ಸೋತು ಸುಣ್ಣವಾಗಿರೋ ನಿರ್ದೇಶಕನ ಜೊತೆ ಕೈ ಜೋಡಿಸಿದ ರಣವೀರ್ ಸಿಂಗ್? – Kannada News | Ranveer Singh Joins Shankar’s Velpari: Bollywood Star in Pan India Historical Epic with Vikram
ರಣವೀರ್ ಸಿಂಗ್ ನಟನೆಯ ‘ಧುರಂಧರ್’ (Dhurandhar) ಬಾಲಿವುಡ್ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ಮುರಿಯುತ್ತಲೇ ಇದೆ. ಸಾವಿರ ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿರುವ ಈ ಚಿತ್ರ ಪ್ರೇಕ್ಷಕರನ್ನು ಮೋಡಿ ಮಾಡಿದೆ. ಚಿತ್ರಮಂದಿರಗಳಲ್ಲಿ ಸಂಚಲನ ಮೂಡಿಸಿರುವ ಈ ಚಿತ್ರ ಶುಕ್ರವಾರದಿಂದ ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಅಲ್ಲಿಯೂ ಸಿನಿಮಾ ಮೆಚ್ಚುಗೆ ಪಡೆದಿದೆ. ಈಗ ರಣವೀರ್ ಸಿಂಗ್ ಅವರು ದಕ್ಷಿಣದ ನಿರ್ದೇಶಕನ ಜೊತೆ ಕೈ ಜೋಡಿಸುತ್ತಿದ್ದಾರೆ ಎಂದು ವರದಿ ಆಗಿದೆ. ಅದು ಕೂಡ ಸತತ ಸೋಲು ಕಂಡ ನಿರ್ದೇಶಕ. ಐದು ವರ್ಷಗಳ…