ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು: ಸ್ವಿಮ್ಮಿಂಗ್ ಪೂಲ್ನಲ್ಲಿ ತೇಲುತ್ತಿತ್ತು ಮೃತದೇಹ – Kannada News | Kanakapura Suspicious Death: Housewife Found in Pool
ರಾಮನಗರ, ಜನವರಿ 25: ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯೋರ್ವರು ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಬೆಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಪ್ರತಿಭಾ(32) ಮೃತ ದುರ್ದೈವಿಯಾಗಿದ್ದು, ಮನೆಯ ಸ್ವಿಮ್ಮಿಂಗ್ ಪೂಲ್ನಲ್ಲಿ ಮೃತದೇಹ ಪತ್ತೆಯಾಗಿದೆ. ಪತಿ ನಂಜೇಗೌಡನೇ ಆಕೆಯನ್ನು ಕೊಲೆ ಮಾಡಿರೋದಾಗಿ ಪ್ರತಿಭಾ ಕುಟುಂಬಸ್ಥರು ಆರೋಪಿಸಿದ್ದರೆ, ಅನಾರೋಗ್ಯದ ಹಿನ್ನೆಲೆ ಆಕೆಯೇ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ನಂಜೇಗೌಡ ತಿಳಿಸಿದ್ದಾರೆ. ಪರಸ್ಪರ ಪ್ರೀತಿಸಿದ್ದ ನಂಜೇಗೌಡ ಮತ್ತು ಪ್ರತಿಭಾ ಹದಿನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ರು. ಇಬ್ಬರಿಗೂ ಮುದ್ದಾದ ಎರಡು ಗಂಡು ಮಕ್ಕಳು ಕೂಡ ಇದ್ದಾರೆ….