ಬಂಧನಕ್ಕೆ ಬಂದ ಪೊಲೀಸರ ಮೇಲೆಯೇ ‘ಕೈ’ ಮುಖಂಡನ ಪುತ್ರನಿಂದ ನಡೀತಾ ಹಲ್ಲೆ? – Kannada News | Minister’s Aide Son Attacks Cops Amidst Hospital Brawl Case In Davanagere
ದಾವಣಗೆರೆ, ಜನವರಿ 31: ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಯುವಕರ ಮೇಲೆ ದಾಳಿ ಪ್ರಕರಣ ಸಂಬಂಧ ಬಂಧಿಸಲು ಬಂದ ಪೊಲೀಸರ ಮೇಲೆಯೇ ಕಾಂಗ್ರೆಸ್ ಮುಖಂಡ, ಸಚಿವರ ಆಪ್ತನ ಮಗ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಪೈಲ್ವಾನ್ ಪುತ್ರ ಹಸನ್ ಆರೋಪಿಯಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಆಪ್ತರೂ ಆಗಿರುವ ಅಯೂಬ್ ಪೈಲ್ವಾನ್ ಮನೆ ಮುಂದೆ ಭಾರಿ ಹೈಡ್ರಾಮಾ ನಡೆದಿದೆ. ಅಂತಿಮವಾಗಿ ಹಸನ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಷ್ಟಕ್ಕೂ ಆಗಿದ್ದೇನು?…