ಚಕ್ರವರ್ತಿ ಚಂದ್ರಚೂಡ್ ಅವರು ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿತ್ತು. ನಿರ್ಮಾಪಕರೇ ಹೀರೋಗಳಿಗೆ ಕಾಂಡಂ ಸಪ್ಲೈ ಮಾಡ್ತಾರೆ ಎಂದು ಹೇಳಿದ್ದರು. ‘ಈ ರೀತಿಯ ವಾಕ್ಯ ರಚನೆ ಆಗಬಾರದಿತ್ತು. ತಾಯಿ ಸ್ಥಾನದಲ್ಲಿ ಇರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’ ಎಂದು ಅವರು ಹೇಳಿದ್ದಾರೆ.
T20 World Cup 2026: ಟಿ20 ವಿಶ್ವಕಪ್ನ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ 2 ಬದಲಾವಣೆ ಮಾಡುವುದು ಬಹುತೇಕ ಖಚಿತ. ಏಕೆಂದರೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ ಈ ಮ್ಯಾಚ್ನಲ್ಲಿ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ. ಅತ್ತ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ನಿರೀಕ್ಷಿಸಬಹುದು.
ಅದರಂತೆ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಇನ್ನು ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಬ್ಯಾಟ್ ಬೀಸಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯಲಿದ್ದಾರೆ.
ಆರನೇ ಕ್ರಮಾಂಕದಲ್ಲಿ ರಿಂಕು ಸಿಂಗ್ ಆಡಿದ್ರೆ, ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಹಾಗೂ ಅಕ್ಷರ್ ಪಟೇಲ್ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯಲಿದ್ದಾರೆ. ಇನ್ನು ಜಸ್ಪ್ರೀತ್ ಬುಮ್ರಾ ಆಗಮನದಿಂದಾಗಿ ನಮೀಬಿಯ ವಿರುದ್ಧದ ಪಂದ್ಯದಿಂದ ಮೊಹಮ್ಮದ್ ಸಿರಾಜ್ ಹೊರಗುಳಿಯಬೇಕಾಗಿ ಬರಬಹುದು. ಇನ್ನುಳಿದಂತೆ ಅರ್ಷದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ಆಡುವ ಬಳಗದಲ್ಲಿ ಸ್ಥಾನ ಪಡೆಯಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ಭಾರತ ಮತ್ತು ನಮೀಬಿಯ ನಡುವಣ ಪಂದ್ಯವು ರಾತ್ರಿ 7 ಗಂಟೆಗೆ ಶುರುವಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದ ಟಾಸ್ ಪ್ರಕ್ರಿಯೆ 6.30 ಕ್ಕೆ ನಡೆಯಲಿದೆ. ಇನ್ನು ಈ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೂಪರ್-8 ಕ್ಕೇರುವುದು ಬಹುತೇಕ ಖಚಿತವಾಗಲಿದೆ.
ಏಕೆಂದರೆ ಭಾರತ ತಂಡವು ತನ್ನ ಮುಂದಿನ ಎರಡು ಪಂದ್ಯಗಳನ್ನು ಪಾಕಿಸ್ತಾನ್ ಹಾಗೂ ನೆದರ್ಲೆಂಡ್ಸ್ ವಿರುದ್ಧ ಆಡಲಿದ್ದು, ಈ ಎರಡೂ ಪಂದ್ಯಗಳಲ್ಲೂ ಟೀಮ್ ಇಂಡಿಯಾದ ಗೆಲುವನ್ನು ನಿರೀಕ್ಷಿಸಬಹುದು.
ಮಯೂರಿ (Mayuri) ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತುಂಬಾನೇ ಫೇಮಸ್ ಆದವರು. ‘ಅಗ್ನಿ ನಕ್ಷತ್ರ’ ಧಾರಾವಾಹಿ ಮಾಡಿದ ಅವರು ಸಾಕಷ್ಟು ಜನಪ್ರಿಯತೆ ಪಡೆದರು. ನಂತರ ಹಿರಿತೆರೆಗೆ ಕಾಲಿಟ್ಟರು. ಅಲ್ಲಿಯೂ ಜನಪ್ರಿಯತೆ ಸಿಕ್ಕಿತು. 2020ರಲ್ಲಿ ಅವರು ಮದುವೆ ಆದರು. ಆದರೆ, ಅವರ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ವರದಿ ಇದೆ. ಆದರೆ, ಈ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಹೇಳಿದ್ದಾರೆ.
ರಾಜೇಶ್ ಗೌಡ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ ಮಯೂರಿ. ‘ನಾನು ಸಿಟ್ಟು ಮಾಡಿಕೊಳ್ಳುವುದಿಲ್ಲ. ಏನೇ ನಡೆದರೂ ಹೀಲ್ ಮಾಡಿಕೊಂಡು ಮುಂದೆ ಸಾಗುತ್ತೇನೆ. ನನಗೆ ಕಣ್ಣೀರು ಇತ್ತೀಚೆಗೆ ಬರುತ್ತಿಲ್ಲ. ನನಗೆ ಯಾವುದರ ಮೇಲೂ ಅಟ್ಯಾಚ್ಮೆಂಟ್ ಇಲ್ಲ ಎಂದು ಹೇಳಲು ಸಾಧ್ಯವಿಲ್ಲ. ನನ್ನ ಸುತ್ತಲೂ ಒಂದು ಜೀವನ ಕಟ್ಟಿಕೊಂಡಿದ್ದೇನೆ. ನಾನು ಮಟೀರಿಯಲ್ ಲೈಫ್ ಜೊತೆ ಅಟ್ಯಾಚ್ ಆಗಿದ್ದೇನೆ. ಮಗ ಇದ್ದಾನೆ. ಅವನ ನೋಡಿಕೊಳ್ಳಬೇಕು’ ಎಂದಿದ್ದಾರೆ ಅವರು.
ಡಿವೋರ್ಸ್ ವಿಷಯದ ಬಗ್ಗೆ ಕೇಳಿದ್ದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಡಿವೋರ್ಸ್ ಬಗ್ಗೆ ಮಾತನಾಡಲ್ಲ. ನನಗೆ ಐದು ವರ್ಷದ ಮಗ ಇದ್ದಾನೆ. ಆರವ್ಗೆ (ಮಗ) ಒಳ್ಳೆ ತಾಯಿ ಇದಾಳೆ, ಅದು ನಾನು. ಒಳ್ಳೆಯ ಅಪ್ಪ ಇದ್ದಾನೆ. ಆರವ್ ಹಾಗೂ ಅವನ ತಂದೆ ಜೊತೆ ಒಳ್ಳೆಯ ಸಂಬಂಧ ಇದೆ. ಅದ್ಭುತ ಕುಟುಂಬ ಇದೆ’ ಎಂದು ಮಯೂರಿ ಹೇಳಿದ್ದಾರೆ.
‘ನನಗೆ ಡಿವೋರ್ಸ್ ಬಗ್ಗೆ ಮಾತನಾಡೋಕೆ ಇಷ್ಟ ಇಲ್ಲ. ನಾನು ಸ್ಟೇಟ್ಮೆಂಟ್ ಕೊಟ್ಟಿಲ್ಲ, ಕೊಡೋದೂ ಇಲ್ಲ. ಅದನ್ನು ನನ್ನ ಪರ್ಸ್ನಲ್. ನನಗೆ ಈ ಬಗ್ಗೆ ದಿನವೂ ಪ್ರಶ್ನೆ ಬರುತ್ತದೆ. ನಾನು ಮನುಷ್ಯ. ಸೋಶಿಯಲ್ ರೆಸ್ಪಾನ್ಸ್ ಇರುತ್ತದೆ. ಈಗ ಮಾತನಾಡಿಲ್ಲ, ಮುಂದೆಯೂ ಮಾತನಾಡುವುದಿಲ್ಲ. ನನ್ನ ಮಗನ ಬೆಳವಣಿಗೆ ಚೆನ್ನಾಗಿದೆ. ಆತ ಖುಷಿಯಿಂದ ಬೆಳೆಯಬೇಕು, ಬೆಳೆಯುತ್ತಿದ್ದಾನೆ’ ಎಂದು ಅವರು ಹೇಳಿದ್ದಾರೆ.
ವ್ಯಾಲೆಂಟೈನ್ ವೀಕ್‌ನ ಪ್ರತಿ ದಿನವೂ ಪ್ರೇಮಿಗಳಿಗೆ ತುಂಬಾನೇ ವಿಶೇಷವಾಗಿದೆ. ಈ ಪ್ರಣಯ ವಾರದ ಆರನೇ ದಿನ ಅಂದರೆ ಫೆಬ್ರವರಿ 12 ರಂದು ಹಗ್ ಡೇಯನ್ನು (Hug Day) ಆಚರಿಸಲಾಗುತ್ತದೆ. ಹೆಸರೇ ಸೂಚಿಸುವಂತೆ, ಈ ದಿನವು ವಿಶೇಷವಾಗಿ ಸಿಹಿ ಅಪ್ಪುಗೆಗೆ ಮೀಸಲಿಡಲಾಗಿದೆ. ಇದು ಪ್ರೀತಿ, ವಾತ್ಸಲ್ಯ ಮತ್ತು ಭಾವನಾತ್ಮಕ ಸಂಪರ್ಕ, ಸಂಬಂಧದಲ್ಲಿ ನಂಬಿಕೆಯನ್ನು ಬಲಪಡಿಸುತ್ತದೆ ಮತ್ತು ಸಂಗಾತಿಗಳ ನಡುವಿನ ಅಂತರವನ್ನು ಕಡಿಮೆ ಮಾಡಿ ಪ್ರೀತಿಯನ್ನು ಹೆಚ್ಚಿಸುತ್ತದೆ. ಅಲ್ಲದೆ ಈ ದಿನವು ಪ್ರೀತಿ, ವಾತ್ಸಲ್ಯ ಮತ್ತು ಅನ್ಯೋನ್ಯತೆಯನ್ನು ವ್ಯಕ್ತಪಡಿಸಲು ಇರುವಂತಹ ಒಂದು ಸುಂದರ ಸಂದರ್ಭವಾಗಿದ್ದು, ಈ ದಿನದ ಆಚರಣೆ ಪ್ರಾರಂಭವಾಗಿದ್ದು ಹೇಗೆ, ಇದರ ಮಹತ್ವವೇನು ಎಂಬುದನ್ನು ತಿಳಿಯೋಣ ಬನ್ನಿ.
ಹಗ್ ಡೇಯನ್ನು ಏಕೆ ಆಚರಿಸಲಾಗುತ್ತದೆ?
ಫೆಬ್ರವರಿ 12 ರಂದು ಹಗ್ ಡೇಯನ್ನು ಆಚರಿಸಲಾಗುತ್ತದೆ ಮತ್ತು ಪ್ರೀತಿ, ವಾತ್ಸಲ್ಯ ಮತ್ತು ಸ್ನೇಹದ ಮಹತ್ವವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಅಪ್ಪುಗೆಯು ಸಂಬಂಧಗಳನ್ನು ಗಾಢವಾಗಿಸುತ್ತದೆ ಮತ್ತು ಎಲ್ಲಾ ನೋವನ್ನು ಮರೆಸುತ್ತದೆ ಎಂಬುದನ್ನು ಹಾಗೂ ಸಂಬಂಧಗಳನ್ನು ಬಲಪಡಿಸುವಲ್ಲಿ ಮತ್ತು ಭಾವನೆಗಳನ್ನು ಬೆಳೆಸುವಲ್ಲಿ ದೈಹಿಕ ಸ್ಪರ್ಶದ ಮಹತ್ವವನ್ನು ಈ ದಿನ ನಮಗೆ ನೆನಪಿಸುತ್ತದೆ. ಈ ದಿನದಂದು ಜನರು ತಮ್ಮ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ.
ಹಗ್ ಡೇ ಯಾವಾಗ ಪ್ರಾರಂಭವಾಯಿತು, ಅದರ ಇತಿಹಾಸವೇನು?
ಹಗ್ ಡೇಗೆ ಸಂಬಂಧಿಸಿದಂತೆ ಸ್ಪಷ್ಟ ಇತಿಹಾಸವಿಲ್ಲದಿದ್ದರೂ, 1980 ರ ದಶಕದಲ್ಲಿ ಅಮೆರಿಕದಲ್ಲಿ ಹಗ್ ಡೇ ಆಚರಣೆ ಹುಟ್ಟಿಕೊಂಡಿತು ಮತ್ತು ಇದನ್ನು ಪ್ರೇಮಿಗಳ ವಾರದ ಭಾಗವಾಗಿ ಆಚರಿಸಲಾಯಿತು ಎಂದು ಹೇಳಲಾಗುತ್ತದೆ. ಜನರು ಭಾವನಾತ್ಮಕವಾಗಿ ಪರಸ್ಪರ ಸಂಪರ್ಕ ಸಾಧಿಸಲು ಅವಕಾಶವನ್ನು ಒದಗಿಸುವ ಒಂದು ಉಪಕ್ರಮವಾಗಿ ಇದನ್ನು ನೋಡಲಾಯಿತು. ಕ್ರಮೇಣ, ಈ ದಿನವು ವಿಶ್ವಾದ್ಯಂತ ಜನಪ್ರಿಯತೆಯನ್ನು ಗಳಿಸಿತು ಮತ್ತು ಈಗ ಪ್ರೀತಿ ಮತ್ತು ವಾತ್ಸಲ್ಯದ ಸಂಕೇತವಾಗಿದೆ.
ಅಪ್ಪುಗೆಯ ದಿನವು ಪ್ರತಿಯೊಬ್ಬರ ಜೀವನದಲ್ಲೂ ವಿಶೇಷ ಮಹತ್ವವನ್ನು ಹೊಂದಿದೆ ಏಕೆಂದರೆ ಅದು ಪ್ರೀತಿ ಮತ್ತು ಭಾವನಾತ್ಮಕ ಸಂಪರ್ಕವನ್ನು ಉತ್ತೇಜಿಸುತ್ತದೆ.
ಹಗ್ ಡೇ ಕೇವಲ ಒಂದು ಸಣ್ಣ ಆಚರಣೆಯಲ್ಲ, ಅದು ನಂಬಿಕೆ ಮತ್ತು ಭದ್ರತೆಯ ಸಂಕೇತವೂ ಆಗಿದೆ.
ಅಪ್ಪುಗೆಯ ದಿನ ಸರಳವಾಗಿ ಕಾಣಿಸಬಹುದು, ಆದರೆ ಅದರ ಮಹತ್ವ ಅಪಾರವಾಗಿದೆ. ಇದು ಪ್ರೀತಿ ಮತ್ತು ಸಂತೋಷದಿಂದ ಹಿಡಿದು ಸಾಂತ್ವನ ಮತ್ತು ಸಾಂತ್ವನದವರೆಗೆ ವಿವಿಧ ಭಾವನೆಗಳನ್ನು ವ್ಯಕ್ತಪಡಿಸುವ ಸರಳ ಕ್ರಿಯೆಯಾಗಿದೆ.
ಈ ದಿನದಂದು, ಜನರು ತಮ್ಮ ಪ್ರೀತಿಪಾತ್ರರ ಜೊತೆ ಸಮಯ ಕಳೆಯುತ್ತಾರೆ, ಅವರ ಸಂಬಂಧಗಳನ್ನು ಬಲಪಡಿಸುತ್ತಾರೆ
ಹಗ್ ಡೇ ಯಂದು ಪ್ರೇಮಿಗಳು ಪರಸ್ಪರ ಅಪ್ಪಿಕೊಳ್ಳುವ ಮೂಲಕ ತಮ್ಮ ಸಂಬಂಧಗಳನ್ನು ಬಲಪಡಿಸಲು ಶ್ರಮಿಸುತ್ತಾರೆ.
ಅಪ್ಪುಗೆ ಭಾವನಾತ್ಮಕ ಬಂಧವನ್ನು ಬಲಪಡಿಸುವುದು ಮಾತ್ರವಲ್ಲದೆ, ನಂಬಿಕೆಯನ್ನೂ ಬಲಪಡಿಸುತ್ತದೆ.
ಬಿಹಾರದಲ್ಲಿ ಮತ್ತೆ ಬಲವಂತದ ಮದುವೆ ಪದ್ಧತಿ ಮುನ್ನೆಲೆಗೆ ಬಂದಿದ್ದು, ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯೊಬ್ಬರನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯ ನಿವಾಸಿ, ಹೋಮ್ ಗಾರ್ಡ್ ಹುದ್ದೆಯ ಆಕಾಂಕ್ಷಿಯಾದ ಯುವಕ ದೈಹಿಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದರು. ಈ ವೇಳೆ ಕೆಲವು ವ್ಯಕ್ತಿಗಳು ಅವರನ್ನು ಅಪಹರಿಸಿದ್ದಾರೆ. ಅಪಹರಣಕಾರರು ಯುವಕನಿಗೆ ಮಾದಕ ದ್ರವ್ಯ ಬೆರೆಸಿದ ಪಾನೀಯವನ್ನು ನೀಡಿದ್ದರಿಂದ ಅವರು ಪ್ರಜ್ಞೆ ಕಳೆದುಕೊಂಡಿದ್ದರು ಎನ್ನಲಾಗಿದೆ. ಯುವಕನ ಹೇಳಿಕೆಯ ಪ್ರಕಾರ, ಅವರು ಕಣ್ಣು ಬಿಟ್ಟಾಗ ಮದುವೆ ಮಂಟಪದಲ್ಲಿದ್ದರು. ಮಾದಕ ದ್ರವ್ಯದ ಪ್ರಭಾವದಿಂದ ಅವರು ಅರೆ ಪ್ರಜ್ಞಾವಸ್ಥೆಯಲ್ಲಿದ್ದಾಗಲೇ, ಬೆದರಿಕೆ ಹಾಕಿ ಯುವತಿಯೊಬ್ಬಳ ಜೊತೆ ಮದುವೆ ವಿಧಿವಿಧಾನಗಳನ್ನು ಮಾಡಲಾಗಿದೆ. ನಾನು ಎಚ್ಚರಗೊಂಡಾಗ ಮದುವೆಯ ಕಾರ್ಯಗಳು ನಡೆಯುತ್ತಿದ್ದವು, ನನಗೆ ಏನಾಗುತ್ತಿದೆ ಎಂದು ಅರ್ಥವಾಗುವಷ್ಟರಲ್ಲಿ ಮದುವೆ ಮುಗಿದಿತ್ತು ಎಂದು ಹೇಳಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿImage Credit source: scroll.in
ಬೆಂಗಳೂರು, ಫೆಬ್ರವರಿ 11: ರಾಜ್ಯ ಸರ್ಕಾರವು ಕರ್ನಾಟಕ ಪಬ್ಲಿಕ್ ಸ್ಕೂಲ್ (KPS) ಮ್ಯಾಗ್ನೆಟ್ ಯೋಜನೆ ಜಾರಿಗೆ ಮುಂದಾಗಿದೆ. ಆ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುವುದು ಎಂಬ ಚರ್ಚೆಗಳು ನಡೆಯುತ್ತಿವೆ. ಸದ್ಯ ಈ ವಿಚಾರವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj S Bommai)
ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ. ಇದು ಕನ್ನಡ ಮತ್ತು ಕನ್ನಡ ಶಾಲೆಗಳ ವಿರೋಧಿಯಾಗಿದೆ. ಇದನ್ನು ಖಂಡಿಸುತ್ತೇನೆ, ಕನ್ನಡ ಶಾಲೆಗಳ ಪುನರಾರಂಭಕ್ಕೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಬೊಮ್ಮಾಯಿ
ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಮೇಲಿಂದ ಮೇಲೆ ಚುನಾವಣೆಯಲ್ಲಿ ಸೋಲುತ್ತಿರುವುದರಿಂದ ಅವರ ನಾಯಕ ಹತಾಶರಾಗಿದ್ದಾರೆ. ಹೀಗಾಗಿ ಸಂಸತ್ತಿನಲ್ಲಿ ಅವರು ನಗರ ನಕ್ಸಲರಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್
They have shut down 638 schools because Karnataka’s finances are in a precarious state. Unable to pay salaries, they are closing institutions. This is anti-Kannada education. I strongly condemn it and urge the government to restart these schools.
ಬೆಂಚ್ಗಳ ಮೇಲೆ ನಿಲ್ಲುವುದು, ಸ್ಪೀಕರ್ ಮೇಲೆ ದಾಳಿ ಮಾಡುವುದು ಇದು ಮಿತಿಮೀರಿದೆ. ಕಾಂಗ್ರೆಸ್ ಮಹಿಳಾ ಸಂಸದರು ಪ್ರಧಾನಮಂತ್ರಿಯ ಆಸನದವರೆಗೆ ಬಂದು ಅವರು ಬರುವುದನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ರೀತಿ ಸಂಸತ್ತಿನ ಇತಿಹಾಸದಲ್ಲಿ ಯಾವತ್ತೂ ಆಗಿರಲಿಲ್ಲ ಎಂದಿದ್ದಾರೆ.
ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕಲಾಪವನ್ನು ಸುಗಮವಾಗಿ ನಡೆಸಲು ಬಿಡುತ್ತಾರೆ ಎನ್ನುವ ನಂಬಿಕೆ ಇದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ಏನು ಮಾಡುತ್ತಾರೆ ಎನ್ನುವುದು ಗೊತ್ತಿಲ್ಲ. ಆದರೆ, ಅವರು ಜನರ ಸಮಸ್ಯೆಯ ಬಗ್ಗೆ ಮಾತನಾಡುವುದಿಲ್ಲ. ಅವರು ತೊಂದರೆ ಕೊಡುವುದನ್ನೇ ಅಜೆಂಡಾ ಮಾಡಿಕೊಂಡಿದ್ದಾರೆ. ಬಹುತೇಕ ಅದೇ ಆಗಬಹುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಸಿಎಂ ಕುರ್ಚಿ ಕದನ ಮತ್ತೆ ಮುನ್ನೆಲೆಗೆImage Credit source: Tv9 Kannada
ಬೆಂಗಳೂರು, ಫೆಬ್ರವರಿ 11: ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಫೈಟ್ ಮತ್ತೆ ಮುನ್ನೆಗೆ ಬಂದಿದ್ದು ಅತ್ತ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಹಾರಿದ್ದರೆ, ಇತ್ತ ಡಿ.ಕೆ. ಸುರೇಶ್ ಸಹೋದರನ ಪರ ಅಖಾಡಕ್ಕಿಳಿದಿದ್ದಾರೆ. ಕೊಟ್ಟ ಮಾತಿನ ವಿಚಾರವನ್ನು ಮತ್ತೆ ಪ್ರಸ್ತಾಪಿಸಿರುವ ಮಾಜಿ ಸಂಸದ, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಲ್ಪ ನಿಧಾನವಾದರೂ ಪರವಾಗಿಲ್ಲ ಕೊಟ್ಟ ಮಾತನ್ನು ಉಳಿಸಿಕೊಳ್ತಾರೆ. ಆ ಬಗ್ಗೆ ನನಗೆ ಈಗಲೂ ಭರವಸೆ ಇದೆ ಎಂದಿದ್ದಾರೆ.
ಡಿಕೆಶಿ ಪರ ಸಹೋದರನ ಬ್ಯಾಟಿಂಗ್
ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎಂದು ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಹೇಳಿಕೆ ಸಂಬಂಧವೂ ವ್ಯಂಗ್ಯವಾಡಿರುವ ಸುರೇಶ್, ಅವರು ಹೇಳಿದ ಮೇಲೆ ಅದೇ ವೇದ ವಾಕ್ಯ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲ ಶಾಸಕರಿಗೆ ಡಿಕೆಶಿ ವಿದೇಶ ಪ್ರವಾಸ ಆಯೋಜಿಸಿದ್ದಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ವಿದೇಶ ಪ್ರವಾಸಕ್ಕೂ ಡಿ.ಕೆ.ಶಿವಕುಮಾರ್ಗೂ ಸಂಬಂಧವಿಲ್ಲ. ಯಾರು ವಿದೇಶ ಪ್ರವಾಸ ಹೋಗ್ತಿದ್ದಾರೆ ಅವರನ್ನೇ ನೀವು ಕೇಳಬೇಕು ಎಂದು ಸ್ಪಷ್ಟಪಡಿಸಿದ್ದಾರೆ.
ನಿಗಮ ಮಂಡಳಿಯಲ್ಲಿ ಬಿಜೆಪಿ ಮುಖಂಡನಿಗೆ ಸ್ಥಾನ ನೀಡಿದ ವಿಚಾರವಾಗಿಯೂ ಸರ್ಕಾರದ ವಿರುದ್ಧ ಡಿ.ಕೆ.ಸುರೇಶ್ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಎಲ್ಲರನ್ನೂ ಗೌರವಿಸುತ್ತದೆ ಅಂತಾಯ್ತಲ್ಲ. ರಾಜ್ಯ ಸರ್ಕಾರ ಎಲ್ಲರನ್ನೂ ಕೂಡ ಜೊತೆಗೆ ಕರೆದೊಯ್ಯಬೇಕು. ಕಾಂಗ್ರೆಸ್ ಪಕ್ಷದ್ದು ಸರ್ವಧರ್ಮ ಪಾಲಿಸಿ ಅಲ್ವಾ? ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲರೂ ನಮ್ಮ ಪಕ್ಷದಲ್ಲೇ ಇದ್ದಾರೆ. ಹೀಗಾಗಿ ಎಲ್ಲ ವಿಚಾರದಲ್ಲೂ ಹೊರಗಿನಿಂದ ಬಂದ ಅತಿಥಿಗಳಿಗೆ ಮೊದಲ ಆದ್ಯತೆ ನೀಡುತ್ತೇವೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಎರಡನೇ ಆದ್ಯತೆ ನೀಡಲಾಗುವುದು ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕರ ನಡೆ ಬಗ್ಗೆ ಕಿಡಿ ಕಾರಿದ್ದಾರೆ.
ಬೆಂಗಳೂರು, ಫೆಬ್ರವರಿ 11: ನಾಯಕತ್ವ ಗೊಂದಲದ ಕುರಿತು ಪದೇ ಪದೇ ಕೇಳಿಬರುತ್ತಿರುವ ಪ್ರಶ್ನೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳಿದಾಗ ಸಿಎಂ ಸಿಟ್ಟಾದ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆಯಿತು. ಕಳೆದ ಮೂರು ತಿಂಗಳಿಂದಲೂ ಇದೇ ವಿಷಯವನ್ನು ಪದೇ ಪದೇ ಕೇಳಲಾಗುತ್ತಿದೆ. ದಯವಿಟ್ಟು ಇದನ್ನು ಪುನರಾವೃತ್ತಿ ಮಾಡಬೇಡಿ ಎಂದು ಮುಖ್ಯಮಂತ್ರಿಗಳು ಗರಂ ಆಗಿಯೇ ಹೇಳಿದರು.
ಶಾಸಕರ ವಿದೇಶ ಪ್ರವಾಸದ ವಿಷಯ ಪ್ರಸ್ತಾಪಿಸಿದಾಗ, ತಮ್ಮ ಗಮನಕ್ಕೆ ಬಂದಿಲ್ಲ, ಅದು ವೈಯಕ್ತಿಕ ಖರ್ಚಿನಲ್ಲಿದ್ದರೆ ವಿವಾದ ಏಕೆ ಎಂದು ಪ್ರಶ್ನಿಸಿದರು. ಆದರೆ, ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಯಿಂದ ಅವರು ಸಿಡಿಮಿಡಿಗೊಂಡರು.
‘ನಾನು ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಪಕ್ಷದ ಹೈಕಮಾಂಡ್‌ನ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ, ಅದನ್ನು ನಾವು ತಪ್ಪದೆ ಪಾಲಿಸುತ್ತೇವೆ. ಇದು ಸಂಪೂರ್ಣವಾಗಿ ಹೈಕಮಾಂಡ್ಗೆ ಬಿಟ್ಟ ವಿಚಾರ’ ಎಂದು ಸಿದ್ದರಾಮಯ್ಯ ಹೇಳಿದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಲು ಇನ್ನೂ ಕೆಲ ದಿನಗಳವರೆಗೆ ಕಾಯಬೇಕಾಗಿ ಬರಬಹುದು. ಏಕೆಂದರೆ ಆರ್ಸಿಬಿ ಫ್ರಾಂಚೈಸಿ ಬೆಂಗಳೂರಿನಿಂದ ಹೊರ ನಡೆಯಲು ತೆರೆಮರೆಯ ಪ್ರಯತ್ನ ಮುಂದುವರೆಸಿದ್ದಾರೆ.
ಅದರಂತೆ ಐಪಿಎಲ್ 2026ರ ಸೀಸನ್ಗಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತನ್ನ ತವರು ಮೈದಾನವಾಗಿ ಬಳಸಿಕೊಳ್ಳಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲ್ಯಾನ್ ರೂಪಿಸಿತ್ತು. ಆದರೆ ಆರ್ಸಿಬಿಯ ಈ ಮನವಿಯನ್ನು ಮುಂಬೈ ಇಂಡಿಯನ್ಸ್ ತಿರಸ್ಕರಿಸಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದ ವರ್ಷ ನಡೆದ ದುರದೃಷ್ಟಕರ ಕಾಲ್ತುಳಿತದ ಘಟನೆಯ ನಂತರ ಉಂಟಾದ ಸುರಕ್ಷತಾ ನಿರ್ಬಂಧಗಳಿಂದಾಗಿ ಆರ್ಸಿಬಿ ಪರ್ಯಾಯ ಮೈದಾನವನ್ನು ಹುಡುಕುತ್ತಿದೆ. ಹೀಗಾಗಿ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತವರು ಮೈದಾನವನ್ನಾಗಿ ಆಯ್ಕೆ ಮಾಡಲು ಬಯಸಿತ್ತು.
ಆದರೆ ಡಿವೈ ಪಾಟೀಲ್ ಸ್ಟೇಡಿಯಂ ಮುಂಬೈ ಇಂಡಿಯನ್ಸ್ನ ಕಾರ್ಯಕ್ಷೇತ್ರಕ್ಕೆ ಹತ್ತಿರವಿರುವುದರಿಂದ, ಆರ್ಸಿಬಿ ಇಲ್ಲಿ ಪಂದ್ಯಗಳನ್ನು ಆಯೋಜಿಸಲು MI ತಂಡದ 'ನಿರಾಕ್ಷೇಪಣಾ ಪತ್ರ' (NOC) ಅಗತ್ಯವಿತ್ತು. ಮುಂಬೈ ಇಂಡಿಯನ್ಸ್ ಆಡಳಿತ ಮಂಡಳಿಯು ತನ್ನ ತವರು ಪ್ರದೇಶದ ಘನತೆಯನ್ನು ಕಾಪಾಡುವ ಉದ್ದೇಶದಿಂದ ಈ ಅನುಮತಿಯನ್ನು ನಿರಾಕರಿಸಿದೆ.
ಮುಂಬೈ ಇಂಡಿಯನ್ಸ್ ಆಡಳಿತ ಮಂಡಳಿಯ ಅನುಮತಿ ನಿರಾಕರಣೆಯ ಕಾರಣ, ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ಆರ್ಸಿಬಿ ತನ್ನ ತವರು ಮೈದಾನವನ್ನಾಗಿ ಆಯ್ಕೆ ಮಾಡಲಾಗುವುದಿಲ್ಲ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮತ್ತೊಂದು ಪರ್ಯಾಯ ಸ್ಟೇಡಿಯಂನತ್ತ ಮುಖ ಮಾಡಬೇಕಿದೆ. ಇಲ್ಲಾ, ರಾಜ್ಯ ಸರ್ಕಾರದ ನಿಯಮಗಳನ್ನು ಪಾಲಿಸಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯಬೇಕಾಗುತ್ತದೆ.
ಬಾಲಿವುಡ್ನ (Bollywoo) ಖ್ಯಾತ ಹಾಸ್ಯನಟ ರಾಜ್ಪಾಲ್ ಯಾದವ್ 2010ರ ಹಳೆಯ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ದೋಷಿಯೆಂದು ಆದೇಶಿಸಲಾಗಿದೆ ಶಿಕ್ಷೆಗೆ ಗುರಿಯಾಗಿದ್ದಾರೆ. ಹಲವು ವರ್ಷಗಳ ಕಾಲ ನಡೆದ ನ್ಯಾಯಾಲಯದ ಸಮರದಲ್ಲಿ ರಾಜ್ಪಾಲ್ ಯಾದವ್ ಅವರಿಗೆ ಸೋಲಾಗಿದ್ದು ಇತ್ತೀಚೆಗಷ್ಟೆ ಅವರು ನ್ಯಾಯಾಲಯದ ಆದೇಶದಂತೆ ತಿಹಾರ್ ಜೈಲಿಗೆ ಸರೆಂಡರ್ ಆಗಿದ್ದು ಮುಂದಿನ ಹಲವು ತಿಂಗಳು ಅವರು ಜೈಲಿನಲ್ಲಿ ಸೆರೆವಾಸ ಅನುಭವಿಸಬೇಕಿದೆ. ಆದರೆ ಇದೀಗ ರಾಜ್ಪಾಲ್ ಯಾದವ್ ಅವರಿಗೆ ಚಿತ್ರರಂಗದ ನೆರವು ಸಿಗುತ್ತಿದೆ.
ರಾಜ್ಪಾಲ್ ಯಾದವ್ ಬಾಲಿವುಡ್ನಲ್ಲಿ 27 ವರ್ಷಗಳಿಂದಲೂ ಕೆಲಸ ಮಾಡುತ್ತಿದ್ದಾರೆ. ದೇಶದ ಅತ್ಯುತ್ತಮ ಹಾಸ್ಯನಟರಲ್ಲಿ ರಾಜ್ಪಾಲ್ ಯಾದವ್ ಸಹ ಒಬ್ಬರು. ಇದೇ ಕಾರಣಕ್ಕೆ ಚಿತ್ರರಂಗದ ಕೆಲವರು ಇದೀಗ ರಾಜ್ಪಾಲ್ ಯಾದವ್ ಅವರ ನೆರವಿಗೆ ಬಂದಿದ್ದಾರೆ. ಇತ್ತೀಚೆಗೆ ಟ್ವೀಟ್ ಮಾಡಿದ್ದ ನಟ ಸೋನು ಸೂದ್, ‘ಚಿತ್ರರಂಗದವರು ರಾಜ್ಪಾಲ್ ಯಾದವ್ ನೆರವಿಗೆ ಬರಬೇಕು, ಅವರೊಟ್ಟಿಗೆ ಸಿನಿಮಾ ಸಹಿ ಮಾಡಿಸಿಕೊಂಡಾದರೂ ಅವರಿಗೆ ಅಡ್ವಾನ್ಸ್ ರೂಪದಲ್ಲಿ ಹಣ ನೀಡಬೇಕು, ನಾನೂ ಸಹ ಹಾಗೆಯೇ ಮಾಡುತ್ತಿದ್ದೇನೆ. ಇದರಿಂದ ಅವರ ಸಮಸ್ಯೆಗೆ ಪರಿಹಾರ ಸಿಗುತ್ತದೆ’ ಎಂದಿದ್ದರು.
ಇದೀಗ ಖ್ಯಾತ ಸಂಗೀತ ನಿರ್ದೇಶಕ ರಾವ್ ಇಂದೆರ್ಜೀತ್ ಸಿಂಗ್ ಅವರು ರಾಜ್ಪಾಲ್ ಯಾದವ್ ಸಹಾಯಕ್ಕೆ ಬಂದಿದ್ದು, ರಾಜ್ಪಾಲ್ ಯಾದವ್ ಅವರಿಗೆ 1.11 ಕೋಟಿ ರೂಪಾಯಿಗಳ ನೆರವು ನೀಡಿದ್ದಾರೆ. ‘ಭೂಲ್ ಭುಲಯ್ಯ’, ‘ಹಂಗಾಮ’, ‘ವೆಲ್ಕಮ್’ ಇನ್ನೂ ಹಲವು ಹಿಂದಿ ಸಿನಿಮಾಗಳಿಗೆ ಸಂಗೀತ ನೀಡಿರುವ ರಾವ್ ಇಂದೆರ್ಜೀತ್ ಸಿಂಗ್ ಅವರು ರಾಜ್ಪಾಲ್ ಯಾದವ್ ಅವರಿಗೆ ನೆರವಿನ ಹಸ್ತ ಚಾಚಿದ್ದಾರೆ.
ಈ ಬಗ್ಗೆ ಮಾತನಾಡಿರುವ ಇಂದೆರ್ಜೀತ್ ಸಿಂಗ್, ‘ರಾಜ್ಪಾಲ್ ಯಾದವ್ ಅವರು ಭಾರತೀಯರನ್ನು ದಶಕಗಳಿಂದಲೂ ರಂಜಿಸುತ್ತಾ ಬಂದಿದ್ದಾರೆ. ಸಿನಿಮಾ ಪ್ರೇಮಿಗಳಿಗೆ ಹಲವು ನೆನಪುಳಿವ, ಸಂತೋಷದ ಕ್ಷಣಗಳನ್ನು ನೀಡಿದ್ದಾರೆ. ಭಾರತೀಯ ಚಿತ್ರರಂಗದ ಅವಿಭಾಜ್ಯ ಅಂಗ ಸಹ ಆಗಿದ್ದಾರೆ. ಇದು ಕೇವಲ ಹಣದ ಸಹಾಯ ಮಾತ್ರ ಅಲ್ಲ. ಇದು ಒಬ್ಬ ವ್ಯಕ್ತಿ ಕಷ್ಟದಲ್ಲಿದ್ದಾಗ, ಅದರಲ್ಲೂ ಒಬ್ಬ ಚಿತ್ರಕರ್ಮಿ ಕಷ್ಟದಲ್ಲಿದ್ದಾಗ ಜೊತೆಗೆ ನಿಲ್ಲಬೇಕಾದುದು ಕರ್ತವ್ಯ ಎಂಬ ಕಾರಣಕ್ಕೆ ಮಾಡಿದ ಸಹಾಯ’ ಎಂದಿದ್ದಾರೆ.
ರಾಜ್ಪಾಲ್ ಯಾದವ್ ಅವರಿಗೆ 10 ಲಕ್ಷ ರೂಪಾಯಿ ಹಣ ಸಹಾಯ ಮಾಡುವುದಾಗಿ ವಿವಾದಾತ್ಮಕ ಸಿನಿಮಾ ವಿಮರ್ಶಕ ಕಮಾಲ್ ಆರ್ ಖಾನ್ ಸಹ ಹೇಳಿದ್ದಾರೆ. ಕೆಲ ಮಾಹಿತಿಗಳ ಪ್ರಕಾರ, ಚಿತ್ರರಂಗದ ಕೆಲವು ದಿಗ್ಗಜರು ತೆರೆ ಮರೆಯಲ್ಲಿ ರಾಜ್ಪಾಲ್ ಯಾದವ್ ಅವರಿಗೆ ಹಣ ನೀಡಿದ್ದಾರೆ ಎಂದು ಸಹ ಹೇಳಲಾಗುತ್ತಿದೆ.
ರಾಜ್ಪಾಲ್ ಯಾದವ್ ಅವರು 9 ಕೋಟಿ ರೂಪಾಯಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಒಂದೊಮ್ಮೆ ಅವರು 9 ಕೋಟಿ ರೂಪಾಯಿ ಹಣವನ್ನು ಕಟ್ಟಿದ್ದೇ ಆದಲ್ಲಿ ಅವರು ಜೈಲಿನಿಂದ ಬಿಡುಗಡೆ ಹೊಂದಬಹುದಾಗಿದೆ.