ಕೊನೆಗೂ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್ – Kannada News | Karnataka High Court Gives Green Signal to Bike Taxis, Orders Government to Issue Licenses
ಬೆಂಗಳೂರು, ಜನವರಿ 23: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ (Bike Taxi) ಸೇವೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು…