All posts by nagaraj11081993

ಇಸ್ರೇಲ್ – ಹೆಜ್ಬೊಲ್ಲಾ ಕದನ ವಿರಾಮ ಒಪ್ಪಂದ ನಾಳೆಯಿಂದ ಜಾರಿ; ಅಮೆರಿಕ ಘೋಷಣೆ – Kannada News | Israel and Hezbollah Agreed To Ceasefire Starting June 20 US Official announces

ನವದೆಹಲಿ, ಜೂನ್ 19: ಕಳೆದ ಹಲವು ತಿಂಗಳುಗಳಿಂದ ಇಸ್ರೇಲ್ (Israel) ಸೇನೆ ಮತ್ತು ಲೆಬನಾನ್ (Lebanon) ಮೂಲದ ಹೆಜ್ಬೊಲ್ಲಾ ಸಂಘಟನೆಯ ನಡುವೆ ಭಾರಿ ಪ್ರಮಾಣದ ಕ್ಷಿಪಣಿ ದಾಳಿಗಳು ಹಾಗೂ ವೈಮಾನಿಕ ದಾಳಿಗಳು ನಡೆಯುತ್ತಿದ್ದವು. ಈ ಯುದ್ಧವನ್ನು ಕೊನೆಗಾಣಿಸಲು ಅಮೆರಿಕ ಮತ್ತು ಇತರ ಅಂತಾರಾಷ್ಟ್ರೀಯ ಮಧ್ಯಸ್ಥಿಕೆದಾರರು ನಿರಂತರ ರಾಜತಾಂತ್ರಿಕ ಮಾತುಕತೆಗಳನ್ನು ನಡೆಸುತ್ತಿದ್ದರು. ಇದೀಗ ಕೊನೆಗೂ ಉಭಯ ದೇಶಗಳು ಶಾಂತಿಗೆ ಸಮ್ಮತಿಸಿವೆ. ಈ ಒಪ್ಪಂದದ ಅನ್ವಯ ನಾಳೆ ಮುಂಜಾನೆಯಿಂದಲೇ ಎರಡೂ ದೇಶದವರು ದಾಳಿಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕಾಗುತ್ತದೆ.

ದಕ್ಷಿಣ ಲೆಬನಾನ್‌ನ ಗಡಿ ಪ್ರದೇಶಗಳಿಂದ ಹೆಜ್ಬೊಲ್ಲಾ ತನ್ನ ಶಸ್ತ್ರಾಸ್ತ್ರ ಮತ್ತು ಹೋರಾಟಗಾರರನ್ನು ಹಿಂತೆಗೆದುಕೊಳ್ಳಬೇಕು ಹಾಗೂ ಇಸ್ರೇಲ್ ಸೇನೆಯೂ ಸಹ ತನ್ನ ಸೈನಿಕರನ್ನು ಗಡಿಯಿಂದ ಹಿಂದೆ ಕರೆಸಿಕೊಳ್ಳಬೇಕು ಎಂಬ ನಿಯಮಗಳನ್ನು ವಿಧಿಸಲಾಗಿದೆ ಎನ್ನಲಾಗಿದೆ. ಕದನ ವಿರಾಮದ ನಿಯಮಗಳು ಸರಿಯಾಗಿ ಪಾಲನೆಯಾಗುತ್ತಿವೆಯೇ ಎಂಬುದನ್ನು ಮೇಲ್ವಿಚಾರಣೆ ಮಾಡಲು ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆ (UNIFIL) ಮತ್ತು ಲೆಬನಾನ್ ರಾಷ್ಟ್ರೀಯ ಸೇನೆಗೆ ಹೆಚ್ಚಿನ ಜವಾಬ್ದಾರಿ ನೀಡಲಾಗುತ್ತದೆ.

ಇದನ್ನೂ ಓದಿ: ಇಸ್ರೇಲ್ ಕೈಲಾಗದಿದ್ದರೆ ಸಿರಿಯಾ ನಿಭಾಯಿಸಲಿ; ಹೆಜ್ಬುಲ್ಲಾ ನಿಗ್ರಹಕ್ಕೆ ಟ್ರಂಪ್ ಐಡಿಯಾ

ಇಂದು ಮುಂಜಾನೆ ಇಸ್ರೇಲಿ ಪಡೆಗಳು ಮತ್ತು ಹೆಜ್ಬೊಲ್ಲಾ ನಡುವೆ ಮತ್ತೆ ಹೊಸದಾಗಿ ಪರಸ್ಪರ ದಾಳಿಗಳು ನಡೆದ ಹೊರತಾಗಿಯೂ ಈ ಒಪ್ಪಂದ ಏರ್ಪಟ್ಟಿದ್ದು, ಇದು ಈ ಕದನ ವಿರಾಮದ ಸೂಕ್ಷ್ಮತೆಯನ್ನು ಎತ್ತಿ ತೋರಿಸುತ್ತದೆ. ಲೆಬನಾನ್‌ನಲ್ಲಿ ಮುಂದುವರಿದಿರುವ ಘರ್ಷಣೆಗಳು ಪ್ರಾದೇಶಿಕವಾಗಿ ಪ್ರಸ್ತುತ ನಡೆಯುತ್ತಿರುವ ಇತರ ವಿಶಾಲವಾದ ಮಾತುಕತೆಗಳಿಗೆ ಧಕ್ಕೆ ತರಬಹುದು ಎಂಬ ಆತಂಕಗಳು ಹೆಚ್ಚಾದ ಹಿನ್ನೆಲೆಯಲ್ಲಿ, ಅಮೆರಿಕ, ಕತಾರ್ ಮತ್ತು ಇರಾನಿನ ಮಧ್ಯಸ್ಥಿಕೆದಾರರು ಕಳೆದ ಕೆಲವು ದಿನಗಳಿಂದ ತೀವ್ರವಾದ ಮಾತುಕತೆಗಳಲ್ಲಿ ತೊಡಗಿಸಿಕೊಂಡಿದ್ದರು.

ಇದನ್ನೂ ಓದಿ: ವಾಸ್ತವವನ್ನು ಅರ್ಥಮಾಡಿಕೊಳ್ಳಿ: ಇರಾನ್ ಒಪ್ಪಂದ ಟೀಕಿಸಿದ ಇಸ್ರೇಲ್​ಗೆ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ ಎಚ್ಚರಿಕೆ

ಇಸ್ರೇಲ್-ಹೆಜ್ಬೊಲ್ಲಾ ಯುದ್ಧದ ಕಾರಣದಿಂದಾಗಿ ಲೆಬನಾನ್ ಮತ್ತು ಉತ್ತರ ಇಸ್ರೇಲ್‌ನಲ್ಲಿ ಲಕ್ಷಾಂತರ ಜನರು ತಮ್ಮ ಮನೆಗಳನ್ನು ತೊರೆದು ನಿರಾಶ್ರಿತರಾಗಿದ್ದರು. ಅಮೆರಿಕ ಸರ್ಕಾರದ ಈ ಪ್ರಕಟಣೆಯು ಇಡೀ ಜಗತ್ತು ಮತ್ತು ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ ನೋಡಲಾಗುತ್ತಿದೆ. ವಿಶ್ವದ ಹಲವು ರಾಷ್ಟ್ರಗಳ ನಾಯಕರು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 9:09 pm, Fri, 19 June 26

Source link

IND vs AFG: ಭಾರತ- ಅಫ್ಘನ್ ನಡುವಿನ ಕೊನೆಯ ಏಕದಿನ ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ? – Kannada News | India vs Afghanistan 3rd ODI: Clean Sweep Bid, Live Stream and Match Details

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ (India vs Afghanistan) ಈಗಾಗಲೇ 2 ಪಂದ್ಯಗಳನ್ನು ಗೆದ್ದು ಸರಣಿಯನ್ನು ತನ್ನ ಖಾತೆಗೆ ಹಾಕಿಕೊಂಡಿದೆ. ಈಗ ಟೀಂ ಇಂಡಿಯಾ ಮೂರನೇ ಮತ್ತು ಅಂತಿಮ ಪಂದ್ಯಕ್ಕೆ ಸಿದ್ಧವಾಗಿದೆ. ಈ ಪಂದ್ಯವನ್ನು ಗೆದ್ದು ಹ್ಯಾಟ್ರಿಕ್ ಗೆಲುವು ಸಾಧಿಸುವ ಅವಕಾಶ ಟೀಂ ಇಂಡಿಯಾಕ್ಕಿದೆ. ಅಲ್ಲದೆ, ಅಫ್ಘಾನಿಸ್ತಾನವನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಅವಕಾಶ ಭಾರತಕ್ಕಿದೆ. ಮತ್ತೊಂದೆಡೆ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಅಫ್ಘಾನಿಸ್ತಾನ, ಭಾರತದ ಪ್ರವಾಸವನ್ನು ಅಂತ್ಯಗೊಳಿಸಲು ಪ್ರಯತ್ನಿಸಲಿದೆ. ಆದ್ದರಿಂದ, ಸರಣಿಯ ಫಲಿತಾಂಶದ ನಂತರವೂ, ಅಭಿಮಾನಿಗಳು ಅಂತಿಮ ಪಂದ್ಯದಲ್ಲಿ ಹೈವೋಲ್ಟೇಜ್ ಕದನವನ್ನು ನಿರೀಕ್ಷಿಸಬಹುದು.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಜೂನ್ 20 ರ ಶನಿವಾರದಂದು ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಏಕದಿನ ಪಂದ್ಯ ನಡೆಯಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಏಕದಿನ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಏಕದಿನ ಪಂದ್ಯ ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿದ್ದು, ಟಾಸ್ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಏಕದಿನ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿ ಚಾನೆಲ್‌ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಮೊಬೈಲ್‌ನಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು.

IND vs AFG: ನಾಯಕನಾಗಿ ಚೊಚ್ಚಲ ಏಕದಿನ ಸರಣಿ ಗೆದ್ದ ಶುಭ್​ಮನ್ ಗಿಲ್

ಉಭಯ ತಂಡಗಳು

ಏಕದಿನ ಸರಣಿಗೆ ಟೀಂ ಇಂಡಿಯಾ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ, ಹರ್ಷಿತ್ ರಾಣಾ.

ಏಕದಿನ ಸರಣಿಗೆ ಅಫ್ಘಾನಿಸ್ತಾನ ತಂಡ: ಹಸ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ರಹಮತ್ ಷಾ, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜೈ, ರಶೀದ್ ಖಾನ್, ನಂಗ್ಯಾಲ್ ಖರೋಟೈ, ಎಎಮ್ ಗಜನ್ಫರ್, ಜಿಯಾ ಯು ರೆಹಮಾನ್ ಶರೀಫಿ, ಫರೀದ್ ಮಲಿಕ್, ಬಿಲಾಲ್ ಸಾಮಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಂಡಾಯ ಸಂಸದರ ವಿರುದ್ಧ ಕಾನೂನು ಸಮರಕ್ಕಿಳಿದ ಟಿಎಂಸಿ; 20 ರೆಬೆಲ್​ಗಳ ಅನರ್ಹತೆಗೆ ಸ್ಪೀಕರ್​ಗೆ ಮನವಿ – Kannada News | Abhishek Banerjee meets Speaker Om Birla demands disqualification of 20 rebel TMC MPs

ನವದೆಹಲಿ, ಜೂನ್ 19: ಪಶ್ಚಿಮ ಬಂಗಾಳದ ಸಾರ್ವತ್ರಿಕ ಚುನಾವಣೆಗಳ ಬೆನ್ನಲ್ಲೇ ಟಿಎಂಸಿ (TMC) ಪಕ್ಷದಲ್ಲಿ ಭಾರಿ ರಾಜಕೀಯ ಬಿರುಗಾಳಿ ಎದ್ದಿದೆ. ಪಕ್ಷದ ನಿಲುವಿಗೆ ವಿರುದ್ಧವಾಗಿ ಬಂಡಾಯ ಎದ್ದು, ಬೇರೆ ಪಕ್ಷದೊಂದಿಗೆ ವಿಲೀನ ಪ್ರಕ್ರಿಯೆಗೆ ಮುಂದಾಗಿರುವ 20 ಸಂಸದರ ವಿರುದ್ಧ ಟಿಎಂಸಿ ಹೈಕಮಾಂಡ್ ಕಠಿಣ ಕ್ರಮಕ್ಕೆ ಮುಂದಾಗಿದೆ. ನವದೆಹಲಿಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿರುವ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ, ಆ ಎಲ್ಲಾ 20 ಬಂಡಾಯ ಸಂಸದರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಬೇಕು ಎಂದು ಲಿಖಿತ ಮನವಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ ಟಿಎಂಸಿ ಪಕ್ಷದ ಸುಮಾರು 20 ಸಂಸದರು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಪ್ರತ್ಯೇಕ ಬಣ ರಚಿಸಿಕೊಂಡಿದ್ದರು. ಈ ಬಣವು ಮತ್ತೊಂದು ಪ್ರಮುಖ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ಮಾತುಕತೆ ನಡೆಸಿತ್ತು. ಸಂಸತ್ತಿನಲ್ಲಿ ಪಕ್ಷಾಂತರ ನಿರೋಧಕ ಕಾಯ್ದೆಯಿಂದ ಬಚಾವಾಗಲು 2/3ರಷ್ಟು ಬಹುಮತದ ಅಗತ್ಯವಿದ್ದು, ಈ ಸಂಸದರು ಆ ತಾಂತ್ರಿಕತೆಯನ್ನು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ.

ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನೇತೃತ್ವದ ಟಿಎಂಸಿ ಉನ್ನತ ಮಟ್ಟದ ನಿಯೋಗವು ಇಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಯಿತು. ಪಕ್ಷದ 20 ಬಂಡಾಯ ಸಂಸದರು ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ (NCPI) ಪಕ್ಷದೊಂದಿಗೆ ವಿಲೀನಗೊಂಡಿದ್ದೇವೆ ಎಂದು ಮಾಡಿರುವ ದಾವೆಯನ್ನು ನಿಯೋಗವು ಕಟ್ಟುನಿಟ್ಟಾಗಿ ವಿರೋಧಿಸಿತು. ಈ ನಿಯೋಗದಲ್ಲಿ ಟಿಎಂಸಿ ಹಿರಿಯ ನಾಯಕರಾದ ಕಲ್ಯಾಣ್ ಬ್ಯಾನರ್ಜಿ, ಡೆರೆಕ್ ಒಬ್ರಿಯಾನ್, ಮಹುವಾ ಮೊಯಿತ್ರಾ ಮತ್ತು ಸೌಗತಾ ರಾಯ್ ಇದ್ದರು.

ಇದನ್ನೂ ಓದಿ: ಎನ್‌ಸಿಪಿಐಗೆ ಹೊಸ ಅಧ್ಯಕ್ಷರ ನೇಮಕ: ಟಿಎಂಸಿ ಬಂಡಾಯ ಸಂಸದರ ಅರ್ಜಿ ಸ್ವೀಕರಿಸುತ್ತಾರಾ ಸ್ಪೀಕರ್ ಓಂ ಬಿರ್ಲಾ?

ಲೋಕಸಭೆಯಲ್ಲಿ ಟಿಎಂಸಿ ಪಕ್ಷದ ಸಂಸದೀಯ ನಾಯಕರೂ ಆಗಿರುವ ಅಭಿಷೇಕ್ ಬ್ಯಾನರ್ಜಿ ದೆಹಲಿಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದರು. ಸಂವಿಧಾನದ 10ನೇ ಶೆಡ್ಯೂಲ್ (ಪಕ್ಷಾಂತರ ನಿರೋಧಕ ಕಾಯ್ದೆ) ಅಡಿಯಲ್ಲಿ ಈ 20 ಸಂಸದರು ಮೂಲ ಪಕ್ಷದ ವಿಪ್​ಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಆದ್ದರಿಂದ ಇವರ ವಿರುದ್ಧ ತಕ್ಷಣವೇ ಕ್ರಮ ಕೈಗೊಂಡು ಲೋಕಸಭೆಯಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಎನ್‌ಸಿಪಿಐ ಜೊತೆಗಿನ ವಿಲೀನದ ನಂತರ ತಮಗೆ ಪ್ರತ್ಯೇಕ ಗುಂಪಾಗಿ ಮಾನ್ಯತೆ ನೀಡಬೇಕೆಂದು ಕೋರಿ 20 ಬಂಡಾಯ ಸಂಸದರು ಸಲ್ಲಿಸಿದ್ದ ಮನವಿಯ ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ, ಲೋಕಸಭೆಯ ಟಿಎಂಸಿ ನಾಯಕರಾಗಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಪಕ್ಷದ ನಿಲುವನ್ನು ಮಂಡಿಸಲು ಸ್ಪೀಕರ್ ಓಂ ಬಿರ್ಲಾ ಆಹ್ವಾನ ನೀಡಿದ್ದರು. ಕಳೆದ ವಾರವಷ್ಟೇ ಬ್ಯಾನರ್ಜಿ ಅವರು ಸ್ಪೀಕರ್ ಅವರಿಗೆ ಪತ್ರ ಬರೆದು, ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ನ ಪ್ರತ್ಯೇಕ ಬಣ ಎಂದು ಹೇಳಿಕೊಳ್ಳುವ ಯಾವುದೇ ಗುಂಪಿಗೆ ಯಾವುದೇ ರೀತಿಯ ಮಾನ್ಯತೆ, ಸ್ಥಾನಮಾನ ಅಥವಾ ಸಂಸದೀಯ ಸೌಲಭ್ಯಗಳನ್ನು ನೀಡದಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ‘ಎನ್‌ಸಿಪಿಐ’ ಜೊತೆ 20 ಟಿಎಂಸಿ ಬಂಡಾಯ ಸಂಸದರ ವಿಲೀನ, ಸಂಸತ್ತಿನಲ್ಲಿ ಹೊಸ ಬಣದ ಉದಯ

ಬಂಡಾಯ ಸಂಸದರ ವಿರುದ್ಧ ಕೇವಲ ರಾಜಕೀಯವಾಗಿ ಮಾತ್ರವಲ್ಲದೆ, ಕಾನೂನಾತ್ಮಕವಾಗಿಯೂ ಹೋರಾಡಲು ಮಮತಾ ಬ್ಯಾನರ್ಜಿ ಬ್ಲೂಪ್ರಿಂಟ್ ಸಿದ್ಧಪಡಿಸಿದ್ದಾರೆ. ಒಂದು ವೇಳೆ ಲೋಕಸಭಾ ಸ್ಪೀಕರ್ ಕಡೆಯಿಂದ ಕ್ರಮ ಕೈಗೊಳ್ಳಲು ವಿಳಂಬವಾದರೆ, ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಕೂಡ ಟಿಎಂಸಿ ಸಿದ್ಧತೆ ನಡೆಸಿದೆ. ಸದ್ಯಕ್ಕೆ ಓಂ ಬಿರ್ಲಾ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದರ ಬಗ್ಗೆ ಎಲ್ಲರ ಗಮನ ನೆಟ್ಟಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ನಿಮ್ಮ ಮನೆಗೆ ಬರಲಿದ್ದಾರೆ ಚೆಕ್ಕಿಂಗ್ ಆಫೀರ್ಸ್ – Kannada News | Guarantee Schemes Revision: DK Shivakumar Governmnet to Plan Door To door survey for document verification

ಬೆಂಗಳೂರು, (ಜೂನ್ 19): ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಿಗೆ (guarantee schemes) ಆಪರೇಷನ್ ಮಾಡಲು ಸಿಎಂ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅನರ್ಹರಿಗೆ ಸಂಪೂರ್ಣವಾಗಿ ಬ್ರೇಕ್ ಹಾಕಿ ಅರ್ಹರಿಗೆ ಮುಟ್ಟಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕಾಗಿ ನಾನಾ ನಿಯಮಗಳನ್ನ ಜಾರಿಗೆ ತರುವ ಚಿಂತನೆಗಳು ನಡೆದಿವೆ. ಇಂದು (ಜೂನ್ 19) ವಿಧಾನಸೌಧದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಹಿರಿಯ ಅಧಿಕಾರಿಗಳು ಹಾಗೂ ಸಚಿವರ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವ ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೂ ತೊಂದರೆಯಾಗಬಾರದು. ಆದರೆ, ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅನರ್ಹರಿಗೆ ಮಾತ್ರ ತಕ್ಷಣವೇ ಬ್ರೇಕ್ ಹಾಕಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೀಗಾಗಿ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಲು ತೀರ್ಮಾನಿಸಲಾಗಿದೆ

ಗೃಹಲಕ್ಷ್ಮೀ ಮತ್ತು ಗೃಹಜ್ಯೋತಿ ಯೋಜನೆಗೆ ಮರು ಪರಿಶೀಲನೆ ಅರ್ಜಿ ಹಾಕಬೇಕು. ಮರು ಪರಿಶೀಲನೆ ಅರ್ಜಿ ಸಲ್ಲಿಕೆ ಬಳಿಕ ಮನೆ ಮನೆಗೆ ತೆರಳಿ ಅಧಿಕಾರಿಗಳಿಂದ ಸರ್ವೆ ಮಾಡಿಸುವ ಚಿಂತನೆ ನಡೆಸಿದ್ದು, ಒಟ್ಟು 10 ಅಂಶಗಳ ಮೂಲಕ ಮಾಹಿತಿ ಪಡೆಯಲು ಸರ್ಕಾರ ಮುಂದಾಗಿದೆ. ಯಜಮಾನಿ ಹೆಸರು, ಪಡಿತರ ಚೀಟಿ ಸಂಖ್ಯೆ, ಮಂಜೂರಾತಿ ಪತ್ರ ಸಂಖ್ಯೆ, ಬ್ಯಾಂಕ್ ಖಾತೆ, ಮನೆ ವಿಳಾಸ, ಮತದಾರರ ಗುರುತಿನ ಚೀಟಿ ಸಂಖ್ಯೆ, ಆಧಾರ್ ಸಂಖ್ಯೆ, ಪತಿಯ ಮಾಹಿತಿ, ಯಾವ ಕ್ಯಾಟಗರಿ, ಮೊಬೈಲ್ ಸಂಖ್ಯೆ ಹೀಗೆ 10 ಅಂಶಗಳ ಮೂಲಕ ಮಾಹಿತಿ ಪಡೆಯಲು ಮುಂದಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ತಂದೆಯ ಸ್ಮರಿಸಿದ ವಿನೋದ್ ಪ್ರಭಾಕರ್ – Kannada News | Vinod Prabhakar remembers his father Tiger Prabhakar in Balaramana Dinagalu movie press meet

ಬಹುನಿರೀಕ್ಷಿತ ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ತಂದೆ ಟೈಗರ್ ಪ್ರಭಾಕರ್ ಅವರನ್ನು ವಿನೋದ್ ನೆನಪಿಸಿಕೊಂಡರು. ‘ನಾನು ಇಲ್ಲಿ ನಿಂತಿದ್ದಕ್ಕೆ ನಮ್ಮ ತಂದೆ ಟೈಗರ್ ಪ್ರಭಾಕರ್ ಕಾರಣ. ಅವರು ಬಿಟ್ಟು ಹೋದ ಅಧ್ಯಾಯ ನಾನು. ಅವರು 52ನೇ ವರ್ಷಕ್ಕೆ ತೀರಿ ಹೋದರು. ಅವರ ಕನಸುಗಳು ಇನ್ನೂ ಬಹಳ ಇತ್ತು. ಕೆಲವು ಸಿನಿಮಾಗಳನ್ನು ನಮ್ಮ ತಂದೆಯವರು ಮಾಡಬೇಕಾಗಿತ್ತು. ಅವರ ಕನಸು ನನಗೆ ಗೊತ್ತಿತ್ತು. ಅದು ಬಲರಾಮನ ದಿನಗಳು ಕೂಡ ಆಗಿರಬಹುದು. ನಾವು ಯಾವುದೇ ಪ್ರಶಸ್ತಿ ತೆಗೆದುಕೊಂಡರೂ ನಮ್ಮ ತಂದೆಗೆ ಅರ್ಪಿಸುತ್ತೇನೆ’ ಎಂದು ಅವರು ಹೇಳಿದರು. ‘ಬಲರಾಮನ ದಿನಗಳು’ ಸಿನಿಮಾ ಜೂನ್ 26ರಂದು ಬಿಡುಗಡೆ ಆಗಲಿದೆ. ಕೆ.ಎಂ. ಚೈತನ್ಯ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಪದ್ಮಾವತಿ ಜಯರಾಮ್ ಮತ್ತು ಶ್ರೇಯಸ್ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಕೋಚ್?

Source link

ರಾಹುಲ್ ಗಾಂಧಿಯನ್ನು ಪರಶುರಾಮನ ಅವತಾರದಲ್ಲಿ ಚಿತ್ರಿಸಿ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು! – Kannada News | Congress Workers Pour Milk On Rahul Gandhi Portrait Depicted As Lord Parashurama In Varanasi on his 56th Birthday

ನವದೆಹಲಿ, ಜೂನ್ 19: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 56ನೇ ಜನ್ಮದಿನದ ಪ್ರಯುಕ್ತ ವಾರಾಣಸಿಯ ಗಂಗಾ ನದಿಯ ಘಾಟ್‌ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪೋಸ್ಟರ್ ಒಂದನ್ನು ಪ್ರದರ್ಶಿಸಿದ್ದಾರೆ. ಈ ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ (Rahul Gandhi) ಅವರನ್ನು ಭಗವಾನ್ ಪರಶುರಾಮನ ರೂಪದಲ್ಲಿ ಬಿಂಬಿಸಲಾಗಿದ್ದು, ಗಂಗಾನದಿಯ ನೀರಿನಲ್ಲಿ ನಿಂತು ಆ ಪೋಸ್ಟರ್‌ಗೆ ಕ್ಷೀರಾಭಿಷೇಕ ಮಾಡುವ ಮೂಲಕ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲಾಗಿದೆ. ಈ ಘಟನೆ ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದೆ. ವಾರಾಣಸಿಯಲ್ಲಿ ನಡೆದ ಈ ಆಚರಣೆಯಲ್ಲಿ ವೇದ ಮಂತ್ರಗಳನ್ನು ಪಠಿಸುತ್ತಾ, ಕಾಂಗ್ರೆಸ್ ಕಾರ್ಯಕರ್ತರು ಗಂಗಾನದಿಯಲ್ಲಿ ನಿಂತು ರಾಹುಲ್ ಗಾಂಧಿ ಅವರ ಭಾವಚಿತ್ರಕ್ಕೆ ಹಾಲನ್ನು ಸುರಿದು ಮಂತ್ರಘೋಷಗಳೊಂದಿಗೆ ಶುಭ ಹಾರೈಸಿದ್ದಾರೆ. ಈ ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ ಒಂದು ಕೈಯಲ್ಲಿ ಕೊಡಲಿಯನ್ನು ಮತ್ತು ಇನ್ನೊಂದು ಕೈಯಲ್ಲಿ ಭಾರತದ ಸಂವಿಧಾನವನ್ನು ಹಿಡಿದಿರುವುದನ್ನು ಚಿತ್ರಿಸಲಾಗಿತ್ತು.

(Video Source: PTI)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಾವೇರಿಯಲ್ಲಿ ಚಿನ್ನ ನಿಕ್ಷೇಪಗಳು ಪತ್ತೆ: ಬಂಗಾರದಂತ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿ ರೈತರು – Kannada News | Ganjur Gold Mining Project: Farmers Fear Land Acquisition and Environmental Impact

ಚಿನ್ನ ನಿಕ್ಷೇಪಗಳು ಪತ್ತೆImage Credit source: tv9 kannada

ಹಾವೇರಿ, ಜೂನ್​​ 19: ಹಾವೇರಿ (haveri) ಸಮೀಪದ ಗಣಜೂರಿನಲ್ಲಿ ಚಿನ್ನದ ಗಣಿಗಾರಿಕೆ (gold mining) ಶುರುವಾಗಲಿದೆ ಎಂಬ ವಿಚಾರ ಸದ್ಯ ಚರ್ಚೆಗೆ ಗ್ರಾಸವಾಗಿದೆ. 2015ರಲ್ಲಿ ನಡೆದ ಸಂಶೋಧನೆಯಲ್ಲಿ ಚಿನ್ನ ನಿಕ್ಷೇಪಗಳು ಇರುವುದು ಪತ್ತೆಯಾಗಿತ್ತು. ಹೀಗಾಗಿ ಇದೀಗ ಚಿನ್ನದ ಗಣಿಗಾರಿಕೆ ಪ್ರಾರಂಭಗಲಿದೆ ಎನ್ನಲಾಗುತ್ತಿದೆ. ಈ ಕುರಿತಾಗಿ ಅನ್ನದಾತರಿಗೆ ಆತಂಕ ಹೆಚ್ಚಿದ್ದು, ಭೂಮಿ ಕೊಟ್ಟು ಏನು ಮಾಡಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಾಂಶಗಳು

  • 2015ರಲ್ಲಿ ನಡೆದಿದ್ದ ಸಂಶೋಧನೆಯಲ್ಲಿ ಚಿನ್ನ ನಿಕ್ಷೇಪಗಳು ಪತ್ತೆ
  • ಗಣಜೂರಿನಲ್ಲಿ ಜೋರಾದ ಚಿನ್ನದ ಗಣಿಗಾರಿಕೆ ಶುರುವಾಗುತ್ತೆ ಎಂಬ ಚರ್ಚೆ
  • ಅನ್ನದಾತರಿಗೆ ಹೆಚ್ಚಿದ ಆತಂಕ

2015ರಲ್ಲೇ ಚಿನ್ನ ನಿಕ್ಷೇಪಗಳು ಪತ್ತೆ

ಹಾವೇರಿ ತಾಲೂಕಿನ ಗಣಜೂರಿನಲ್ಲಿ ಚಿನ್ನದ ಗಣಿಗಾರಿಕೆ ‌ಪ್ರಾರಂಭವಾಗುತ್ತದೆ ಎಂಬ ಚರ್ಚೆ ಶುರುವಾಗಿದೆ. 2015ರಲ್ಲಿ ಸಂಶೋಧನಾ ಮಾಡಿ ಚಿನ್ನ ಇರುವುದು ಖಚಿತಪಡಿಸಲಾಗಿದೆ. ಚಿನ್ನದ ಗಣಿಗಾರಿಕೆಗೆ ಪೂರಕವಾದ ವಾತಾವರಣವಿದ್ದ ಗ್ರಾಮದ ಮೇಲೆ 2015ರಲ್ಲಿ ಡೆಕ್ಕನ್ ಗೋಲ್ಡ್ ಮೈನ್ಸ್ ಕಂಪನಿಯ ಕಣ್ಣುಬಿದ್ದಿತ್ತು. ಪ್ರಾಥಮಿಕ ಪರವಾನಗಿ ಮೂಲಕ ಸಂಶೋಧನೆ ಆರಂಭಿಸಿತ್ತು. ಡೆಕ್ಕನ್ ಎಕ್ಸ್‌ಪ್ಲೋರೇಶನ್ ಸರ್ವೀಸಸ್ ಹೆಸರಿನಲ್ಲಿ ಜಮೀನಿನಲ್ಲಿ ಕೊಳವೆ ಬಾವಿ ಕೊರೆದು ಕಲ್ಲಿನ ಮಾದರಿ ಸಂಗ್ರಹಿಸಿ ಪರೀಕ್ಷಿಸಲಾಗಿತ್ತು. ಕಲ್ಲುಗಳಲ್ಲಿ ಯಥೇಚ್ಚವಾಗಿ ಚಿನ್ನದ ಅಂಶವಿರುವುದು ಸಾಬೀತಾಗಿತ್ತು.

ಇದನ್ನೂ ಓದಿ: ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ನಡೆಯಿತು ಶೋಧಕಾರ್ಯ

ಸಂಶೋಧನೆಗಾಗಿ ಕಂಪನಿಯು ಕೋಟ್ಯಂತರ ರೂ ಖರ್ಚು ಮಾಡಿತ್ತು. ರೈತರ ಜಮೀನು ಲೀಜ್ ಹಾಕಿಕೊಂಡು 7 ರಿಂದ 8 ವರ್ಷ ಸಂಶೋಧನೆ ಮಾಡಲಾಗಿತ್ತು. ಅಲ್ಲದೇ ವರದಿಯನ್ನ ಸರ್ಕಾರಕ್ಕೆ ಸಲ್ಲಿಸಿದ್ದರು. ಈಗ ಮತ್ತೆ ಮಹಾರಾಷ್ಟ್ರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗ್ರೀನ್ ಸಿಂಗಲ್ ಕೊಟ್ಟಿದೆ. ಹೀಗಾಗಿ ಗಣಜೂರಿನಲ್ಲಿ ಚಿನ್ನದ ಗಣಿಗಾರಿಕೆ ಶುರುವಾಗುತ್ತಾ ಅನ್ನೋ ಚರ್ಚೆ ಶುರುವಾಗಿದೆ.

ಸದ್ಯದಲ್ಲೇ ಗಣಿಗಾರಿಕೆ ಪ್ರಕ್ರಿಯೆ ಆರಂಭ ಸಾಧ್ಯತೆ

ರಾಯಚೂರಿನ ಹಟ್ಟಿ ಹಾಗೂ ಕೆಜಿಎಫ್‌ ಗಣಿಗಿಂತಲೂ ಹೆಚ್ಚಿನ ಚಿನ್ನ ಗಣಜೂರಿನಲ್ಲಿದೆ ಎನ್ನಲಾಗುತ್ತಿದೆ. ಖಾತ್ರಿಯಾಗುತ್ತಿದ್ದಂತೆ, ಪೂರ್ಣ ಪ್ರಮಾಣದ ಗಣಿಗಾರಿಕೆಗೆ ಅರ್ಜಿ ಸಲ್ಲಿಸಿತ್ತು. ಕೆಲ ಕಾನೂನುಗಳಿಂದ ಅರ್ಜಿ ತಿರಸ್ಕಾರವಾಗಿತ್ತು. ಈಗ ಮಹಾರಾಷ್ಟ್ರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ಆದೇಶ, ಗಣಜೂರು ಗಣಿಗಾರಿಕೆ ಯೋಜನೆ ಆರಂಭಕ್ಕೆ ಪೂರಕವಾಗಿರುವ ಅಂಶ ಹೊಂದಿರುವ ಮಾಹಿತಿ ಲಭ್ಯವಾಗಿದೆ. ಸದ್ಯದಲ್ಲೇ ಗಣಿಗಾರಿಕೆ ಪ್ರಕ್ರಿಯೆ ಆರಂಭವಾಗುವ ಲಕ್ಷಣಗಳಿವೆ.

ಜಮೀನು ಕೊಟ್ಟು ಎಲ್ಲಿಗೆ ಹೋಗಬೇಕು: ರೈತರು ಆಕ್ರೋಶ

ಸುಮಾರು 400 ಎಕರೆ ಪ್ರದೇಶ ಗುರುತಿಸಲಾಗಿದೆ. 70ಕ್ಕೂ ಅಧಿಕ ಎಕರೆ ಪ್ರದೇಶದಲ್ಲಿ ಹೇರಳವಾಗಿ ಚಿನ್ನದ ನಿಕ್ಷೇಪ ಇದೆ ಎನ್ನಲಾಗಿದೆ. ಕಂಪನಿ ರೈತರೊಂದಿಗೆ ಸಭೆ ಮಾಡಬೇಕು. ನಮಗೆ ಇರುವುದು ಒಂದೆರೆಡು ಎಕರೆ ಜಮೀನು. ನಾವು ಜಮೀನು ಕೊಟ್ಟು ಎಲ್ಲಿಗೆ ಹೋಗಬೇಕು. ಹೀಗಾಗಿ ಮತ್ತೆ ರೈತರಿಗೆ ಕಿರುಕುಳ ಪ್ರಾರಂಭವಾಗಿದೆ ಎಂದು ರೈತ ಸುರೇಶ ಚಲವಾದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹೆಲಿಕಾಪ್ಟರ್ ಮೂಲಕ ಚಿನ್ನ ನಿಕ್ಷೇಪ ಹುಡುಕಾಟ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿ

ಒಟ್ಟಿನಲ್ಲಿ ಗಣಜೂರಿಗೆ ಇತಿಹಾಸ ಪ್ರಸಿದ್ಧ ಹೆಸರು ಚಿನ್ನದೂರು ಎನ್ನಲಾಗಿದೆ. ಈ ಹಿಂದೆಯೇ ಚಿನ್ನದ ನಿಕ್ಷೇಪಗಳು ಇವೆ ಎನ್ನಲಾಗಿದೆ. ಡೆಕ್ಕನ್ ಮೈನಿಂಗ್ ಕಂಪನಿ ಚಿನ್ನದ ಗಣಿಗಾರಿಕೆಗೆ ತುದಿಗಾಲಿನಲ್ಲಿ ನಿಂತಿದೆ. ರೈತರು ಮುಂದಿನ ದಿನಗಳಲ್ಲಿ ಯಾವ ರೀತಿ ಸ್ಪಂದಿಸುತ್ತಾರೆ ಅನ್ನೋದು ಕಾದು ನೋಡಬೇಕಿದೆ.

ವರದಿ: ಅಣ್ಣಪ್ಪ ಬಾರ್ಕಿ ಟಿವಿ9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕಿಲ್ಲರ್​ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿ: ಓರ್ವ ಮಗು ಸ್ಥಿತಿ ಗಂಭೀರ – Kannada News | Horrific Accident in Hoskote: Speeding BMTC Bus Flying on Wrong Route Wipes Out Family of Three

ಕಿಲ್ಲರ್​ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿImage Credit source: Tv9 Kannada

ದೇವನಹಳ್ಳಿ, ಜೂನ್​​ 19: ಕಿಲ್ಲರ್​ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಅಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿ ನಡೆದಿದೆ. ಬೈಕ್​ಗೆ ಬಿಎಂಟಿಸಿ ಬಸ್​ ಡಿಕ್ಕಿಯಾದ ಪರಿಣಾಮ ದಂಪತಿ, ಪುತ್ರಿ ಮತಪಟ್ಟಿದ್ದಾರೆ. ಮೃತರನ್ನುಅರುಣ್(35), ಅನುಷಾ(32) ಮತ್ತು ಹರ್ನಾ(2) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 5 ವರ್ಷದ ಅನುಶಿಕಾಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸೂಲಿಬೆಲೆಯಿಂದ ಹೊಸಕೋಟೆ ಕಡೆಗೆ ಹೋಗ್ತಿದ್ದ ಬಿಎಂಟಿಸಿ ಬಸ್ ದೇವನಹಳ್ಳಿ ಕಡೆ ಇಬ್ಬರು ಮಕ್ಕಳೊಂದಿಗೆ ಹೋಗ್ತಿದ್ದ ದಂಪತಿ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದಿದೆ. ರಾಂಗ್ ರೂಟ್​ನಲ್ಲಿ ಬಿಎಂಟಿಸಿ ಬಸ್ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಮೃತರು ದೇವನಹಳ್ಳಿ ತಾಲೂಕಿನ ತೆಲ್ಲಹಳ್ಳಿ ಗ್ರಾಮದ ನಿವಾಸಿಗಳು ಎಂಬುದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಸೂಲಿಬೆಲೆ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲೊಂದು ವಿಚಿತ್ರ ಘಟನೆ; ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!

2 ದಿನಗಳಲ್ಲಿ ಬಿಎಂಟಿಸಿಗೆ ನಾಲ್ವರು ಬಲಿ

ಬಿಎಂಟಿಸಿ ಎಲೆಕ್ಟ್ರಿಕ್ ‌ಬಸ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಮಂಗನಹಳ್ಳಿ ಕ್ರಾಸ್ ಬಳಿ ನಿನ್ನೆ (ಜೂನ್​​ 18) ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ರಾಜು(58) ಮೃತ ದುರ್ದೈವಿಯಾಗಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದ ಈತ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಸ್ ಹರಿದು ದುರಂತ ಸಂಭವಿಸಿತ್ತು. ಮನೆಗೆ ತರಕಾರಿ ತರೋಣ ಅಂತಾ ಹೊರಗೆ ಬಂದಿದ್ದ ರಾಜು, ಮಂಗನಹಳ್ಳಿ ಕ್ರಾಸ್ ಬಳಿ ರಸ್ತೆ ದಾಟುವ ವೇಳೆ ಅಮ್ಮ ಆಶ್ರಮ ಸರ್ಕಲ್ ಕಡೆಯಿಂದ ಅತಿ ವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ರಾಜು ಮೈ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಘಟನೆ ಮಾಸುವ ಮುನ್ನವೇ ಬಿಎಂಟಿಸಿ ಬಸ್​​ ಈಗ ಮತ್ತೆ ಮೂವರ ಬಲಿ ಪಡೆದಿರೋದು ಆತಂಕಕ್ಕೆ ಕಾರಣವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್? – Kannada News | Karnataka Transport Corporations Seeks Government about Bus Fare Hike

ಬೆಂಗಳೂರು, (ಜೂನ್ 19): ಪೆಟ್ರೋಲ್ ಡೀಸೆಲ್ ಹಾಗೂ ಗ್ಯಾಸ್ ಸಿಲೆಂಡರ್ ದರ ಏರಿಕೆ ಬೆನ್ನಲ್ಲೇ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಇದರ ಮಧ್ಯೆ ಇದೀಗ ಕರ್ನಾಟಕದಲ್ಲಿ ಸಾರಿಗೆ ಬಸ್​ ಟಿಕೆಟ್ ದರ ಏರಿಕೆ ಚರ್ಚೆಗಳು ನಡೆದಿವೆ. ಹೀಗಾಗಿ ಸಾರ್ವಜನಿಕರಿಗೆ ಮತ್ತೊಂದು ಬೆಲೆ ಏರಿಕೆ ಆತಂಕ ಶುರುವಾಗಿದೆ. ಹೌದು…ಬಸ್ ಪ್ರಯಾಣ ದರ ಹೆಚ್ಚಳ ಮಾಡುವಂತೆ ಸಾರಿಗೆ ನಿಗಮಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿವೆ. ಇಮದು (ಜೂನ್ 19) ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಗ್ಯಾರಂಟಿ ಪ್ರಗತಿ ಪರಿಶೀಲನೆ ವೇಳೆ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳು ಪ್ರಸ್ತಾಪಿಸಿವೆ.

ಡೀಸೆಲ್​ ದರ ಮತ್ತು ಸಿಬ್ಬಂದಿ ಹೆಚ್ಚಳವಾಗಿದೆ. ಜೊತೆಗೆ ಸಿಬ್ಬಂದಿ ವೇತನ ಬಾಕಿ 1,271 ಕೋಟಿ ರೂಪಾಯಿ ಪೈಕಿ 450 ಕೋಟಿ ರೂ. ಬಿಡುಗಡೆ ಆಗಿದೆ. ಆದ್ದರಿಂದ ಪ್ರಯಾಣದ ದರ ಹೆಚ್ಚಳಕ್ಕೆ ಅನುಮತಿ ಕೊಡುವಂತೆ ಸರ್ಕಾರಕ್ಕೆ ಮನವಿ ಮಾಡಿವೆ. 2025ರ ಜನವರಿ 5ರಂದು ಬಸ್​ ಪ್ರಯಾಣ ದರ ಹೆಚ್ಚಳ ಮಾಡಲಾಗಿತ್ತು. ಇದೀಗ ಡೀಸೆಲ್​ ಬೆಲೆ ಏರಿಕೆಯಿಂದ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾಪ ಮಾಡಿದ್ದು, ರಾಜ್ಯ ಸರ್ಕಾರ ಯಾವ ತೀರ್ಮಾನ ಕೈಗೊಳ್ಳುತ್ತೆ ಎಂದು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link