ಧುರಂಧರ್ ನೋಡಿ ಕಲಿಯಿರಿ: ಮೌನ ತಾಳಿದ ಬಾಲಿವುಡ್ ಮಂದಿಗೆ ಆರ್ಜಿವಿ ಖಡಕ್ ಮಾತು
ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಬಿಡುಗಡೆಯಾದ ದಿನದಿಂದಲೂ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಈ ಸಿನಿಮಾ, ಈಗಾಗಲೇ ಜಾಗತಿಕವಾಗಿ 1,300 ಕೋಟಿ ರೂಪಾಯಿಗಳಿಗೂ ಅಧಿಕ ಗಳಿಕೆ ಮಾಡುವ ಮೂಲಕ ಹಳೇ ದಾಖಲೆಗಳನ್ನೆಲ್ಲ ಮುರಿದಿದೆ. ಆದರೆ, ಈ ಯಶಸ್ಸಿನ ನಡುವೆಯೂ ಬಾಲಿವುಡ್ ಮಂದಿ ತೋರುತ್ತಿರುವ ಮೌನ ಈಗ ಚರ್ಚೆಗೆ ಕಾರಣವಾಗಿದೆ. ಸದಾ ವಿವಾದಿತ ಹೇಳಿಕೆಗಳಿಂದ ಸುದ್ದಿ ಆಗುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV)…