ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್: ಲೋಕಾಯುಕ್ತ ದಾಳಿಯಲ್ಲಿ ಬಯಲಾಯಿತು ಸತ್ಯ – Kannada News | Irregularities Uncovered: Lokayukta Investigation At Ramanagara RTO Highlights Proxy Employment And Broker Menace
ರಾಮನಗರ, ಜೂ.12: ಜಿಲ್ಲೆಯ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (RTO) ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರ ಹಾಗೂ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹಾ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯ ವೇಳೆ ಕಚೇರಿಯ ಇಂಚಿಂಚೂ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಆರ್‌ಟಿಒ ಕಚೇರಿಯ ಕರಾಳ ಮುಖ ಬಯಲಾಗಿದೆ. ನಿಯಮದ ಪ್ರಕಾರ ಕೇವಲ 7 ದಿನಗಳಲ್ಲಿ ಸಾರ್ವಜನಿಕರ ಕೈ ಸೇರಬೇಕಾಗಿದ್ದ ಲೈಸೆನ್ಸ್ ಹಾಗೂ ಆರ್‌ಸಿ ಸ್ಮಾರ್ಟ್ ಕಾರ್ಡ್‌ಗಳು, ಮೂರು ತಿಂಗಳು ಕಳೆದರೂ…