All posts by nagaraj11081993

DK Shivakumar on Davos Tour: ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್​ನಿಂದ ಬಂದ ಡಿಕೆಶಿ ಹೇಳಿದ್ದೇನು? – Kannada News | DK Shivakumar’s Davos Tour; The government is preparing to develop a comprehensive mobility system across the state says DCM

ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್​ನಿಂದ ಬಂದ ಡಿಕೆಶಿ ಹೇಳಿದ್ದೇನು?
(ಫೋಟೋ: ಡಿಕೆ ಶಿವಕುಮಾರ್​ರ ಎಕ್ಸ್ ಖಾತೆ)

ಬೆಂಗಳೂರು, ಜನವರಿ 25: ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) , ಹಲವು ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ದಾವೋಸ್‌ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ ಭಾಗವಹಿಸಿದ್ದ ಅನುಭವವನ್ನು ಹಂಚಿಕೊಳ್ಳುವುದರ ಜೊತೆಗೆ ಇಡೀ ರಾಜ್ಯದಲ್ಲಿ ಸಮಗ್ರ ಮೊಬಿಲಿಟಿ ವ್ಯವಸ್ಥೆ ಅಭಿವೃದ್ಧಿಪಡಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎಂದಿದ್ದಾರೆ. ಬೆಂಗಳೂರು ಸೇರಿದಂತೆ ಚಿಕ್ಕ ಹಾಗೂ ದೊಡ್ಡ ನಗರಗಳ ಬೆಳವಣಿಗೆ ಅಗತ್ಯವಾಗಿದ್ದು, ದೇಶದ ಮಾನವ ಸಂಪತ್ತು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಅನಿವಾರ್ಯ ಎಂದರು.

ಕರ್ನಾಟಕದ ವ್ಯವಸ್ಥೆಗಳನ್ನು ಮೆಚ್ಚಿಕೊಂಡ ಅಂತಾರಾಷ್ಟ್ರೀಯ ನಾಯಕರು

ದಾವೋಸ್‌ ಸಭೆಯ ಕುರಿತು ಮಾತಾನಾಡಿದ ಡಿಸಿಎಂ, ಪ್ರಪಂಚದ 65 ದೇಶಗಳ ಪ್ರಮುಖರು ಅಲ್ಲಿ ಭಾಗವಹಿಸಿದ್ದರು. ಸುಮಾರು 45 ಕಂಪನಿಗಳ ಮುಖ್ಯಸ್ಥರು ಕರ್ನಾಟಕದಲ್ಲಿ ಹೂಡಿಕೆ ಬಗ್ಗೆ ನಮ್ಮೊಂದಿಗೆ ಚರ್ಚೆ ನಡೆಸಿದ್ದಾರೆ. ಎಲೆಕ್ಟ್ರಾನಿಕ್ಸ್, ನ್ಯಾನೋ ಟೆಕ್ನಾಲಜಿ, ಎಐ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೂಡಿಕೆ ಆಸಕ್ತಿ ವ್ಯಕ್ತವಾಗಿದೆ ಎಂದು ಹೇಳಿದರು.

ಸೌದಿ ಅರೇಬಿಯಾ ಹಣಕಾಸು ಸಚಿವರು ಸೇರಿದಂತೆ ಹಲವು ಅಂತಾರಾಷ್ಟ್ರೀಯ ನಾಯಕರು ಕರ್ನಾಟಕದ ನೀರು, ವಿದ್ಯುತ್ ಮತ್ತು ಮೂಲಸೌಕರ್ಯ ವ್ಯವಸ್ಥೆಯನ್ನು ಮೆಚ್ಚಿದ್ದಾರೆ. ಪಾರ್ಕಿಂಗ್ ವ್ಯವಸ್ಥೆ, ಟ್ರಾಫಿಕ್ ನಿರ್ವಹಣೆ ಹಾಗೂ ಟನಲ್ ರಸ್ತೆ ಯೋಜನೆಗಳ ಬಗ್ಗೆ ಮಹಾರಾಷ್ಟ್ರ ಸಿಎಂ ಫಡ್ನವಿಸ್ ಹಾಗೂ ಜಪಾನ್ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಟನಲ್ ಮಿಷಿನ್ ಕುರಿತು ನಮ್ಮ ತಂಡ ಸಮಗ್ರ ಅಧ್ಯಯನ ನಡೆಸುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

‘ಅಲ್ಲಿ ಯಾರು ಕೂಡ ಸಿಗ್ನಲ್ ಜಂಪ್ ಮಾಡಲ್ಲ’-ಡಿಸಿಎಂ

ದಾವೋಸ್‌ ವ್ಯವಸ್ಥೆಯ ಕುರಿತು ಹೇಳುತ್ತಾ, ಅಲ್ಲಿನ ಕಾನೂನು ಪಾಲನೆಯ ವಾತಾವರಣ ಶ್ಲಾಘನೀಯವಾಗಿದ್ದು, ಅಲ್ಲಿ ಯಾರು ಕೂಡ ಸಿಗ್ನಲ್ ಜಂಪ್ ಮಾಡುವುದಿಲ್ಲ. ಕಾನೂನಿಗೆ ಗೌರವ ನೀಡುವ ಸಂಸ್ಕೃತಿ ನಮ್ಮಲ್ಲೂ ಬೆಳೆಯಬೇಕು ಎಂದು ಡಿಸಿಎಂ ಕರೆ ನೀಡಿದರು. ಈ ದಾವೋಸ್ ಭೇಟಿ ರಾಜ್ಯಕ್ಕೆ ಉತ್ತಮ ಅವಕಾಶಗಳನ್ನು ತಂದಿದ್ದು, ಯುವಕರಿಗೆ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಬಿಡದಿ ಬಳಿ ಐಟಿ ಸಿಟಿ ನಿರ್ಮಾಣ

ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಯೋಜನೆ ರೂಪಿಸಿದ್ದು, ಫೆಬ್ರವರಿ ತಿಂಗಳಲ್ಲಿ ಕೆಲವು ಪ್ರಮುಖ ಯೋಜನೆಗಳ ಉದ್ಘಾಟನೆ ನಡೆಯಲಿದೆ ಎಂದು ಹೇಳಿದರು. ಬೆಂಗಳೂರು ಕೇಬಲ್ ವಿಚಾರದಲ್ಲಿ ಟೀಕೆಗಳಿದ್ದು, ಅದಕ್ಕೆ ಸಂಬಂಧಿಸಿದಂತೆ ತಜ್ಞರ ಸಲಹೆಗಳನ್ನು ಪಡೆಯಲಾಗುತ್ತಿದೆ ಎಂದರು. ಇದಲ್ಲದೆ ಬಿಡದಿ ಬಳಿ ಐಟಿ ಸಿಟಿ ನಿರ್ಮಾಣಕ್ಕೆ ಹೆಚ್ಚಿನ ಆಸಕ್ತಿ ವ್ಯಕ್ತವಾಗಿದ್ದು, ರೈತರು ಸ್ವಯಂಪ್ರೇರಿತವಾಗಿ ಭೂಮಿ ನೀಡಲು ಮುಂದಾಗಿದ್ದಾರೆ. ರೈತರಿಗೆ ಉತ್ತಮ ಪರಿಹಾರ ಹಾಗೂ ಸೌಲಭ್ಯ ಒದಗಿಸಲಾಗುತ್ತದೆ. ಇಂತಹ ಆಫರ್ ದೇಶದಲ್ಲಿ ಎಲ್ಲೂ ನೀಡಲಾಗಿಲ್ಲ ಎಂದು ಡಿಕೆ ಹೇಳಿದರು.

ವರದಿ : ಈರಣ್ಣ ಬಸವ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Mars in Capricorn: ಮಕರ ರಾಶಿಯಲ್ಲಿ ಕುಜ ಸಂಚಾರ; ಈ ನಾಲ್ಕು ರಾಶಿಗೆ ಅದೃಷ್ಟದ ಸುರಿಮಳೆ – Kannada News | Mars in Capricorn: Kuja’s Uttara Ashadha Transit and Rashi Effects

ಪ್ರಾಚೀನ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಕರ ರಾಶಿಯು ಕುಜನ ಉಚ್ಚ ರಾಶಿ. ಅಂದರೆ ಇಲ್ಲಿ ಕುಜನು ಅತ್ಯಂತ ಬಲಿಷ್ಠನಾಗಿರುತ್ತಾನೆ. ಮಕರ ರಾಶಿಯ ಉತ್ತರಾಷಾಢ ನಕ್ಷತ್ರದಲ್ಲಿ ಕುಜನು ಸಂಚರಿಸುವಾಗ ಉಂಟಾಗುವ ಶುಭ-ಅಶುಭ ಫಲಗಳ ವಿವರ ಇಲ್ಲಿದೆ. ಇನ್ನು ​ಉತ್ತರಾಷಾಢ ನಕ್ಷತ್ರದಲ್ಲಿ ಜನವರಿ 28 ರಬರೆಗೆ ಕುಜನು ಇರಲಿದ್ದು ಇದರ ಅಧಿಪತಿ ಸೂರ್ಯ. ಕುಜ ಮತ್ತು ಸೂರ್ಯ ಮಿತ್ರ ಗ್ರಹಗಳಾದ್ದರಿಂದ, ಈ ನಕ್ಷತ್ರದಲ್ಲಿ ಕುಜನಿರುವುದು ಸಾಮಾನ್ಯವಾಗಿ ಆಡಳಿತಾತ್ಮಕ ಕೆಲಸಗಳಲ್ಲಿ ಇರುವವರಿಗೆ ಮತ್ತು ರಾಜಕೀಯ ಕ್ಷೇತ್ರದಲ್ಲಿ ಇರುವವರಿಗೆ ತುಂಬಾ ಒಳ್ಳೆಯದು. ಇದು ದೃಢ ನಿರ್ಧಾರ ತೆಗೆದುಕೊಳ್ಳುವ ಶಕ್ತಿಯನ್ನು ನೀಡುತ್ತದೆ. ​ಶುಭ ಫಲಗಳನ್ನು ಪಡೆಯುವ ರಾಶಿಗಳು ​ಕುಜನು ಮಕರ ರಾಶಿಯಲ್ಲಿರುವಾಗ ಈ ಕೆಳಗಿನ ರಾಶಿಯವರಿಗೆ ಹೆಚ್ಚಿನ ಲಾಭ ಮತ್ತು ಪ್ರಗತಿ ಕಂಡುಬರುತ್ತದೆ.

​ಮೇಷ ರಾಶಿ:

ನಿಮ್ಮ ರಾಶ್ಯಾಧಿಪತಿಯಾದ ಕುಜನು ದಶಮ ಸ್ಥಾನದಲ್ಲಿ ಇರುವುದರಿಂದ ವೃತ್ತಿಜೀವನದಲ್ಲಿ ದೊಡ್ಡ ಯಶಸ್ಸು ಸಿಗಲಿದೆ. ಹೊಸ ಉದ್ಯೋಗ ಅಥವಾ ಬಡ್ತಿ ಸಿಗುವ ಸಾಧ್ಯತೆ ಇದೆ.

​ವೃಶ್ಚಿಕ ರಾಶಿ:

ತೃತೀಯ ಸ್ಥಾನದಲ್ಲಿ ಕುಜನಿರುವುದರಿಂದ ನಿಮ್ಮ ಧೈರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ವಿಜಯ ಲಭಿಸುತ್ತದೆ. ಸಣ್ಣ ಪ್ರಯಾಣಗಳಿಂದ ಲಾಭವಾಗಲಿದೆ.

​ಕನ್ಯಾ ರಾಶಿ:

ಪಂಚಮ ಸ್ಥಾನದಲ್ಲಿ ಕುಜನಿರುವುದು ಆರ್ಥಿಕವಾಗಿ ಲಾಭದಾಯಕ. ಹಳೆಯ ಹೂಡಿಕೆಗಳಿಂದ ಆದಾಯ ಬರಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಿಗುತ್ತದೆ.

​ಮೀನ ರಾಶಿ:

ಲಾಭ ಸ್ಥಾನದಲ್ಲಿ ಕುಜನಿರುವುದರಿಂದ ಹಣಕಾಸಿನ ಹರಿವು ಉತ್ತಮವಾಗಿರುತ್ತದೆ. ಸ್ನೇಹಿತರಿಂದ ಮತ್ತು ಹಿರಿಯ ಸಹೋದರರಿಂದ ಬೆಂಬಲ ಸಿಗಲಿದೆ.

​ಮಿಶ್ರ ಫಲ:

​ಮಕರ ರಾಶಿ:

ಕುಜನು ನಿಮ್ಮದೇ ರಾಶಿಯಲ್ಲಿದ್ದಾಗ ಅಧಿಕಾರ ಮತ್ತು ಶಕ್ತಿ ನೀಡುತ್ತಾನೆ, ಆದರೆ ಅತಿಯಾದ ಆತುರ ಮತ್ತು ಕೋಪ ಉಂಟಾಗಬಹುದು. ರಕ್ತದೊತ್ತಡ ಅಥವಾ ಸಣ್ಣಪುಟ್ಟ ಗಾಯಗಳ ಬಗ್ಗೆ ಎಚ್ಚರವಿರಲಿ.

​ಕರ್ಕಾಟಕ ರಾಶಿ:

ಏಳನೇ ಮನೆಯಲ್ಲಿ ಕುಜನಿರುವುದರಿಂದ ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಮೂಡಬಹುದು. ಪಾಲುದಾರಿಕೆ ವ್ಯವಹಾರದಲ್ಲಿ ಜಾಗರೂಕತೆ ಅಗತ್ಯ.

​ಅಶುಭ ಫಲ:

ಮಿಥುನ ರಾಶಿ:

ಎಂಟನೇ ಮನೆಯಲ್ಲಿ ಕುಜನಿರುವುದು ಅನಿರೀಕ್ಷಿತ ಅಡೆತಡೆಗಳನ್ನು ತರಬಹುದು. ಆರೋಗ್ಯದ ಕಡೆ ಗಮನವಿರಲಿ ಮತ್ತು ವಾಹನ ಚಾಲನೆ ಮಾಡುವಾಗ ಜಾಗ್ರತೆ ವಹಿಸಿ.

​ಧನು ರಾಶಿ:

ಎರಡನೇ ಮನೆಯಲ್ಲಿ ಕುಜನಿರುವುದರಿಂದ ಮಾತಿನಲ್ಲಿ ಕಠೋರತೆ ಬರಬಹುದು. ಇದು ಕುಟುಂಬದಲ್ಲಿ ಕಲಹಕ್ಕೆ ಕಾರಣವಾಗಬಹುದು. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ.

​ಕುಜನ ಪ್ರಭಾವದಿಂದ ತೊಂದರೆ ಆಗುತ್ತಿದ್ದರೆ ಪ್ರತಿದಿನ ಹನುಮಾನ್ ಚಾಲೀಸಾ ಪಠಿಸುವುದು ಅಥವಾ ಮಂಗಳವಾರ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಮಾಡುವುದು ಉತ್ತಮ.

– ಲೋಹಿತ ಹೆಬ್ಬಾರ್

Source link

IND vs PAK: ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಡೇಟ್ ಫಿಕ್ಸ್ – Kannada News | U19 World Cup 2026: India vs Pakistan Match Date

ಅಂಡರ್-19 ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಮುಖಾಮುಖಿಗೆ ದಿನಾಂಕ ನಿಗದಿಯಾಗಿದೆ. ಅದರಂತೆ ಫೆಬ್ರವರಿ 1 ರಂದು ನಡೆಯಲಿರುವ ಸೂಪರ್-6 ಹಂತದ 12ನೇ ಪಂದ್ಯದಲ್ಲಿ ಇಂಡೊ-ಪಾಕ್ ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಝಿಂಬಾಬ್ವೆಯ ಕ್ವೀನ್ಸ್ ಸ್ಪೋರ್ಟ್ಸ್​ ಕ್ಲಬ್ ಮೈದಾನ ಆತಿಥ್ಯವಹಿಸಲಿದೆ.

ಈ ಬಾರಿಯ ಅಂಡರ್-19 ಟೂರ್ನಿಯಲ್ಲಿ ಗ್ರೂಪ್-ಬಿ ನಲ್ಲಿ ಕಣಕ್ಕಿಳಿದಿದ್ದ ಭಾರತ ತಂಡವು ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು 18 ರನ್​ಗಳಿಂದ ಮಣಿಸಿದ್ದರು.

ಹಾಗೆಯೇ ಮೂರನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡಕ್ಕೆ 7 ವಿಕೆಟ್​ಗಳ ಸೋಲುಣಿಸಿದ್ದರು. ಈ ಮೂಲಕ ಗ್ರೂಪ್-ಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿ ಟೀಮ್ ಇಂಡಿಯಾ ಸೂಪರ್-6 ಹಂತಕ್ಕೇರಿದ್ದರು.

ಮತ್ತೊಂದೆಡೆ ಗ್ರೂಪ್-ಸಿ ನಲ್ಲಿ ಕಣಕ್ಕಿಳಿದಿದ್ದ ಪಾಕಿಸ್ತಾನ್ ತಂಡವು ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 37 ರನ್​ಗಳ ಸೋಲನುಭವಿಸಿದ್ದರು. ಈ ಸೋಲಿನ ಹೊರತಾಗಿಯೂ ಪಾಕ್ ಪಡೆ ಸ್ಕಾಟ್ಲೆಂಡ್ ಹಾಗೂ ಝಿಂಬಾಬ್ವೆ ವಿರುದ್ಧ ಜಯಗಳಿಸಿ 4 ಅಂಕಗಳೊಂದಿಗೆ ಸೂಪರ್-6 ಹಂತಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.

ಇದೀಗ ಸೂಪರ್-6 ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಗ್ರೂಪ್-2 ನಲ್ಲಿ ಸ್ಥಾನ ಪಡೆದುಕೊಂಡಿದೆ. ಅದರಂತೆ ಉಭಯ ತಂಡಗಳು ಫೆಬ್ರವರಿ 1 ರಂದು ನಡೆಯಲಿರುವ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿ ಏಷ್ಯಾಕಪ್ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ ಟೀಮ್ ಇಂಡಿಯಾ.

2025ರ ಅಂಡರ್-19 ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡಕ್ಕೆ ಸೋಲುಣಿಸುವಲ್ಲಿ ಪಾಕಿಸ್ತಾನ್ ತಂಡ ಯಶಸ್ವಿಯಾಗಿತ್ತು. ದುಬೈನ ಐಸಿಸಿ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಪಾಕಿಸ್ತಾನ್ ತಂಡವು 50 ಓವರ್​ಗಳಲ್ಲಿ 347 ರನ್ ಕಲೆಹಾಕಿದ್ದರು.

ಈ ಗುರಿಯನ್ನು ಬೆನ್ನತ್ತಿದ್ದ ಟೀಮ್ ಇಂಡಿಯಾ ಗಳಿಸಿದ್ದು ಕೇವಲ 156 ರನ್​ಗಳು ಮಾತ್ರ. ಈ ಮೂಲಕ 191 ರನ್​ಗಳ ಅಂತರದಿಂದ ಸೋತು ಭಾರತ ತಂಡವು ಭಾರೀ ಮುಖಭಂಗಕ್ಕೆ ಒಳಗಾಗಿತ್ತು. ಈ ಸೋಲು-ಗೆಲುವಿನ ಬಳಿಕ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗಲು ಮುಂದಾಗಿದೆ.

ಇದನ್ನೂ ಓದಿ: ಬರೋಬ್ಬರಿ 27 ಬಾರಿ… ಹೊಸ ಇತಿಹಾಸ ನಿರ್ಮಿಸಿದ ಜೋ ರೂಟ್

ಅದರಂತೆ ಈ ಬಾರಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಅಂಡರ್-19 ಏಷ್ಯಾಕಪ್ ಫೈನಲ್​ ಸೋಲಿನ ಲೆಕ್ಕವನ್ನು ಚುಕ್ತ ಮಾಡಲಿದೆಯಾ ಕಾದು ನೋಡಬೇಕಿದೆ.

Published On – 12:57 pm, Sun, 25 January 26

Source link

ಮಾಡೆಲ್ ಹೌಸ್​​ಗೆ ಬೆಂಕಿ ಕೇಸ್: ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ – Kannada News | Model house fire case: Janardhana Reddy reveals the secret of the video he gave to the police

ಬಳ್ಳಾರಿ, ಜನವರಿ 25: ನಗದರಲ್ಲಿ ಜಿ ಸ್ಕೇರ್ ಬಡಾವಣೆಯಲ್ಲಿನ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಜನಾರ್ದನ ರೆಡ್ಡಿ ಪೊಲೀಸರ ತನಿಖೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದ ವಿಡಿಯೋ ಆಧರಿಸಿ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರೂ ಸೇರಿದ್ದಾರೆ. ಆದರೆ, ಈ ವಿಡಿಯೋದಲ್ಲಿ ಇರುವವರನ್ನು ಸೈಟ್ ಇಂಜಿನಿಯರ್ ರಿಜ್ವಾನ್ ಮತ್ತು ಇಮ್ರಾನ್ ಮೂಲಕ ವಿಡಿಯೋ ಮಾಡಿದವರು ಎಂದು ಹೇಳಿಸಲಾಗಿದ್ದು, ಇದು ಸತ್ಯಕ್ಕೆ ದೂರವಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಬಾಯ್‌ಫ್ರೆಂಡ್ಗೆ ಕಳಿಸಿದ ಖಾಸಗಿ ಫೋಟೋ ವೈರಲ್? 19ರ ಯುವತಿಗೆ ಬ್ಲ್ಯಾಕ್​ಮೆಲರ್ ಕಾಟ – Kannada News | Bengaluru girl’s Private Photo got in unknown’s hand; Blackmailed girl files complaint

ಬಾಯ್‌ಫ್ರೆಂಡ್ಗೆ ಕಳಿಸಿದ ಖಾಸಗಿ ಫೋಟೋ ವೈರಲ್?

ಬೆಂಗಳೂರು, ಜನವರಿ 25: ಬಾಯ್‌ಫ್ರೆಂಡ್‌ಗೆ ಖಾಸಗಿ ಫೋಟೋಗಳನ್ನು (Private Photos) ಕಳಿಸಿದ ಯುವತಿ ಪೇಚೆಗೆ ಸಿಲುಕಿದ್ದು, ಪೊಲೀಸರ ಮೊರೆಹೋಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ  (Bengaluru) ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ 19 ವರ್ಷದ ವಿದ್ಯಾರ್ಥಿನಿ ತನ್ನ ಪ್ರೇಮಿಗೆ ಕಳಿಸಿದ್ದು, ಅದೇ ಫೋಟೋಗಳನ್ನಿಟ್ಟುಕೊಂಡು ಅಪರಿಚಿತ ನಂಬರ್​ನಿಂದ ಬ್ಲಾಕ್ಮೇಲ್ ಕರೆ ಬಂದಿದೆ. ಈ ಸಂಬಂಧ ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ.

1 ಲಕ್ಷ ರೂ. ನೀಡಿದರೂ ಹೆಚ್ಚು ಹಣಕ್ಕೆ ಬೇಡಿಕೆ

ಯುವತಿ ಕೆಲ ಸಮಯದ ಹಿಂದೆ ತನ್ನ ಬಾಯ್‌ಫ್ರೆಂಡ್‌ಗೆ ಖಾಸಗಿ ಫೋಟೋಗಳನ್ನು ಕಳಿಸಿದ್ದಳು. ನಂತರ ಅಪರಿಚಿತ ಸಂಖ್ಯೆಯಿಂದ ಅದೇ ಖಾಸಗಿ ಫೋಟೋಗಳನ್ನು ಯುವತಿಯ ಮೊಬೈಲ್‌ಗೆ ಕಳುಹಿಸಿ, ಹಣ ನೀಡದಿದ್ದರೆ ಫೋಟೋಗಳನ್ನು ಸಾರ್ವಜನಿಕವಾಗಿ ಹರಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಯುವತಿ ಆರೋಪಿಸಿದ್ದಾಳೆ.

ಈ ವಿಚಾರವನ್ನು ಯುವತಿ ತನ್ನ ಸ್ನೇಹಿತನೊಂದಿಗೆ ಚರ್ಚಿಸಿದ್ದು, ಬ್ಲ್ಯಾಕ್‌ಮೇಲರ್‌ನ ಒತ್ತಡಕ್ಕೆ ಒಳಗಾಗಿ ಸ್ನೇಹಿತನ ಮೂಲಕ ಸುಮಾರು 1 ಲಕ್ಷ ರೂಪಾಯಿ ಹಣವನ್ನು ಪಾವತಿಸಿದ್ದಳು. ಆದರೂ ಅಪರಿಚಿತ ಸಂಖ್ಯೆಯಿಂದ ಮತ್ತೆ ಮತ್ತೆ ಹೆಚ್ಚಿನ ಹಣಕ್ಕೆ ಬೇಡಿಕೆ ಬರುತ್ತಲೇ ಇತ್ತು. ಈ ವೇಳೆ ಫೋಟೋಗಳು ಬ್ಲ್ಯಾಕ್‌ಮೇಲರ್‌ಗೆ ಹೇಗೆ ಸಿಕ್ಕವು ಎಂಬ ಅನುಮಾನ ಮೂಡಿತ್ತು. ಮೊದಲಿಗೆ ತನ್ನ ಪ್ರಿಯಕರನೇ ಈ ಕೆಲಸ ಮಾಡಿರಬಹುದೆಂಬ ಅನುಮಾನವೂ ಯುವತಿಯ ತಲೆ ಹೊಕ್ಕಿತ್ತು. ಆದರೆ ಪ್ರಾಥಮಿಕ ತನಿಖೆಯಲ್ಲಿ ಈ ದುಷ್ಕೃತ್ಯದಲ್ಲಿ ಆಕೆಯ ಬಾಯ್‌ಫ್ರೆಂಡ್ ಪಾತ್ರ ಇಲ್ಲ ಎಂಬುದು ಪೊಲೀಸರಿಂದ ತಿಳಿದುಬಂದಿದೆ.

ಇದನ್ನೂ ಓದಿ ಮಗನ ಅನೈತಿಕ ಸಂಬಂಧಕ್ಕೆ ತಾಯಿ ಫುಲ್ ಸಪೋರ್ಟ್​! ನವವಿವಾಹಿತೆ ಗಂಭೀರ ಆರೋಪ

ಸಧ್ಯಕ್ಕೆ ಪ್ರಕರಣ ದಾಖಲಿಸಿಕೊಂಡಿರುವ ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸರು ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದಲ್ಲಿ ತನಿಖೆ ಮುಂದುವರಿಸಿದ್ದಾರೆ. ಸಾರ್ವಜನಿಕರು ಈ ರೀತಿ ಖಾಸಗಿ ಮಾಹಿತಿಯನ್ನು ಹಂಚಿಕೊಳ್ಳುವ ವೇಳೆ ಎಚ್ಚರ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Mann Ki Baat: ಭಾರತೀಯ ಉತ್ಪನ್ನಗಳು ಅತ್ಯುತ್ತಮ ಗುಣಮಟ್ಟದ ಪ್ರತೀಕವಾಗಬೇಕು: ಪ್ರಧಾನಿ ಮೋದಿ – Kannada News | Mann Ki Baat: Modi on India Economic Growth, Startup Hub and Voting Awareness

ದೆಹಲಿ, ಜನವರಿ 25: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ 2026ರ ಮೊದಲ ಮನ್ ಕಿ ಬಾತ್ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಜನತೆಗೆ ಗಣರಾಜ್ಯೋತ್ಸವ ಮತ್ತು ರಾಷ್ಟ್ರೀಯ ಮತದಾರರ ದಿನಾಚರಣೆಯ ಶುಭಾಶಯ ತಿಳಿಸಿದರು. ಮತದಾನ ಮಾಡುವುದು ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮನ್ ಕಿ ಬಾತ್ ಕಾರ್ಯಕ್ರಮದ 130ನೇ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿ ಮತದಾನಕ್ಕೆ ಅರ್ಹರಾಗುವ ಯುವಜನರನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಪ್ರಜಾಪ್ರಭುತ್ವದಲ್ಲಿ ಭಾಗವಹಿಸುವಿಕೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ, ಯುವ ನಾಗರಿಕರು ಮತದಾರರಾಗುವ ಕ್ಷಣವನ್ನು ಸಮುದಾಯಗಳಲ್ಲಿ ಸಂಭ್ರಮಿಸುವಂತೆ ಸಲಹೆ ನೀಡಿದರು.

ಹುಟ್ಟುಹಬ್ಬಗಳನ್ನು ಸಂಭ್ರಮದಿಂದ ಆಚರಿಸುವಂತೆ, ಯುವಕ ಅಥವಾ ಯುವತಿ ಮೊದಲ ಬಾರಿ ಮತದಾರರಾಗುವ ಸಂದರ್ಭದಲ್ಲೂ ಸಂಪೂರ್ಣ ನೆರೆಹೊರೆಯವರು, ಗ್ರಾಮ ಅಥವಾ ನಗರ ಒಂದಾಗಿ ಅವರನ್ನು ಅಭಿನಂದಿಸಿ ಸಿಹಿ ಹಂಚಬೇಕು. ಇದರಿಂದ ಮತದಾನದ ಬಗ್ಗೆ ಜಾಗೃತಿ ಹೆಚ್ಚುವುದರ ಜೊತೆಗೆ, ಮತದಾರರ ಮಹತ್ವ ಮತ್ತಷ್ಟು ಬಲವಾಗುತ್ತದೆ ಎಂದರು.

ಭಾರತದ ಆರ್ಥಿಕತೆ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಜೈವಿಕ ತಂತ್ರಜ್ಞಾನದಲ್ಲಿ ಸಾಕಷ್ಟು ಸ್ಟಾರ್ಟ್​ ಅಪ್​ಗಳು ಆರಂಭವಾಗಿವೆ. ಭಾರತವು ವಿಶ್ವದಲ್ಲೇ ಮೂರನೇ ಅತಿದೊಡ್ಡ ಸ್ಟಾರ್ಟ್‌ಅಪ್​​ ಹಬ್​​ ಆಗಿ ಹೊರಹೊಮ್ಮುತ್ತಿದೆ. ಹತ್ತು ವರ್ಷಗಳ ಹಿಂದೆ ಊಹಿಸಲೂ ಸಾಧ್ಯವಾಗದ ಹಲವು ಕ್ಷೇತ್ರಗಳಲ್ಲಿ ಇಂದು ಸ್ಟಾರ್ಟ್‌ಅಪ್‌ಗಳು ಕಾರ್ಯನಿರ್ವಹಿಸುತ್ತಿವೆ. ಕೃತಕ ಬುದ್ಧಿಮತ್ತೆ, ಬಾಹ್ಯಾಕಾಶ, ಅಣುಶಕ್ತಿ, ಸೆಮಿಕಂಡಕ್ಟರ್‌ಗಳು, ಮೊಬೈಲಿಟಿ, ಹಸಿರು ಹೈಡ್ರೋಜನ್ ಹಾಗೂ ಜೈವಿಕ ತಂತ್ರಜ್ಞಾನ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ.

ಸ್ವಂತ ಸ್ಟಾರ್ಟ್‌ಅಪ್ ಆರಂಭಿಸಲು ಮುಂದಾಗುವ ಯುವಜನತೆಗೆ ಅಭಿನಂದಿಸಿದ ಪ್ರಧಾನಿ ಮೋದಿ, ನಾವು ತಯಾರಿಸುವ ಪ್ರತಿಯೊಂದು ಉತ್ಪನ್ನದ ಗುಣಮಟ್ಟವನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಸಂಕಲ್ಪ ಮಾಡುವಂತೆ ಕರೆ ನೀಡಿದರು. ಅದು ವಸ್ತ್ರೋದ್ಯಮವಾಗಲಿ, ತಂತ್ರಜ್ಞಾನವಾಗಲಿ, ಎಲೆಕ್ಟ್ರಾನಿಕ್ಸ್ ಅಥವಾ ಪ್ಯಾಕೇಜಿಂಗ್ ಆಗಲಿ, ಭಾರತೀಯ ಉತ್ಪನ್ನ ಎಂದರೆ ‘ಅತ್ಯುತ್ತಮ ಗುಣಮಟ್ಟ’ ಎಂಬ ಅರ್ಥ ಮೂಡಿಬರಬೇಕು. ಶ್ರೇಷ್ಠತೆಯನ್ನೇ ನಮ್ಮ ಮಾನದಂಡವಾಗಿಸೋಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ.

Source link

ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ – Kannada News | Zaid Khan starrer Cult Kannada movie shows gets housefull in Bengaluru

ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ (Cult Kannada Movie) ಜನವರಿ 23ರಂದು ಬಿಡುಗಡೆ ಆಯಿತು. ಈ ಸಿನಿಮಾಗೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್​ದಾರೆ. ಝೈದ್ ಖಾನ್ ಅವರ ಜೊತೆ ರಚಿತಾ ರಾಮ್ (Rachita Ram), ಮಲೈಕಾ ವಸುಪಾಲ್, ರಂಗಾಯಣ ರಘು, ಅಚ್ಯುತ್ ಕುಮಾರ್, ಕಿಶನ್ ಬಿಳಗಲಿ ಮುಂತಾದವರು ನಟಿಸಿದ್ದಾರೆ. ಜನವರಿ 23ರಂದು ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಆಯಿತು. ಝೈದ್ ಖಾನ್ (Zaid Khan), ಮಲೈಕಾ ಅವರು ಕೆಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದರು. ಜನವರಿ 23ಕ್ಕೆ ‘ಲ್ಯಾಂಡ್​ಲಾರ್ಡ್’, ‘ಬಾರ್ಡರ್ 2’ ಮುಂತಾದ ಸಿನಿಮಾಗಳು ಬಿಡುಗಡೆ ಆಗಿದ್ದು, ಎಲ್ಲ ಚಿತ್ರಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬರೋಬ್ಬರಿ 27 ಬಾರಿ… ಹೊಸ ಇತಿಹಾಸ ನಿರ್ಮಿಸಿದ ಜೋ ರೂಟ್ – Kannada News | Joe Root Breaks Kevin Pietersen’s Record

ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ (Joe Root) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಕೆವಿನ್ ಪೀಟರ್ಸನ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆ ಮುರಿಯುವ ಮೂಲಕ. ಅಂದರೆ ಇಂಗ್ಲೆಂಡ್ ಪರ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎಂಬ ದಾಖಲೆ ರೂಟ್ ಪಾಲಾಗಿದೆ.

Source link

ಒಟಿಟಿ, ಚಿತ್ರಮಂದಿರದಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ ‘ಹೌದ್ದೋ ಹುಲಿಯ’ ಸಿನಿಮಾ – Kannada News | Vaijanath Biradar new movie Howdu Huliya releasing both in OTT and theatre

ಪಕ್ಕಾ ಉತ್ತರ ಕರ್ನಾಟಕ ಭಾಷೆಯ ಸೊಗಡಿರುವ ಹೊಸ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ (Howdu Huliya) ಬಿಡುಗಡೆಗೆ ಸಜ್ಜಾಗಿದೆ. ‘ಸ್ವಯಂ ಪ್ರಭಾ ಎಂಟರ್‌ಟೈನ್‌ಮೆಂಟ್ ಆ್ಯಂಡ್ ಪ್ರೊಡಕ್ಷನ್ಸ್’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಜನವರಿ 30ರಂದು ಈ ಸಿನಿಮಾ ರಿಲೀಸ್ ಆಗಲಿದೆ. ವಿಶೇಷ ಏನೆಂದರೆ, ಒಂದು ಪ್ರಯೋಗಕ್ಕೆ ಚಿತ್ರತಂಡ ಮುಂದಾಗಿದೆ. ಏಕಕಾಲದಲ್ಲಿ ಚಿತ್ರಮಂದಿರ ಹಾಗೂ ‘ಟಾಕೀಸ್’ ಒಟಿಟಿ (OTT) ಮೂಲಕ ಈ ಚಿತ್ರ ಬಿಡುಗಡೆ ಆಗಲಿದೆ. ‘ಹೌದ್ದೋ ಹುಲಿಯ’ ಸಿನಿಮಾದಲ್ಲಿ ವೈಜನಾಥ್ ಬಿರಾದರ್ (Vaijanath Biradar) ಅವರು ನಟಿಸಿದ್ದಾರೆ.

‘ಹೌದ್ದೋ ಹುಲಿಯ’ ಚಿತ್ರವನ್ನು ಕೆ. ರತ್ನಾಕರ ಕಾಮತ್ ಹಾಗೂ ಗಣೇಶ್ ಆರ್. ಕಾಮತ್ ಅವರು ನಿರ್ಮಾಣ ಮಾಡಿದ್ದಾರೆ. ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಜಿ.ಜಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ‘ದಸ್ಕತ್’ ಸಿನಿಮಾ ನಿರ್ದೇಶಿಸಿದ ಯುವ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಅವರು ಈಗ ‘ಹೌದ್ದೋ ಹುಲಿಯ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ.

ಸಿನಿಮಾ ಥೀಮ್ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ. ‘ಗ್ರಾಮೀಣ ಬದುಕಿನ ಸೊಗಡು, ಹಾಸ್ಯ, ಎಮೋಷನ್ ಮತ್ತು ಸಮಾಜದ ನೈಜ ಮುಖವನ್ನು ಒಳಗೊಂಡ ಕಥಾವಸ್ತುವನ್ನು ಹೊಂದಿರುವ ಚಿತ್ರ ಇದು. ಸಂಪೂರ್ಣ ಜವಾರಿ ಭಾಷೆಯಲ್ಲಿ ಮೂಡಿ ಬಂದಿದ್ದು ಯುವ ಹಾಗೂ ಅನುಭವಿ ಕಲಾವಿದರನ್ನ ಒಳಗೊಂಡಿದೆ’ ಎಂದು ಚಿತ್ರಂಡ ಹೇಳಿದೆ.

ವೈಜನಾಥ್ ಬಿರಾದರ್ ಅವರ ಜೊತೆಗೆ ಮಿಮಿಕ್ರಿ ಗೋಪಿ, ಪ್ರಿಯಾ ಸವದಿ, ಮಲ್ಯ ಬಾಗಲಕೋಟೆ, ಸೂರಜ್, ಸಂತೋಷ್ ರೋಣ, ಕಾಮಿಡಿ‌ ಕಿಲಾಡಿ ಖ್ಯಾತಿಯ ಜಿ.ಜಿ, ಸದಾನಂದ, ಉಮೇಶ್ ಕಿನ್ನಾಳ್ ದಾನಪ್ಪ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇದೊಂದು ಸಂಪೂರ್ಣ ಹಾಸ್ಯಮಯ ಚಿತ್ರವಾಗಿದೆ. ಈ ಕಥೆ ಎಲ್ಲ ಪ್ರೇಕ್ಷಕರಿಗೆ ಕನೆಕ್ಟ್ ಆಗಲಿದೆ ಎಂದಿದೆ ‘ಹೌದ್ದೋ ಹುಲಿಯ’ ಚಿತ್ರತಂಡ.

ಇದನ್ನೂ ಓದಿ: ಅವತ್ತು ಗಾಂಧಿ ನಗರದಲ್ಲಿ ಅವಮಾನ, ಇಂದು ಕಟೌಟ್: ಇಳಿ ವಯಸ್ಸಿನಲ್ಲಿ ಕಟೌಟ್ ಕಂಡ ನಟ ಬಿರಾದರ್ ಖುಷಿಗೆ ಪಾರವಿಲ್ಲ

ಈ ಸಿನಿಮಾಗೆ ಸಂತೋಷ್ ಗುಂಪಲಾಜೆ ಹಾಗೂ ದೀಕ್ಷಿತ್ ಧರ್ಮಸ್ಥಳ ಅವರು ಛಾಯಗ್ರಹಣ ಮಾಡಿದ್ದಾರೆ. ಕಿಶೋರ್ ಶೆಟ್ಟಿ, ಸಮರ್ಥನ್ ರಾವ್ ಅವರು ಸಂಗೀತ ನೀಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಸೌಮ್ಯ ಡಿ. ಗೌಡ ಅವರು ಕೆಲಸ ಮಾಡಿದ್ದಾರೆ. ಕ್ರಿಯೇಟಿವ್ ಹೆಡ್ ಆಗಿ ಸ್ಮಿತೇಶ್ ಕಾರ್ಯ ನಿರ್ವಹಿಸಿದ್ದಾರೆ. ಚಿದಾನಂದ ಪೈ, ನಿಶಿತ್ ಶೆಟ್ಟಿ, ಮನೋಜ್ ಆನಂದ್, ನೀರಜ್ ಕುಂಜರ್ಪ ಹಾಗೂ ಅನೂಪ್ ಭಟ್ ಕೂಡ ತಂಡದಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ; ಪರಮೇಶ್ವರ್ ಹೇಳಿದ್ದೇನು? – Kannada News | Belagavi Rs.400 Cr Robbery: G. Parameshwara on Police Investigation

ಬೆಂಗಳೂರು, ಜನವರಿ 25: ಬೆಳಗಾವಿಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ಅಕ್ಟೋಬರ್ 2022 ರಲ್ಲಿ ನಡೆದಿದೆ ಎನ್ನಲಾದ ರೂ. 400 ಕೋಟಿ ಮೌಲ್ಯದ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳ ದರೋಡೆ ಪ್ರಕರಣ (Belagavi Rs.400 Cr Robbery) ತಡವಾಗಿ ಬೆಳಕಿಗೆ ಬಂದಿದ್ದು, ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಪ್ರಕರಣದ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಅವರು ಪ್ರತಿಕ್ರಿಯಿಸಿದ್ದಾರೆ.

ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಈ ಹಣವು ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಅವರಿಗೆ ಸೇರಿದ್ದು ಎನ್ನಲಾಗಿದೆ. ನಾಸಿಕ್ ಮೂಲದ ಸಂದೀಪ್ ಪಾಟೀಲ್ ಎಂಬುವರ ಅಪಹರಣದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವೀಸ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆಗೆ ವಿಶೇಷ ತನಿಖಾ ದಳ (SIT) ರಚಿಸುವಂತೆ ಆದೇಶಿಸಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ಪೊಲೀಸರು ಕಂಟೇನರ್‌ಗಳ ಹುಡುಕಾಟ ನಡೆಸುತ್ತಿದ್ದಾರೆ. ಮಹಾರಾಷ್ಟ್ರ ಪೊಲೀಸರು ಕರ್ನಾಟಕ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದು, ಈ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಪರಮೇಶ್ವರ ತಿಳಿಸಿದ್ದಾರೆ.

ಪ್ರಕರಣವು ಇನ್ನೂ ಆರಂಭಿಕ ಹಂತದಲ್ಲಿದೆ. ನಮಗೆ ಸರಿಯಾದ ಮಾಹಿತಿಗಳು ದೊರೆತ ನಂತರ ನಮ್ಮ ರಾಜ್ಯ ಪೊಲೀಸ್ ಇಲಾಖೆಯ ಪಾತ್ರ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಪೊಲೀಸರು ಮುಂದಿನ ತನಿಖೆಗಳಲ್ಲಿ ಕರ್ನಾಟಕದ ಸಹಕಾರ ಅಗತ್ಯವಿದೆ ಎಂಬ ರೀತಿಯಲ್ಲಿ ಮಾಹಿತಿ ನೀಡಿದ್ದಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

Source link