All posts by nagaraj11081993

ಬೆಂಗಳೂರಿನಲ್ಲಿ ವಿನಾ ಕಾರಣ ಬೈಕ್ ತಡೆದು ಹಣ ವಸೂಲಿ: ಮೂವರು ಪೊಲೀಸರು ಸಸ್ಪೆಂಡ್

ಬೆಂಗಳೂರಿನಲ್ಲಿ ವಿನಾ ಕಾರಣ ಬೈಕ್ ತಡೆದು ಹಣ ವಸೂಲಿ:  ಮೂವರು ಪೊಲೀಸರು ಸಸ್ಪೆಂಡ್

ಬೆಂಗಳೂರು, (ಮಾರ್ಚ್ 30): ಸ್ಮಾರ್ಟ್‌ ಟ್ರಾಫಿಕ್‌ ನಿರ್ವಹಣಾ ವ್ಯವಸ್ಥೆ ಜಾರಿಗೆ ಕಾನೂನು ಸುವ್ಯವಸ್ಥೆ ಹಾಗೂ ಮೇಲ್ವಿಚಾರಣೆ ದೃಷ್ಟಿಯಿಂದ ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿ ಬಾಡಿ ಕ್ಯಾಮೆರಾ (body worn camera) ಬಳಸುವುದು ಕಡ್ಡಾಯವಾಗಿದೆ. ಆದ್ರೆ, ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲಿಸ್ ಠಾಣೆಯ (Bengaluru High Grounds Traffic Police Station) ಮೂವರು ಸಿಬ್ಬಂದಿ ಬಾಡಿ ಕ್ಯಾಮೆರಾ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್ ನಿಲ್ಲಿಸಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದ್ದು, ಸಂಬಂಧ ಇದೀಗ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಹೈ ಗ್ರೌಂಡ್ ಸಂಚಾರಿ ಪೊಲೀಸ್ ಠಾಣೆಯ ಎಎಸ್ ಐ ಸುರೇಶ್ ,ಕಾನ್ಸ್ ಟೇಬಲ್ ಗಳಾದ ಪ್ರಶಾಂತ್ ಹಾಗೂ ಸಾದಿಕ್ ಅವರನ್ನ ಸಸ್ಪೆಂಡ್ ಮಾಡಿ ಪಶ್ಚಿಮ ವಿಭಾಗ ಸಂಚಾರಿ ಡಿಸಿಪಿ ಅನೂಪ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ.

ಏನಿದು ಪ್ರಕರಣ?

ಹೈ ಗ್ರೌಂಡ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಲಂಚ ಪಡೆದ ಆರೋಪ, ಕರ್ತವ್ಯ ಲೋಪ , ಬಾಡಿ ವಾರ್ನ್ ಕ್ಯಾಮೆರಾ ಆಪ್ ಮಾಡಿ ಕೆಲಸ ನಿರ್ವಹಣೆ ಹಾಗೂ ವಿನಾ ಕಾರಣ ಬೈಕ್ ತಡೆದು ಹಣ ವಸೂಲಿ ಮಾಡಿದ್ದ ಆರೋಪ. ಹೀಗೆ ಹಲವು ಆರೋಪಗಳು ಕೇಳಿಬಂದಿದ್ದವು.

ವಾಹನಗಳನ್ನು ತಡೆದು ಹಣ ವಸೂಲಿ ಮಾಡುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಇಲಾಖೆಯು ಆಂತರಿಕ ತನಿಖೆ ನಡೆಸಿತ್ತು. ತನಿಖೆಯ ವೇಳೆ ಈ ಮೂವರು ಸಿಬ್ಬಂದಿಗಳು ಕರ್ತವ್ಯ ಲೋಪ ಎಸಗಿರುವುದು ಮತ್ತು ಲಂಚ ಪಡೆದಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಶಿಸ್ತು ಕ್ರಮವಾಗಿ ಮೂವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಪಶ್ಚಿಮ ವಿಭಾಗ ಸಂಚಾರಿ ಡಿಸಿಪಿ ಅನೂಪ್ ಶೆಟ್ಟಿ ಇಂದು (ಮಾರ್ಚ್ 30) ಆದೇಶಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ: ಚಿನ್ನ, ಮುದ್ದು, ಬಂಗಾರಿ ಎಂದವನಿಂದಲೇ ಕೊಲೆ ಬೆದರಿಕೆ!

ಪೊಲೀಸರಿಗೆ ಬಾಡಿ ಕ್ಯಾಮೆರಾ ಕಡ್ಡಾಯ

ಬಾಡಿ ಕ್ಯಾಮರಾ ಅಳವಡಿಸಿಕೊಳ್ಳುವುದರಿಂದ ಪೊಲೀಸ್‌ ಸಿಬ್ಬಂದಿ ಎಸಗುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬಹುದು. ಸಿಬ್ಬಂದಿ ಕಾರ್ಯವೈಖರಿಯನ್ನು ಸಂಬಂಧಪಟ್ಟ ಠಾಣೆಗಳಿಂದಲೇ ಗಮನಿಸಿ ಮೇಲ್ವಿಚಾರಣೆ ನಡೆಸಬಹುದು. ಇದಲ್ಲದೆ, ಬಾಡಿ ಕ್ಯಾಮರಾ ಧರಿಸುವುದರಿಂದ ಪೊಲೀಸರ ಮೇಲೆ ಹಲ್ಲೆ ನಡೆಸುವವರಿಗೂ ಭಯ ಹುಟ್ಟುವುದರ ಜತೆಗೆ, ಪೊಲೀಸರಿಗೂ ರಕ್ಷಣೆ ಸಿಕ್ಕಂತಾಗುತ್ತದೆ. ಆದ್ದರಿಂದ ಸರ್ಕಾರ ಬಾಡಿ ಕ್ಯಾಮೆರಾ ಖರೀದಿಸಿ ಪೊಲೀಸರಿಗೆ ನೀಡಿ ಕಡ್ಡಾಯವಾಗಿ ಧರಿಸುವಂತೆ ಆದೇಶಿಸಿದೆ.ಆದ್ರೆ, ಕೆಲವರು  ಬಾಡಿ ಕ್ಯಾಮೆರಾವನ್ನು ಆಫ್ ಮಾಡಿಕೊಂಡು ಕಳ್ಳಾಟದಲ್ಲಿ ತೊಡಿಸಿಕೊಳ್ಳುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

3 ವರ್ಷಗಳಲ್ಲಿ 666 ಪೊಲೀಸರು ಸಸ್ಪೆಂಡ್

ಕರ್ತವ್ಯ ಲೋಪ, ನಿರ್ಲಕ್ಷ್ಯ, ದುರ್ನಡತೆ, ಸಂತ್ರಸ್ತರಿಂದ ಹಣ ಪಡೆದಿರುವುದು ಸೇರಿದಂತೆ ವಿವಿಧ ಅಪರಾಧವೆಸಗಿದ ಆರೋಪದಡಿ ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ 666 ಮಂದಿ ಪೊಲೀಸರು ಅಮಾನತುಗೊಂಡಿದ್ದಾರೆ. 2023ರಲ್ಲಿ 188, 2024ರಲ್ಲಿ 242 ಹಾಗೂ 2025ರಲ್ಲಿ 236 ಮಂದಿ ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ. ಬೆದರಿಕೆ, ಹಲ್ಲೆ, ಲಂಚ, ಆರೋಪಗಳು ಸೇರಿದಂತೆ ವಿವಿಧ ಅಪರಾಧಗಳಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿಯ ವಿರುದ್ಧ 88 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ನೀಡಿದ ಅಂಕಿ-ಅಂಶಗಳಿಂದ ಬಹಿರಂಗಗೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಣ್ಣ ವೈವಾಹಿಕ ಜಗಳಗಳು ಅಪರಾಧವಲ್ಲ: ಅತ್ತೆ-ಮಾವ, ನಾದಿನಿ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು, ಮಾರ್ಚ್​​ 30: ಸಣ್ಣಪುಟ್ಟ ವೈವಾಹಿಕ ಜಗಳಗಳನ್ನು ಅಪರಾಧದ ಮಟ್ಟಕ್ಕೇರಿಸಲಾಗದು ಎಂದು ಕರ್ನಾಟಕ ಹೈಕೋರ್ಟ್‌ (High Court) ಮಹತ್ವದ ತೀರ್ಪು ಪ್ರಕಟಿಸಿದೆ. ಆ ಮೂಲಕ 2018ರಲ್ಲಿ ಕೋರ್ಟ್​ ಮೇಟ್ಟಿಲೇರಿದ್ದ ಮೈಸೂರಿನ ಅತ್ತೆ, ಮಾವ ಮತ್ತು ನಾದಿನಿ ವಿರುದ್ಧದ 498ಎ ಕೇಸ್​​ ಅನ್ನು ರದ್ದುಪಡಿಸಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಸೋಮವಾರ ಆದೇಶ ಹೊರಡಿಸಿದೆ.

ಅತ್ತೆ, ಮಾವ ಹಾಗೂ ನಾದಿನಿ ವಿರುದ್ಧದ ವಿಚಾರಣಾಧೀನ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣದ ವಿಚಾರಣೆಯನ್ನು ರದ್ದುಗೊಳಿಸಬೇಕೆಂದು ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯನ್ನು ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿ ವಿಚಾರಣೆಯನ್ನು ರದ್ದುಗೊಳಿಸಿದೆ.

ಇದನ್ನೂ ಓದಿ: ಪುರುಷರಿಗಿಂತ ದುರ್ಬಲರೆಂದು ಭಾವಿಸುತ್ತಾರೆ: ಋತುಚಕ್ರ ರಜೆ ಆದೇಶ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಮಹಿಳೆಯರು

ಮದುವೆಗೆ ಮುಂಚೆ ವಧು, ವರರ ಮನೆಯವರ ನಡುವೆ ವರದಕ್ಷಿಣೆ ಅಥವಾ ಮದುವೆಯ ಖರ್ಚುಗಳ ಕುರಿತು ನಡೆದ ಮಾತುಕತೆಯನ್ನಷ್ಟೇ ಆಧಾರವನ್ನಾಗಿಟ್ಟುಕೊಂಡು ಮದುವೆಯ ನಂತರ ಅತ್ತೆ, ಮಾವ ಮತ್ತು ನಾದಿನಿ ಕ್ರೌರ್ಯ ಎಸಗಿದ್ದಾರೆ ಎಂಬ ಆರೋಪವನ್ನು ಕಾನೂನಿನ ಪ್ರಕಾರ ವರದಕ್ಷಿಣೆ ಕಿರುಕುಳ ಎಂದು ಪರಿಗಣಿಸಲು ಸಾಧ್ಯವಿಲ್ಲ. ಇಂತಹ ಆರೋಪಗಳನ್ನು ಮಾನ್ಯಗೊಳಿಸಲು ಮದುವೆಯ ನಂತರ ನಡೆದ ನಿಜವಾದ ಕಿರುಕುಳ, ಹಣ ಅಥವಾ ಆಸ್ತಿ ಕುರಿತ ಬೇಡಿಕೆ, ಒತ್ತಡ ಅಥವಾ ಹಿಂಸೆ ಎಂಬುದಕ್ಕೆ ಸ್ಪಷ್ಟವಾದ ಸಾಕ್ಷ್ಯಗಳಿರಬೇಕು ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.

ದೂರಿನಲ್ಲಿ, ಆರೋಪಪಟ್ಟಿಯಲ್ಲಿ ನಿಖರವಾದ ಸಾಕ್ಷ್ಯಗಳಿಲ್ಲ. ಸಾಮಾನ್ಯ ಜಗಳಗಳು, ದೂಷಣೆಗಳನ್ನು ಅಪರಾಧದ ಮಟ್ಟಕ್ಕೇರಿಸಲಾಗದು. ವೈವಾಹಿಕ ವಿವಾದದಲ್ಲಿ ಅತ್ತೆ, ಮಾವ, ನಾದಿಯನ್ನು ಎಳೆಯಲಾಗಿದೆ. ಪ್ರಕರಣ ಮುಂದುವರಿಯಲು ಬಿಟ್ಟರೆ ಕಾನೂನಿನ ದುರುಪಯೋಗವಾಗಲಿದೆ ಎಂದಿರುವ ಪೀಠ ಈ ಪ್ರಕರಣವನ್ನು ರದ್ದುಪಡಿಸಿದೆ.

ಪ್ರಕರಣದ ಹಿನ್ನೆಲೆ

ಮೈಸೂರಿನ ಗೋಕುಲಂ ನಿವಾಸಿ ತೇಜಸ್​ನೊಂದಿಗೆ ವಿವಾಹ ಬೆಂಗಳೂರಿನ ವಧುವಿನೊಂದಿಗೆ 2018ರಲ್ಲಿ ಐಟಿಸಿ ಗಾರ್ಡೇನಿಯಾದಲ್ಲಿ ನಿಶ್ಚಿತಾರ್ಥ ಮತ್ತು ಲಲಿತಮಹಲ್​ನಲ್ಲಿ ಮದುವೆ ಮಾಡಲಾಗಿತ್ತು. ವಿವಾಹವಾದ 19 ದಿನಗಳಲ್ಲಿ ಉದ್ಯೋಗಿ ಪತಿ ಅಮೆರಿಕಕ್ಕೆ ಹಾರಿದ್ದ. ಪತಿಯಿಂದ ಮಾನಸಿಕ ಹಿಂಸೆ, ಅತ್ತೆ, ಮಾವ, ನಾದಿನಿಯಿಂದ ಕಿರುಕುಳ ಆರೋಪಿಸಿ ಪತ್ನಿ ಆರೇ ತಿಂಗಳಲ್ಲಿ ಪತಿ ಮನೆ ತೊರೆದಿದ್ದರು. ಬಳಿಕ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಿರುಗಾಳಿಗೆ ಮಂಟಪವನ್ನೇ ಹಾರದಂತೆ ತಡೆದವನು, ಇನ್ನು ಪತ್ನಿ ಕೈ ಬಿಡುವನೇ!

ಅಂದು ರಾತ್ರಿ ಹೊತ್ತು, ಎಲ್ಲರೂ ಮದುವೆಯ ಸಿದ್ಧತೆಯಲ್ಲಿ ನಿರತರಾಗಿದ್ದರು. ಮದುವೆಯ ವಿಧಿ ವಿಧಾನಗಳು ಒಂದೊಂದಾಗಿ ನಡೆಯುತ್ತಿತ್ತು. ಸಣ್ಣದಾಗಿ ಆರಂಭವಾದ ಗಾಳಿ ಒಂದೇ ಬಾರಿಗೆ ರೌದ್ರ ರೂಪ ತಾಳಿತ್ತು. ವರ ಮಂಟಪದಲ್ಲಿರುವಾಗಲೇ ಗಾಳಿ ಮಂಟಪವನ್ನೂ ಎಳೆದುಕೊಂಡು ಹೋಗುವಷ್ಟು ರಭಸವಾಗಿತ್ತು. ಆಗ ಒಂದೆಡೆ ಸಂಬಂಧಿಕರು ಇನ್ನೊಂದೆಡೆ ತಾನು ಮಂಟಪದ ಕಂಬಗಳನ್ನು ಕಟ್ಟಿಯಾಗಿ ಹಿಡಿದುಕೊಂಡು ಗಾಳಿಯಲ್ಲಿ ಹಾರದಂತೆ ತಡೆದಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋವನ್ನು ನೋಡಿ ಜನ ಮಂಟಪವನ್ನೇ ಹಾರಲು ಬಿಡದವನು ಪತ್ನಿ ಕೈ ಬಿಡುವುದುಂಟೇ ಎಂದಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಹಸುಗೂಸಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ತಾಯಿ ಸಾವು: ಮಹಿಳಾ ಉದ್ಯೋಗಿ ಸಾವಿನ ಸುತ್ತ ಅನುಮಾನದ ಹುತ್ತ

ರಾಯಚೂರು, ಮಾರ್ಚ್​ 30: ಮಗುವಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ಅನುಮಾನಾಸ್ಪದವಾಗಿ ತಾಯಿ ಹೆಣವಾಗಿ (death) ಪತ್ತೆಯಾದ ಘಟನೆ ನಗರದ ಐಬಿ ಕಾಲೋನಿಯಲ್ಲಿ ನಡೆದಿದೆ. ವಿದ್ಯಾ (30) ಮೃತ ತಾಯಿ. ಗಂಡ ಮಂಜುನಾಥ್, ಅತ್ತೆ ಕವಿತಾ ನೇಣುಬಿಗಿದು ಕೊಲೆಗೈದಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ರಾಯಚೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಡಿವೈಎಸ್​ಪಿ ಶಾಂತವೀರ್ ನೇತೃತ್ವದಲ್ಲಿ ತನಿಖೆ ನಡೆದಿದೆ.

ನಡೆದಿದ್ದೇನು?

ಕಳೆದ ಎರದು ವರ್ಷಗಳ ಹಿಂದೆ ವಿದ್ಯಾ ಮತ್ತು ಮಂಜುನಾಥ್​ ವಿವಾಹವಾಗಿದೆ. ದಂಪತಿಗೆ 11 ತಿಂಗಳ ಮಗು ಕೂಡ ಇದೆ. ನಗರದ ಉಪ ವಿಜ್ಞಾನ ಕೇಂದ್ರದಲ್ಲಿ ವಿದ್ಯಾ ಕಾರ್ಯನಿರ್ವಹಿಸುತ್ತಿದ್ದರು. ಮದುವೆ ಆದಾಗಿನಿಂದ ವರದಕ್ಷಿಣೆಗಾಗಿ ಗಂಡ ಮತ್ತು ಅತ್ತೆ ಪೀಡಿಸುತ್ತಿದ್ದರು. 30 ಗ್ರಾಂ ಚಿನ್ನಾಭರಣ, ಅರ್ಧ ಕೆಜಿ ಬೆಳ್ಳಿ ಆಭರಣವನ್ನ ವಿದ್ಯಾ ಕುಟುಂಬ ವರದಕ್ಷಿಣೆಯಾಗಿ ನೀಡಿದ್ದರು.

ಇದನ್ನೂ ಓದಿ: ಜಗದ್ಗುರು ಶಿವಾನಂದ ಮಠ ಕಟ್ಟಿದ್ದ ಶಿಕ್ಷಕ ಕಮ್ ಸ್ವಾಮೀಜಿ ಆತ್ಮಹತ್ಯೆ, ಕಾರಣ ನಿಗೂಢ

ನಿನ್ನೆ ಸಂಜೆ ಪತಿ ಮಂಜುನಾಥ್ ಕಂಠಪೂರ್ತಿ ಕುಡಿದು ಬಂದು ವಿದ್ಯಾಳನ್ನ ಕೆಲಸದಿಂದ ಕರೆತಂದಿದ್ದ. ಆ ಬಳಿಕ ಮನೆಯಲ್ಲಿ 11 ತಿಂಗಳ ಹಸುಗೂಸಿಗೆ ಹಾಲುಣಿಸಿದ ವಿದ್ಯಾ, ಇದೇ ವೇಳೆ ಗಂಡನ ಕುಡಿತದ ಬಗ್ಗೆ ಅತ್ತೆಗೆ ಹೇಳಿ ಬೇಸರ ವ್ಯಕ್ತಪಡಿಸಿದ್ದಾರೆ. ಇದಾದ ಕೆಲಹೊತ್ತಲ್ಲೇ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾ ಮೃತದೇಹ ಪತ್ತೆ ಆಗಿದೆ. ಗಂಡ ಮತ್ತು ಅತ್ತೆಯೇ ನೇಣುಬಿಗಿದು ಕೊಲೆಗೈದಿರುವುದಾಗಿ ಆರೋಪ ಕೇಳಿಬಂದಿದೆ. ಸದ್ಯ ಮಂಜುನಾಥ್ ಮತ್ತು ಕವಿತಾ ವಿರುದ್ಧ ದೂರು ದಾಖಲಾಗಿದೆ.

ಖಾಸಗಿ ಆಸ್ಪತ್ರೆ ಮೇಲಿಂದ ಬಿದ್ದು ಬಾಣಂತಿ ಸಾವು

ಖಾಸಗಿ ಆಸ್ಪತ್ರೆಯ 3ನೇ ಮಹಡಿ ಮೇಲಿಂದ ಬಿದ್ದು ಬಾಣಂತಿ ಸಾವನ್ನಪ್ಪಿರುವಂತಹ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಇದೇ ಮಾರ್ಚ್ 26ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಾನ್ವಿ ಪಟ್ಟಣದ ಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಿಂದ ಬಿದ್ದು ಐದು ದಿನದ ಬಾಣಂತಿ ವಾಸವಿ (22) ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮೂರು ಭೀಕರ ರಸ್ತೆ ಅಪಘಾತ: ಆರು ಬಂದಿ ಸಾವು

ಬಾಣಂತಿ ವಾಸವಿ ಐದು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದರು. ಅನಾರೋಗ್ಯಕ್ಕೆ ಒಳಗಾದ ಮಗುವಿಗೆ ಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಣಂತಿ ಸಾವಿಗೂ ಮುನ್ನ ಮಹಡಿ ಹತ್ತುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬೆಂಗಳೂರು ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ

ಬೆಂಗಳೂರು, ಮಾರ್ಚ್​​ 30: ನಗರದ ಹೋಟೆಲ್‌ಗಳಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆಯು ತೀವ್ರ ಆತಂಕ ಸೃಷ್ಟಿಸಿದೆ. ಈ ನಡುವೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಗುಡ್​​ ನ್ಯೂಸ್​​ ನೀಡಿದ್ದು, ನಾಳೆ ನಗರದ ಹೋಟೆಲ್‌ಗಳಿಗೆ 17,500 ಹೆಚ್ಚುವರಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಿಸಲಾಗುವುದು ಎಂದು ಘೋಷಿಸಿದ್ದಾರೆ. ಈ ಆದೇಶದ ಅನ್ವಯ, ಇಂದು ವಿತರಕರಿಗೆ ಸಿಲಿಂಡರ್‌ಗಳು ತಲುಪಲಿದ್ದು, ನಾಳೆಯಿಂದ ಹೋಟೆಲ್ ಮಾಲೀಕರಿಗೆ ವಿತರಣೆ ಆರಂಭವಾಗಲಿದೆ. ಈ ಪ್ರಕ್ರಿಯೆಯು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಆದರೆ ಹೋಟೆಲ್ ಮಾಲೀಕರ ಆತಂಕ ನಾಳೆಯಿಂದ ಬಗೆಹರಿಯಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ದೇಶೀಯ ಸಿಲಿಂಡರ್‌ಗಳ ವಿತರಣೆಯಲ್ಲೂ ವಿಳಂಬವಾಗುತ್ತಿದ್ದು, ಗ್ರಾಹಕರು ವಿನಾಕಾರಣ ಡಿಸ್ಟ್ರಿಬ್ಯೂಟರ್‌ಗಳ ಕಚೇರಿಗೆ ಹೋಗಬಾರದು. 25 ದಿನಗಳ ನಂತರ ಬುಕ್ ಮಾಡಿದರೆ ಸಿಲಿಂಡರ್ ಲಭ್ಯವಾಗುತ್ತದೆ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಇದು 45 ದಿನಗಳಿಗೆ ಅನ್ವಯಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಧುರಂಧರ್ 2’ ಬಗ್ಗೆ ಶಾರುಖ್ ಖಾನ್​ ಮೌನ: ಆದರೂ ರಣವೀರ್ ಸಿಂಗ್ ಜೊತೆ ಪಾರ್ಟಿ

ಬಾಲಿವುಡ್ ಅಂಗಳದಲ್ಲಿ ಈಗ ಎಲ್ಲಿ ನೋಡಿದರೂ ನಟ ರಣವೀರ್ ಸಿಂಗ್ (Ranveer Singh) ಅವರದ್ದೇ ಹವಾ. ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಚಿತ್ರದ ಭರ್ಜರಿ ಯಶಸ್ಸಿನಿಂದ ರಣವೀರ್ ಸಿಂಗ್ ಅವರು ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ. ಆದರೆ, ಈ ಯಶಸ್ಸಿನ ನಡುವೆಯೂ ಒಂದು ಸಣ್ಣ ಅಸಮಾಧಾನ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಅದೇನೆಂದರೆ, ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅವರು ರಣವೀರ್ ಅವರ ಈ ದೊಡ್ಡ ಸಾಧನೆಯ ಬಗ್ಗೆ ಯಾಕೆ ಮೌನವಾಗಿದ್ದಾರೆ ಎಂಬುದು. ಈಗ ಆ ಎಲ್ಲಾ ಪ್ರಶ್ನೆಗಳಿಗೆ ಮತ್ತು ಅಭಿಮಾನಿಗಳ ವದಂತಿಗಳಿಗೆ ಒಂದು ಫೋಟೋ ಉತ್ತರ ನೀಡಿದೆ.

ಇತ್ತೀಚೆಗೆ ಖ್ಯಾತ ಉದ್ಯಮಿ ಮೋಹಿತ್ ಕಾಂಬೋಜ್ ಅವರ ಪುತ್ರಿ ಮಿಷ್ಕಾ ಕಾಂಬೋಜ್ ಅವರ ಅದ್ದೂರಿ ಹುಟ್ಟುಹಬ್ಬದ ಪಾರ್ಟಿ ಮುಂಬೈನಲ್ಲಿ ನಡೆಯಿತು. ಈ ಸಂಭ್ರಮಕ್ಕೆ ಸಂಜಯ್ ದತ್, ರಣವೀರ್ ಸಿಂಗ್, ಶಾರುಖ್ ಖಾನ್ ಸೇರಿದಂತೆ ಬಾಲಿವುಡ್‌ನ ಘಟಾನುಘಟಿಗಳು ಹಾಜರಾಗಿದ್ದರು. ಈ ಪಾರ್ಟಿಯ ಹಲವು ವಿಡಿಯೋ ಮತ್ತು ಫೋಟೋಗಳು ಈಗ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಸದ್ಯ ಇಂಟರ್ನೆಟ್‌ನಲ್ಲಿ ಸಖತ್ ಸದ್ದು ಮಾಡುತ್ತಿರುವುದು ಶಾರುಖ್ ಖಾನ್ ಮತ್ತು ರಣವೀರ್ ಸಿಂಗ್ ಒಟ್ಟಿಗೆ ಇರುವ ಫೋಟೋ. ಈ ಫೋಟೋದಲ್ಲಿ ಇಬ್ಬರೂ ನಟರು ನಗುಮೊಗದಿಂದ ಪೋಸ್ ನೀಡಿದ್ದು, ಅವರ ಜೊತೆಗೆ ನಟಿ ಶಿಲ್ಪಾ ಶೆಟ್ಟಿ ಕೂಡ ಕಾಣಿಸಿಕೊಂಡಿದ್ದಾರೆ. ಫೋಟೋ ನೋಡಿದ ಅಭಿಮಾನಿಗಳು, ‘ಇಬ್ಬರ ನಡುವೆ ಯಾವುದೇ ಅಸಮಾಧಾನವಿಲ್ಲ. ಕಿಂಗ್ ಖಾನ್ ಯಾವಾಗಲೂ ರಣವೀರ್ ಅವರನ್ನು ಬೆಂಬಲಿಸುತ್ತಾರೆ’ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

‘ಧುರಂಧರ್ 2’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆಯುತ್ತಿದ್ದರೂ ಕೂಡ ಶಾರುಖ್ ಖಾನ್, ಸಲ್ಮಾನ್ ಖಾನ್ ಅಥವಾ ಆಮೀರ್ ಖಾನ್ ಅವರು ಬಹಿರಂಗವಾಗಿ ಚಿತ್ರದ ಬಗ್ಗೆ ಪೋಸ್ಟ್ ಮಾಡಿಲ್ಲ ಎಂದು ನೆಟ್ಟಿಗರು ಟೀಕಿಸುತ್ತಿದ್ದರು. ಅವರಿಗೆ ರಣವೀರ್ ಸಿಂಗ್ ಬಗ್ಗೆ ಏನಾದರೂ ಅಸಮಾಧಾನ ಇರಬಹುದಾ ಎಂಬ ಅನುಮಾನ ಮೂಡಿತ್ತು. ಆದರೆ, ಈ ವೈರಲ್ ಫೋಟೋದಿಂದಾಗಿ ಎಲ್ಲ ಅನುಮಾನಕ್ಕೆ ತೆರೆಬಿದ್ದಿದೆ.

ಇದನ್ನೂ ಓದಿ: ‘ಶಾರುಖ್ ಖಾನ್ ಬಳಿ ನಾನು ಲಂಚ ಕೇಳಿಲ್ಲ’: ಬಾಂಬೆ ಹೈಕೋರ್ಟ್‌ನಲ್ಲಿ ಸಮೀರ್ ವಾಂಖೆಡೆ ವಾದ

‘ಧುರಂಧರ್ 2’ ಚಿತ್ರವು ವಿಶ್ವಾದ್ಯಂತ 1300 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿದೆ. ಈ ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಇದನ್ನು ಬಿಜೆಪಿ ಪರವಾದ ಪ್ರೊಪಗಾಂಡ ಸಿನಿಮಾ ಎಂದು ಟೀಕಿಸಿದ್ದಾರೆ. ಆದರೆ ರಿಷಬ್ ಶೆಟ್ಟಿ, ರಜನಿಕಾಂತ್, ಶಿವರಾಜ್​ಕುಮಾರ್ ಮುಂತಾದ ಸೆಲೆಬ್ರಿಟಿಗಳು ಈ ಚಿತ್ರವನ್ನು ಹೊಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಏಪ್ರಿಲ್ 1ರಿಂದ ಚೀನೀ ಸಿಸಿಟಿವಿ ಕ್ಯಾಮರಾಗಳಿಗೆ ನಿರ್ಬಂಧ; ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಈ ಕ್ರಮ

ನವದೆಹಲಿ, ಮಾರ್ಚ್ 30: ಪ್ರಮಾಣೀಕೃತವಲ್ಲದ ಸಿಸಿಟಿವಿ ಕ್ಯಾಮರಾಗಳ ಮಾರಾಟವನ್ನು ಭಾರತ ಏಪ್ರಿಲ್ 1ರಿಂದ ನಿರ್ಬಂಧಿಸಿದೆ. ಇದರೊಂದಿಗೆ ಚೀನೀ ಮೂಲದ ಸಿಸಿ ಕ್ಯಾಮರಾಗಳಿಗೆ (Chinese origin CCTV cameras) ಭಾರತದಲ್ಲಿ ಮಾರಾಟ ಸಾಧ್ಯವಾಗದೇ ಹೋಗಬಹುದು. ಭಾರತದ ಮಾರುಕಟ್ಟೆಯಲ್ಲಿ ಉಪಸ್ಥಿತಿ ಹೊಂದಿರುವ ಹೈಕ್​ವಿಶನ್ (HikVision), ಡಹುವಾ ಟೆಕ್ನಾಲಜಿ (Dahua Technology), ಟಿಪಿ ಲಿಂಕ್ (TP-Link) ಇತ್ಯಾದಿ ಚೀನೀ ಬ್ರ್ಯಾಂಡ್ ಈ ಕ್ರಮದಿಂದ ಭಾರತದ ಸ್ಥಳೀಯ ಸಿಸಿಟಿವಿ ಕ್ಯಾಮರಾ ಉದ್ಯಮಕ್ಕೆ ಪುಷ್ಟಿ ಸಿಗುವ ನಿರೀಕ್ಷೆ ಇದೆ.

ಸಿಸಿಟಿವಿ ಕ್ಯಾಮರಾದಲ್ಲಿ ಹೇಗೆ ನಿರ್ಬಂಧ?

ಸರ್ಕಾರವು ಸಿಸಿಟಿವಿ ಕ್ಯಾಮರಾ ಸಿಸ್ಟಂಗಳಿಗೆ ಹೊಸ ಸರ್ಟಿಫಿಕೇಶನ್ ನೀತಿ ರೂಪಿಸಿದೆ. ಅಂದರೆ, ಸರ್ಟಿಫೈಡ್ ಕ್ಯಾಮೆರಾಗಳಿಗೆ ಮಾತ್ರ ಮಾರುಕಟ್ಟೆಯಲ್ಲಿ ಪ್ರವೇಶ ಸಿಗುತ್ತದೆ. ಚೀನಾ ನಿರ್ಮಿತ ಚಿಪ್​ಸೆಟ್​ಗಳನ್ನು ಬಳಸಿ ತಯಾರಿಸಲಾಗುವ ಸಿಸಿಟಿವಿ ಸಾಧನಗಳಿಗೆ ಸರ್ಟಿಫಿಕೇಶನ್ ಸಿಗುವ ಸಾಧ್ಯತೆ ಇಲ್ಲ. ಹೀಗಾಗಿ, ಚೀನಾ ಮೂಲದ ಸಿಸಿಟಿವಿ ಕ್ಯಾಮರಾ ಮತ್ತು ಸೆಕ್ಯೂರಿಟಿ ಸಿಸ್ಟಂಗಳು ಭಾರತದಲ್ಲಿ ನಿರ್ಬಂಧಿತಗೊಳ್ಳಲಿವೆ.

ಇದನ್ನೂ ಓದಿ: ಯುಪಿಐ ವಹಿವಾಟು ಸೇರಿದಂತೆ ವಿವಿಧ ಬ್ಯಾಂಕುಗಳ ಎಟಿಎಂ ಟ್ರಾನ್ಸಾಕ್ಷನ್ ನಿಯಮಗಳಲ್ಲಿ ಬದಲಾವಣೆ, ಗಮನಿಸಿ

ಚೀನಾ ಸಿಸ್ಟಂಗಳ ಮೇಲೆ ಯಾಕೆ ಕ್ರಮ?

ಚೀನಾ ಮಾತ್ರವೇ ಅಲ್ಲ, ಯಾವುದೇ ವಿದೇಶೀ ನಿರ್ಮಿತ ಚಿಪ್​ಸೆಟ್ ಇತ್ಯಾದಿ ಬಳಸಿ ತಯಾರಾಗುವ ಸೆಕ್ಯೂರಿಟಿ ಸಿಸ್ಟಂಗಳಿಗೆ ಸರ್ಟಿಫಿಕೇಶನ್ ಸಿಗುವುದಿಲ್ಲ. ಸಿಸಿಟಿವಿ ಕ್ಯಾಮರಾಗಳು ಭದ್ರತಾ ದೃಷ್ಟಿಯಿಂದ ಬಹಳ ಮುಖ್ಯವಾದ ಸಾಧನಗಳಾಗಿವೆ. ಏರ್​ಪೋರ್ಟ್, ಸರ್ಕಾರಿ ಕಚೇರಿ ಇತ್ಯಾದಿ ಬಹಳ ಸೂಕ್ಷ್ಮ ಸ್ಥಳಗಳಲ್ಲಿ ಅಳವಡಿಸುವ ಕ್ಯಾಮೆರಾಗಳು ತುಂಬಾ ಮುಖ್ಯವಾದ ದತ್ತಾಂಶವನ್ನು ಸೆರೆಹಿಡಿಯಬಲ್ಲುದು.

ಈ ಉಪಕರಣಗಳು ವಿದೇಶೀ ಮೂಲದ್ದಾಗಿದ್ದರೆ ಸೂಕ್ಷ್ಮ ಮಾಹಿತಿಯು ವಿದೇಶಗಳಿಗೆ ರವಾನೆಯಾಗುವ ಅಪಾಯ ಹೆಚ್ಚಿರುತ್ತದೆ. ಇದರಿಂದ ರಾಷ್ಟ್ರೀಯ ಭದ್ರತೆಗೆ ಬಹಳ ಅಪಾಯ ಇರುತ್ತದೆ.

ಇದನ್ನೂ ಓದಿ: ಹೆಚ್ಚು ನಾಮಿನಿಗಳು, ಸೊನ್ನೆ ಲೋನ್ ಪ್ರೀಪೇಮೆಂಟ್ ಚಾರ್ಜ್; ಜನಸಾಮಾನ್ಯರು ಗಮನಿಸಬೇಕಾದ ಹೊಸ ನಿಯಮಗಳಿವು

ಸರ್ಕಾರ ಈ ಹಿಂದೆಯೇ ಪ್ರಮಾಣೀಕೃತ ಪರೀಕ್ಷೆ ಮತ್ತು ಗುಣಮಟ್ಟ ಪ್ರಮಾಣ ವ್ಯವಸ್ಥೆಯನ್ನು ಜಾರಿಗೆ ತಂದಿತ್ತು. ಈ ಪ್ರಮಾಣಪತ್ರ ಪಡೆಯಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಲು ಉದ್ಯಮಕ್ಕೆ ಎರಡು ವರ್ಷ ಕಾಲಾವಕಾಶ ಕೊಡಲಾಗಿತ್ತು. ಸಿಸಿಟಿವಿ ತಯಾರಕರು ಚಿಪ್​ಸೆಟ್ ಇತ್ಯಾದಿ ಪ್ರಮುಖ ಬಿಡಿಭಾಗಗಳು ಯಾವ ದೇಶದಿಂದ ಬಂದಿರುವಂಥವು ಎಂಬುದನ್ನು ಬಹಿರಂಗಪಡಿಸಬೇಕು; ಪ್ರಮಾಣಿತ ಲ್ಯಾಬ್​ಗಳಲ್ಲಿ ಈ ಸಾಧನಗಳ ಪರೀಕ್ಷೆಯಾಗಬೇಕು. ದೂರದಿಂದಲೇ ಇದನ್ನು ಅನಧಿಕೃತವಾಗಿ ನಿಭಾಯಿಸಲ್ಪಡುತ್ತಿಲ್ಲ ಎಂಬುದು ಪರೀಕ್ಷೆಯಲ್ಲಿ ಸಾಬೀತಾಗಬೇಕು. ಇವೇ ಮುಂತಾದ ಮಾನದಂಡಗಳು ಸಿಸಿಟಿವಿ ಉತ್ಪನ್ನಗಳಿಗೆ ಇವೆ.

ಹೊಸ ನಿಯಮಗಳ ಅಡಿಯಲ್ಲಿ ಇಲ್ಲಿಯವರೆಗೆ ಸರ್ಕಾರವು 507 ಸಿಸಿಟಿವಿ ಕ್ಯಾಮರಾ ಮಾಡಲ್​ಗಳಿಗೆ ಸರ್ಟಿಫಿಕೇಶನ್ ನೀಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ ಎಂದಿದ್ಯಾಕೆ ಶ್ರೀರಾಮುಲು?

ಬಾಗಲಕೋಟೆ, (ಮಾರ್ಚ್ 30): ಕಾಂಗ್ರೆಸ್​​ನ  (Congress) ಎಚ್​​ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Bagalkot By Election) ಇದೇ ಏಪ್ರಿಲ್ 9ರಂದು ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​​ನ ನಾಯಕರಿಂದ ಭರ್ಜರಿ ಮತಬೇಟೆ ನಡೆದಿದೆ. ಇನ್ನು ಇಂದಿನಿಂದ (ಮಾರ್ಚ್ 30) ಸಿಎಂ ಸಿದ್ದರಾಮಯ್ಯ ಸಹ ಪ್ರಚಾರಕ್ಕಿಳಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಕ್ಯಾಂಪೇನ್ ನಡೆಸಿದ್ದಾರೆ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಶ್ರೀರಾಮುಲು ಸಹ ಪ್ರಚಾರ ನಡೆಸಿದ್ದು, ಈ ವೇಳೆ ಟಿವಿ9 ಜತೆ ಮಾತನಾಡಿದ ರಾಮುಲು, ಸಿದ್ದರಾಮಯ್ಯ ಬಾದಾಮಿ ಶಾಸಕರಾಗಿದ್ದಾಗ ಅಭಿವೃದ್ಧಿ ಮಾಡಿಲ್ಲ. ಆಗ ಕಳ್ಳ ಮತಗಳಿಂದ ನನ್ನ ವಿರುದ್ಧ ಗೆದ್ದಿದ್ದರು. ಈ ವೇಳೆ ಸಿ.ಎಂ.ಇಬ್ರಾಹಿಂ ಅವರೇ ಹೇಳಿದ್ದಾರೆ.ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ. ಹೀಗಾಗಿ 5 ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ.ಸಿದ್ದರಾಮಯ್ಯ ಪ್ರಚಾರ ಮಾಡಿದರೂ ಕಾಂಗ್ರೆಸ್​ ಗೆಲ್ಲುವುದಿಲ್ಲ. ಇಡೀ ಸಚಿವ ಸಂಪುಟ ಸಮೇತ ಬಂದರೂ ಬಿಜೆಪಿ ಗೆಲುವು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಥಾರ್ ಚಕ್ರದ ಅಡಿಯಲ್ಲಿ ಸಿಲುಕಿದ ಕರು; ಸಮಯಪ್ರಜ್ಞೆ ಮೆರೆದು ಜೀವ ಉಳಿಸಿದ ಕಾರು ಮಾಲೀಕ!

ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಪ್ಪು ಬಣ್ಣದ ಮಹೀಂದ್ರಾ ಥಾರ್ (Thar) ಎಸ್‌ಯುವಿಯ ಮುಂಭಾಗದ ಚಕ್ರದ ಅಡಿಯಲ್ಲಿ ಪುಟ್ಟ ಕರುವೊಂದು ಆಕಸ್ಮಿಕವಾಗಿ ಸಿಲುಕಿಕೊಂಡಿತ್ತು. ತನ್ನ ಕರು ಅಪಾಯದಲ್ಲಿರುವುದನ್ನು ಕಂಡ ತಾಯಿ ಹಸು ಗಾಬರಿಗೊಂಡು, ಕಾರಿನ ಮೇಲೆರಗಲು ಪ್ರಯತ್ನಿಸುತ್ತಿತ್ತು. ಕರುವಿನ ರಕ್ಷಣೆಗಾಗಿ ಹಸು ಕಾರನ್ನು ತನ್ನ ಕೊಂಬಿನಿಂದ ಎತ್ತಲು ಪ್ರಯತ್ನಿಸುತ್ತಿದ್ದ ದೃಶ್ಯ ವಿಡಿಯೋದಲ್ಲಿದೆ.ತಕ್ಷಣವೇ ಸ್ಥಳಕ್ಕೆ ಬಂದ ಕಾರಿನ ಮಾಲೀಕರು ಮತ್ತು ಸ್ಥಳೀಯರು ಹಸುವನ್ನು ಸಮಾಧಾನಪಡಿಸಲು ಯತ್ನಿಸಿದರು. ನಂತರ ಅತ್ಯಂತ ಎಚ್ಚರಿಕೆಯಿಂದ ಕಾರಿನ ಮುಂಭಾಗವನ್ನು ಜ್ಯಾಕ್ (Jack) ಬಳಸಿ ಮೇಲಕ್ಕೆತ್ತಿ, ಅಡಿಯಲ್ಲಿ ಸಿಲುಕಿದ್ದ ಕರುವನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಚಕ್ರದ ಅಡಿಯಿಂದ ಹೊರಬಂದ ತಕ್ಷಣ ಕರು ಓಡಿ ಹೋಗಿ ತನ್ನ ತಾಯಿಯನ್ನು ಸೇರಿಕೊಂಡಿತು. ಈ ಅಪರೂಪದ ಪುನರ್ಮಿಲನವನ್ನು ಕಂಡು ನೆರೆದಿದ್ದ ಜನರು ಹರ್ಷ ವ್ಯಕ್ತಪಡಿಸಿದರು. ಸಕಾಲದಲ್ಲಿ ಸ್ಪಂದಿಸಿ ಮೂಕಪ್ರಾಣಿಯ ಜೀವ ಉಳಿಸಿದ ಕಾರಿನ ಮಾಲೀಕನ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆಯ ಸುರಿಮಳೆಗರೆಯುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

6 ತಿಂಗಳಲ್ಲಿ ನಾಲ್ಕನೇ ಐಷರಾಮಿ ಕಾರು ಖರೀದಿಸಿದ ಹಾರ್ದಿಕ್ ಪಾಂಡ್ಯ

ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾಗೂ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ (Hardik Pandya) ಕಾರುಗಳ ಮೇಲಿನ ಮೋಹ ಎಂತಹದ್ದು ಎಂಬುದು ಎಲ್ಲರಿಗೂ ತಿಳಿದಿರುವಂತದ್ದೇ. ಪಾಂಡ್ಯ ಗ್ಯಾರೆಜ್​ನಲ್ಲಿ ಹಲವು ದುಬಾರಿ ಕಾರುಗಳ ಸಂಗ್ರಹವಿದೆ. ಇದೀಗ ಅವುಗಳ ಪಟ್ಟಿಗೆ ಮತ್ತೊಂದು ದುಬಾರಿ ಕಾರು ಸೇರ್ಪಡೆಗೊಂಡಿದೆ. ಈ ಮೂಲಕ ಹಾರ್ದಿಕ್ ಪಾಂಡ್ಯ ಕೇವಲ ಆರು ತಿಂಗಳಲ್ಲಿ ನಾಲ್ಕನೇ ಐಷಾರಾಮಿ ಕಾರನ್ನು ಖರೀದಿಸಿದಂತ್ತಾಗಿದೆ. ಈ ಬಾರಿ ಇತ್ತೀಚೆಗೆ ಬಿಡುಗಡೆಯಾದ ಕಾರನ್ನು ಖರೀದಿಸಿರುವ ಹಾರ್ದಿಕ್, ತಮ್ಮ ಗೆಳತಿ ಮಹಿಕಾ ಅವರೊಂದಿಗೆ ಕಾರಿನ ಮುಂದೆ ನಿಂತ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಹೊಸ ಕಾರು ಖರೀದಿಸಿದ ಹಾರ್ದಿಕ್ ಪಾಂಡ್ಯ

ಹಾರ್ದಿಕ್ ಪಾಂಡ್ಯ ಹೊಸ ಜನರೇಷನ್​ನ​ ಮರ್ಸಿಡಿಸ್-ಬೆನ್ಜ್ ವಿ-ಕ್ಲಾಸ್ ಕಾರನ್ನು ಖರೀದಿಸಿದ್ದಾರೆ. ಈ ಮೂಲಕ ಈ ಕಾರನ್ನು ಖರೀದಿಸಿದ ಭಾರತದ ಮೊದಲ ವ್ಯಕ್ತಿ ಎನಿಸಿಕೊಂಡಿದ್ದಾರೆ. ಈ ಐಷಾರಾಮಿ MPV (ಬಹುಪಯೋಗಿ ವಾಹನ) ಕಾರಿಗೆನ ಬೆಲೆ ಸುಮಾರು ₹1.4 ಕೋಟಿ ರೂ. ಎನ್ನಲಾಗುತ್ತಿದೆ. ಆರಾಮದಾಯಕ ಕುಟುಂಬ ಪ್ರಯಾಣ ಮತ್ತು ಪ್ರೀಮಿಯಂ ಐಷಾರಾಮಿಗೆ ಹೆಸರುವಾಸಿಯಾದ ಇದು ವಿಶಾಲವಾದ ಒಳಾಂಗಣ, ಉನ್ನತ-ಮಟ್ಟದ ವೈಶಿಷ್ಟ್ಯಗಳು ಮತ್ತು ಸಾಟಿಯಿಲ್ಲದ ಸೌಕರ್ಯವನ್ನು ಹೊಂದಿದೆ.

ಪಾಂಡ್ಯ ಬಳಿ ಇರುವ ಐಷರಾಮಿ ಕಾರುಗಳು

ಹಾರ್ದಿಕ್ ಪಾಂಡ್ಯ ಅವರ ಗ್ಯಾರೇಜ್ ಈಗಾಗಲೇ ಹಲವಾರು ದುಬಾರಿ ಕಾರುಗಳಿಂದ ತುಂಬಿದೆ. ಪಾಂಡ್ಯ ಇತ್ತೀಚೆಗೆ ಸುಮಾರು ₹4 ಕೋಟಿ ಮೌಲ್ಯದ ಲ್ಯಾಂಡ್ ರೋವರ್ ಡಿಫೆಂಡರ್ ಕಾರನ್ನು ಖರೀದಿಸಿ, ಅವರ ಮಗನಿಗೆ ಉಡುಗೊರೆಯಾಗಿ ನೀಡಿದ್ದರು. ಆ ಬಳಿಕ ಸುಮಾರು 12 ಕೋಟಿ ರೂ. ಮೌಲ್ಯದ ಫೆರಾರಿ 12-ಸಿಲಿಂಡರ್ ಕಾರನ್ನು ಪಾಂಡ್ಯ ಇತ್ತೀಚೆಗೆ ಖರೀದಿಸಿದ್ದರು. ಹಾಗೆಯೇ 4.5 ಕೋಟಿ ರೂ. ಮೌಲ್ಯದ ಲಂಬೋರ್ಘಿನಿ ಉರುಸ್ ಕಾರನ್ನು ಸಹ ಖರೀದಿಸಿದ್ದರು.

ಹೊಸ ಪ್ರೇಯಸಿಗಾಗಿ 10 ಕೋಟಿ ಬೆಲೆಯ ಕಾರು ಖರೀದಿಸಿದ ಹಾರ್ದಿಕ್ ಪಾಂಡ್ಯ

ಐಪಿಎಲ್​ನಲ್ಲಿ ಗೆಲುವಿನ ಆರಂಭ

ಇನ್ನು ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿರುವ ಹಾರ್ದಿಕ್ ಪಾಂಡ್ಯ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದ್ದಾರೆ.  ಮೊದಲ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಎದುರಿಸಿದ್ದ ಮುಂಬೈ, ಕೆಕೆಆರ್ ನೀಡಿದ್ದ 221 ರನ್​ಗಳ ಗುರಿಯನ್ನು ಕೊನೆಯ ಓವರ್​ನಲ್ಲಿ ಬೆನ್ನಟ್ಟಿ ಗೆಲುವು ಸಾಧಿಸಿತು. ಈ ಮೂಲಕ 2013 ರ ನಂತರ ಐಪಿಎಲ್​ನ ಮೊದಲ ಪಂದ್ಯದಲ್ಲಿ ಗೆದ್ದ ಸಾಧನೆಯನ್ನು ಮುಂಬೈ ತಂಡ ಮಾಡಿದೆ. ಹಾಗೆಯೇ 221 ರನ್​ಗಳ ಬೃಹತ್ ಮೊತ್ತ ಬೆನ್ನಟ್ಟಿದ ದಾಖಲೆ ಕೂಡ ಮುಂಬೈ ಪಾಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link