ಕರ್ನಾಟಕದಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ ಹೇಗಿತ್ತು ನೋಡಿ!
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಪೊಲೀಸ್ ಮತ್ತು ಸೇನಾಪಡೆಯಿಂದ ಗೌರವ ವಂದನೆ ಸ್ವೀಕರಿಸಿದರು, ತೆರೆದ ಜೀಪ್ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. 77ನೇ ಗಣರಾಜ್ಯೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ಸಂದೇಶ ನೀಡಿ, ಸಂವಿಧಾನ ರಕ್ಷಣೆ ಅಗತ್ಯ, ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣ ಹಾಗೂ ಶಕ್ತಿಶಾಲಿ ರಾಜ್ಯಕ್ಕಾಗಿ ಜನರ ಸಹಕಾರ ಕೋರಿದರು. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 1,400 ಶಾಲಾ ಮಕ್ಕಳ…