ಸಂಪೂರ್ಣವಾಗಿ ಭಾರತದಲ್ಲೇ ಶೂಟ್ ಆಯ್ತು ರಷ್ಯಾ ಸಿನಿಮಾ; ಗಮನ ಸೆಳೆದೆ ಟ್ರೇಲರ್
ಕನ್ನಡ, ಹಿಂದಿ ಸೇರಿದಂತೆ ಭಾರತದ ಬಹುತೇಕ ಚಿತ್ರರಂಗದವರು ವಿದೇಶದಲ್ಲಿ ಶೂಟ್ ಮಾಡುತ್ತಾರೆ. ಅದರಲ್ಲೂ ಬಾಲಿವುಡ್ನವರು ವಿದೇಶಿ ಲೊಕೇಶನ್ಗಳನ್ನು ಆಯ್ಕೆ ಮಾಡಿಕೊಳ್ಳುವುದು ಹೆಚ್ಚು. ಈಗ ಅಚ್ಚರಿ ಎಂಬಂತೆ ರಷ್ಯಾದ ಚಿತ್ರವೊಂದು ಭಾರತದ ಬೀದಿಗಳಲ್ಲಿ ಶೂಟ್ ಆಗಿದೆ. ಏಪ್ರಿಲ್ 1ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ಸಂಪೂರ್ಣವಾಗಿ ಭಾರತದ ಸಿನಿಮಾಗಳಿಂದ ಪ್ರೇರಿತವಾಗಿದೆ. ಭಾರತ ಹಾಗೂ ರಷ್ಯಾ ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದೆ. ‘ಪರ್ಸಿಮನ್ ಆಫ್ ಲವ್’ ಎಂಬುದು ಚಿತ್ರದ ಹೆಸರು. ಪರ್ಸಿಮನ್ ಎಂದರೆ ಆರೆಂಜ್ ರೀತಿಯಲ್ಲೇ ಇರುವ ಒಂದುಹಣ್ಣು….