ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಣ ಹವೆ – Kannada News | Bengaluru temperature: Dry weather all over the state, clear sky at Bengaluru today
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಣ ಹವೆ ಬೆಂಗಳೂರು, ಫೆಬ್ರವರಿ 13: ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ…