ನಾಳೆ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ: ನೌಕರರಿಂದ ಬೆಂಗಳೂರು ಚಲೋ – Kannada News | KSRTC Bus Strike on Feb 19: Bengaluru Chalo Protest May Disrupt Bus Services Across Karnataka on Thursday
ಕೆಎಸ್‌ಆರ್‌ಟಿಸಿ ಬಸ್ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 18: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ (ಫೆಬ್ರವರಿ 19) ಕರ್ನಾಟಕ ರಾಜ್ಯ ಸಾರಿಗೆ ನೌಕರರು ‘ಬೆಂಗಳೂರು ಚಲೋ’ಕ್ಕೆ ಕರೆ ನೀಡಿರುವುದರಿಂದ ಹಲವರು ಕರ್ತವ್ಯಕ್ಕೆ ಗೈರಾಗುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ (KSRTC) ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸಾರಿಗೆ ನೌಕರರು ಗುರುವಾರ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರು ಕಡೆಗೆ ಜಮಾಯಿಸುವ ನಿರೀಕ್ಷೆಯಿದೆ. ಇದರ ನಡುವೆಯೇ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ…