ಬೆಂಗಳೂರು ರೈಲು ಪ್ರಯಾಣಿಕರಿಗೆ ಕೇಂದ್ರ ಸಚಿವ ಸೋಮಣ್ಣ ಗುಡ್ ನ್ಯೂಸ್: ಕೊನೆಗೂ ಈಡೇರಿತು ಬಹುಕಾಲದ ಬೇಡಿಕೆ – Kannada News | Bengaluru Passengers Get Good News as Union Minister Somanna Flags Off Express Train Halt at Nayandahalli Railway Station
ಬೆಂಗಳೂರು, ಫೆಬ್ರವರಿ 17: ಬೆಂಗಳೂರಿನ (Bangalore) ನಾಯಂಡಹಳ್ಳಿ ರೈಲ್ವೆ ನಿಲ್ದಾಣದಲ್ಲಿ (Nayandahalli Railway Station) ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ಕಲ್ಪಿಸುವ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (V Somanna) ಅವರು ಮಂಗಳವಾರ ನಾಲ್ಕು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಇದುವರೆಗೆ ನಾಯಂಡಹಳ್ಳಿ ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲುಗಳು ಮಾತ್ರ ನಿಲ್ಲುತ್ತಿದ್ದು, ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗಾಗಿ ಪ್ರಯಾಣಿಕರು ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಇಂದು…