All posts by nagaraj11081993

RCB ವಿರುದ್ಧದ ಪಂದ್ಯಕ್ಕೆ ಧೋನಿ ಅಲಭ್ಯ..!

Source link

ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ 5 ದಿನ ಮಳೆ ಸಾಧ್ಯತೆ: ಹವಾಮಾನ ತಜ್ಞ ಸಿಎಸ್ ಪಾಟೀಲ್ ಮುನ್ಸೂಚನೆ

ಬೆಂಗಳೂರು, ಮಾರ್ಚ್ 30: ಕರ್ನಾಟಕದ ವಿವಿಧೆಡೆ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. ಮಾರ್ಚ್ 30 ರಿಂದ ಏಪ್ರಿಲ್ 3 ರವರೆಗೆ ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 35-36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅವರು ಹೇಳಿದ್ದಾರೆ.

ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಸಹ ಇದೇ ಅವಧಿಯಲ್ಲಿ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ 39-40 ಡಿಗ್ರಿ ಸೆಲ್ಸಿಯಸ್ ತಲುಪುವ ಸಂಭವವಿದೆ. ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ 37-39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ 34-36 ಡಿಗ್ರಿ ಸೆಲ್ಸಿಯಸ್, ಹಾಗೂ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ 36-38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದ ನಿರೀಕ್ಷೆಯಿದೆ. ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದ್ದು, ಆ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ ಇರಲಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಧ್ರುವ ಸರ್ಜಾ ಸಿನಿಮಾಗೆ ಕಾಂಪಿಟೇಷನ್ ಕೊಡಲು ಬಂದ ಟಾಲಿವುಡ್ ಸುಂದರಿ

ಧ್ರುವ ಸರ್ಜಾ (Dhruva Sarja) ನಟನೆಯ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಗಲು ರೆಡಿ ಆಗಿದೆ. ಅಂದರೆ ಇಂದಿಗೆ ಸರಿಯಾಗಿ ಒಂದು ತಿಂಗಳಿಗೆ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರವನ್ನು ಕೆವಿಎನ್ ನಿರ್ಮಾಣ ಸಂಸ್ಥೆ ನಿರ್ಮಿಸಿದೆ. ಈ ಚಿತ್ರಕ್ಕೆ ಧ್ರುವ ಹೀರೋ ಆದರೆ, ಶಿಲ್ಪಾ ಶೆಟ್ಟಿ ನಾಯಕಿ. ಈ ಸಿನಿಮಾಗೆ ಕಾಂಪಿಟೇಷನ್ ಕೊಡಲು ಟಾಲಿವುಡ್ ಸುಂದರಿಯ ಆಗಮನ ಆಗುತ್ತಿದೆ ಎಂದು ವರದಿ ಆಗಿದೆ. ಅದುವೇ ಸಮಂತಾ ರುತ್ ಫ್ರಭು.

2023ರಲ್ಲಿ ‘ಖುಷಿ’ ಸಿನಿಮಾ ಬಳಿಕ ಸಮಂತಾ ರುತ್ ಪ್ರಭು ಅವರು ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ಅಂದಿನಿಂದ ಇಂದಿನವರಿಗೆ ಅವರು ಜೀವನದಲ್ಲಿ ಸಾಕಷ್ಟು ಏರಿಳಿತ ಕಂಡರು. ಈಗ ರಾಜ್ ನಿಧಿಮೋರು ಅವರ ಜೊತೆ ಸಮಂತಾ ವಿವಾಹ ಆಗಿದ್ದಾರೆ. ವಿವಾಹದ ಬಳಿಕ ಅವರ ಮೊದಲ ಸಿನಿಮಾ ರಿಲೀಸ್ ಆಗುತ್ತಿದೆ. ಅದು ಕೂಡ ‘ಕೆಡಿ’ ಸಿನಿಮಾ ಎದುರು.

ನಂದಿನಿ ರೆಡ್ಡಿ ನಿರ್ದೇಶನದ, ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಕ್ರೈಮ್ ಆ್ಯಕ್ಷನ್ ಶೈಲಿಯಲ್ಲಿ ಮೂಡಿ ಬರುತ್ತಿದೆ. ಈ ಚಿತ್ರ ಮೇ 15ಕ್ಕೆ ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇದೆ. ಆದರೆ, ಮೇ 30ರಂದು ರಿಲೀಸ್ ಆಗಬೇಕಿದ್ದ, ‘ಪೆದ್ದಿ’ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ, ‘ಮಾ ಇಂಟಿ ಬಂಗಾರಂ’ ಚಿತ್ರವನ್ನು ಪ್ರೀಪೋನ್ಡ್​ ಮಾಡಲು ತಂಡ ಪ್ಲ್ಯಾನ್ ರೂಪಿಸಿದೆ.

ಇದನ್ನೂ ಓದಿ: ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ

ಮೇ 1 ಕಾರ್ಮಿಕರ ದಿನಾಚರಣೆ ಪ್ರಯುಕ್ತ ರಜೆ ಇದೆ. ಈ ದಿನವನ್ನು ತಂಡದವರು ಪರಿಗಣಿಸುವ ಸಾಧ್ಯತೆ ಇದೆ. ಇದರಿಂದ ‘ಕೆಡಿ’ ಸಿನಿಮಾಗೆ ರಾಜ್ಯದಲ್ಲಿ ಸಣ್ಣ ಮಟ್ಟದಲ್ಲಿ ಸ್ಪರ್ಧೆ ಏರ್ಪಡುವ ನಿರೀಕ್ಷೆ ಇದೆ. ಮಾ ಇಂಟಿ ಬಂಗಾರಂ ಚಿತ್ರವನ್ನು ಸಮಂತಾ ಅವರೇ ನಿರ್ಮಿಸಿದ್ದಾರೆ. ಅವರ ಪತಿ ಕೂಡ ನಿರ್ಮಾಣದಲ್ಲಿ ಸಹಾಯ ಮಾಡಿದ್ದಾರೆ. ಸಂತೋಷ್ ನಾರಾಯಣ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಾಹನ ಸವಾರರೇ ಗಮನಿಸಿ: ಏಪ್ರಿಲ್ 1 ರಿಂದ ಟೋಲ್‌ನಲ್ಲಿ ನಗದು ಪಾವತಿ ಬಂದ್; ಫಾಸ್ಟ್​ಟ್ಯಾಗ್ ಇಲ್ಲಾಂದ್ರೆ ನೋ ಎಂಟ್ರಿ!

ಬೆಂಗಳೂರು, ನೆಲಮಂಗಲ, ಮಾರ್ಚ್ 30: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ವಾಹನ ಸವಾರರಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮಹತ್ವದ ಸೂಚನೆಯೊಂದನ್ನು ನೀಡಿದೆ. ಏಪ್ರಿಲ್ 1, 2026 ರಿಂದ ಜಾರಿಗೆ ಬರುವಂತೆ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ (Toll Plazas) ನಗದು ಪಾವತಿಯನ್ನು (Cash Payment) ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ನೆಲಮಂಗಲ ಟೋಲ್ ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಈಗಾಗಲೇ ಸಾರ್ವಜನಿಕ ಪ್ರಕಟಣೆಯ ಫಲಕಗಳನ್ನು ಹಾಕಲಾಗಿದೆ.

ಏನೇನು ಬದಲಾವಣೆ?

ಹೊಸ ನಿಯಮದ ಪ್ರಕಾರ, ಟೋಲ್ ಬೂತ್​​ಗಳಲ್ಲಿ ನಗದು ಪಡೆಯಲಾಗುವುದಿಲ್ಲ. ಸುಗಮ ಪ್ರಯಾಣಕ್ಕಾಗಿ ಕಡ್ಡಾಯವಾಗಿ ಫಾಸ್ಟಾಗ್ ಅಥವಾ ಯುಪಿಐ ಮೂಲಕವೇ ಪಾವತಿ ಮಾಡಬೇಕಿದೆ. ಏಪ್ರಿಲ್ 15 ರಿಂದ ಫಾಸ್ಟಾಗ್ ಸ್ಕ್ಯಾನ್ ಆಗದಿದ್ದರೆ ಸಿಬ್ಬಂದಿ ಮ್ಯಾನುಯಲ್ ಆಗಿ ವಾಹನ ಸಂಖ್ಯೆ ನಮೂದಿಸಿ ಟೋಲ್ ಪಡೆಯುವುದನ್ನು ರದ್ದುಗೊಳಿಸಲಾಗಿದೆ. ಕೇವಲ ಆಟೋಮ್ಯಾಟಿಕ್ ಫಾಸ್ಟ್​ಟ್ಯಾಗ್ ರೀಡರ್ ಮೂಲಕ ಮಾತ್ರ ಪಾವತಿಗೆ ಅವಕಾಶವಿರುತ್ತದೆ. ನೆಲಮಂಗಲ-ಹಾಸನ ಹಾಗೂ ಬೆಂಗಳೂರು-ತುಮಕೂರು-ಪುಣೆ ಹೆದ್ದಾರಿಯ ಟೋಲ್ ಪ್ಲಾಜಾಗಳಲ್ಲಿ ಹೊಸ ನಿಯಮದ ಬಗ್ಗೆ ದೊಡ್ಡ ಫಲಕಗಳಲ್ಲಿ ಮಾಹಿತಿ ನೀಡಲಾಗಿದೆ.

ಹೀಗಾಗಿ ವಾಹನ ಸವಾರರು ತಮ್ಮ ಫಾಸ್ಟ್​ಟ್ಯಾಗ್ ಸಕ್ರಿಯವಾಗಿದೆಯೇ ಮತ್ತು ಅದರಲ್ಲಿ ಪೂರಕ ಬ್ಯಾಲೆನ್ಸ್ ಇದೆಯೇ ಎಂದು ಖಚಿತಪಡಿಸಿಕೊಂಡು ಹೆದ್ದಾರಿಗಿಳಿಯುವುದು ಉತ್ತಮ.

ವರದಿ: ಮಂಜುನಾಥ್, ಟಿವಿ9 ನೆಲಮಂಗಲ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್​​: ಏರಿಕೆಯಾಗುತ್ತಾ ನಂದಿನಿ ಉತ್ಪನ್ನಗಳ ಬೆಲೆ?

ಬೆಂಗಳೂರು, ಮಾರ್ಚ್​​ 30: ಯುದ್ಧದ ಸ್ಥಿತಿ ಮುಂದುವರಿದರೆ ಇಂಧನ ಬೆಲೆ ಏರಿಕೆ ಪರಿಣಾಮ ನಂದಿನಿ ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಅನಿವಾರ್ಯವಾಗಲಿದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಹಾಲು ಒಕ್ಕೂಟಗಳಿಗೆ ಗ್ಯಾಸ್ ಬಳಕೆಯನ್ನು ಶೇ. 55ರಷ್ಟು ಕಡಿಮೆ ಮಾಡುವಂತೆ ಸೂಚಿಸಲಾಗಿದೆ. ಇಲ್ಲವಾದರೆ ಶೇ. 30ರಷ್ಟು ಹೆಚ್ಚುವರಿ ವೆಚ್ಚವನ್ನು ಭರಿಸಬೇಕಾಗುತ್ತದೆ. ಈ ಹೆಚ್ಚುವರಿ ವೆಚ್ಚ ಅಂತಿಮವಾಗಿ ಗ್ರಾಹಕರ ಮೇಲೆ ಬೀಳಲಿದ್ದು, ಇದು ನಂದಿನಿ ಹಾಲು ಉತ್ಪನ್ನಗಳ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಸರ್ಕಾರ ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ವರದಿ: ಈರಣ್ಣಾ ಬಸವ, ಟಿವಿ9 ಕನ್ನಡ

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

VIDEO: ಪಾಕಿಸ್ತಾನ್ ಸೂಪರ್ ಲೀಗ್​ನ ‘ಕಳ್ಳಾಟ’ ಬಯಲು

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನ 6ನೇ ಪಂದ್ಯವು ವಿವಾದಕ್ಕೀಡಾಗಿದೆ. ಈ ವಿವಾದಕ್ಕೆ ಕಾರಣ ಪಂದ್ಯದ ವೇಳೆ ಕಂಡು ಬಂದ ಕಳ್ಳಾಟ. ಅಂದರೆ ಮ್ಯಾಚ್​ನ ಅಂತಿಮ ಓವರ್​ಗೂ ಮುನ್ನ ಪಾಕಿಸ್ತಾನದ ಸ್ಟಾರ್ ಆಟಗಾರರಾದ ಫಖರ್ ಝಮಾನ್, ಶಾಹೀನ್ ಅಫ್ರಿದಿ ಹಾಗೂ ಹಾರಿಸ್ ರೌಫ್ ಜೊತೆಗೂಡಿ ಬಾಲ್ ಟ್ಯಾಂಪರಿಂಗ್ ಮಾಡಿದ್ದಾರೆ.

ಪಂದ್ಯದ ಅಂತಿಮ ಓವರ್‌ನಲ್ಲಿ ಕರಾಚಿ ಕಿಂಗ್ಸ್ ಗೆಲುವಿಗೆ 14 ರನ್ ಬೇಕಿತ್ತು. ಆ ಸಮಯದಲ್ಲಿ ಲಾಹೋರ್​ ಖಲಂದರ್ಸ್​ ತಂಡದ ಆಟಗಾರ ಫಖರ್ ಝಮಾನ್ ಅವರು ಚೆಂಡಿನ ಮೇಲ್ಮೈಯನ್ನು ಉದ್ದೇಶಪೂರ್ವಕವಾಗಿ ಉಗುರಿನಿಂದ ಕೆರೆಯುತ್ತಿರುವುದು  ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನು ಗಮನಿಸಿದ ಅಂಪೈರ್ ಫೈಸಲ್ ಅಫ್ರಿದಿ ತಕ್ಷಣವೇ ಕ್ರಮ ಕೈಗೊಂಡರು. ಅಲ್ಲದೆ ಅಂತಿಮ ಓವರ್​ಗೂ ಮುನ್ನ ಚೆಂಡನ್ನು ಬದಲಿಸಿ ಲಾಹೋರ್ ಖಲಂದರ್ಸ್ ತಂಡಕ್ಕೆ  5 ರನ್​ಗಳ ದಂಡ ವಿಧಿಸಿದ್ದಾರೆ. ಇದರಿಂದ ಕರಾಚಿ ಕಿಂಗ್ಸ್​ ತಂಡದ ಗುರಿ 14 ರಿಂದ 9 ರನ್‌ಗಳಿಗೆ ಇಳಿಕೆಯಾಯಿತು.

ಇನ್ನು ಚೆಂಡು ವಿರೂಪಗೊಳಿಸಿದ ಫಖರ್ ಝಮಾನ್ ವಿರುದ್ಧ ಲೆವೆಲ್ 3 ಅಪರಾಧದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಒಂದು ವೇಳೆ ತಪ್ಪಿತಸ್ಥರೆಂದು ಸಾಬೀತಾದರೆ, ಫಖರ್ ಅವರನ್ನು ಕನಿಷ್ಠ ಒಂದು ಪಂದ್ಯದಿಂದ ಬ್ಯಾನ್ ಮಾಡಲಾಗುತ್ತದೆ. ಅಲ್ಲದೆ, ನಾಯಕ ಶಾಹೀನ್ ಅಫ್ರಿದಿ ಮೇಲೂ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಒಟ್ಟಿನಲ್ಲಿ ಪಾಕ್ ಆಟಗಾರರ ಮೋಸದಾಟದಿಂದಾಗಿ ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ ಮೇಲೆ ಕಳ್ಳಾಟದ ಕಾರ್ಮೋಡ ಕವಿದಿದ್ದು, ಟೂರ್ನಿಯ ವಿರುದ್ಧ ಪಾಕಿಸ್ತಾನ್ ಕ್ರಿಕೆಟ್ ಪ್ರೇಮಿಗಳಿಂದಲೇ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ.

 

Source link

ಪ್ರೇಯಸಿಯನ್ನು ಮನೆಯಲ್ಲಿ ಕೊಂದು ದೇಹವನ್ನು ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ನೌಕಾಪಡೆ ಸಿಬ್ಬಂದಿ

ವಿಶಾಖಪಟ್ಟಣಂ, ಮಾರ್ಚ್​ 30: ನೌಕಾಪಡೆಯ ಸಿಬ್ಬಂದಿ ಪ್ರೇಯಸಿಯನ್ನು ಮನೆಯಲ್ಲಿ ಕೊಲೆ(Murder) ಮಾಡಿ ದೇಹವನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ಚಿಂತಾದ ರವೀಂದ್ರ ಎಂಬಾತ ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ಪ್ರೇಯಸಿಯನ್ನು ಮನೆಗೆ ಕರೆಸಿಕೊಂಡು ಆಕೆಯನ್ನು ಕೊಲೆ ಮಾಡಿದ್ದಾನೆ. ಮೌನಿಕಾ ಮತ್ತು ರವೀಂದ್ರ ತಮ್ಮ ಮನೆಯಲ್ಲಿ ಸ್ವಲ್ಪ ಸಮಯ ಕಳೆದಿದ್ದರು. ಬಳಿಕ ಇಬ್ಬರ ನಡುವೆ ವಾಗ್ವಾದ ನಡೆದಿತ್ತು ಕೋಪದಲ್ಲಿ ರವೀಂದ್ರ ಆಕೆಯನ್ನು ಕೊಂಡು ತುಂಡು ತುಂಡಾಗಿ ಕತ್ತರಿಸಿದ್ದಾನೆ.

ಭಾರತೀಯ ನೌಕಾಪಡೆಯ ಹಡಗು (ಐಎನ್‌ಎಸ್) ಡೇಗಾದಲ್ಲಿ ನಿಯೋಜಿತರಾಗಿದ್ದ 35 ವರ್ಷದ ನೌಕಾಪಡೆಯ ಅಧಿಕಾರಿ ರವೀಂದ್ರ,2021 ರಲ್ಲಿ ಡೇಟಿಂಗ್ ಆ್ಯಪ್‌ನಲ್ಲಿ 29 ವರ್ಷದ ಮೌನಿಕಾ ಜೊತೆ ಡೇಟಿಂಗ್ ಆರಂಭಿಸಿದ್ದ. ಇಬ್ಬರೂ ಒಟ್ಟಿಗೆ ಸುತ್ತಾಡುತ್ತಿದ್ದರು.ಕೆಲವು ವಾರಗಳ ಹಿಂದೆ, ರವೀಂದ್ರನ ಹೆಂಡತಿ ವಿಜಯನಗರದಲ್ಲಿರುವ ತನ್ನ ಹೆತ್ತವರ ಮನೆಗೆ ಹೋಗಿದ್ದಳು. ಭಾನುವಾರ ಮಧ್ಯಾಹ್ನ ತನ್ನ ಪ್ರಿಯಕರ ರವೀಂದ್ರ ಜೊತೆ ಸಮಯ ಕಳೆಯಲು ಇದೇ ಸೂಕ್ತವಾದ ಸಂದರ್ಭವೆಂದು ಮೌನಿಕಾಳನ್ನು ಕರೆಸಿಕೊಳ್ಳಬೇಕೆಂದು ರವೀಂದ್ರ ನಿರ್ಧರಿಸಿದ್ದ.

ಸಂಜೆಯ ಹೊತ್ತಿಗೆ ಇಬ್ಬರ ನಡುವೆ ಜಗಳ ಆರಂಭವಾಯಿತು, ರವೀಂದ್ರ ಮೌನಿಕಾಳನ್ನು ಇರಿದು ಕೊಂದಿದ್ದಾನೆ, ಅವನು ದೇಹವನ್ನು ತುಂಡುಗಳಾಗಿ ಕತ್ತರಿಸಿ, ಕೆಲವು ಭಾಗಗಳನ್ನು ಚೀಲದಲ್ಲಿ ತುಂಬಿಸಿ, ಅವುಗಳನ್ನು ವಿಲೇವಾರಿ ಮಾಡಿದ್ದಾನೆ, ಕೆಲವು ಭಾಗಗಳನ್ನು ಫ್ರಿಡ್ಜ್​ನಲ್ಲಿಟ್ಟಿದ್ದ.

ಮತ್ತಷ್ಟು ಓದಿ: ಭಾವನಿಂದಲೇ ಬಾಮೈದ ಕೊಲೆ ಕೇಸ್: ನನ್ನ ಮಗನನ್ನ ಅಳಿಯನೇ ಕೊಂದ ಎಂದ ರಂಜಿತ್ ತಾಯಿ

ರವೀಂದ್ರ ಪೊಲೀಸ್ ಠಾಣೆಗೆ ಹೋಗಿ ತಾನು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಮೌನಿಕಾ ತನ್ನಿಂದ 3.5 ಲಕ್ಷ ರೂ.ಗಳನ್ನು ಪಡೆದಿದ್ದಳು ಮತ್ತು ತನ್ನ ಹೆಂಡತಿಗೆ ತಮ್ಮ ಸಂಬಂಧವನ್ನು ಬಹಿರಂಗಪಡಿಸುವುದಾಗಿ ಆಗಾಗ ಬೆದರಿಕೆ ಹಾಕುತ್ತಿದ್ದಳು. ಆಕೆಯನ್ನು ಕೊಲೆ ಮಾಡಿದ ದಿನ ಕೂಡ ಜಗಳ ನಡೆದಿತ್ತು ಎಂದು ರವೀಂದ್ರ ಹೇಳಿದ್ದಾನೆ.

ಪೊಲೀಸರು ಅಪರಾಧ ಸ್ಥಳಕ್ಕೆ ಧಾವಿಸಿದಾಗ, ರೆಫ್ರಿಜರೇಟರ್ ಮತ್ತು ಮನೆಯೊಳಗೆ ಕತ್ತರಿಸಿದ ದೇಹದ ಭಾಗಗಳು ಕಂಡುಬಂದವು, ಮೌನಿಕಾಳ ತಲೆ ಕಾಣೆಯಾಗಿತ್ತು. ರವೀಂದ್ರ ಅದನ್ನು ಬೇರೆ ಸ್ಥಳದಲ್ಲಿ ವಿಲೇವಾರಿ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಕಾಣೆಯಾದ ದೇಹದ ಭಾಗಗಳನ್ನು ಹುಡುಕಲು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ. ಕೊಲೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ತನ್ನ ಖಾಸಗಿ ಅಂಗದಲ್ಲಿ ತಂಬಾಕು, ಸಿಮ್ ಕಾರ್ಡ್​ ತಂದು ಜೈಲಿನಲ್ಲಿ ಸ್ಮಗ್ಲಿಂಗ್! ಯುವತಿ ಅಂದರ್

ಬೆಂಗಳೂರು, ಮಾರ್ಚ್​ 30: ಪರಪ್ಪನ ಅಗ್ರಹಾರದಲ್ಲಿ ನಿರಂತರವಾಗಿ ಅವ್ಯವಹಾರಗಳ ಪ್ರಕರಣಗಳು ವರದಿಯಾಗುತ್ತಿವೆ. ಡಿಜಿಪಿ ಅಲೋಕ್ ಕುಮಾರ್​ರಿಂದ  (DGP Alok Kumar) ಜಾರಿಯಾಗಿರುವ ಕಟ್ಟುನಿಟ್ಟಿನ ಕ್ರಮದ ನಂತರವೂ ಈ ಅವ್ಯವಹಾರಗಳಿಗೆ ಬ್ರೇಕ್ ಬಿದ್ದಿಲ್ಲ. ಜೈಲಿನಲ್ಲೇ ಕೂತು ಕೈದಿಗಳು ವೀಡಿಯೋ ಮಾಡಿರುವುದು ಚರ್ಚೆಯಾದ ಬೆನ್ನಲ್ಲೇ ಕಳೆದ ಗುರುವಾರ ನಡೆದ ಮತ್ತೊಂದು ಅಕ್ರಮ ತಡವಾಗಿ ಬೆಳಕಿಗೆ ಬಂದಿದೆ.ಕೇಂದ್ರ ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳನ್ನು ಒಳಗೆ ಕಳ್ಳಸಾಗಣೆ ಮಾಡಲು ಯತ್ನಿಸಿದ 27 ವರ್ಷದ ಮಹಿಳೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ತಪಾಸಣೆ ವೇಳೆ ವಿಷಯ ಬಯಲು

ಮಾರ್ಚ್ 26ರಂದು ಸಂಜೆ ಸುಮಾರು 4 ಗಂಟೆಗೆ ಸಾಮಾನ್ಯ ಭೇಟಿಯ ವಿಭಾಗದಲ್ಲಿ ಈ ಘಟನೆ ನಡೆದಿದೆ. ಆರೋಪಿಯಾಗಿರುವ ರಿತಿಕಾ ರೈ, ಅಂಡರ್‌ಟ್ರಯಲ್ ಕೈದಿ ಫರ್ಹಾನ್ ಖಾನ್ ಅವರನ್ನು ಭೇಟಿ ಮಾಡಲು ಮಾನ್ಯ ಪಾಸ್ ಪಡೆದು ಬಂದಿದ್ದಳು. ಸಾಮಾನ್ಯ ತಪಾಸಣೆ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಅನುಮಾನ ಉಂಟಾಗಿ ಸವಿವರ ಪರಿಶೀಲನೆ ನಡೆಸಿದಾಗ, ಮಹಿಳೆ ತನ್ನ ದೇಹದ ಖಾಸಗಿ ಭಾಗದಲ್ಲಿ ತಂಬಾಕು ಪದಾರ್ಥಗಳ ಮೂರು ಪ್ಯಾಕೆಟ್‌ಗಳು ಹಾಗೂ ಏರ್ಟೆಲ್ 5ಜಿ ಸಿಮ್ ಕಾರ್ಡ್‌ಗಳನ್ನು ಅಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ ‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಜೈಲಲ್ಲೇ ಕೂತು ವಿಡಿಯೋ ಮಾಡಿದ ಕೈದಿಗಳು!

ತಕ್ಷಣವೇ ನಿಷೇಧಿತ ವಸ್ತುಗಳನ್ನು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಪೊಲೀಸರಿಗೆ ಒಪ್ಪಿಸಲಾಗಿದೆ. ಜೈಲು ಅಧೀಕ್ಷಕರು ನೀಡಿದ ದೂರಿನ ಆಧಾರದ ಮೇಲೆ ರಿತಿಕಾ ರೈ ಮತ್ತು ಫರ್ಹಾನ್ ಖಾನ್ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಕಾಯ್ದೆ 2022 ಮತ್ತು ಬಿಎನ್‌ಎಸ್ ಸೆಕ್ಷನ್ 323 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸ್ಯಾಟಲೈಟ್ ಟು ಮೆಟ್ರೋ ಕನೆಕ್ಟಿವಿಟಿ ಕಷ್ಟ: ಒಂದು ಕಿ.ಮೀ ದಾಟಲು ಪ್ರಯಾಣಿಕರ ಹರಸಾಹಸ!

ಬೆಂಗಳೂರು, ಮಾ.30: ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟಲೈಟ್ ಬಸ್ ನಿಲ್ದಾಣ (KSRTC) ಮತ್ತು ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ನಡುವೆ ಸರಿಯಾದ ಸಂಪರ್ಕ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಎರಡು ನಿಲ್ದಾಣಗಳ ನಡುವಿನ ಅಂತರ ಒಂದು ಕಿಲೋಮೀಟರ್‌ಗಿಂತಲೂ ಕಡಿಮೆ ಇದ್ದರೂ, ಸುಗಮ ಸಂಪರ್ಕದ ಕೊರತೆಯಿಂದಾಗಿ ಜನರು ಪರದಾಡುವಂತಾಗಿದೆ. ಇದೀಗ ಈ ಬಗ್ಗೆ ಜನರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ.

ಬೆಂಗಳೂರಿಗೆ ಹೊರ ಜಿಲ್ಲೆಗಳಿಂದ ಬರುವ ಪ್ರಯಾಣಿಕರು ಮೆಟ್ರೋ ಹತ್ತಲು ಈ ಕಿಲೋಮೀಟರ್ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಬೇಕಿದೆ. ಆದರೆ, ಮೈಸೂರು ರಸ್ತೆಯ ಫುಟ್‌ಪಾತ್‌ಗಳು ಒಡೆದು ಹೋಗಿದ್ದು, ಬೀದಿ ಬದಿ ವ್ಯಾಪಾರಿಗಳಿಂದ ಆಕ್ರಮಣಕ್ಕೊಳಗಾಗಿವೆ. ಇದರಿಂದಾಗಿ ಲಗೇಜ್‌ಗಳೊಂದಿಗೆ ನಡೆಯುವುದು ಅಸಾಧ್ಯವಾಗಿದ್ದು, ಅನಿವಾರ್ಯವಾಗಿ ಆಟೋರಿಕ್ಷಾಗಳನ್ನು ಅವಲಂಬಿಸಬೇಕಿದೆ. ಕೇವಲ ಅರ್ಧ ಕಿಲೋಮೀಟರ್ ದೂರಕ್ಕೆ ಆಟೋ ಚಾಲಕರು ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂಬುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಈ ಬಗ್ಗೆ ನಗರ ಸಾರಿಗೆ ತಜ್ಞರ ಪ್ರಕಾರ, ಮೆಟ್ರೋ ಮತ್ತು ಬಸ್ ನಿಲ್ದಾಣಗಳ ನಡುವಿನ ಈ ಕನೆಕ್ಟಿವಿಟಿ ಕೊರತೆಯು ಯೋಜನಾ ಹಂತದ ದೊಡ್ಡ ಲೋಪವಾಗಿದೆ. “ಬಸ್, ಮೆಟ್ರೋ ಮತ್ತು ಪಾದಚಾರಿ ಮಾರ್ಗಗಳು ಒಂದಕ್ಕೊಂದು ಬೆಸೆದಾಗ ಮಾತ್ರ ಸಾರಿಗೆ ವ್ಯವಸ್ಥೆ ಯಶಸ್ವಿಯಾಗುತ್ತದೆ. ಇಲ್ಲದಿದ್ದರೆ ವಿಶ್ವದರ್ಜೆಯ ಮೆಟ್ರೋ ಇದ್ದರೂ ಪ್ರಯೋಜನವಿಲ್ಲ” ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮೈಸೂರು, ಮಡಿಕೇರಿ ಮತ್ತು ಕೇರಳದ ಭಾಗಗಳಿಗೆ ತೆರಳುವ ಸಾವಿರಾರು ಜನರಿಗೆ ಸ್ಯಾಟಲೈಟ್ ಬಸ್ ನಿಲ್ದಾಣ ಪ್ರಮುಖ ಕೇಂದ್ರವಾಗಿದೆ. ಬಿಎಂಆರ್‌ಸಿಎಲ್ (BMRCL) ಮತ್ತು ಬಿಎಂಟಿಸಿ ಸಮನ್ವಯ ಸಾಧಿಸಿ ಈ ಸಮಸ್ಯೆಗೆ ಶೀಘ್ರ ಪರಿಹಾರ ನೀಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದಾಖಲೆ ಬರೆದ ರಾಜ್ಯದ ವಿದ್ಯುತ್ ಬೇಡಿಕೆ: ಬೆಂಗಳೂರಿನ ಎಸಿ ಅಬ್ಬರಕ್ಕೆ ಬೆವರುತ್ತಿದೆ ಪವರ್ ಗ್ರಿಡ್!

ಪರಿಹಾರಗಳೇನು?

ಸ್ಕೈವಾಕ್ ಅಥವಾ ವಾಕ್‌ವೇ: ಈ ಎರಡು ನಿಲ್ದಾಣಗಳ ನಡುವೆ ಮೀಸಲಾದ ಸ್ಕೈವಾಕ್ ಅಥವಾ ಸುಸಜ್ಜಿತ ಪಾದಚಾರಿ ಮಾರ್ಗ ನಿರ್ಮಿಸಬೇಕು.

ಫೀಡರ್ ಬಸ್‌ಗಳು: ಬಿಎಂಟಿಸಿ (BMTC) ವತಿಯಿಂದ ಸಣ್ಣ ಫೀಡರ್ ಬಸ್ ಅಥವಾ ಮಿನಿ ಶಟಲ್ ಸರ್ವಿಸ್ ಆರಂಭಿಸಬೇಕು.

ಕಟ್ಟುನಿಟ್ಟಿನ ಗಡುವು: ಒಂದು ವೇಳೆ ಕಾಮಗಾರಿ ಆರಂಭಿಸಿದರೆ, ಅದು ಸಂಚಾರಕ್ಕೆ ತೊಂದರೆಯಾಗದಂತೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ನೋಡಿದ ಬಳಿಕ ನಿರ್ದೇಶಕ ಆದಿತ್ಯ ಧಾರ್​​ ಎಚ್ಚರಿಸಿದ ವಿವೇಕ್ ಅಗ್ನಿಹೋತ್ರಿ

‘ಧುರಂದರ್ 2’ ಸಿನಿಮಾ ಮಾಡಿದ ದಾಖಲೆಗಳು ಹಲವು. ಈ ಚಿತ್ರವು ಕೇಲವ 11 ದಿನಗಳಲ್ಲಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರುವ ಮೂಲಕ ದಾಖಲೆ ಬರೆದಿದೆ ಎಂದೇ ಹೇಳಬಹುದು. ಈ ಚಿತ್ರವನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿಗಳವರೆಗೆ ಎಲ್ಲರಿಗೂ ಚಿತ್ರ ಇಷ್ಟ ಆಗಿದೆ. ಈಗ ರಣವೀರ್ ಸಿಂಗ್ ಅವರ ಸಿನಿಮಾ ನೋಡಿದ ‘ದಿ ಕಾಶ್ಮೀರಿ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಜೋತ್ರಿ ಅವರು ಆದಿತ್ಯ ಧಾರ್ ಅವರಿಗೆ ಎಚ್ಚರಿಕೆಯನ್ನು ರವಾನಿಸಿದ್ದಾರೆ.

ವಿವೇಕ್ ಅವರು ‘ದಿ ಕಾಶ್ಮೀರಿ ಫೈಲ್ಸ್’ ಹೆಸರಿನ ಸಿನಿಮಾ ಮಾಡಿದವರು. ಈ ಸಿನಿಮಾ ಕಾಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯದ ಕುರಿತಂತೆ ಇತ್ತು. ಇನ್ನು, ಆದಿತ್ಯ ಧಾರ್ ಕೂಡ ಕಾಶ್ಮೀರಿ ಪಂಡಿತರ ಹಿನ್ನೆಲೆ ಹೊಂದಿರುವವರು. ಹೀಗಿರುವಾಗ ಅವರಿಗೆ ಎಚ್ಚರಿಕೆ ರವಾನೆ ಆಗಿದ್ದೇಕೆ ಎಂಬ ಪ್ರಶ್ನೆ ನಿಮಗೆ ಮೂಡಬಹುದು. ಅದಕ್ಕೂ ಉತ್ತರ ಇದೆ. ಅವರು ಸಿನಿಮಾ ಹೊಗಳಿದ್ದಾರೆ ಜೊತೆಗೆ ಎಚ್ಚರಿಕೆ ನೀಡಿದ್ದು ಒಳ್ಳೆಯ ಉದ್ದೇಶದಿಂದ.

‘ಎಲ್ಲರೂ ಅಸಾಧಾರಣ ಕೆಲಸ ಮಾಡಿದ್ದಾರೆ. ಆದರೆ ಚಿತ್ರದ ಛಾಯಾಗ್ರಹಣ ಹಾಗೂ ನಿರ್ಮಾಣ ವಿನ್ಯಾಸ ಸಿನಿಮಾ ಮತ್ತೊಂದು ಹಂತಕ್ಕೆ ಹೋಯಿತು. ಸಿನಿಮಾದಲ್ಲಿ, ಕ್ಯಾಮೆರಾ ಮತ್ತು ನಿರ್ಮಾಣ ವಿನ್ಯಾಸ ಪರಸ್ಪರ ಸಂಬಂಧ ಹೊಂದಿವೆ. ಎರಡೂ ಸಂಪೂರ್ಣ ಸಾಮರಸ್ಯವಿಲ್ಲದಿದ್ದರೆ, ಒಂದು ಚಿತ್ರವು ಒಂದು ಮೇರುಕೃತಿಯ ಮಟ್ಟಕ್ಕೆ ಏರಲು ಸಾಧ್ಯವಿಲ್ಲ. ಧುರಂಧರ್‌ನಲ್ಲಿ ಅದನ್ನು ಕಾಣಬಹುದು’ ಎಂದು ಹೇಳಿದ್ದಾರೆ ವಿವೇಕ್ ಅಗ್ನಿಹೋತ್ರಿ.

ಇದನ್ನೂ ಓದಿ: ‘ಧುರಂಧರ್ 2’ ನಿರ್ದೇಶಕ ಆದಿತ್ಯ ಧಾರ್ ಹಾಗೂ ಪತ್ನಿ ಯಾಮಿ ಪೈಕಿ ಯಾರು ಹೆಚ್ಚು ಶ್ರೀಮಂತರು?

ಆದಿತ್ಯ ಅವರನ್ನು ಎಚ್ಚರಿಸುವ ಮೂಲಕ ಅವರು ತಮ್ಮ ಪೋಸ್ಟ್ ಕೊನೆ ಮಾಡಿದ್ದಾರೆ. ‘ಅನುಭವದಿಂದ ಬಂದ ಒಂದು ಅಪೇಕ್ಷಿಸದ ಮಾತು: ನೀವು ಚುರುಕಾಗಿದ್ದೀರಿ. ನಿಮ್ಮ ದಾರಿ ನಮಗೆ ಗೊತ್ತು. ಆದರೆ, ವ್ಯವಸ್ಥೆಯ ಬಗ್ಗೆ ಗಮನವಿರಲಿ, ಅದು ಎಷ್ಟು ಒಳ್ಳೆಯದೋ, ಅಷ್ಟೇ ಕೆಟ್ಟದ್ದೂ ಆಗಿರಬಹುದು’ ಎಂದು ಎಚ್ಚರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link