ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್; ಗಂಡು ಮಗುವಿಗೆ ಜನ್ಮ ನೀಡಿದ ನಟಿ
ನಟಿ ಸೋನಂ ಕಪೂರ್ ಹಾಗೂ ಉದ್ಯಮಿ ಆನಂದ್ ಅಹೂಜಾ ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟಿದ್ದಾರೆ. ಸೋನಂ ಎರಡನೇ ಬಾರಿಗೆ ತಾಯಿ ಆಗಿದ್ದಾರೆ. ಅವರಿಗೆ ಗಂಡು ಮಗು ಜನಿಸಿದೆ. ಮಾರ್ಚ್ 29ರಂದು ಮಗು ಜನಿಸಿದೆ. ಈ ಬಗ್ಗೆ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಸೋನಂ ಕಪೂರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಸೋನಂ ಕುಟುಂಬ ಮತ್ತಷ್ಟು ವಿಸ್ತೃತವಾಗಿದೆ. ಸೋನಂ ಕಪೂರ್ ಅವರು ಇನ್ಸ್ಟಾಗ್ರಾಮ್ ಅಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ನಮ್ಮ ಕುಟುಂಬ ಹಿರಿದಾಗಿದೆ. ಅವನ ಆಗಮನದಿಂದ ನಮ್ಮ ಹೃದಯದಲ್ಲಿ…