Bank Strike: ನಾಳೆ ದೇಶಾದ್ಯಂತ ಬ್ಯಾಂಕ್ ಮುಷ್ಕರ; ಯಾವೆಲ್ಲ ಬ್ಯಾಂಕ್ಗಳ ಸೇವೆ ಸ್ಥಗಿತ? – Kannada News | Bank strike on January 27 These banks to remain closed Tomorrow
ನವದೆಹಲಿ, ಜನವರಿ 26: ತಮಗೆ ವಾರದಲ್ಲಿ 5 ದಿನಗಳ ಕಾಲ ಮಾತ್ರ ಕೆಲಸ ಮಾಡಲು ಅವಕಾಶ ನೀಡಬೇಕು, ಶನಿವಾರ ಹಾಗೂ ಭಾನುವಾರ ರಜೆ ನೀಡಬೇಕು ಎಂದು ಒತ್ತಾಯಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ದೇಶಾದ್ಯಂತ ಮುಷ್ಕರ ನಡೆಸುತ್ತಿದೆ. ಹೀಗಾಗಿ, ನಾಳೆ (ಮಂಗಳವಾರ) ದೇಶಾದ್ಯಂತ ಸಾರ್ವಜನಿಕ ವಲಯದ ಬ್ಯಾಂಕುಗಳ (Banks) ಬ್ಯಾಂಕಿಂಗ್ ಕಾರ್ಯಾಚರಣೆಗಳು ವ್ಯತ್ಯಯಗೊಳ್ಳುವ ಸಾಧ್ಯತೆಯಿದೆ. ಜನವರಿ 23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗಿನ ಸಂಧಾನ ಸಭೆಯು ಬ್ಯಾಂಕ್ ಉದ್ಯೋಗಿಗಳ ಸಮಸ್ಯೆಯನ್ನು ಪರಿಹರಿಸಲು ವಿಫಲವಾದ ನಂತರ ಈ ಮುಷ್ಕರದ…