ಮಹಿಳೆ ರೂಮ್ಗೆ ನುಗ್ಗಿ ಪತಿ ಸಂಬಂಧಿಕರಿಂದ ಗಲಾಟೆ!
ಹಾಸನ, ಫೆಬ್ರುವರಿ 08: ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಪ್ರೀತಿಸಿ ವಿವಾಹವಾದ ಪತ್ನಿಗೆ ಪತಿ ಕುಟುಂಬಸ್ಥರು ಕಿರುಕುಳ ನೀಡಿದ ಘಟನೆ ನಡೆದಿದೆ. ಮೂರು ವರ್ಷಗಳ ಹಿಂದೆ ಅರ್ಪಿತಾ ಹಾಗೂ ಶಶಿಕುಮಾರ್ ಲವ್ ಮ್ಯಾರೇಜ್ ಮಾಡಿಕೊಂಡಿದ್ದರು. ಡ್ರೈವಿಂಗ್ ಕೆಲಸ ಮಾಡುತ್ತಿದ್ದ ಶಶಿಕುಮಾರ್, ಮದುವೆಯಾದ ಕೆಲವೇ ತಿಂಗಳಲ್ಲಿ ಪತ್ನಿಯಿಂದ ದೂರವಾಗಿದ್ದಾನೆ. ಅರ್ಪಿತಾ ಉಳಿದುಕೊಳ್ಳಲು ಪತಿ ಮನೆಯ ಮೇಲಿನ ರೂಂನ್ನು ಶಶಿಕುಮಾರ್ ಪೋಷಕರು ನೀಡಿದ್ದರು. ಕ್ಯಾಂಟೀನ್‌ನಲ್ಲಿ ಕೆಲಸ ಮಾಡಿ ಮಗುವನ್ನು ಸಾಕುತ್ತಿದ್ದ ಅರ್ಪಿತಾ, ವಿಚ್ಛೇದನ ಹಾಗೂ ಜೀವನಾಂಶಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದಾಳೆ. ಇದರಿಂದ ಕೋಪಗೊಂಡ…