ಪೊಲೀಸರ ಸೋಗಲ್ಲಿ ಉದ್ಯಮಿ ಮನೆಗೆ ನುಗ್ಗಿ 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದರೋಡೆ – Kannada News | Bengaluru Robbery: Gang Posing as Police Loots 20 Lakh Cash and Half Kg Gold from Businessman’s House
ಬೆಂಗಳೂರು, ಫೆಬ್ರವರಿ 17: ಪೊಲೀಸರ ಹೆಸರಲ್ಲಿ ಮನೆಗೆ ಎಂಟ್ರಿಕೊಟ್ಟ ಗ್ಯಾಂಗ್ ಒಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ನಗದು ಮತ್ತು ಸುಮಾರು ಅರ್ಧ ಕೆಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಇಎಲ್ ಲೇಔಟ್ನಲ್ಲಿ ನಡೆದಿದೆ. ನಾಲ್ಕು ಮಂದಿಯ ತಂಡ ಕೃತ್ಯ ಎಸಗಿದೆ ಎನ್ನಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಹೊಂಬಾಳೆಗೌಡ ಎಂಬವರ ಮನೆಯಲ್ಲಿ ನಿನ್ನೆ ಘಟನೆ ನಡೆದಿದೆ. ಹೊಂಬಳೆಗೌಡ ಅವರು ಪತ್ನಿ ಮಂಗಳಮ್ಮ ಹಾಗೂ ಮೊಮ್ಮಕ್ಕಳೊಂದಿಗೆ ಮನೆಯಲ್ಲಿ ಇದ್ದ ವೇಳೆ…