಗು, ಜಲಮಾರ್ಗ ಇತ್ಯಾದಿ ಸಚಿವಾಲಯದ ಅಧಿಕಾರಿಗಳು ಇಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಯೂರಿಯಾ ಸಂಗ್ರಹ ಸಾಕಷ್ಟಿದೆ. ಬೇರೆ ಬೇರೆ ಮೂಲಗಳಿಂದ ರಸಗೊಬ್ಬರ ಪೂರೈಕೆಗೆ (Urea supply) ಪ್ರಯತ್ನಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.

ರಸಗೊಬ್ಬರ ಪೂರೈಕೆ ನಿಲ್ಲದಂತೆ ಸರ್ಕಾರದ ಅತೀವ ಯತ್ನ

ಭಾರತದ ಪೆಟ್ರೋಲ್, ಡೀಸಲ್ ಮತ್ತು ಗ್ಯಾಸ್ ಅವಶ್ಯಕತೆಗೆ ಆಮದು ಮೇಲೆ ಹೆಚ್ಚಿನ ಅವಲಂಬನೆ ಇದೆ. ಹಾಗೆಯೇ, ರಸಗೊಬ್ಬರಕ್ಕೂ ಭಾರತ ಆಮದು ಮೇಲೆ ಅವಲಂಬಿತವಾಗಿದೆ. ಹೆಚ್ಚಿನ ರಸಗೊಬ್ಬರ ಆಮದು ಗಲ್ಫ್​ನಿಂದ ಮಾಡಲಾಗುತ್ತಿದೆ. ಪೆಟ್ರೋಲಿಯಂ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ಶೇ. 20-30ರಷ್ಟು ಯೂರಿಯ, ಶೇ. 30ರಷ್ಟು ಡಿಎಪಿಯನ್ನು ಗಲ್ಫ್​ನಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಭಾರತದಲ್ಲಿ ಯೂರಿಯಾ ಉತ್ಪಾದನೆಗೆ ಬೇಕಾದ ಎಲ್​ಎನ್​ಜಿ ಗಲ್ಫ್​ನಿಂದ ಶೇ. 50ರಷ್ಟು ಪೂರೈಕೆಯಾಗುತ್ತಿದೆ. ರಸಗೊಬ್ಬರ ತಯಾರಿಕೆಗೆ ಅಗತ್ಯವಾಗಿರುವ ಕಚ್ಛಾ ಸಾಮಗ್ರಿಗಳಾದ ಅಮ್ಮೋನಿಯಾ, ಸಲ್ಫರ್ ಇತ್ಯಾದಿಯೂ ಕೂಡ ಆಮದು ಮೇಲೆ ಅವಲಂಬಿತವಾಗಿರುವಂಥವೇ. ಇದರಿಂದ ದೇಶದೊಳಗಿನ ಯೂರಿಯಾ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಬೇಗ ಡೀಲ್ ಆಗದಿದ್ದರೆ ಇರಾನ್​ನ ಇಂಧನ ಘಟಕಗಳು, ಖರ್ಗ್ ದ್ವೀಪವನ್ನು ಉಡಾಯಿಸುತ್ತೇವೆ: ಡೊನಾಲ್ಡ್ ಟ್ರಂಪ್ ಕಟ್ಟೆಚ್ಚರಿಕೆ

ಸದ್ಯ ರಸಗೊಬ್ಬರ ದಾಸ್ತಾನು ಸಾಕಷ್ಟಿದೆ. ಕಳೆದ ವರ್ಷ ಈ ಅವಧಿಯಲ್ಲಿ 147 ಲಕ್ಷ ಟನ್ ಯೂರಿಯಾ ಇತ್ತು. ಈಗ ಅದು 180 ಲಕ್ಷ ಟನ್​ಗಳಷ್ಟಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೇಸಾಯ ಹೆಚ್ಚು ಇರುವುದಿಲ್ಲ. ಹೀಗಾಗಿ, ಮುಂಗಾರು ಬೆಳೆ ಸೀಸನ್​ಗೆ ಯೂರಿಯಾ ದಾಸ್ತಾನು ಮಾಡಲು ಅವಕಾಶ ಇದೆ ಎಂದು ಸರ್ಕಾರ ತಿಳಿಸಿದೆ.

ಯೂರಿಯಾ ಉತ್ಪಾದನೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಯೂರಿಯಾ ಘಟಕಗಳಿಗೆ ಎಲ್​ಎನ್​ಜಿ ಪೂರೈಕೆಯನ್ನು ಹೆಚ್ಚಿಸಲಾಗಿದೆ. ಇದರಿಂದ ಯೂರಿಯಾ ಉತ್ಪಾದನೆ ದಿನಕ್ಕೆ 12,000-15,000 ಟನ್​ಗಳಷ್ಟು ಹೆಚ್ಚಿಗೆ ಆಗಿದೆ ಎಂದು ಪೆಟ್ರೋಲಿಯಂ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಇರಾನ್​ನ ಖರ್ಗ್ ದ್ವೀಪದ ಮೇಲೆ ಟ್ರಂಪ್​ಗೆ ಕಣ್ಣು? ಅಂಥದ್ದೇನಿದೆ ಅಲ್ಲಿ?

ಜಾಗತಿಕವಾಗಿ ಯೂರಿಯಾ ಲಭ್ಯತೆ ಶೋಧಿಸಿ, ಗುರುತಿಸಲು ಟ್ಯಾಸ್ಕ್ ಗ್ರೂಪ್ ರಚಿಸಲಾಗುತ್ತಿದೆ. 13.07 ಲಕ್ಷ ಟನ್​ಗಳಷ್ಟು ಯೂರಿಯಾ ಖರೀದಿಗಾಗಿ ಜಾಗತಿಕ ಟೆಂಡರ್ ಕರೆಯಲಾಗಿದೆ. ರಷ್ಯಾ, ಸೌದಿ ಅರೇಬಿಯಾ, ಓಮನ್, ಮೊರಾಕ್ಕೋ, ಆಸ್ಟ್ರೇಲಿಯಾ, ಇಂಡೋನೇಷ್ಯಾ, ಮಲೇಷ್ಯಾ, ಜೋರ್ಡಾನ್, ಕೆನಡಾ, ಈಜಿಪ್ಟ್, ಆಲ್ಜೀರಿಯಾ, ಫಿನ್​ಲ್ಯಾಂಡ್, ಟೋಬೋ ಮೊದಲಾದ ದೇಶಗಳಿಂದ ಯೂರಿಯಾ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಜಾಗತಿಕವಾಗಿ ವಿವಿಧೆಡೆ 16 ಭಾರತೀಯ ಮಿಷನ್​ಗಳ ಮೂಲಕ ಪರ್ಯಾಯ ಪೂರೈಕೆ ಮೂಲಗಳನ್ನು ಅನ್ವೇಷಿಸಲಾಗುತ್ತಿದೆ ಎಂದು ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಡಿವೋರ್ಸ್ ಬಳಿಕ 9 ಕಿ.ಮೀ ದೀಡ ನಮಸ್ಕಾರ ಹಾಕಿ ದೇವರಿಗೆ ಥ್ಯಾಂಕ್ಸ್ ಹೇಳಿದ ಯುವಕ! ವಿಡಿಯೋ ವೈರಲ್‌

ಲಕ್ನೋ, (ಮಾರ್ಚ್ 30): ಸಾಮಾನ್ಯವಾಗಿ ದಾಂಪತ್ಯ ಜೀವನದಲ್ಲಿ ವಿಚ್ಛೇದನ (Divorce) ಸಂಭವಿಸಿದರೆ ಅದು ದುಃಖದ ಸಂಗತಿ ಎಂದು ಪರಿಗಣಿಸಲಾಗುತ್ತದೆ. ಆದ್ರೆ, ಇತ್ತೀಚಿನ ದಿನಗಳಲ್ಲಿ ಕೆಲವರು ‘ಡಿವೋರ್ಸ್ ಪಾರ್ಟಿ’ ನೀಡಿ ಸಂಭ್ರಮಿಸುವುದನ್ನೂ ನಾವು ನೋಡಿದ್ದೇವೆ. ಅದರಂತೆ ಉತ್ತರ ಪ್ರದೇಶದ (Uttara Pradesh) ಬಸ್ತಿ ಜಿಲ್ಲೆಯ 25 ವರ್ಷದ ಯುವಕನೋರ್ವ ತನಗೆ ಪತ್ನಿಯಿಂದ ​ಕೋರ್ಟಿನಲ್ಲಿ ವಿಚ್ಛೇದನ ಸಿಕ್ಕಿದ್ದಕ್ಕೆ ದೇವರಿಗೆ ಧನ್ಯವಾದ ಸಲ್ಲಿಸಲು ಬರೋಬ್ಬರಿ 9 ಕಿಲೋಮೀಟರ್‌ಗಳಷ್ಟು ದೂರ ದೀಡ ನಮಸ್ಕಾರ ಹಾಕುವ ಮೂಲಕ ವಿಶಿಷ್ಟವಾಗಿ ಹರಕೆ ತೀರಿಸಿದ್ದಾನೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಬಸ್ತಿ ಜಿಲ್ಲೆಯ ನರ್ಖೋರಿಯಾ ಗ್ರಾಮದ ಜೋಗೇಶ್ ಎಂಬ ಯುವಕ ಈ ವಿಚಿತ್ರ ಸಾಹಸ ಮಾಡಿದವರು. ನವರಾತ್ರಿಯ ಶುಭ ಸಂದರ್ಭದಲ್ಲಿ ಅವರು ತಮ್ಮ ಗ್ರಾಮದಿಂದ ಸ್ಥಳೀಯ ‘ಬೈದಾ ಸಮಯ ಮಾತಾ’ ದೇವಸ್ಥಾನದವರೆಗೆ ನೆಲದ ಮೇಲೆ ಮಲಗಿ ಸಾಷ್ಟಾಂಗ ನಮಸ್ಕಾರ ಮಾಡುತ್ತಾ ಸಾಗಿದ್ದಾರೆ. ಬೆಳಿಗ್ಗೆ ಆರಂಭವಾದ ಈ ಕಠಿಣ ಯಾತ್ರೆಯು ಸುಮಾರು 12 ಗಂಟೆಗಳ ಕಾಲ ನಡೆದಿದ್ದು, ಇಡೀ ಹಾದಿಯುದ್ದಕ್ಕೂ ಜೋಗೇಶ್ ಅವರು ಉಪವಾಸವಿದ್ದು ‘ಜೈ ಶ್ರೀರಾಮ್’ ಮತ್ತು ‘ಜೈ ಬಜರಂಗಬಲಿ’ ಎಂದು ಘೋಷಣೆ ಕೂಗುತ್ತಾ ದೇವಸ್ಥಾನ ತಲುಪಿದ್ದಾರೆ.

ಇದನ್ನೂ ನೋಡಿ: ಬಿರುಗಾಳಿಗೆ ಮಂಟಪವನ್ನೇ ಹಾರದಂತೆ ತಡೆದವನು, ಇನ್ನು ಪತ್ನಿ ಕೈ ಬಿಡುವನೇ!

ಪ್ರಕರಣದ ಹಿನ್ನೆಲೆ

ಜೋಗೇಶ್ ಅವರಿಗೆ 2022 ರಲ್ಲಿ ಮದುವೆಯಾಗಿತ್ತು. ಆದರೆ ಮದುವೆಯಾದ ಮೊದಲ ದಿನದಿಂದಲೇ ದಂಪತಿಗಳ ನಡುವೆ ತೀವ್ರ ಗಲಾಟೆಗಳು ಶುರುವಾಗಿದ್ದವು. ಇದರಿಂದ ದಾಂಪತ್ಯ ಜೀವನ ನರಕಸದೃಶವಾದಾಗ ಜೋಗೇಶ್ ನ್ಯಾಯಾಲಯದ ಮೊರೆ ಹೋಗಿದ್ದರು. ಅಲ್ಲದೇ ನನಗೆ ಈ ಕಿರಿಕಿರಿ ತುಂಬಿದ ದಾಂಪತ್ಯದಿಂದ ಮುಕ್ತಿ ಸಿಕ್ಕರೆ ದೇವಸ್ಥಾನಕ್ಕೆ ದೀಡ‌ ನಮಸ್ಕಾರ ಮಾಡುತ್ತೇನೆ” ಎಂದು ಅವರು ದೇವರಿಗೆ ಹರಕೆ ಹೊತ್ತಿದ್ದರು. 2026 ಜನವರಿಯಲ್ಲಿ ವಿಚ್ಛೇದನ ಪ್ರಕ್ರಿಯೆ ಕಾನೂನುಬದ್ಧವಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಜೋಗೇಶ್ ತಮ್ಮ ಹರಕೆಯನ್ನು ತೀರಿಸಿದ್ದಾರೆ.

ಈ ಯಾತ್ರೆಗಾಗಿ ಜೋಗೇಶ್ ಮುಂಚಿತವಾಗಿಯೇ ಉಪವಿಭಾಗಾಧಿಕಾರಿಗಳಿಂದ (SDM) ಅನುಮತಿ ಪಡೆದಿದ್ದರು. ಯಾತ್ರೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಸಂಚಾರಕ್ಕೆ ಅಡ್ಡಿಯಾಗದಂತೆ ಪೊಲೀಸರು ಭದ್ರತೆ ನೀಡಿದ್ದರು. ಜೋಗೇಶ್ ಅವರ ಪೋಷಕರು ಮತ್ತು ಕುಟುಂಬದ ಸದಸ್ಯರು ಕೂಡ ಅವರ ಜೊತೆಗಿದ್ದರು. ದೇವಸ್ಥಾನ ತಲುಪಿದ ನಂತರ ಅವರು ತೆಂಗಿನಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದರು.

ಇನ್ನಷ್ಟು ವೈರಲ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link