ಪ್ರಧಾನಿ ಮೋದಿ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ – Kannada News | BJP Files Police Complaint Over Congress Flex Targeting PM Modi in Bengaluru, Row Over ‘Trump Fear’ Remark
ಬೆಂಗಳೂರು, ಫೆಬ್ರವರಿ 9: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಹಾಕಿದ್ದ ಕೆಲವು ಫ್ಲೆಕ್ಸ್‌ಗಳಿಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಫ್ಲೆಕ್ಸ್‌ಗಳಲ್ಲಿ, ‘ಟ್ರಂಪ್‌ಗೆ ಹೆದರಿದ ಮೋದಿ’ ಮತ್ತು ‘ಚೀನಾಗೆ ಹೆದರಿದ ಮೋದಿ’ ಎಂದು ಫ್ಲೆಕ್ಸ್‌ಗಳಲ್ಲಿ ನಮೂದಿಸಲಾಗಿತ್ತು. ಮೋದಿ ಅವರ ನಡೆಯಿಂದ ದೇಶದ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಂಡಂತಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಫ್ಲೆಕ್ಸ್‌ಗಳ ವಿರುದ್ಧ ಬಿಜೆಪಿ ಆಕ್ರೋಶಗೊಂಡಿದ್ದು, ಪೊಲೀಸ್ ದೂರು ದಾಖಲಿಸಿದೆ. ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು…