All posts by nagaraj11081993

ಸ್ಪೀಕರ್ ಕೊಠಡಿಗೆ ನುಗ್ಗಿ ಕಾಂಗ್ರೆಸ್ ಸಂಸದರಿಂದ ಪ್ರಧಾನಿಗೆ ಬೆದರಿಕೆ; ಹೊಸ ವಿಡಿಯೋ ವೈರಲ್ – Kannada News | Minister Kiren Rijiju releases new video alleging Congress MPs abused Speaker threatened PM

ನವದೆಹಲಿ, ಫೆಬ್ರವರಿ 12: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಪುಸ್ತಕದ ಆಯ್ದ ಭಾಗಗಳನ್ನು ಓದುವುದನ್ನು ತಡೆದ ಸ್ಪೀಕರ್ ಓಂ ಬಿರ್ಲಾ ಅವರ ನಿರ್ಧಾರದ ವಿರುದ್ಧ ಪ್ರತಿಪಕ್ಷಗಳು ಪ್ರತಿಭಟಿಸಿದ ನಂತರ ಕೇಂದ್ರ ಸಂಸತ್ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiren Rijiju) ಇಂದು ಲೋಕಸಭೆಯಲ್ಲಿ ನಡೆದ ಘರ್ಷಣೆಯ ಮತ್ತೊಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

20ರಿಂದ 25 ಕಾಂಗ್ರೆಸ್ ಸಂಸದರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಗೆ ಬಲವಂತವಾಗಿ ಪ್ರವೇಶಿಸಿ, ನಿಂದನೀಯ ಭಾಷೆ ಬಳಸಿ, ಪ್ರಧಾನಿ ನರೇಂದ್ರ ಮೋದಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವೀಡಿಯೊ ಬಿಡುಗಡೆ ಮಾಡಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಸಚಿವ ಕಿರಣ್ ರಿಜಿಜು ಒಂದುವೇಳೆ ಆ ದಿನ ಬಿಜೆಪಿ ಮತ್ತು ಎನ್‌ಡಿಎ ಸಂಸದರು ಸಂಯಮವನ್ನು ಕಳೆದುಕೊಂಡಿದ್ದರೆ ಪರಿಸ್ಥಿತಿ ತೀವ್ರವಾಗುತ್ತಿತ್ತು ಎಂದು ಹೇಳಿದ್ದಾರೆ. ಇದಾದ ಬಳಿಕ ಅವರು ಎಕ್ಸ್​ನಲ್ಲಿ ಕಾಂಗ್ರೆಸ್ ಸಂಸದರು ಸ್ಪೀಕರ್ ಕೊಠಡಿಯೊಳಗಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಹಿರಂಗವಾಗಿ ಕ್ಷಮೆ ಕೇಳಿ; ರ‍್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ ಕೂಗಿದ ಕಾಂಗ್ರೆಸ್ ವಿರುದ್ಧ ಕಿರಣ್ ರಿಜಿಜು ಆಕ್ರೋಶ

ನಾನು ಬಿಜೆಪಿ ಮತ್ತು ಎನ್‌ಡಿಎ ಸಂಸದರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದರೆ ಅದು ಅವ್ಯವಸ್ಥೆಯನ್ನು ಸೃಷ್ಟಿಸುತ್ತಿತ್ತು. ನಮಗೆ ಅಂತಹ ವಿಷಯಗಳು ಬೇಡ. ಸುಮಾರು 20-25 ಸಂಸದರು ಸ್ಪೀಕರ್ ಕೊಠಡಿಗೆ ಬಲವಂತವಾಗಿ ಪ್ರವೇಶಿಸಿದರು. ಆಗ ಏನಾಯಿತು ಮತ್ತು ಅವರು ಯಾವ ರೀತಿಯ ಅನುಚಿತ ವರ್ತನೆ ಮಾಡುತ್ತಿದ್ದಾರೆ ಎಂದು ನೋಡಲು ನಾನು ಓಡಿಹೋದೆ. ಆಗ ಕಾಂಗ್ರೆಸ್ ಸಂಸದರು ಸ್ಪೀಕರ್​ಗೆ ನಿಂದಿಸುತ್ತಿದ್ದರು. ಪ್ರಿಯಾಂಕಾ ಗಾಂಧಿ ಕೂಡ ಅಲ್ಲಿದ್ದರು. ಕಾಂಗ್ರೆಸ್ ಸಂಸದರು ಸ್ಪೀಕರ್, ಪ್ರಧಾನಿಯನ್ನು ಅವರ ಮುಂದೆಯೇ ನಿಂದಿಸಿದರು ಎಂದು ರಿಜಿಜು ಆರೋಪಿಸಿದ್ದಾರೆ.

ಇದನ್ನೂ ಓದಿ: ಲೋಕಸಭೆ ಅಧಿವೇಶನದಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದ 8 ಸಂಸದರ ಅಮಾನತು

ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಆ ವೇಳೆ ನಿಂದನೀಯ ಭಾಷೆಯನ್ನು ಬಳಸಲಿಲ್ಲ. ಆದರೆ ಇತರ ಕಾಂಗ್ರೆಸ್ ಸಂಸದರು ಹಾಗೆ ಮಾಡಿದ್ದಾರೆ. ಆಗ ಅವರಿಬ್ಬರೂ ಅಲ್ಲಿದ್ದರು. ‘ದೇಶದ ಪ್ರಧಾನಿಗೆ ನಾವು ಏನು ಮಾಡುತ್ತೇವೆ ಎಂದು ನೋಡಿ. ಸಂಸತ್ತಿನಲ್ಲಿ ನಾವು ಅವರೊಂದಿಗೆ ಏನು ಮಾಡುತ್ತೇವೆ ಎಂದು ನೋಡಿ’ ಎಂದು ಹೇಳುತ್ತಿದ್ದರು. ಅದೆಲ್ಲವನ್ನೂ ವಿಡಿಯೋದಲ್ಲಿ ದಾಖಲಿಸಲಾಗಿದೆ. ಆ ಘಟನೆ ನಡೆದಾಗ ನಾನೂ ಅಲ್ಲಿದ್ದೆ. ಸ್ಪೀಕರ್ ತುಂಬಾ ಮೃದು ಸ್ವಭಾವದ ವ್ಯಕ್ತಿ. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ ಕೇಸ್​​ನಲ್ಲಿ SDPI ಕೈವಾಡ, ಲವ್​​ ಜಿಹಾದ್​ ಆರೋಪ – Kannada News | Mangaluru Interfaith Marriage Case: Father Alleges Love Jihad, SDPI Role in Daughter’s Disappearance

ಮಂಗಳೂರು, ಫೆಬ್ರವರಿ 12: ಸುರತ್ಕಲ್‌ನ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣದಲ್ಲಿ ಲವ್ ಜಿಹಾದ್ ನಡೆದಿರುವ ಬಗ್ಗೆ ಯುವತಿಯ ತಂದೆ ವಿಶ್ವನಾಥ್ ಆರೋಪಿಸಿದ್ದಾರೆ. ತಮ್ಮ ಮಗಳು ವೈಶಾಲಿ ಲವ್ ಜಿಹಾದ್‌ಗೆ ಒಳಗಾಗಿದ್ದಾಳೆ ಮತ್ತು ಇದರ ಹಿಂದೆ SDPI ಸಂಘಟನೆಯ ಕೈವಾಡವಿದೆ ಎಂದು ಅವರು ಆರೋಪಿಸಿದ್ದಾರೆ. ಮಗಳೊಂದಿಗೆ ಪರಾರಿಯಾದ ಯುವಕ ಮೊಹಮ್ಮದ್ ಮಿದ್ಲಾಜ್ SDPI ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಎಂಬ ಮಾಹಿತಿ ಇದೆ. ಅಲ್ಲದೆ, ಆ ಯುವಕ ಕೆಲಸ ಮಾಡುತ್ತಿದ್ದ ಅಟ್ಲಾಂಟಿಕ್ ಜುವೆಲ್ಲರ್ಸ್ ಮಾಲೀಕರು SDPI ಮುಖಂಡರು ಎಂದು ತಿಳಿದುಬಂದಿದೆ. ಮಿದ್ಲಾಜ್ ಪರವಾಗಿ ಹಲವರು ವಯನಾಡು ಪೊಲೀಸ್ ಠಾಣೆಗೆ ಬಂದವರು ಕೂಡ ಅದೇ ಸಂಘಟನೆಗೆ ಸೇರಿದವರು ಎಂದು ದೂರಲಾಗಿದೆ. ಮಗಳು ಯಾವುದೇ ಮಾದಕ ವ್ಯಸನ ಅಥವಾ ಬ್ರೈನ್ ವಾಶ್‌ಗೆ ಒಳಗಾಗಿದ್ದಳೇ ಎಂಬುದು ತಮಗೆ ನಿಖರವಾಗಿ ತಿಳಿದಿಲ್ಲ. ಆದರೆ ಆಕೆ ಸುರಕ್ಷಿತವಾಗಿ ಮನೆಗೆ ಮರಳಬೇಕು. ಈ ಬಗ್ಗೆ ಪೊಲೀಸ್​​ ತನಿಖೆ ಆಗಬೇಕು ಎಂದು ವಿಶ್ವನಾಥ್​ ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಿಂದಿನ ಬಿಜೆಪಿಗಿಂತ ಹಾಲಿ ಕಾಂಗ್ರೆಸ್​​ ಸರ್ಕಾರದಲ್ಲೇ ಭ್ರಷ್ಟಾಚಾರ ಹೆಚ್ಚು: ಗುತ್ತಿಗೆದಾರರ ಸಂಘದ ಆರೋಪ – Kannada News | Karnataka Contractors Allege Higher Corruption in Congress Govt than BJP

ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ Image Credit source: Tv9 Kannada

ಮಡಿಕೇರಿ, ಫೆಬ್ರವರಿ 12: ಹಿಂದಿನ ಬಿಜೆಪಿ ಸರ್ಕಾರದ ಅವಧಿಗಿಂತ ಹಾಲಿ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್​​ ನೇತೃತ್ವದ ಸರ್ಕಾರದಲ್ಲಿಯೇ ಭ್ರಷ್ಟಾಚಾರ ಹೆಚ್ಚಾಗಿ ನಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ. ನಮ್ಮ ಹೋರಾಟದ ಫಲವಾಗಿ ಸಿದ್ದರಾಮಯ್ಯ ಸಿಎಂ ಆಗಿದ್ದು, ಕೆಂಪಣ್ಣ ನೇತೃತ್ವದಲ್ಲಿ ಹೋರಾಟ ಮಾಡಿದ್ದಕ್ಕಾಗಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಹೀಗಿದ್ದರೂ ನಮಗೆ ಸರಕಾರದಿಂದ ಯಾವುದೇ ರೀತಿಯ ಸಹಕಾರ ಇಲ್ಲ. ಇದುವರೆಗೂ ನಮ್ಮನ್ನು ಸಿಎಂ ಸೌಜನ್ಯಕ್ಕೂ ಕರೆದು ಮಾತಾಡಿಸಿಲ್ಲ ಎಂದು ದೂರಿದ್ದಾರೆ.

ಮಾರ್ಚ್ 5ರಂದು ಪ್ರತಿಭಟನೆಗೆ ಕರೆ

ರಾಜ್ಯದಲ್ಲಿ 37 ಸಾವಿರ ಕೋಟಿ ಬಿಲ್​​ ಪೆಂಡಿಂಗ್​​ ಇದ್ದು, ಕೊಡಗು ಜಿಲ್ಲೆಯಲ್ಲಿ 180 ಕೋಟಿ ರೂ. ಬಾಕಿ ಇದೆ. ಈ ಸಂಬಂಧ ಎಲ್ಲ ಜಿಲ್ಲೆಗೆ ತೆರಳಿ ಗುತ್ತಿಗೆದಾರರಿಗೆ ಸಾಂತ್ವಾನ ಹೇಳಲಾಗುತ್ತಿದ್ದು, ಮುಖ್ಯ ಕಾರ್ಯದರ್ಶಿಗೆ ನೂರು ಪುಟಗಳ ಪತ್ರ ಬರೆಯಲಾಗಿದೆ. ಲೋಕೋಪಯೋಗಿ ಸಚಿವರೂ ನಮಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಮಾರ್ಚ್ 5ರಂದು ಕೆಲಸ ನಿಲ್ಲಿಸಿ ಫ್ರೀಡಂ ಪಾರ್ಕ್​​ನಲ್ಲಿ ಬೃಹತ್ ಮುಷ್ಕರ ನಡೆಸಲಾಗುತ್ತೆ.ಇದಕ್ಕೂ ಸ್ಪಂದಿಸದಿದ್ದಲ್ಲಿ ಮುಂದೆ ಒಂದು ವಾರ ಕೆಲಸ ಸ್ಥಗಿತ ಮಾಡುತ್ತೇವೆ ಎಂದು ಆರ್.ಮಂಜುನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಕಿ ಬಿಲ್ ಕ್ಲಿಯರ್ ಮಾಡದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಸ್ಥಗಿತ; ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರ ಸಂಘ

ಖಾಸಗಿ ವ್ಯಕ್ತಿಗಳು ಸಚಿವರ ಬಳಿ ಹೋಗಿ ಕೆಲಸ ಮಾಡಿಸುತ್ತಿದ್ದು. ಇಂತಹ ವ್ಯವಸ್ಥೆಯನ್ನು ಇಲ್ಲಿಯವರೆಗೆ ನಾವು ನೋಡಿಲ್ಲ. ಮುತ್ಸದಿ ಸಿಎಂ ಸಿದ್ದರಾಮಯ್ಯ ಈ ರೀತಿ ಮಾಡೋದು ಸರಿಯಲ್ಲ. ನಮ್ಮ ತಾಳ್ಮೆಯ ಕಟ್ಟೆ ಒಡೆದಿದೆ. ನಾವು ದುಡ್ಡು ತಗೊಳ್ಳಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ ಈಗ ಅವರು ಅದೆಲ್ಲಾ ಮರೆತು ಹೋಗಿದ್ದಾರೆ. ಹಳೆ ಸರ್ಕಾರಕ್ಕಿಂತ ಈ ಸರ್ಕಾರದಲ್ಲೇ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ವಾಗ್ದಾಳಿ ನಡೆಸಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ನಿಮ್ಮ ನೇತೃತ್ವದ ಸರ್ಕಾರದಲ್ಲಿ ಬಿಲ್‌ ಪಾವತಿಗೆ ಕಮಿಷನ್‌ ದುಪ್ಪಟ್ಟಾಗಿದೆ ಎಂದು ಆರೋಪಿಸಿ ರಾಜ್ಯ ಗುತ್ತಿಗೆದಾರರ ಸಂಘ ಈ ಹಿಂದೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿತ್ತು.ತಾವು ವಿರೋಧ ಪಕ್ಷದ ನಾಯಕರಾಗಿದ್ದಾಗ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಯಾವುದೇ ಕಮಿಷನ್‌ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದೀರಿ. ಆದರೆ, ಹಿಂದಿನ ಸರ್ಕಾರಕ್ಕಿಂತ ಎಲ್ಲ ಇಲಾಖೆಗಳಲ್ಲೂ ಈಗ ಕಮಿಷನ್‌ ದುಪ್ಪಟ್ಟು ಆಗಿದೆ ಎಂದು ನಿಮ್ಮ ಗಮನಕ್ಕೆ ತರಲು ಸಂಘ ವಿಷಾದ ವ್ಯಕ್ತಪಡಿಸುತ್ತದೆ ಎಂದು ಕಿಡಿ ಕಾರಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:53 pm, Thu, 12 February 26

Source link

ಅಮೆರಿಕ: ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾವು, ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ – Kannada News | US Police Accident Case: Indian Student Death, Family Gets Record 29 Million Dollar Settlement

ವಾಷಿಂಗ್ಟನ್, ಫೆಬ್ರವರಿ 12: ಅಮೆರಿಕದಲ್ಲಿ ನಡೆದ ಅಪಘಾತ(Accident)ದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ಈ ಮೊತ್ತ ಎಷ್ಟು ದೊಡ್ಡದೆಂದರೆ, ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಅಮೆರಿಕ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಪರಿಹಾರಗಳಲ್ಲಿ ಇದು ಕೂಡ ಒಂದು. 2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಪೊಲೀಸ್ ಅಧಿಕಾರಿಯೊಬ್ಬರ ಕಾರು ಡಿಕ್ಕಿ ಹೊಡೆದು 23 ವರ್ಷದ ಜಾಹ್ನವಿ ಕಂದುಲಾ ಸಾವನ್ನಪ್ಪಿದ್ದರು.

ಜಾಹ್ನವಿ ಕಂದುಲಾ ಭಾರತದವರಾಗಿದ್ದು, ಸಿಯಾಟಲ್‌ನಲ್ಲಿರುವ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಈ ಘಟನೆ ಜನವರಿ 2023 ರಲ್ಲಿ ನಡೆದಿತ್ತು. ಸಿಯಾಟಲ್ ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಮಾದಕವಸ್ತು ಸೇವನೆ ಮಾಡಿ, ಫೋನ್​​ ಅಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದರು.

ಅವರು 25 mph ವೇಗದಲ್ಲಿ ಚಾಲನೆ ಮಾಡುವ ಪ್ರದೇಶದಲ್ಲಿ 74 mph (119 kph) ವೇಗದಲ್ಲಿ ಚಾಲನೆ ಮಾಡುತ್ತಿದ್ದರು. ನಂತರ ಅಧಿಕಾರಿಗೆ ಅಜಾಗರೂಕ ಚಾಲನೆಗಾಗಿ 5,000 ಡಾಲರ್ ದಂಡ ವಿಧಿಸಲಾಯಿತು. ಅವರನ್ನು ಪೊಲೀಸ್ ಇಲಾಖೆಯಿಂದ ವಜಾಗೊಳಿಸಲಾಯಿತು. ಆದಾಗ್ಯೂ, ಕಿಂಗ್ ಕೌಂಟಿ ಪ್ರಾಸಿಕ್ಯೂಟರ್‌ಗಳು ಅಧಿಕಾರಿ ಉದ್ದೇಶಪೂರ್ವಕವಾಗಿ ಸುರಕ್ಷತೆಯನ್ನು ನಿರ್ಲಕ್ಷಿಸಿದ್ದಾರೆಂದು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಅವರ ವಿರುದ್ಧ ಯಾವುದೇ ಗಂಭೀರ ಕ್ರಿಮಿನಲ್ ಆರೋಪಗಳನ್ನು ಹೊರಿಸಲಿಲ್ಲ.

ಮತ್ತಷ್ಟು ಓದಿ: ನೈಜೀರಿಯಾ: ಕಾನೋದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಅಪಘಾತ, 30 ಮಂದಿ ಸಾವು

ಮತ್ತೊಬ್ಬರ ಬಾಡಿ ಕ್ಯಾಮರಾದಲ್ಲಿ ರೆಕಾರ್ಡ್​ ಆಗಿದ್ದ ದೃಶ್ಯಗಳು ಬೆಳಕಿಗೆ ಬಂದಾಗ ವಿಷಯ ತುಂಬಾ ಗಂಭೀರವಾಯಿತು. ಕಳೆದ ಶುಕ್ರವಾರ ಕಿಂಗ್ ಕೌಂಟಿ ಸುಪೀರಿಯರ್ ನ್ಯಾಯಾಲಯದಲ್ಲಿ ಇತ್ಯರ್ಥ ಅರ್ಜಿ ಸಲ್ಲಿಸಲಾಗಿದೆ. ಕುಟುಂಬದ ವಕೀಲರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಗರ ಅಟಾರ್ನಿ ಎರಿಕಾ ಇವಾನ್ಸ್ ಮಾತನಾಡಿ, ಜಾಹ್ನವಿ ಕಂದುಲಾ ಅವರ ಸಾವು ಹೃದಯವಿದ್ರಾವಕವಾಗಿತ್ತು. ಈ ಆರ್ಥಿಕ ಇತ್ಯರ್ಥವು ಕಂದುಲಾ ಕುಟುಂಬಕ್ಕೆ ಸ್ವಲ್ಪ ಸಾಂತ್ವನ ನೀಡುತ್ತದೆ ಎಂದು ನಂಬಿದ್ದೇವೆಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 2:53 pm, Thu, 12 February 26

Source link

ಕೆನಡಾದಲ್ಲಿ ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ – Kannada News | Chandans Father Mourns Sons Murder in Canada, Watches Last Rites via Mobile

ನೆಲಮಂಗಲ, ಫೆಬ್ರವರಿ 12: ಕೆನಡಾದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಬದುಕು ಕಟ್ಟಿಕೊಂಡಿದ್ದ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್, ಎರಡು ದಿನಗಳ ಹಿಂದೆ ದುಷ್ಕರ್ಮಿಗಳ ಶೂಟೌಟ್‌ಗೆ ಬಲಿ ಆಗಿದ್ದಾರೆ. ಚಂದನ್ ತಂದೆ ತಮ್ಮ ಮಗನ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಕೆನಡಾಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಕೆನಡಾದ ಲೋಟಸ್‌ನಲ್ಲಿ ನಡೆದ ಅಂತಿಮ ದರ್ಶನವನ್ನು ಮೊಬೈಲ್ ವಿಡಿಯೋ ಮೂಲಕ ನೋಡಿ ತಂದೆ ಕಣ್ಣೀರಿಟ್ಟಿದ್ದಾರೆ. ಈ ಹೃದಯ ವಿದ್ರಾವಕ ಘಟನೆ ಕುಟುಂಬಕ್ಕೆ ಅತೀವ ನೋವು ತಂದಿದೆ. ಏರ್ ಲಿಫ್ಟ್ ಮೂಲಕ ಇನ್ನೆರಡು ದಿನದಲ್ಲಿ ಪಾರ್ಥೀವ ಶರೀರ ಬೆಂಗಳೂರಿಗೆ ಬರಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IND vs NAM: ಇಂದು ಅಭಿಷೇಕ್ ಶರ್ಮಾ ಕಣಕ್ಕಿಳಿಯುತ್ತಾರಾ?

Source link

ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ: ಅಧಿಕಾರಿಗಳಿಂದ 11 ಕಡೆ ಶೋಧ – Kannada News | Disproportionate Assets Probe: Lokayukta Conducts Raids on PWD Chief Engineer Purushottam

ಬೆಂಗಳೂರು, ಫೆ.12: ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ಕೆ-ಶಿಪ್ ವಿಭಾಗದ ಮುಖ್ಯ ಇಂಜಿನಿಯರ್ ಪುರುಷೋತ್ತಮ್ ದಾಸ್ ಹೆಗಡೆ ಅವರಿಗೆ ಸಂಬಂಧಿಸಿದ ಬೆಂಗಳೂರು ಮತ್ತು ಮೈಸೂರಿನ ಒಟ್ಟು 11 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಈ ತನಿಖೆಯನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನ ಎರಡು ಸ್ಥಳಗಳು ಮತ್ತು ಮೈಸೂರಿನ ಐದಾರು ಸ್ಥಳಗಳು ಸೇರಿದಂತೆ ಒಟ್ಟು 11 ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಪುರುಷೋತ್ತಮ್ ದಾಸ್ ಹೆಗಡೆ ಅವರು ತಮ್ಮ ಆದಾಯದ ಮೂಲಗಳಿಗೆ ತಕ್ಕಂತೆ ಆಸ್ತಿಯನ್ನು ಹೊಂದಿಲ್ಲ ಎಂಬುದು ಕಂಡುಬಂದಿದೆ. ದಾಳಿಯ ವೇಳೆ, ನಗದು, ಚಿನ್ನಾಭರಣ, ಬ್ಯಾಂಕ್ ಬ್ಯಾಲೆನ್ಸ್ ಸೇರಿದಂತೆ ಚರ ಮತ್ತು ಸ್ಥಿರ ಆಸ್ತಿಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಇದರಲ್ಲಿ ಸೈಟ್‌ಗಳು, ಮನೆಗಳು, ಯೋಜನೆಗಳು, ವಿವಿಧ ಕಂಪನಿಗಳಲ್ಲಿನ ಹೂಡಿಕೆಗಳು, ಮತ್ತು ಎರಡು ಶಾಲೆಗಳನ್ನು ಒಳಗೊಂಡಿರುವ ಟ್ರಸ್ಟ್‌ಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಸಂಪೂರ್ಣ ತನಿಖೆಯ ನಂತರ ವಿವರವಾದ ವರದಿಯನ್ನು ಸಲ್ಲಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗುರುತೇ ಸಿಗದಷ್ಟು ಬದಲಾದ ‘ಮಿಲನ’ ಸಿನಿಮಾ ನಟಿ ಪಾರ್ವತಿ

Source link

ಹೆಣದ ಮೇಲೂ ಹಣ: ಪೆದ್ದರಂತೆ ಫೋನ್​ಪೇನಲ್ಲೇ ಲಂಚ ಪಡೆದು ಸಿಕ್ಕಿಬಿದ್ದ ಮೂವರು ಸಿಬ್ಬಂದಿ ವಜಾ – Kannada News | KIMS Hubballi Staff Sacked for Taking Money from Patients’ Families After TV Report

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆImage Credit source: tv9

ಹುಬ್ಬಳ್ಳಿ, ಫೆಬ್ರವರಿ 12: ಉತ್ತರ ಕರ್ನಾಟಕದ ಬಡವರ ಸಂಜೀವನಿ ಎಂದೇ ಖ್ಯಾತಿ ಪಡೆದಿರುವ ಹುಬ್ಬಳ್ಳಿ ಕಿಮ್ಸ್ (KIMS Hospital) ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಅವರ ಕುಟುಂಬದವರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದಲ್ಲಿ ಮೂವರು ಸಿಬ್ಬಂದಿಯ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗಿದೆ. ‘ಟಿವಿ9’ ವರದಿ ಮಾಡಿದ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಹಣ ಪಡೆದ ಮೂವರು ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಯಾಗಿದ್ದರೂ, ಕೆಲ ಸ್ವಚ್ಛತಾ ಹಾಗೂ ಡಿ-ಗ್ರೂಪ್ ಸಿಬ್ಬಂದಿ ರೋಗಿಗಳು ಮತ್ತು ಕುಟುಂಬದವರಿಂದ ಪ್ರತಿ ಕೆಲಸಕ್ಕೂ ಹಣ ಕೇಳುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ರೋಗಿಯನ್ನು ಸ್ಟ್ರೆಚರ್‌ನಲ್ಲಿ ಕರೆದೊಯ್ಯುವುದು, ವಾರ್ಡ್ ಬದಲಾವಣೆ ಮಾಡುವುದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟವರ ಶವವನ್ನು ಸಾಗಾಟ ಮಾಡುವುದು ಸೇರಿದಂತೆ ಪ್ರತಿಯೊಂದು ಹಂತದಲ್ಲೂ ಹಣ ವಸೂಲಿ ಮಾಡುತ್ತಿದ್ದರೆಂಬ ಆರೋಪ ಕೇಳಿಬಂದಿತ್ತು.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಆಶಾಳ ಅಡವಿಬಾವಿ ಗ್ರಾಮದ 52 ವರ್ಷದ ಗದ್ದೆಮ್ಮ ಎಂಬ ಮಹಿಳೆ ಪಿತ್ತಕೋಶದ ಸಮಸ್ಯೆಯಿಂದ ಜನವರಿ 31ರಂದು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಶನಿವಾರ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಬುಧವಾರ ನಸುಕಿನ ಜಾವ ಮೃತಪಟ್ಟಿದ್ದರು.

ಮೃತದೇಹ ಪ್ಯಾಕ್ ಮಾಡಿ ವಾಹನಕ್ಕೆ ಸಾಗಿಸಲು ಲಂಚ ಪಡೆದಿದ್ದ ಸಿಬ್ಬಂದಿ

ಮೃತದೇಹವನ್ನು ಪ್ಯಾಕ್ ಮಾಡಿ ವಾಹನಕ್ಕೆ ಸಾಗಿಸಲು ಡಿ-ಗ್ರೂಪ್ ಸಿಬ್ಬಂದಿ 500 ರೂ. ಹಣ ಕೇಳಿದರೆಂದು ಕುಟುಂಬದವರು ಆರೋಪಿಸಿದ್ದರು. ಹಣ ಇಲ್ಲವೆಂದು ಹೇಳಿದರೂ ಬಿಡದೇ ಪೀಡಿಸಿ, ಕೊನೆಗೆ 200 ರೂ. ಫೋನ್‌ಪೇ ಮೂಲಕ ಪಡೆದಿದ್ದರು. ನಂತರ ಶವವನ್ನು ವಾಹನಕ್ಕೆ ಹಾಕಿದ ಮೇಲೂ ಮತ್ತೆ ಹಣಕ್ಕಾಗಿ ಒತ್ತಾಯಿಸಿದ್ದರು ಎನ್ನಲಾಗಿದೆ.

ಈ ಬಗ್ಗೆ ‘ಟಿವಿ9’ ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಕಿಮ್ಸ್ ನಿರ್ದೇಶಕರಿಗೆ ಕರೆ ಮಾಡಿ ವರದಿ ಕೇಳಿದ್ದರು. ಕಿಮ್ಸ್ ಆಡಳಿತ ಎಚ್ಚೆತ್ತುಕೊಂಡು ತನಿಖಾ ತಂಡವನ್ನು ರಚಿಸಿತು.

ಫೊನ್ ಪೇ ಮೂಲಕ ಲಂಚ ಪಡೆದು ಸಿಕ್ಕಾಕೊಂಡ್ರು!

ಹಣ ವಸೂಲಿ ಮಾಡಿದವರು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಅವರನ್ನು ವಿಚಾರಣೆ ನಡೆಸಿದಾಗ, ಮೂವರು ಸಿಬ್ಬಂದಿ ಹಣ ಪಡೆದಿರುವುದನ್ನು ಒಪ್ಪಿಕೊಂಡಿದ್ದಾರೆ. ಫೋನ್‌ಪೇ ಮೂಲಕ ಹಣ ಪಡೆದಿರುವ ಸಾಕ್ಷಿಗಳೂ ದೊರೆತ ಹಿನ್ನೆಲೆ ಮೂವರನ್ನು ತಕ್ಷಣವೇ ಕಿಮ್ಸ್ ಸೇವೆಯಿಂದ ವಜಾ ಮಾಡಲಾಗಿದೆ.

ಏಜೆನ್ಸಿಗಳಿಗೂ ಖಡಕ್ ಸೂಚನೆ

ಕಾರ್ಮಿಕರನ್ನು ಪೂರೈಕೆ ಮಾಡುವ ಏಜೆನ್ಸಿಗಳಿಗೆ ಸಹ ಕಠಿಣ ಸೂಚನೆ ನೀಡಲಾಗಿದೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ. ಈ ಕುರಿತು ‘ಟಿವಿ9’ ಜೊತೆ ಮಾತನಾಡಿದ ಕಿಮ್ಸ್ ನಿರ್ದೇಶಕ ಡಾ. ಈಶ್ವರ್ ಹೊಸಮನಿ, ‘ಕಿಮ್ಸ್‌ನಲ್ಲಿ ರೋಗಿಗಳು ಮತ್ತು ಅವರ ಕುಟುಂಬದವರಿಂದ ಹಣ ವಸೂಲಿ ಮಾಡುವುದನ್ನು ಯಾವ ಕಾರಣಕ್ಕೂ ಸಹಿಸಲಾಗುವುದಿಲ್ಲ. ಇಂತಹ ಪ್ರಕರಣಗಳು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಕಿಮ್ಸ್​​ನಲ್ಲಿ ಹೆಣದ ಮೇಲೂ ಹಣ ಮಾಡ್ತಿರೋ ಸಿಬ್ಬಂದಿ!: ವ್ಯಾಪಕ ಆಕ್ರೋಶ

ಬಡವರು ಮತ್ತು ಮಧ್ಯಮ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆಗಾಗಿ ಬರುವ ಕಿಮ್ಸ್ ಆಸ್ಪತ್ರೆಯಲ್ಲಿ ಈ ರೀತಿಯ ಘಟನೆಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆಸ್ಪತ್ರೆಯ ಪ್ರತಿಷ್ಠೆಗೆ ಕಪ್ಪು ಮಸಿ ಬಳಿಯುವಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ಅಗತ್ಯವಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಫ್ಘಾನ್ ಪಡೆಯ ‘ಸೂಪರ್’ ವಿಶ್ವ ದಾಖಲೆ

Source link