All posts by nagaraj11081993

ರಾಜ್ಯಪಾಲರು ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಹೇರುತ್ತಾರೆ: ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ – Kannada News | Governor will impose President rule in Karnataka: BJP MLA Suresh Gowda Warns To Congress

ತುಮಕೂರು, (ಜನವರಿ 24): ತಮಿಳುನಾಡು ಕೇರಳದಂತೆ ಕರ್ನಾಟಕದಲ್ಲೂ (Karnataka)  ರಾಜ್ಯಪಾಲ (governor) ವರ್ಸಸ್ ಸರ್ಕಾರದ ನಡುವಿನ ಸಂಘರ್ಷಕ್ಕೆ ನಾಂದಿ ಹಾಡಿದೆ. ಮೊನ್ನೆ ಕರ್ನಾಟಕದ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ (Karnataka Assembly Session), ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್​​, ಸರ್ಕಾರ ಸಿದ್ಧಪಡಿಸಿದ್ದ ಭಾಷಣ ಓದದೇ ತಮ್ಮ ಆದ ಎರಡು ಲೈನ್ ಓದಿ ಹೋಗಿದ್ದಾರೆ. ಫೂರ್ತಿ ಭಾಷಣ ಮಾಡದ ರಾಜ್ಯಪಾಲರ ನಡೆ ಬಿಜೆಪಿ ಕಾಂಗ್ರೆಸ್ ಮಧ್ಯೆ ಕದನಕ್ಕೆ ವೇದಿಕೆಯಾಗಿದೆ. ರಾಜ್ಯಪಾಲರು ಸಾಂವಿಧಾನಿಕ ಕರ್ತವ್ಯ ಉಲ್ಲಂಘಿಸಿದ್ದಾರೆ. ಇದು ಕೇಂದ್ರದ ಕುಮ್ಮಕ್ಕು ಎಂದು ಕಿಡಿಕಾರಿದ್ರೆ, ಅಧಿಕಾರ ದುರ್ಬಳಕೆ ಮಾಡಿಕೊಂಡು ಕೇಂದ್ರದ ವಿರುದ್ಧ ಸಂಘರ್ಷ ಮಾಡುತ್ತಿದ್ದೀರಾ ಎಂದು ಬಿಜೆಪಿ ಪಡೆ ತಿರುಗೇಟು ನೀಡಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿ ಶಾಸಕ ಸುರೇಶ್ ಗೌಡ , ಅವರು ಕರ್ನಾಟಕದಲ್ಲಿ ರಾಜ್ಯಪಾಲರು ರಾಷ್ಟ್ರಪತಿ ಆಡಳಿತ ಹೇರಲಿದ್ದಾರೆ ಎಂದು ಬಹಿರಂಗವಾಗಿಯೇ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಹೇಳಿಕೆ ಸದ್ಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ರಾಜ್ಯಪಾಲರು ರಾಷ್ಟಪತಿ ಆಡಳಿತ ಹೇರುತ್ತಾರೆ

ತುಮಕೂರಿನಲ್ಲಿಂದು ಮಾತನಾಡಿದ ಸುರೇಶ್ ಗೌಡ, ರಾಜ್ಯದಲ್ಲಿ ರಾಜ್ಯಪಾಲರು ರಾಷ್ಟ್ರಪತಿ ಆಡಳಿತ ಹೇರುತ್ತಾರೆ. ಅಸವಿಂಧಾನಕವನ್ನು ನನ್ನ ಕೈನಲ್ಲಿ ಓದಿಸಬೇಡಿ ಎಂದು ಈಗಾಗಲೇ ರಾಜ್ಯಪಾಲರು ತೋರಿಸಿದ್ದಾರೆ.ಇನ್ನಾದರೂ ಕಾಂಗ್ರೆಸ್ ನವರು ರಾಜ್ಯಪಾಲರನ್ನ ಗೌರವಯುತವಾಗಿ ನಡೆಸಿಕೊಳ್ಳಬೇಕು. ಇಲ್ಲದಿದ್ದರೆ ರಾಜ್ಯಪಾಲರು ರಾಷ್ಟಪತಿ ಆಡಳಿತ ಹೇರುತ್ತಾರೆ. ಕಾಂಗ್ರೆಸ್ ಅನ್ನು ರಾಜ್ಯದಿಂದ ತೋಲಗಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಸರ್ಕಾರದ ವಿರುದ್ಧ ಮತ್ತೆ ತೊಡೆತಟ್ಟಿದ ರಾಜ್ಯಪಾಲರು: ಅಧಿವೇಶನ ಬಳಿಕ ಗಣರಾಜ್ಯೋತ್ಸವ ಭಾಷಣ ಓದಲೂ ಹಿಂದೇಟು!

ಕೆಲವು ಕಾಂಗ್ರೆಸ್ ಗೂಂಡಾ ಶಾಸಕರು ರಾಜ್ಯಪಾಲರಿಗೆ ಧಮ್ಕಿ ಹಾಕಿದ್ದಾರೆ. ಇವರ ಗೂಂಡಾ ವರ್ತನೆ ಇಂದ ರಾಜ್ಯಪಾಲರು ಗಡಿಬಿಡಿಯಿಂದ ಭಾಷಣ ಮಾಡದೇ ಹೋದರು. ಇವರು ಬೆದರಿಕೆ ಹಾಕಿರುವುದಕ್ಕೆ ರಾಜ್ಯಪಾಲರು ಭಯದಿಂದ ವಾಪಾಸ್ ಹೋದರು. ಹರಿಪ್ರಸಾದ್ ಅವರು ತಮ್ಮ ಹಿಂದಿನ ದಿನಗಳನ್ನ ನೆನೆಪಿಸಿಕೊಂಡು ಸದನದಲ್ಲಿ ವರ್ತನೆ ತೋರಿದ್ದಾರೆ ಎಂದು ಕಿರಿಕಾರಿರು.

ಕಾಂಗ್ರೆಸ್ ಸರ್ಕಾರ 40% ಅಷ್ಟು ಹಣ ವಿನಿಯೋಗ ಮಾಡಬೇಕು.

ಕಾಂಗ್ರೆಸ್ ಸರ್ಕಾರ ರಾಮ್ ಜಿ ಯೋಜನೆ ವಿರೋಧಿಸಿ ಅಧಿವೇಶನ ಕರೆದಿತ್ತು. ಕಾಂಗ್ರೆಸ್ ನವರಿಗೆ ಶಾಲೆ ಮತ್ತು ಆಸ್ಪತ್ರೆ ಗಳ ಕುರಿತು ವಿಶೇಷ ಅಧಿವೇಶನ ಕರೆಯುವಂತೆ ಹಲವಾರು ಬಾರಿ ಒತ್ತಾಯ ಮಾಡಿದ್ದೇವೆ. ಆದರೆ ಅವರಿಗೆ ಬಡವರ ಶಾಲೆ, ಆಸ್ಪತ್ರೆ ಗೆ ಅವರಿಗೆ ಆಸಕ್ತಿ ಇಲ್ಲ. ಕಾಂಗ್ರೆಸ್ ಸರ್ಕಾರ ನೆಹರು ಕಾಲದಿಂದಲೂ ಗರಿಬಿ ಹಠಾವೋ ಎಂದು ಹೇಳಿತ್ತು. ಆದರೆ ಬಡತನ ಇನ್ನೂ ಹೋಗಿಲ್ಲ. ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿಗಿಂತ ಮೊದಲು, ನೆಹರು ರೋಜಗಾರ್ ಇತ್ತು.ಜಿ ರಾಮ್ ಜಿ ಯೋಜನೆ ಯಲ್ಲಿ 100 ದಿನ ಕೆಲಸದ ಬದಲು 125ದಿನ ಕೆಲಸ ಕೊಟ್ಟಿದ್ದೇವೆ. ಹಿಂದೆ 37ಸಾವಿರ ಒಂದು ಕುಟುಂಬಕ್ಕೆ ಹಣ ಬರುತ್ತಿತ್ತು. ಈಗ 47ಸಾವಿರ ಹಣ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ 40% ಅಷ್ಟು ಹಣ ವಿನಿಯೋಗ ಮಾಡಬೇಕು. ಅಷ್ಟು ಹಣ ವಿನಿಯೋಗ ಮಾಡಲು ಆಗುತ್ತಾ ಇಲ್ಲ. ಯಾಕಂದ್ರೆ ಸರ್ಕಾರ ದಿವಾಳಿ ಯಾಗಿದೆ. ಅದಕ್ಕಾಗಿ ರಾಮ್ ಜಿ ಯೋಜನೆ ವಿರೋಧ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಗೃಹ ಲಕ್ಷ್ಮಿ ಯೋಜನೆ ಅಡಿಯಲ್ಲಿ 5 ಸಾವಿರ ಕೋಟಿ ಹಣವನ್ನು ಕಾಂಗ್ರೆಸ್ ಸರ್ಕಾರ ನುಂಗಿ ನೀರು ಕುಡಿದಿದೆ.
ದೇಶದ ಎಲ್ಲಾ ಗ್ರಾಮಗಳು ವಿಕಾಸ ಆಗಬೇಕು ಎಂಬ ಚಿಂತನೆ ಪ್ರಧಾನಿ ಹೊಂದಿದ್ದಾರೆ. ಈ ಬಿಲ್ ಸಂಸತ್ ನಲ್ಲಿ ಅನುಮೋದನೆ ಆಗಿ ರಾಷ್ಟ್ರ ಪತಿಗಳ ಅಂಕಿತ ಆಗಿದೆ. ಅದಾದ ನಂತರ ರಾಜ್ಯಪಾಲರನ್ನು ಕರೆದು ಈ ಬಿಲ್ ಸರಿ ಇಲ್ಲ ಎಂದು ಹೇಳಿಸಲು ಕಾಂಗ್ರೆಸ್ ನವರು ಪ್ರಯತ್ನಪಟ್ಟರು. ರಾಷ್ಟ್ರಪತಿಗಳು ಅಂಕಿತ ಹಾಕಿರುವುದನ್ನು ರಾಜ್ಯಪಾಲರು ವಿರೋಧಿಸಲು ಸಾಧ್ಯನಾ ಎಂದು ಪ್ರಶ್ನಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. CL 7 ಪರವಾನಿಗೆಗೆ 2.5ಕೋಟಿ ರೂ. ಲಂಚ ಕೇಳಿದ್ದಾರೆ. ಇಂದಿರಾ ಗಾಂಧಿ, ನೆಹರು ಹೆಸರಲ್ಲಿ 400 ಯೋಜನೆಗಳಿಗೆ ಹೆಸರು ಇಟ್ಟಿದಾರೆ. ಇವತ್ತು ರಾಮನ ಹೆಸರು ಇಟ್ಟಿರೋದಕ್ಕೆ ಅವರಿಗೆ ನಿದ್ದೆ ಬರುತ್ತಿಲ್ಲ. ರಾಮನ ಹೆಸರು ತೋರಿಸಿಕೊಂಡು ಕಾಂಗ್ರೆಸ್ ಸರ್ಕಾರ ಬರಿ ಅಲ್ಪಸಂಖ್ಯಾತರು, ಬಡವರನ್ನ ಶೋಷಣೆ ಮಾಡಿಕೊಂಡು ಬಂದಿದೆ. ರಾಹುಲ್ ಗಾಂಧಿ ಬೌದ್ಧಿಕವಾಗಿ ದಿವಾಳಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನ ಮರ್ಯಾದೆ ಹರಾಜು ಹಾಕಿದ್ದಾರೆ. ಕಾಂಗ್ರೆಸ್ ನವರು ಪದೇ ಪದೇ ಅಂಬೇಡ್ಕರ್ ಬರೆದ ಸಂವಿಧಾನದ ಬಗ್ಗೆ ಮಾತಾಡ್ತಾರೆ. ಆದರೆ ಒಬ್ಬ ದಲಿತ ರಾಜ್ಯ ಪಾಲರಿಗೆ ಅವಮಾನ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸರ್ಕಾರದ ವಿರುದ್ಧ ಮತ್ತೆ ತೊಡೆತಟ್ಟಿದ ರಾಜ್ಯಪಾಲರು: ಅಧಿವೇಶನ ಬಳಿಕ ಗಣರಾಜ್ಯೋತ್ಸವ ಭಾಷಣ ಓದಲೂ ಹಿಂದೇಟು! – Kannada News | Karnataka Governor vs Government: Thaawarchand Gehlot Likely to Skip Reading Republic Day Speech

ಬೆಂಗಳೂರು, ಜನವರಿ 24: ಕರ್ನಾಟಕದಲ್ಲಿ (Karnataka) ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ವೇದಿಕೆ ಸಿದ್ಧವಾಗುತ್ತಿರುವ ಸೂಚನೆಗಳು ಕಂಡುಬಂದಿವೆ. ಈಗಾಗಲೇ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಉಂಟಾಗಿದ್ದ ಗದ್ದಲದ ಬೆನ್ನಲ್ಲೇ, ಈ ಬಾರಿ ಗಣರಾಜ್ಯೋತ್ಸವದ ಭಾಷಣವೇ ಹೊಸ ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಹೆಚ್ಚಾಗಿದೆ. ಸಂಪ್ರದಾಯದಂತೆ ಗಣರಾಜ್ಯೋತ್ಸವದಂದು ರಾಜ್ಯಪಾಲರು ಓದುವ ಭಾಷಣವನ್ನು ರಾಜ್ಯ ಸರ್ಕಾರವೇ ತಯಾರಿಸಿ ನೀಡುತ್ತದೆ. ಆದರೆ ಈ ಬಾರಿ ಸರ್ಕಾರ ಸಿದ್ಧಪಡಿಸಿರುವ ಭಾಷಣದಲ್ಲಿ ಕೇಂದ್ರ ಸರ್ಕಾರದ ನೀತಿಗಳ ಕುರಿತು ತೀವ್ರ ಟೀಕೆಗಳಿರುವುದು ರಾಜ್ಯಪಾಲರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.

ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಭಾಷಣದಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ತೆರಿಗೆ ಅನ್ಯಾಯ, ಅನುದಾನ ಹಂಚಿಕೆಯಲ್ಲಿ ನಡೆಯುತ್ತಿರುವ ತಾರತಮ್ಯ, ಮಲತಾಯಿ ಧೋರಣೆ ಸೇರಿದಂತೆ ಹಲವು ಅಂಶಗಳನ್ನು ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಈ ಅಂಶಗಳು ಕೇಂದ್ರ ಸರ್ಕಾರವನ್ನು ಟೀಕಿಸುವಂತಿರುವುದರಿಂದ, ಅಂತಹ ಭಾಷಣವನ್ನು ಓದುವುದಿಲ್ಲ ಎಂದು ರಾಜ್ಯಪಾಲರು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಟ್ಟು ಬಿಡದ ರಾಜ್ಯಪಾಲರು

‘ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುವ ಅಂಶಗಳಿದ್ದರೆ ಅದನ್ನು ಓದಲು ಸಾಧ್ಯವಿಲ್ಲ. ಸರ್ಕಾರ ತಿದ್ದುಪಡಿ ಮಾಡದಿದ್ದರೆ, ನಾನೇ ಸಿದ್ಧಪಡಿಸಿದ ಭಾಷಣವನ್ನು ಓದುತ್ತೇನೆ’ ಎಂದು ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಪಟ್ಟುಹಿಡಿದಿದ್ದಾರೆ ಎನ್ನಲಾಗಿದೆ. ಈ ವಿಚಾರ ಈಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ವಿಧಾನಸಭೆಯಲ್ಲಿ ನಡೆದಿತ್ತು ಹೈಡ್ರಾಮಾ

ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ವೇಳೆ ಭಾರಿ ಗದ್ದಲ ಉಂಟಾಗಿತ್ತು. ಭಾಷಣದ ಕೆಲವು ಭಾಗಗಳನ್ನು ಕೈಬಿಡುವಂತೆ ಸರ್ಕಾರಕ್ಕೆ ರಾಜ್ಯಪಾಲರು ಮೊದಲೇ ಸೂಚಿಸಿದ್ದರು. ಆದರೆ, ರಾಜ್ಯಪಾಲರಿಂದ ಭಾಷಣ ಓದಿಸಿಯೇ ಸಿದ್ಧ ಎಂದು ಸರ್ಕಾರ ಪಟ್ಟು ಹಿಡಿದಿತ್ತು. ಕೊನೆಗೆ ರಾಜ್ಯಪಾಲರು ಸರ್ಕಾರ ಸಿದ್ಧಪಡಿಸಿದ ಭಾಷಣದ ಮೊದಲ ಮತ್ತು ಕೊನೆಯ ಪ್ಯಾರದ ಒಂದೆರಡು ಲೈನ್ ಮಾತ್ರ ಓದಿ, ಶುಭಾಶಯ ಕೋರಿ ಸರ್ಕಾರಕ್ಕೆ ಶಾಕ್ ಕೊಟ್ಟು ವಿಧಾನಸಭೆಯಿಂದ ಹೊರನಡೆದಿದ್ದರು. ಈ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಾಯಕರ ಮಧ್ಯೆ ವಾಗ್ವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಒಂದೇ ವಾಕ್ಯದಲ್ಲಿ ಮಾತು ಮುಗಿಸಿದ ರಾಜ್ಯಪಾಲರು, ಸರ್ಕಾರದ ಭಾಷಣ ಓದಲು ನಕಾರ: ವಿಧಾನಸಭೆಯಲ್ಲಿ ಹೈಡ್ರಾಮಾ

ಆ ಘಟನೆಯ ಬಳಿಕವೂ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಪರಿಸ್ಥಿತಿ ತಿಳಿಯಾಗಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ಈಗ ಗಣರಾಜ್ಯೋತ್ಸವದ ಭಾಷಣದ ವಿಷಯವೇ ಮತ್ತೊಂದು ರಾಜಕೀಯ ಸಂಘರ್ಷಕ್ಕೆ ಕಿಡಿ ಹಚ್ಚಿದೆ. ಇದರಿಂದ ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರ ನಡುವಿನ ಬಿಕ್ಕಟ್ಟು ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಸರ್ಕಾರ ತನ್ನ ನಿಲುವಿನಲ್ಲಿ ಬದಲಾವಣೆ ಮಾಡುತ್ತದೆಯೇ? ಅಥವಾ ರಾಜ್ಯಪಾಲರು ಸ್ವತಂತ್ರವಾಗಿ ಭಾಷಣ ಸಿದ್ಧಪಡಿಸುವರೇ? ಎಂಬುದು ಈಗ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:41 pm, Sat, 24 January 26

Source link

ಕದ್ದುಮುಚ್ಚಿ ಶಾಸ್ತ್ರೋಕ್ತವಾಗಿ ಮದುವೆ ಆದ್ರಾ ಧನುಶ್-ಮೃಣಾಲ್ ಠಾಕೂರ್? – Kannada News | Dhanush and Mrunal Thakur: Secret Wedding? Viral AI Photo Sparks Debate

ಧನುಶ್ ಹಾಗೂ ಮೃಣಾಲ್ ಠಾಕೂರ್ (Mrunal Thakur) ಅವರ ವಿವಾಹದ ಬಗ್ಗೆ ಚರ್ಚೆಗಳು ನಡೆದಿವೆ. ಫೆಬ್ರವರಿ 14 ಅಂದರೆ ಪ್ರೇಮಿಗಳ ದಿನ ಇವರು ಹಸೆಮಣೆ ಏರುತ್ತಾರೆ ಎಂಬ ಗಾಸಿಪ್ ಜೋರಾಗಿದೆ. ಆಪ್ತರು ಹಾಗೂ ಚಿತ್ರರಂಗದವರು ಈ ಮದುವೆಯಲ್ಲಿ ಭಾಗಿ ಆಗೋ ಸಾಧ್ಯತೆ ಇದೆ. ಹೀಗಿರುವಾಗಲೇ ಧನುಶ್ ಹಾಗೂ ಮೃಣಾಲ್ ಕದ್ದು ಮುಚ್ಚಿ ಮದುವೆ ಆದರೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗಿದ್ದು ಆ ಒಂದು ಫೋಟೋ.

ಧನುಶ್ ಹಾಗೂ ಮೃಣಾಲ್ ಒಟ್ಟಾಗಿ ಸಿನಿಮಾ ಮಾಡಿದವರಲ್ಲ. ಆದರೆ, ಇಬ್ಬರ ಮಧ್ಯೆ ಪರಿಚಯ ಆಯಿತು. ಇವರ ವಿವಾಹ ಸಮೀಪಿಸುತ್ತಿರುವಾಗಲೇ ಫೋಟೋ ವೈರಲ್ ಆಗಿದೆ. ಧನುಶ್ ಹಾಗೂ ಮೃಣಾಲ್ ಅಕ್ಕ ಪಕ್ಕ ಕೂತಿದ್ದಾರೆ. ಧನುಶ್ ಬಿಳಿ ಬಣ್ಣದ ಧೋತಿ ಹಾಗೂ ಶರ್ಟ್ ಧರಿಸಿದ್ದಾರೆ. ಮೃಣಾಲ್ ಠಾಕೂರ್ ಸೀರೆ ಉಟ್ಟಿ, ಕೂದಲಿಗೆ ಮಲ್ಲಿಗೆ ಹೂ ಮುಡಿದಿದ್ದಾರೆ.

ಹಿಂಭಾಗದಲ್ಲಿ ನಟರಾದ ದಳಪತಿ ವಿಜಯ್, ಅಜಿತ್, ದುಲ್ಖರ್ ಸಲ್ಮಾನ್, ನಟಿಯರಾದ ಶ್ರುತಿ ಹಾಸನ್, ತ್ರಿಷಾ ಇದ್ದಾರೆ. ಮ್ಯೂಸಿಕ್ ಡೈರೆಕ್ಟರ್ ಅನಿರುದ್ಧ್ ರವಿಚಂದರ್ ಕೂಡ ಪೋಸ್ ಕೊಟ್ಟಿದ್ದಾರೆ. ಜನವರಿ 22ರಂದು ಈ ಮದುವೆ ನಡೆದಿದೆ ಎಂದು ಫೇಕ್ ನ್ಯೂಸ್ ಹಬ್ಬಿಸಲಾಗಿದೆ. ಚೆನ್ನೈನಲ್ಲಿ ಈ ವಿವಾಹ ನಡೆದಿದೆ ಎಂದು ಬರೆಯಲಾಗಿದೆ. ಕೊನೆಯಲ್ಲಿ ಇದನ್ನು ಎಐನಿಂದ ಮಾಡಿದ ವಿಡಿಯೋ ವಿಶೇಷ ಸೂಚನೆ ಹಾಕಲಾಗಿದೆ. ಈ ವಿಡಿಯೋ ನೋಡಿದ ಅನೇಕರು ಇದು ನಿಜ ಎಂದು ನಂಬಿದ್ದಾರೆ.

ಫೆಬ್ರವರಿ 14ರಂರು ಮೃಣಾಲ್ ಹಾಗೂ ಧನುಶ್ ಮದುವೆ ನಡೆಯಲಿದೆ ಎಂಬ ವರದಿ ಹರಿದಾಡಿದೆ. ಹೈದರಾಬಾದ್ ಈವೇಂಟ್​​ನಲ್ಲಿ ಇಬ್ಬರೂ ಭೇಟಿ ಮಾಡಿಯಾದರು ಎನ್ನಲಾಗಿದೆ. ಫೆಬ್ರವರಿ ಕೊನೆಯಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ನಡೆಯಲಿದೆಯಂತೆ. ಒಂದೇ ತಿಂಗಳಲ್ಲಿ ಎರಡೆರಡು ಮದುವೆ ನಡೆಯಲಿದೆ.

ಇದನ್ನೂ ಓದಿ: ಧನುಷ್ ಜೊತೆ ಮೃಣಾಲ್ ಠಾಕೂರ್ ಮದುವೆ? ಇಬ್ಬರ ನಡುವೆ ವಯಸ್ಸಿನ ಅಂತರ

ಧನುಶ್ ಅವರು ಈ ಮೊದಲು ರಜನಿಕಾಂತ್ ಮಗಳು ಐಶ್ವರ್ಯಾ ಅವರನ್ನು ವಿವಾಹ ಆಗಿದ್ದರು. ಆ ಬಳಿಕ ವಿಚ್ಛೇದನ ಪಡೆದು ಇವರು ದೂರವಾದರು. ಈ ಬೆನ್ನಲ್ಲೇ ಧನುಶ್ ಎರಡನೇ ಮದುವೆಗೆ ರೆಡಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು, ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ – Kannada News | Nellore’s Gudur Under Threat: Armed Gang Video Goes Viral, Residents Fear for Safety

ಆಂಧ್ರಪ್ರದೇಶ, ಜ.24: ನೆಲ್ಲೂರು ಜಿಲ್ಲೆಯ ಗೂಡೂರು (Gudur) ಪಟ್ಟಣದಲ್ಲಿ ಮಧ್ಯರಾತ್ರಿ ಕತ್ತಿ ಮತ್ತು ಮಾರಕಾಸ್ತ್ರಗಳನ್ನು ಹಿಡಿದು ಕಳ್ಳರು ಓಡಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕವನ್ನುಂಟು ಮಾಡಿದೆ. ಅದರಲ್ಲೂ ವಿಶೇಷವಾಗಿ ಈಸ್ಟ್ ಸ್ಟ್ರೀಟ್ (East Street) ಮತ್ತು ಫ್ಲವರ್ ಗಾರ್ಡನ್ (Flower Garden) ಪ್ರದೇಶಗಳಲ್ಲಿ ಈ ಗುಂಪು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಮಧ್ಯರಾತ್ರಿಯ ಸಮಯದಲ್ಲಿ ದುಷ್ಕರ್ಮಿಗಳ ಗುಂಪೊಂದು ಕೈಯಲ್ಲಿ ಚಾಕು ಮತ್ತು ಲಾಂಗ್‌ಗಳನ್ನು ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವುದು ಸಿಸಿಟಿವಿ (CCTV) ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಜನರ ಮೇಲೆ ದಾಳಿ ಮಾಡುವ ಭಯ ಹುಟ್ಟಿಸುತ್ತಿರುವುದು ಸ್ಥಳೀಯರನ್ನು ನಿದ್ದೆಯಿಲ್ಲದಂತೆ ಮಾಡಿದೆ. ಘಟನೆ ವರದಿಯಾದ ತಕ್ಷಣ ಗೂಡೂರು ಪೊಲೀಸರು ಈ ಪ್ರದೇಶಗಳಲ್ಲಿ ರಾತ್ರಿ ಗಸ್ತು ತಿರುಗುತ್ತಾರೆ. ಕಳ್ಳರ ಗುರುತು ಪತ್ತೆಹಚ್ಚಲು ಪೊಲೀಸರು ವಿವಿಧ ರಸ್ತೆಗಳಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಸಂಶಯಾಸ್ಪದ ವ್ಯಕ್ತಿಗಳು ಕಂಡರೆ ಕೂಡಲೇ 100 ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಕರೆ ಮಾಡುವಂತೆ ಸೂಚಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಗನ ಅನೈತಿಕ ಸಂಬಂಧಕ್ಕೆ ತಾಯಿ ಫುಲ್ ಸಪೋರ್ಟ್​! ನವವಿವಾಹಿತೆ ಗಂಭೀರ ಆರೋಪ – Kannada News | Attibele Inter Caste Marriage Dispute: Husband Accused of Affair, Wife Faces Assault Charge

ಹೆಂಡತಿಯ ಎಂಗೇಜ್ಮೆಂಟ್ ಸೀರೆಯನ್ನು ಪ್ರೇಯಸಿಗೆ ಗಿಫ್ಟ್ ಕೊಟ್ಟ ಪತಿ!

ಆನೇಕಲ್, ಜನವರಿ 24: ನವವಿವಾಹಿತರ ನಡುವಿನ ವೈವಾಹಿಕ ಕಲಹ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪತ್ನಿಯ ಕುಟುಂಬಸ್ಥರಿಂದ ಪತಿ ಹಲ್ಲೆಗೊಳಗಾದ ಘಟನೆ ಆನೇಕಲ್​ನ (Anekal) ಅತ್ತಿಬೆಲೆಯಲ್ಲಿ ನಡೆದಿದೆ. ಪತಿ ಆರೋಪಕ್ಕೆ ಪ್ರತ್ಯಾರೋಪ ಮಾಡಿರುವ ಪತ್ನಿ, ಆತನಿಗೆ ಅನೈತಿಕ ಸಂಬಂಧವಿದ್ದು, ಅವನ ತಾಯಿಯೂ ಸಹಕರಿಸಿರುವುದಾಗಿ ಆರೋಪಿಸಿದ್ದಾಳೆ.

ಪತಿಯ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದ ಪತ್ನಿಯ ಕುಟುಂಬಸ್ಥರು

ಅಂತರ್ಜಾತಿ ವಿವಾಹವಾಗಿದ್ದ ಅಂಬರೀಶ್ ಮತ್ತು ನಂದಿನಿ ನಡುವೆ ಮದುವೆಯಾಗಿ ತಿಂಗಳೊಳಗೇ ವೈಮನಸ್ಸು ಉಂಟಾಗಿತ್ತು. ಈ ಹಿನ್ನೆಲೆ ನವವಿವಾಹಿತೆಯ ಮಾವ ಸಂಪಂಗಿ, ಅಂಬರೀಶ್ ಮೇಲೆ ಹಲ್ಲೆ ನಡೆಸಿದ್ದ. ನಂತರ ನಂದಿನಿ ಮತ್ತು ಆಕೆಯ ಕುಟುಂಬಸ್ಥರು ಸೇರಿ ಅಂಬರೀಶ್​ನೊಡನೆ ಜಗಳಕ್ಕಿಳಿದಿದ್ದರು. ಅದಲ್ಲದೆ ಆತನ ಬಳಿಯಿದ್ದ ಮೊಬೈಲ್, ಚೈನ್, ರಿಂಗ್ ಕಸಿದುಕೊಂಡು 4 ಲಕ್ಷ ರೂ.ಗೆ ಬೇಡಿಕೆ ಇಟ್ಟು, 15 ಸಾವಿರ ರೂ. ಹಣ ಕಿತ್ತುಕೊಂಡು ಕೊಲೆ ಬೆದರಿಕೆ ಹಾಕಿದ್ದಾರೆಂದು ಆತ ಆರೋಪಿಸಿದ್ದ. ಹಲ್ಲೆಯಿಂದ ಗಂಭೀಯವಾಗಿ ಗಾಯಗೊಂಡಿದ್ದ ಅಂಬರೀಶ್ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ.

ಪತ್ನಿಯಿದ್ದರೂ ಪ್ರೇಯಸಿಯರನ್ನರಸಿ ಹೋಗಿದ್ದ ಪತಿ

ಇದಕ್ಕೆ ಪ್ರತಿಯಾಗಿ ನವವಿವಾಹಿತೆ ನಂದಿನಿ ತನ್ನ ಪತಿ ಮತ್ತು ಅತ್ತೆ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾಳೆ.ಮದುವೆಗೆ ಮೊದಲು ಹಾಗೂ ಮದುವೆಯ ನಂತರವೂ ಪತಿ ಮತ್ತೊಬ್ಬ ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದು, ತನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎಂದು ನಂದಿನಿ ಆರೋಪಿಸಿದ್ದಾಳೆ.

ಪತಿ ಕುಡಿದು ಮನೆಗೆ ಬಂದು ನಿತ್ಯ ಹಲ್ಲೆ ನಡೆಸುತ್ತಿದ್ದನಲ್ಲದೆ, ಅತ್ತೆಯೂ ಆತನೊಂದಿಗೆ ಸೇರಿ ಕಿರುಕುಳ ನೀಡುತ್ತಿದ್ದರೆಂದು ನಂದಿನಿ ಹೇಳಿದ್ದಾಳೆ. ಪತಿಯ ರಾಸಲೀಲೆಗೆ ಅತ್ತೆಯೂ ಸಾಥ್ ಕೊಟ್ಟಿದ್ದಾರೆಂದು ಆರೋಪಿಸಿರುವ ನಂದಿನಿ, ತನ್ನ ಎಂಗೇಜ್ಮೆಂಟ್ ವೇಳೆ ನಂದಿನಿ ಧರಿಸಿದ್ದ ಸೀರೆಯನ್ನು ಪತಿಯ ತಾಯಿಯೇ ಐರನ್ ಮಾಡಿ ಮಗನ ಮೂಲಕ ಅವನ ಪ್ರೇಯಸಿಗೆ ಗಿಫ್ಟ್ ಕೊಟ್ಟಿದ್ದಾರೆಂದು ಹೇಳಿದ್ದಾಳೆ.

ಇದನ್ನೂ ಓದಿ ಕಪಾಳಮೋಕ್ಷ ಮಾಡಿದಕ್ಕೆ ನಾನೇ ನನ್ನ ಸ್ನೇಹಿತನನ್ನು ಕೊಂದೆ: ಇನ್‌ಸ್ಟಾಗ್ರಾಮ್ ವಿಡಿಯೋದಲ್ಲಿ ತಪ್ಪೊಪ್ಪಿಕೊಂಡ ಯುವಕ

ಇನ್ನು, ಮದುವೆಗೆ ಮೊದಲು ತನ್ನ ಜಾತಿ ಕುರಿತು ಪತಿ ಮತ್ತು ಅತ್ತೆಗೆ ಸಂಪೂರ್ಣವಾಗಿ ತಿಳಿದಿದ್ದರೂ, ಮದುವೆಯ ಬಳಿಕ ಪದೇ ಪದೇ ಜಾತಿ ನಿಂದನೆ ಮಾಡಿ ಕಿರುಕುಳ ನೀಡಲಾಗುತ್ತಿತ್ತು ಎಂದು ನಂದಿನಿ ದೂರಿದ್ದಾಳೆ. ಪತಿ ಹಾಗೂ ಅತ್ತೆಯ ಹಲ್ಲೆ ಮತ್ತು ಮಾನಸಿಕ ಪೀಡನೆಗೆ ಬೇಸತ್ತು ನಂದಿನಿ ನ್ಯಾಯಕ್ಕಾಗಿ ಮುಂದಾಗಿದ್ದು, ಈ ಪ್ರಕರಣ ಇದೀಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

KKRTC Driver Recruitment 2026: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಹುದ್ದೆಗೆ ನೇಮಕಾತಿ – Kannada News | KKRTC Driver Recruitment 2026 Bidar: Direct Interview for 10th Pass HMV Holders

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಬೀದರ್‌ನಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 04 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗತಕ್ಕದ್ದು.

ಶೈಕ್ಷಣಿಕ ಅರ್ಹತೆ:

KKRTC ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪೂರ್ಣಗೊಳಿಸಿರಬೇಕು. ಜೊತೆಗೆ, ಭಾರೀ ಸರಕು ಸಾಗಣೆ ವಾಹನ (HMV) ಚಾಲನಾ ಪರವಾನಗಿ ಹಾಗೂ Heavy Passenger ವಾಹನ ಚಾಲನೆಗೆ ಮಾನ್ಯ ಕರ್ನಾಟಕ ಬ್ಯಾಡ್ಜ್ ಹೊಂದಿರುವುದು ಕಡ್ಡಾಯವಾಗಿದೆ.

ವಯೋಮಿತಿ:

2026 ರ ಫೆಬ್ರವರಿ 04 ರಂತೆ ಅಭ್ಯರ್ಥಿಯ ವಯಸ್ಸು ಕನಿಷ್ಠ 24 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳು ಆಗಿರಬೇಕು.

ವಯೋಮಿತಿ ಸಡಿಲಿಕೆ:

ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.
ಪ್ರವರ್ಗ 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ, SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: ಭಾರತೀಯ ರಿಸರ್ವ್ ಬ್ಯಾಂಕ್​​ನಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು!

ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಯು ನೇರ ಸಂದರ್ಶನದ ಮೂಲಕ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಅಗತ್ಯ ಮೂಲ ದಾಖಲೆಗಳು ಹಾಗೂ ಅಧಿಸೂಚನೆಯಲ್ಲಿ ಉಲ್ಲೇಖಿಸಿರುವ ಎಲ್ಲಾ ಪ್ರಮಾಣಪತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನ ನಡೆಯುವ ಸ್ಥಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಹಳೆಯ ಬಸ್ ನಿಲ್ದಾಣ, ವಿಭಾಗೀಯ ಕಚೇರಿ, ಬೀದರ್

ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ನೇರ ಸಂದರ್ಶನಕ್ಕೆ ಹಾಜರಾಗುವ ಮೊದಲು ಅಧಿಕೃತ ಅಧಿಸೂಚನೆಯನ್ನು ಓದಿ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಅತ್ಯಂತ ಮುಖ್ಯವಾಗಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:37 pm, Sat, 24 January 26

Source link

ಕಣ್ಣುಗಳಿಂದ ಆಗಾಗ ನೀರು ಬರುವುದು ಕೆಲವು ರೋಗದ ಮುನ್ಸೂಚನೆಯಾಗಿರಬಹುದು ಎಚ್ಚರ! – Kannada News | Watery Eyes and Health: Expert Insights on Causes

Watery Eyes And Health Expert Insights On CausesImage Credit source: Getty Images

ಅನೇಕರಿಗೆ ಕಣ್ಣುಗಳಲ್ಲಿ ಪದೇ ಪದೇ ನೀರು ಬರುವುದನ್ನು ನೀವು ನೋಡಿರಬಹುದು. ಇದು ನೋಡುವುದಕ್ಕೆ ಸಾಮಾನ್ಯ ಸಮಸ್ಯೆಯಂತೆ ಕಾಣಿಸಬಹುದು, ಆದರೆ ಕೆಲವೊಮ್ಮೆ ಇಂತಹ ಲಕ್ಷಣಗಳು ಆರೋಗ್ಯ ಸಮಸ್ಯೆಯನ್ನು ಸಹ ಸೂಚಿಸುತ್ತದೆ. ಧೂಳು, ಹೊಗೆ, ಗಾಳಿ ಅಥವಾ ದೀರ್ಘಕಾಲದವರೆಗೆ ಟಿವಿ, ಲ್ಯಾಪ್ಟಾಪ್, ಮೊಬೈಲ್ ನೋಡುವುದು ಕಣ್ಣಿನ ಕಿರಿಕಿರಿ ಮತ್ತು ಕಣ್ಣುಗಳಲ್ಲಿ ನೀರು ಬರಲು ಕಾರಣವಾಗಬಹುದು. ಆದರೆ ಈ ಸಮಸ್ಯೆ ಪದೇ ಪದೇ ಕಂಡುಬಂದರೆ ಅದನ್ನು ನಿರ್ಲಕ್ಷಿಸಬಾರದು. ಕಣ್ಣುಗಳಲ್ಲಿ ನಿರಂತರವಾಗಿ ನೀರು (Watery Eyes) ಬರುವುದು ಅಲರ್ಜಿ, ಸೋಂಕುಗಳು ಅಥವಾ ಕಣ್ಣೀರಿನ ನಾಳಗಳಲ್ಲಿನ ಅಡಚಣೆಗಳಿಗೆ ಸಂಬಂಧಿಸಿರಬಹುದು. ಈ ರೀತಿಯ ಸಮಸ್ಯೆ ವಯಸ್ಸಾದ ಮೇಲೂ ಕಂಡುಬರುತ್ತದೆ. ಇದರ ಜೊತೆಗೆ, ಕಣ್ಣುಗಳ ಮೇಲ್ಮೈ ಒಣಗುವುದರಿಂದ ದೇಹವು ಹೆಚ್ಚು ಕಣ್ಣೀರು ಉತ್ಪಾದಿಸಲು ಒತ್ತಡ ಹೇರುತ್ತದೆ, ಇದರಿಂದಾಗಿ ಕಣ್ಣುಗಳಿಂದ ನೀರು ಬರುತ್ತವೆ. ಹಾಗಾಗಿ ಸರಿಯಾದ ಸಮಯಕ್ಕೆ ಈ ಸಮಸ್ಯೆಗಳನ್ನು ಗುರುತಿಸಿ ಕಣ್ಣುಗಳಿಗೆ ಹಾನಿಯಾಗುವುದನ್ನು ತಡೆಯುವುದು ಬಹಳ ಮುಖ್ಯವಾಗುತ್ತದೆ. ಹಾಗಾದರೆ ಪದೇ ಪದೇ ಕಣ್ಣಲ್ಲಿ ನೀರು ಬರುವುದು ಯಾವ ರೋಗಗಳ ಲಕ್ಷಣ, ಇದನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ತಿಳಿದುಕೊಳ್ಳಿ.

ಕಣ್ಣುಗಳಲ್ಲಿ ಪದೇ ಪದೇ ನೀರು ಬರುವುದಕ್ಕೆ ಕಾರಣವೇನು?

ಸರ್ ಗಂಗಾ ರಾಮ್ ಆಸ್ಪತ್ರೆಯ ಕಣ್ಣಿನ ವಿಭಾಗದ ಮಾಜಿ ಮುಖ್ಯಸ್ಥ ಡಾ. ಎ.ಕೆ. ಗ್ರೋವರ್ ಹೇಳುವ ಪ್ರಕಾರ, ಕಣ್ಣುಗಳಲ್ಲಿ ಪದೇ ಪದೇ ನೀರು ಬರುವುದಕ್ಕೆ ಹಲವಾರು ಕಾರಣಗಳಿರುತ್ತವೆ. ಅಲರ್ಜಿಕ್ ಕಾಂಜಂಕ್ಟಿವಿಟಿಸ್‌ನಲ್ಲಿ, ತುರಿಕೆ, ಕೆಂಪು ಮತ್ತು ಕಣ್ಣುಗಳಲ್ಲಿ ನೀರು ಬರುವುದು ಸಾಮಾನ್ಯ ಲಕ್ಷಣ. ಕಣ್ಣಿನ ಸೋಂಕು ಇದ್ದರೆ ಅತಿಯಾದ ನೀರು ಬರಬಹುದು. ಕೆಲವು ಸಮಯದಲ್ಲಿ ಕಣ್ಣುಗಳ ಶುಷ್ಕತೆಯಿಂದ ಹೆಚ್ಚು ಕಣ್ಣೀರು ಉತ್ಪಾದಿಸುತ್ತವೆ, ಇದು ಅತಿಯಾದ ನೀರು ಬರುವಿಕೆಗೆ ಕಾರಣವಾಗುತ್ತದೆ. ಇದೆಲ್ಲದರ ಜೊತೆಗೆ ಕಣ್ಣೀರಿನ ನಾಳಗಳಲ್ಲಿನ ಅಡಚಣೆ ಕೂಡ ಕಣ್ಣುಗಳಲ್ಲಿ ನಿರಂತರವಾಗಿ ನೀರು ಬರಲು ಕಾರಣವಾಗಬಹುದು.ಕೆಲವು ಸಂದರ್ಭಗಳಲ್ಲಿ, ಸೈನಸ್ ಸಮಸ್ಯೆಗಳು ಅಥವಾ ವಯಸ್ಸಾಗುವುದು ಕೂಡ ಕಣ್ಣುಗಳಲ್ಲಿ ನೀರು ಬರಲು ಕಾರಣವಾಗಬಹುದು. ಆದ್ದರಿಂದ, ಸರಿಯಾದ ಕಾರಣವನ್ನು ಗುರುತಿಸುವುದು ಬಹಳ ಮುಖ್ಯವಾಗುತ್ತದೆ.

ಇದನ್ನೂ ಓದಿ: ನೀವು ಮೊಬೈಲ್, ಲ್ಯಾಪ್‌ಟಾಪ್‌ ಹೆಚ್ಚಾಗಿ ಬಳಸುತ್ತೀರಾ? ಹಾಗಿದ್ರೆ ಈ ಅಭ್ಯಾಸಗಳನ್ನು ಸರಿಪಡಿಸಿಕೊಳ್ಳಲೇಬೇಕು!

ಕಣ್ಣುಗಳಲ್ಲಿ ಪದೇ ಪದೇ ನೀರು ಬರುವುದನ್ನು ತಡೆಯುವುದು ಹೇಗೆ?

ಕಣ್ಣುಗಳಲ್ಲಿ ನೀರು ಬರುತ್ತಿದ್ದರೆ, ಮೊದಲು ನಿಮ್ಮ ಕಣ್ಣುಗಳನ್ನು ಉಜ್ಜುವುದನ್ನು ತಪ್ಪಿಸಿ. ಧೂಳು ಮತ್ತು ಹೊಗೆಯಿಂದ ನಿಮ್ಮ ಕಣ್ಣುಗಳನ್ನು ರಕ್ಷಿಸಿಕೊಳ್ಳಿ. ಅತಿಯಾದ ಮೊಬೈಲ್ ಬಳಕೆಯಿಂದಲೂ ಈ ರೀತಿಯಾಗಬಹುದು. ಹಾಗಾಗಿ ಈ ರೀತಿಯ ಸಮಸ್ಯೆ ಬಹಳ ಸಮಯದವರೆಗೆ ಮುಂದುವರಿದರೆ, ನೀವೇ ಔಷಧಿ ತೆಗೆದುಕೊಳ್ಳುವ ಬದಲು, ವೈದ್ಯರ ಬಳಿ ಹೋಗಿ ಪರೀಕ್ಷಿಸಿಕೊಳ್ಳಿ. ಸಮಯೋಚಿತ ಚಿಕಿತ್ಸೆಯು ಕಣ್ಣುಗಳಲ್ಲಿನ ಗಂಭೀರ ಸಮಸ್ಯೆಗಳನ್ನು ತಡೆಯಬಹುದು. ಮಧ್ಯಂತರಗಳಲ್ಲಿ ನಿಮ್ಮ ಕಣ್ಣುಗಳಿಗೆ ವಿಶ್ರಾಂತಿ ನೀಡಿ. ತಣ್ಣೀರಿನಿಂದ ನಿಮ್ಮ ಕಣ್ಣುಗಳನ್ನು ತೊಳೆಯುವುದು ಕೆಲವು ಸಂದರ್ಭಗಳಲ್ಲಿ ಪರಿಹಾರ ನೀಡುತ್ತದೆ. ಜೊತೆಗೆ ಕೊಳಕು ಕೈಗಳಿಂದ ನಿಮ್ಮ ಕಣ್ಣುಗಳನ್ನು ಮುಟ್ಟಬೇಡಿ. ಕಣ್ಣಿನ ಆರೋಗ್ಯಕ್ಕೆ ಹೆಚ್ಚಿನ ಗಮನ ಕೊಡಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪೆಂಗ್ವಿನ್ 70 ಕಿಮೀ ನಡೆದು ಹೋಗಿದ್ದೇಕೆ? ಇದರ ಹಿಂದಿನ ಅಸಲಿ ಕಥೆ ಇಲ್ಲಿದೆ – Kannada News | Viral Lonely Penguin: Unraveling the True Story Behind Instagram’s Mystery Video

ಇನ್​​ಸ್ಟಾಗ್ರಾಮ್ (Instagram) ರೀಲ್ಸ್ ಓಪನ್ ಮಾಡಿದರೆ ಸಾಕು ಎಲ್ಲ ಕಡೆಗಳಲ್ಲೂ ಒಂಟಿ ಪೆಂಗ್ವಿನ್​​ದೇ ಕಥೆ. ಒಂದು ಪೆಂಗ್ವಿನ್ ಒಂಟಿಯಾಗಿ ಪರ್ವತದ ಕಡೆ ನಡೆದು ಸಾಗುತ್ತಿದೆ. ವಿಡಿಯೋ ನೋಡಿ ಕೆಲವರು ತುಂಬಾನೇ ಮರುಗಿದ್ದರು. ಇನ್ನೂ ಕೆಲವರು ಮೀಮ್ ಮಾಡಿದ್ದರು. ‘ಈ ಪೆಂಗ್ವಿನ್​​ಗೆ ಏನಾಗಿದೆ’ ಎಂಬ ಪ್ರಶ್ನೆ ಎಲ್ಲರನ್ನೂ ಕಾಡಿತ್ತು. ಆದರೆ, ಈ ವಿಡಿಯೋದ ಅಸಲಿ ಕಥೆಯೇ ಬೇರೆ ಇದೆ. ಆ ಬಗ್ಗೆ ಇಲ್ಲಿದೆ ವಿವರ.

ಈ ಒಂಟಿ ಪೆಂಗ್ವಿನ್ ಸಮುದ್ರದ ಕಡೆಗೆ ಹಿಂಡಿನ ಹಿಂದೆ ಹೋಗದೆ ಒಂಟಿಯಾಗಿ ತೆರಳಿದೆ. ಹಿಂಡಿನಿಂದ ಬೇರ್ಪಟ್ಟ ಸ್ಥಳದಿಂದ 70 ಕಿಮೀದಿಂದ ದೂರದಲ್ಲಿರೋ ಪರ್ವತದ ಬಳಿ ಸಾಗಿದೆ. ಇದು ಡಾಕ್ಯುಮೆಂಟರಿಯೊಂದರ ದೃಶ್ಯ. ವೆನಾ ಹೆಜೋಗ್ ನಿರ್ದೇಶನದ ‘ಎನ್​​ಕೌಂಟರ್​​ ಎಟ್​ ದಿ ಎಂಡ್ ಆಫ್​ ದಿ ವರ್ಲ್ಡ್’ ಸಾಕ್ಷ್ಯ ಚಿತ್ರದ ದೃಶ್ಯದ ಭಾಗ ಇದು. ಬರೋಬ್ಬರಿ 19 ವರ್ಷಗಳ ಬಳಿಕ ಈ ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋ ಯೂಟ್ಯೂಬ್​​ಗೆ ಅಪ್​​ಲೋಡ್ ಆಗಿದ್ದು 2010ರಲ್ಲಿ. ‘ಖಿನ್ನತೆಗೆ ಒಳಗಾದ ಪೆಂಗ್ವಿನ್’ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಶೇರ್  ಮಾಡಲಾಗಿತ್ತು. ಆ ಸಂದರ್ಭದಲ್ಲಿ ಇದು ಚರ್ಚೆಗೆ ಕಾರಣ ಆಗಿತ್ತು. 2014ರಲ್ಲಿ ಈ ವಿಡಿಯೋ ಮತ್ತೊಮ್ಮೆ ಹರಿದಾಡಿದೆ.

ಅಡೆಲೀ ಪೆಂಗ್ವಿನ್‌ಗಳು ಸಾಮಾನ್ಯವಾಗಿ ತಮ್ಮ ಸಂತಾನೋತ್ಪತ್ತಿ ಸ್ಥಳ ಮತ್ತು ಆಹಾರ ಸಿಗೋ ಸಮುದ್ರದಂಚಿನಲ್ಲೇ ಇರುತ್ತವೆ. ಆದರೆ, ಏನೂ ಇಲ್ಲದ ಪರ್ವತದ ಕಡೆ ನಡೆದು ಹೋಗೋದು ತುಂಬಾನೇ ಅಪರೂಪ.

ಈ ಬಗ್ಗೆ ಪೆಂಗ್ವಿನ್ ಬಗ್ಗೆ ಅಧ್ಯಯನ ಮಾಡೋರು ಹೇಳೋದೇ ಬೇರೆ. ಪೆಂಗ್ವಿನ್ ಕೆಲವೊಮ್ಮೆ ಬಂಡೆಗೆ ಡಿಕ್ಕಿ ಹೊಡೆದುಕೊಳ್ಳುತ್ತವಂತೆ. ಕೆಲವೊಮ್ಮೆ ದಿಕ್ಕು ತಪ್ಪಿದಾಗ ಗೊಂದಲಕ್ಕೆ ಒಳಗಾಗಿ ಅವು ಈ ರೀತಿ ನಡೆಯುತ್ತವೆಯಂತೆ. ಆಗ ಅವರು ಲೆಕ್ಕವಿಲ್ಲದಷ್ಟು ದೂರ ನಡೆದು ಬಿಡ್ತವೆ. ಅವುಗಳನ್ನು ಮತ್ತೆ ಗುಂಪಿಗೆ ತಂದು ಬಿಟ್ಟರೂ ಅದು ಮತ್ತೆ ಸಾಗೋದು ಆ ಪರ್ವತದ ಕಡೆಗೆ. ನರ ಸಂಬಂಧಿ ಕಾಯಿಲೆ ಇರಬಹುದು ಎಂದು ಕೆಲವರು ಹೇಳುತ್ತಾರೆ. ಯುವ ಪೆಂಗ್ವಿನ್​​ಗಳು ಹೊಸದರ ಹುಡುಕಾಟದಲ್ಲಿ ಈ ರೀತಿ ಮಾಡುತ್ತವೆ ಎಂಬ ಮಾತೂ ಇದೆ.

ಇದನ್ನೂ ಓದಿ: ಇನ್​​ಸ್ಟಾಗ್ರಾಮ್​ನಲ್ಲಿರೋದು ಆರಾಧ್ಯಾ ಖಾತೆಯಾ? ಐಶ್ವರ್ಯಾ ನೀಡಿದರು ಸ್ಪಷ್ಟನೆ

ವೈಜ್ಞಾನಿಕ ದೃಷ್ಟಿಕೋನದಿಂದ ಇದು ಅಷ್ಟು ಚಿಂತಿಸೋ ವಿಷಯವಲ್ಲ. ಅನೇಕ ಪ್ರಾಣಿ ಪ್ರಭೇದಗಳಲ್ಲಿ ಈ ರೀತಿಯ ನಡವಳಿಕೆ ಇರುತ್ತದೆ ಎಂಬುದು ವನ್ಯಜೀವಿ ಸಂಶೋಧಕರು ಅಭಿಪ್ರಾಯ. ಸೋಶಿಯಲ್ ಮೀಡಿಯಾದಲ್ಲಿ ಇದನ್ನು ಮೀಮ್​ ರೂಪದಲ್ಲಿ ಬಳಸಲಾಗುತ್ತಿದೆ. ಕೆಲವರು ಇದನ್ನು ಇತ್ತೀಚಿಗೆ ಜನರು ಬಳಲುತ್ತಿರುವ ಖಿನ್ನತೆಗೆ ಹಾಗೂ ಒಂಟಿತನಕ್ಕೆ ಹೋಲಿಕೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:51 am, Sat, 24 January 26

Source link

ತ್ರಿ ಸೆಂಚುರಿ… ಸರ್ಫರಾಝ್ ಖಾನ್ ವಿಶ್ವ ದಾಖಲೆ – Kannada News | Sarfaraz Khan set a new record in cricket

ಸರ್ಫರಾಝ್ ಖಾನ್ (Sarfaraz Khan) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ದೇಶೀಯ ಅಂಗಳದಲ್ಲಿ ಒಂದೇ ಸೀಸನ್​ನಲ್ಲಿ ಮೂರು ಸೆಂಚುರಿ ಸಿಡಿಸುವ ಮೂಲಕ. ಈ ಸೆಂಚುರಿಗಳೊಂದಿಗೆ ವಿಶೇಷ ಸಾಧನೆಗೈದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಸರ್ಫರಾಝ್ ಖಾನ್ ತಮ್ಮದಾಗಿಸಿಕೊಂಡಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಹೈದರಾಬಾದ್ ವಿರುದ್ಧದ ರಣಜಿ ಪಂದ್ಯದಲ್ಲಿ ಮುಂಬೈ ಪರ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸರ್ಫರಾಝ್ ಖಾನ್ 219 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 19 ಫೋರ್​ಗಳೊಂದಿಗೆ 227 ರನ್​ ಬಾರಿಸಿ ಅಬ್ಬರಿಸಿದ್ದಾರೆ.

ಇದಕ್ಕೂ ಮುನ್ನ ನಡೆದ ವಿಜಯ್ ಹಝಾರೆ ಏಕದಿನ ಟೂರ್ನಿಯಲ್ಲಿ ಗೋವಾ ವಿರುದ್ಧದ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಸರ್ಫರಾಝ್ ಖಾನ್ ಕೇವಲ 75 ಎಸೆತಗಳಲ್ಲಿ 14 ಸಿಕ್ಸರ್ ಹಾಗೂ 9 ಫೋರ್​ಗಳೊಂದಿಗೆ 157 ರನ್ ಬಾರಿಸಿದ್ದರು. 

ಈ ಮೇಲಿನ ಎರಡು ಶತಕಗಳಿಗೂ ಮುನ್ನ ಸರ್ಫರಾಝ್ ಖಾನ್ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಅಸ್ಸಾಂ ವಿರುದ್ಧ ಕೇವಲ 47 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಈ ಮೂರು ಶತಕಗಳೊಂದಿಗೆ ಇದೀಗ ಸರ್ಫರಾಝ್ ಖಾನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಅಂದರೆ ಒಂದೇ ಸೀಸನ್​ನಲ್ಲಿ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ದ್ವಿಶತಕ, ಲಿಸ್ಟ್ ಎ (ಏಕದಿನ) ಕ್ರಿಕೆಟ್​ನಲ್ಲಿ 150 ಹಾಗೂ ಟಿ20 ಕ್ರಿಕೆಟ್​ನಲ್ಲಿ 100 ರನ್ ಬಾರಿಸಿದ ಭಾರತದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ 3ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ಇಂಗ್ಲೆಂಡ್​ ಡೇನಿಯಲ್ ಬೆಲ್-ಡ್ರಮಂಡ್ ಹಾಗೂ ಅಲೆಕ್ಸ್ ಹೇಲ್ಸ್ ಮಾತ್ರ ಈ ಸಾಧನೆ ಮಾಡಿದ್ದರು.  2016 ಮತ್ತು 2023 ರಲ್ಲಿ ಡೇನಿಯಲ್ ಬೆಲ್-ಡ್ರಮಂಡ್ ಒಂದೇ ಸೀಸನ್​ನಲ್ಲೂ ಮೂರು ಸ್ವರೂಪಗಳಲ್ಲಿ 200+, 150+, 100+ ರನ್​ ಗಳಿಸಿದ್ದರು. ಇದಾದ ಬಳಿಕ 2017 ರಲ್ಲಿ ಅಲೆಕ್ಸ್ ಹೇಲ್ಸ್ ಈ ಸಾಧನೆ ಸರಿಗಟ್ಟಿದ್ದರು.

ಇದೀಗ ಸರ್ಫರಾಝ್ ಖಾನ್ 2025-26 ರ ದೇಶೀಯ ಸೀಸನ್​ ಮೂಲಕ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 200+, ಏಕದಿನ ಕ್ರಿಕೆಟ್​ನಲ್ಲಿ 150+ ರನ್, ಟಿ20 ಕ್ರಿಕೆಟ್​ನಲ್ಲಿ 100+ ರನ್​ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ವಿಶೇಷ ವಿಶ್ವ ದಾಖಲೆ ಬರೆದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

Published On – 2:08 pm, Sat, 24 January 26

Source link

Kumar Shashti: ಜ. 24 ಕುಮಾರ ಷಷ್ಠಿ; ಸುಬ್ರಹ್ಮಣ್ಯ ಪೂಜೆಯ ಮಹತ್ವ ಮತ್ತು ಪ್ರಯೋಜನಗಳು – Kannada News | Kumar Shashti: Rituals, Significance, and Benefits of Worshipping Lord Subrahmanya

ಕುಮಾರ ಷಷ್ಠಿಯು ಭಗವಾನ್ ಸುಬ್ರಹ್ಮಣ್ಯ ಸ್ವಾಮಿಯ ಜನ್ಮದಿನವಾಗಿದೆ. ಈ ವರ್ಷ ಕುಮಾರ ಷಷ್ಠಿ ಜ. 24ರಂದು ಬಂದಿದೆ. ಸುಬ್ರಹ್ಮಣ್ಯನನ್ನು ಕುಮಾರ, ಕಾರ್ತಿಕೇಯ, ಮುರುಗನ್, ಸ್ಕಂದ, ಷಣ್ಮುಖ ಎಂಬ ವಿವಿಧ ಹೆಸರುಗಳಿಂದ ಸ್ಮರಿಸಲಾಗುತ್ತದೆ. ಈ ನಾಮಾವಳಿಗಳು ಅವನ ದೈವಿಕ ಶಕ್ತಿ ಮತ್ತು ಗುಣಗಳನ್ನು ಪ್ರತಿಬಿಂಬಿಸುತ್ತವೆ. ಪ್ರತಿ ಶುಕ್ಲಪಕ್ಷದ ಆರನೇ ದಿನದಂದು ಬರುವ ಕುಮಾರ ಷಷ್ಠಿಯು ಶಿವ-ಪಾರ್ವತಿಯರ ಪುತ್ರನಾದ ಸುಬ್ರಹ್ಮಣ್ಯ ಸ್ವಾಮಿ ತಾರಕಾಸುರನನ್ನು ಸಂಹಾರ ಮಾಡಲು ಜನ್ಮವೆತ್ತಿದ ದಿನವೆಂದು ಪುರಾಣಗಳಲ್ಲಿ ಉಲ್ಲೇಖವಾಗಿದೆ.

ಸುಬ್ರಹ್ಮಣ್ಯ ಪೂಜೆಯ ಮಹತ್ವ ಮತ್ತು ಪ್ರಯೋಜನಗಳು:

ಸುಬ್ರಹ್ಮಣ್ಯ ಸ್ವಾಮಿಯ ಪೂಜೆಯು ಭಕ್ತರಿಗೆ ಧೈರ್ಯ, ಶಕ್ತಿ ಮತ್ತು ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ನೀಡುತ್ತದೆ. ಕುಮಾರ ಸ್ವಾಮಿಯು ನಾಗಾಂಶವನ್ನು ಹೊಂದಿರುವ ಕಾರಣ, ವಿವಾಹ, ಸಂತಾನ, ಸರ್ಪದೋಷ ನಿವಾರಣೆ ಮತ್ತು ಆರೋಗ್ಯ ಸುಧಾರಣೆಗಾಗಿ ಈ ದಿನ ವಿಶೇಷವಾಗಿ ಆರಾಧಿಸಲಾಗುತ್ತದೆ. ಭಕ್ತರು ಕುಕ್ಕೆ ಸುಬ್ರಹ್ಮಣ್ಯ, ಘಾಟಿ ಸುಬ್ರಹ್ಮಣ್ಯ ಮತ್ತು ಸಂಡೂರಿನಂತಹ ಪ್ರಮುಖ ಸುಬ್ರಹ್ಮಣ್ಯ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ. ಈ ಪೂಜೆಯಿಂದ ಚರ್ಮ ರೋಗಗಳು, ಮಾನಸಿಕ ಖಿನ್ನತೆ, ಮಕ್ಕಳಿಲ್ಲದಿರುವಿಕೆ, ಪದೇ ಪದೇ ಕಾಡುವ ಆರೋಗ್ಯ ಸಮಸ್ಯೆಗಳು, ಕಣ್ಣಿನ ದೃಷ್ಟಿದೋಷ, ಮಾಟಮಂತ್ರ ಮತ್ತು ವಾಮಾಚಾರದಂತಹ ನಕಾರಾತ್ಮಕ ಶಕ್ತಿಗಳು ದೂರವಾಗುತ್ತವೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಹವಳವನ್ನು ಯಾರು ಧರಿಸಬಹುದು? ಇದರ ಪ್ರಯೋಜನ ಮತ್ತು ಧರಿಸುವ ವಿಧಾನ ತಿಳಿಯಿರಿ

ಕುಮಾರ ಷಷ್ಠಿ ಆಚರಣೆಯ ವಿಧಾನಗಳು:

ಕುಮಾರ ಷಷ್ಠಿ ಆಚರಣೆಯಲ್ಲಿ ಹಲವು ವಿಧಿವಿಧಾನಗಳಿವೆ. ಭಕ್ತರು ಹುತ್ತಗಳಿಗೆ ದರ್ಶನ ನೀಡಿ ಪೂಜಿಸುತ್ತಾರೆ. ನಾಗಬನಗಳಲ್ಲಿ ಹಾಲಿನ ಅಭಿಷೇಕ ಮಾಡುವುದು ಮತ್ತೊಂದು ಪ್ರಮುಖ ಆಚರಣೆ. ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ದೇವರಿಗೆ ಅಭಿಷೇಕ ಮಾಡಿಸಿ ದರ್ಶನ ಪಡೆಯುವುದು ಪುಣ್ಯಪ್ರದ ಎಂದು ಹೇಳಲಾಗುತ್ತದೆ. ದರ್ಶನಂ ಪುಣ್ಯಂ, ಸ್ಪರ್ಶನಂ ಪಾಪನಾಶನಂ ಎಂಬ ನಂಬಿಕೆ ಇದೆ. ತಮಿಳುನಾಡಿನಂತಹ ಕೆಲವು ಪ್ರದೇಶಗಳಲ್ಲಿ ಭಕ್ತರು ಕುಮಾರ ಷಷ್ಠಿಯ ದಿನದಂದು ಕಾವಡಿಗಳನ್ನು ಹೊತ್ತು ನಡೆದು ತಮ್ಮ ಭಕ್ತಿಯನ್ನು ಪ್ರದರ್ಶಿಸುತ್ತಾರೆ.

ಇದಲ್ಲದೆ, ಜಪ ಮಾಡುವುದು, ದೇವರ ಧ್ಯಾನ ಮಾಡುವುದು ಮತ್ತು ದೇವರ ಹೆಸರಿನಲ್ಲಿ ದಾನ ನೀಡುವುದು ಕೂಡ ಈ ದಿನದ ವಿಶೇಷ. ಬೆಳಗಿನ ಜಾವ ಸ್ನಾನ ಮಾಡುವಾಗ ನೀರಿಗೆ ಸ್ವಲ್ಪ ಅರಿಶಿಣ ಬೆರೆಸಿ ಸ್ನಾನ ಮಾಡುವುದರಿಂದ ಮತ್ತು ಮಕ್ಕಳಿಗೆ ಅರಿಶಿಣ ನೀರಿಗೆ ಹಾಕಿ ಸ್ನಾನ ಮಾಡಿಸುವುದರಿಂದ ಶುಭ ಫಲಗಳು ಸಿಗುತ್ತವೆ. ಸ್ಕಂದ ಕವಚ ಪಠಣ, ಸುಬ್ರಹ್ಮಣ್ಯ ಅಷ್ಟೋತ್ತರಗಳು ಮತ್ತು ಓಂ ಶರವಣಭವಾಯ ನಮಃ ಎಂಬ ಮಂತ್ರವನ್ನು ಜಪಿಸುವುದು ಅತ್ಯಂತ ಪರಿಣಾಮಕಾರಿ ಎಂದು ಹೇಳಲಾಗುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link