ಕತ್ತರಿಸಿದರೂ ಸಾಯದೆ ಚಡಪಡಿಸುತ್ತಿರುವ ಮೀನು! ಮಲ್ಪೆ ಬಂದರಿನಲ್ಲಿ ಅಚ್ಚರಿ ಮೂಡಿಸಿದ ವಿಚಿತ್ರ ಘಟನೆ – Kannada News | Bangude Fish Still Alive After Being Cut at Malpe Harbour, Udupi, amazing Viral Video
ಉಡುಪಿ, ಜನವರಿ 27: ಗ್ರಾಹಕರಿಗೆ ನೀಡಲೆಂದು ಕತ್ತರಿಸಿದ ಬಂಗುಡೆ ಮೀನೊಂದು ಸಾಯದೆ ಮತ್ತೂ ಚಡಪಡಿಸಿದ ಅಚ್ಚರಿಯ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡೆದಿದ್ದು, ಸ್ಥಳದಲ್ಲಿದ್ದವರನ್ನು ಬೆಚ್ಚಿಬೀಳಿಸಿದೆ. ಮಲ್ಪೆ ಬಂದರಿನಲ್ಲಿ ಮೀನು ಖರೀದಿಗೆ ಬಂದಿದ್ದ ಗ್ರಾಹಕರೊಬ್ಬರು, ಮೀನು ಮಾರಾಟ ಮಾಡುತ್ತಿದ್ದ ಮಹಿಳೆಯ ಬಳಿ ಬಂಗುಡೆ ಮೀನು ಖರೀದಿಸಿದ್ದಾರೆ. ಮೀನನ್ನು ಅಲ್ಲಿಯೇ ಕತ್ತರಿಸಿ ಕೊಡುವಂತೆ ಕೇಳಿಕೊಂಡಾಗ, ಮಹಿಳೆ ಮೀನನ್ನು ಕತ್ತರಿಸಿ ಟಬ್‌ಗೆ ಹಾಕಿದ್ದಾರೆ. ಆದರೆ, ಕತ್ತರಿಸಿದ ಬಳಿಕವೂ ಮೀನು ಜೀವಂತವಾಗಿ ಚಡಪಡಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ವಿಚಿತ್ರ ದೃಶ್ಯವನ್ನು ಕಂಡು…