nagaraj11081993

RCB ವಿರುದ್ಧದ ಪಂದ್ಯಕ್ಕೆ ಧೋನಿ ಅಲಭ್ಯ..!

IPL 2026: ಮೊದಲ ಮ್ಯಾಚ್​ನಲ್ಲಿ ಭರ್ಜರಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ತನ್ನ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಎದುರಿಸಲಿದೆ. ಏಪ್ರಿಲ್ 5 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸಿಎಸ್​ಕೆ ತಂಡದ ಸ್ಟಾರ್ ಆಟಗಾರ ಮಹೇಂದ್ರ ಸಿಂಗ್ ಧೋನಿ (MS Dhoni) ಅಲಭ್ಯರಾಗಲಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಇಂದು (ಮಾ.30) ನಡೆಯಲಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ…

Read More

ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ 5 ದಿನ ಮಳೆ ಸಾಧ್ಯತೆ: ಹವಾಮಾನ ತಜ್ಞ ಸಿಎಸ್ ಪಾಟೀಲ್ ಮುನ್ಸೂಚನೆ

ಬೆಂಗಳೂರು, ಮಾರ್ಚ್ 30: ಕರ್ನಾಟಕದ ವಿವಿಧೆಡೆ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. ಮಾರ್ಚ್ 30 ರಿಂದ ಏಪ್ರಿಲ್ 3 ರವರೆಗೆ ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 35-36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅವರು ಹೇಳಿದ್ದಾರೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಸಹ…

Read More

ಧ್ರುವ ಸರ್ಜಾ ಸಿನಿಮಾಗೆ ಕಾಂಪಿಟೇಷನ್ ಕೊಡಲು ಬಂದ ಟಾಲಿವುಡ್ ಸುಂದರಿ

ಧ್ರುವ ಸರ್ಜಾ (Dhruva Sarja) ನಟನೆಯ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಗಲು ರೆಡಿ ಆಗಿದೆ. ಅಂದರೆ ಇಂದಿಗೆ ಸರಿಯಾಗಿ ಒಂದು ತಿಂಗಳಿಗೆ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರವನ್ನು ಕೆವಿಎನ್ ನಿರ್ಮಾಣ ಸಂಸ್ಥೆ ನಿರ್ಮಿಸಿದೆ. ಈ ಚಿತ್ರಕ್ಕೆ ಧ್ರುವ ಹೀರೋ ಆದರೆ, ಶಿಲ್ಪಾ ಶೆಟ್ಟಿ ನಾಯಕಿ. ಈ ಸಿನಿಮಾಗೆ ಕಾಂಪಿಟೇಷನ್ ಕೊಡಲು ಟಾಲಿವುಡ್ ಸುಂದರಿಯ ಆಗಮನ ಆಗುತ್ತಿದೆ ಎಂದು ವರದಿ ಆಗಿದೆ. ಅದುವೇ ಸಮಂತಾ ರುತ್ ಫ್ರಭು. 2023ರಲ್ಲಿ ‘ಖುಷಿ’ ಸಿನಿಮಾ ಬಳಿಕ ಸಮಂತಾ…

Read More

ವಾಹನ ಸವಾರರೇ ಗಮನಿಸಿ: ಏಪ್ರಿಲ್ 1 ರಿಂದ ಟೋಲ್‌ನಲ್ಲಿ ನಗದು ಪಾವತಿ ಬಂದ್; ಫಾಸ್ಟ್​ಟ್ಯಾಗ್ ಇಲ್ಲಾಂದ್ರೆ ನೋ ಎಂಟ್ರಿ!

ಬೆಂಗಳೂರು, ನೆಲಮಂಗಲ, ಮಾರ್ಚ್ 30: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ವಾಹನ ಸವಾರರಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮಹತ್ವದ ಸೂಚನೆಯೊಂದನ್ನು ನೀಡಿದೆ. ಏಪ್ರಿಲ್ 1, 2026 ರಿಂದ ಜಾರಿಗೆ ಬರುವಂತೆ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ (Toll Plazas) ನಗದು ಪಾವತಿಯನ್ನು (Cash Payment) ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ನೆಲಮಂಗಲ ಟೋಲ್ ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಈಗಾಗಲೇ ಸಾರ್ವಜನಿಕ ಪ್ರಕಟಣೆಯ ಫಲಕಗಳನ್ನು ಹಾಕಲಾಗಿದೆ. ಏನೇನು ಬದಲಾವಣೆ? ಹೊಸ ನಿಯಮದ ಪ್ರಕಾರ, ಟೋಲ್ ಬೂತ್​​ಗಳಲ್ಲಿ…

Read More

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್​​: ಏರಿಕೆಯಾಗುತ್ತಾ ನಂದಿನಿ ಉತ್ಪನ್ನಗಳ ಬೆಲೆ?

ಬೆಂಗಳೂರು, ಮಾರ್ಚ್​​ 30: ಯುದ್ಧದ ಸ್ಥಿತಿ ಮುಂದುವರಿದರೆ ಇಂಧನ ಬೆಲೆ ಏರಿಕೆ ಪರಿಣಾಮ ನಂದಿನಿ ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಅನಿವಾರ್ಯವಾಗಲಿದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಹಾಲು ಒಕ್ಕೂಟಗಳಿಗೆ ಗ್ಯಾಸ್ ಬಳಕೆಯನ್ನು ಶೇ. 55ರಷ್ಟು ಕಡಿಮೆ ಮಾಡುವಂತೆ ಸೂಚಿಸಲಾಗಿದೆ. ಇಲ್ಲವಾದರೆ ಶೇ. 30ರಷ್ಟು ಹೆಚ್ಚುವರಿ ವೆಚ್ಚವನ್ನು ಭರಿಸಬೇಕಾಗುತ್ತದೆ. ಈ ಹೆಚ್ಚುವರಿ ವೆಚ್ಚ ಅಂತಿಮವಾಗಿ ಗ್ರಾಹಕರ ಮೇಲೆ ಬೀಳಲಿದ್ದು, ಇದು ನಂದಿನಿ ಹಾಲು ಉತ್ಪನ್ನಗಳ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಸರ್ಕಾರ ಈ…

Read More

VIDEO: ಪಾಕಿಸ್ತಾನ್ ಸೂಪರ್ ಲೀಗ್​ನ ‘ಕಳ್ಳಾಟ’ ಬಯಲು

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನ 6ನೇ ಪಂದ್ಯವು ವಿವಾದಕ್ಕೀಡಾಗಿದೆ. ಈ ವಿವಾದಕ್ಕೆ ಕಾರಣ ಪಂದ್ಯದ ವೇಳೆ ಕಂಡು ಬಂದ ಕಳ್ಳಾಟ. ಅಂದರೆ ಮ್ಯಾಚ್​ನ ಅಂತಿಮ ಓವರ್​ಗೂ ಮುನ್ನ ಪಾಕಿಸ್ತಾನದ ಸ್ಟಾರ್ ಆಟಗಾರರಾದ ಫಖರ್ ಝಮಾನ್, ಶಾಹೀನ್ ಅಫ್ರಿದಿ ಹಾಗೂ ಹಾರಿಸ್ ರೌಫ್ ಜೊತೆಗೂಡಿ ಬಾಲ್ ಟ್ಯಾಂಪರಿಂಗ್ ಮಾಡಿದ್ದಾರೆ. ಪಂದ್ಯದ ಅಂತಿಮ ಓವರ್‌ನಲ್ಲಿ ಕರಾಚಿ ಕಿಂಗ್ಸ್ ಗೆಲುವಿಗೆ 14 ರನ್ ಬೇಕಿತ್ತು. ಆ ಸಮಯದಲ್ಲಿ ಲಾಹೋರ್​ ಖಲಂದರ್ಸ್​ ತಂಡದ ಆಟಗಾರ ಫಖರ್ ಝಮಾನ್ ಅವರು ಚೆಂಡಿನ ಮೇಲ್ಮೈಯನ್ನು…

Read More

ಪ್ರೇಯಸಿಯನ್ನು ಮನೆಯಲ್ಲಿ ಕೊಂದು ದೇಹವನ್ನು ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ನೌಕಾಪಡೆ ಸಿಬ್ಬಂದಿ

ವಿಶಾಖಪಟ್ಟಣಂ, ಮಾರ್ಚ್​ 30: ನೌಕಾಪಡೆಯ ಸಿಬ್ಬಂದಿ ಪ್ರೇಯಸಿಯನ್ನು ಮನೆಯಲ್ಲಿ ಕೊಲೆ(Murder) ಮಾಡಿ ದೇಹವನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ಚಿಂತಾದ ರವೀಂದ್ರ ಎಂಬಾತ ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ಪ್ರೇಯಸಿಯನ್ನು ಮನೆಗೆ ಕರೆಸಿಕೊಂಡು ಆಕೆಯನ್ನು ಕೊಲೆ ಮಾಡಿದ್ದಾನೆ. ಮೌನಿಕಾ ಮತ್ತು ರವೀಂದ್ರ ತಮ್ಮ ಮನೆಯಲ್ಲಿ ಸ್ವಲ್ಪ ಸಮಯ ಕಳೆದಿದ್ದರು. ಬಳಿಕ ಇಬ್ಬರ ನಡುವೆ ವಾಗ್ವಾದ ನಡೆದಿತ್ತು ಕೋಪದಲ್ಲಿ ರವೀಂದ್ರ ಆಕೆಯನ್ನು ಕೊಂಡು ತುಂಡು ತುಂಡಾಗಿ ಕತ್ತರಿಸಿದ್ದಾನೆ. ಭಾರತೀಯ ನೌಕಾಪಡೆಯ ಹಡಗು (ಐಎನ್‌ಎಸ್) ಡೇಗಾದಲ್ಲಿ ನಿಯೋಜಿತರಾಗಿದ್ದ…

Read More

ತನ್ನ ಖಾಸಗಿ ಅಂಗದಲ್ಲಿ ತಂಬಾಕು, ಸಿಮ್ ಕಾರ್ಡ್​ ತಂದು ಜೈಲಿನಲ್ಲಿ ಸ್ಮಗ್ಲಿಂಗ್! ಯುವತಿ ಅಂದರ್

ಬೆಂಗಳೂರು, ಮಾರ್ಚ್​ 30: ಪರಪ್ಪನ ಅಗ್ರಹಾರದಲ್ಲಿ ನಿರಂತರವಾಗಿ ಅವ್ಯವಹಾರಗಳ ಪ್ರಕರಣಗಳು ವರದಿಯಾಗುತ್ತಿವೆ. ಡಿಜಿಪಿ ಅಲೋಕ್ ಕುಮಾರ್​ರಿಂದ  (DGP Alok Kumar) ಜಾರಿಯಾಗಿರುವ ಕಟ್ಟುನಿಟ್ಟಿನ ಕ್ರಮದ ನಂತರವೂ ಈ ಅವ್ಯವಹಾರಗಳಿಗೆ ಬ್ರೇಕ್ ಬಿದ್ದಿಲ್ಲ. ಜೈಲಿನಲ್ಲೇ ಕೂತು ಕೈದಿಗಳು ವೀಡಿಯೋ ಮಾಡಿರುವುದು ಚರ್ಚೆಯಾದ ಬೆನ್ನಲ್ಲೇ ಕಳೆದ ಗುರುವಾರ ನಡೆದ ಮತ್ತೊಂದು ಅಕ್ರಮ ತಡವಾಗಿ ಬೆಳಕಿಗೆ ಬಂದಿದೆ.ಕೇಂದ್ರ ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳನ್ನು ಒಳಗೆ ಕಳ್ಳಸಾಗಣೆ ಮಾಡಲು ಯತ್ನಿಸಿದ 27 ವರ್ಷದ ಮಹಿಳೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ತಪಾಸಣೆ ವೇಳೆ ವಿಷಯ ಬಯಲು ಮಾರ್ಚ್ 26ರಂದು…

Read More

ಸ್ಯಾಟಲೈಟ್ ಟು ಮೆಟ್ರೋ ಕನೆಕ್ಟಿವಿಟಿ ಕಷ್ಟ: ಒಂದು ಕಿ.ಮೀ ದಾಟಲು ಪ್ರಯಾಣಿಕರ ಹರಸಾಹಸ!

ಬೆಂಗಳೂರು, ಮಾ.30: ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟಲೈಟ್ ಬಸ್ ನಿಲ್ದಾಣ (KSRTC) ಮತ್ತು ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ನಡುವೆ ಸರಿಯಾದ ಸಂಪರ್ಕ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಎರಡು ನಿಲ್ದಾಣಗಳ ನಡುವಿನ ಅಂತರ ಒಂದು ಕಿಲೋಮೀಟರ್‌ಗಿಂತಲೂ ಕಡಿಮೆ ಇದ್ದರೂ, ಸುಗಮ ಸಂಪರ್ಕದ ಕೊರತೆಯಿಂದಾಗಿ ಜನರು ಪರದಾಡುವಂತಾಗಿದೆ. ಇದೀಗ ಈ ಬಗ್ಗೆ ಜನರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಬೆಂಗಳೂರಿಗೆ ಹೊರ ಜಿಲ್ಲೆಗಳಿಂದ ಬರುವ ಪ್ರಯಾಣಿಕರು ಮೆಟ್ರೋ ಹತ್ತಲು ಈ ಕಿಲೋಮೀಟರ್ ದೂರವನ್ನು ಕಾಲ್ನಡಿಗೆಯಲ್ಲಿ…

Read More

‘ಧುರಂಧರ್ 2’ ನೋಡಿದ ಬಳಿಕ ನಿರ್ದೇಶಕ ಆದಿತ್ಯ ಧಾರ್​​ ಎಚ್ಚರಿಸಿದ ವಿವೇಕ್ ಅಗ್ನಿಹೋತ್ರಿ

‘ಧುರಂದರ್ 2’ ಸಿನಿಮಾ ಮಾಡಿದ ದಾಖಲೆಗಳು ಹಲವು. ಈ ಚಿತ್ರವು ಕೇಲವ 11 ದಿನಗಳಲ್ಲಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರುವ ಮೂಲಕ ದಾಖಲೆ ಬರೆದಿದೆ ಎಂದೇ ಹೇಳಬಹುದು. ಈ ಚಿತ್ರವನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿಗಳವರೆಗೆ ಎಲ್ಲರಿಗೂ ಚಿತ್ರ ಇಷ್ಟ ಆಗಿದೆ. ಈಗ ರಣವೀರ್ ಸಿಂಗ್ ಅವರ ಸಿನಿಮಾ ನೋಡಿದ ‘ದಿ ಕಾಶ್ಮೀರಿ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಜೋತ್ರಿ ಅವರು ಆದಿತ್ಯ ಧಾರ್ ಅವರಿಗೆ ಎಚ್ಚರಿಕೆಯನ್ನು ರವಾನಿಸಿದ್ದಾರೆ. ವಿವೇಕ್ ಅವರು ‘ದಿ ಕಾಶ್ಮೀರಿ ಫೈಲ್ಸ್’…

Read More