ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಏರಿಕೆಯಾಗುತ್ತಾ ನಂದಿನಿ ಉತ್ಪನ್ನಗಳ ಬೆಲೆ?
ಬೆಂಗಳೂರು, ಮಾರ್ಚ್ 30: ಯುದ್ಧದ ಸ್ಥಿತಿ ಮುಂದುವರಿದರೆ ಇಂಧನ ಬೆಲೆ ಏರಿಕೆ ಪರಿಣಾಮ ನಂದಿನಿ ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಅನಿವಾರ್ಯವಾಗಲಿದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಹಾಲು ಒಕ್ಕೂಟಗಳಿಗೆ ಗ್ಯಾಸ್ ಬಳಕೆಯನ್ನು ಶೇ. 55ರಷ್ಟು ಕಡಿಮೆ ಮಾಡುವಂತೆ ಸೂಚಿಸಲಾಗಿದೆ. ಇಲ್ಲವಾದರೆ ಶೇ. 30ರಷ್ಟು ಹೆಚ್ಚುವರಿ ವೆಚ್ಚವನ್ನು ಭರಿಸಬೇಕಾಗುತ್ತದೆ. ಈ ಹೆಚ್ಚುವರಿ ವೆಚ್ಚ ಅಂತಿಮವಾಗಿ ಗ್ರಾಹಕರ ಮೇಲೆ ಬೀಳಲಿದ್ದು, ಇದು ನಂದಿನಿ ಹಾಲು ಉತ್ಪನ್ನಗಳ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಸರ್ಕಾರ ಈ…