ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್: ಇಬ್ಬರು ಆರೋಪಿಗಳು ಅಂದರ್ – Kannada News | Deepfake Blackmail Case: Two Arrested for Extorting Girl’s Family in Chikkamagaluru
ಚಿಕ್ಕಮಗಳೂರು, ಜೂನ್ 12: ಯುವತಿಯೋರ್ವಳ ಫೋಟೋವನ್ನು ಪೇಸ್ಬುಕ್ನಿಂದ ಪಡೆದು ಅದನ್ನು ಬಳಸಿ ಅಶ್ಲೀಲ ವಿಡಿಯೋ ಕ್ರಿಯೇಟ್ ಮಾಡಿ ಹಣಕ್ಕೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. AI, ವಿಡಿಯೋ ಎಡಿಟಿಂಗ್ ಅಪ್ಲಿಕೇಶನ್ ಬಳಸಿ ಮಾಡಿದ ವಿಡಿಯೋವನ್ನು ಯುವತಿಯ ತಾಯಿಗೆ ಕಳುಹಿಸಿದ್ದ ಆರೋಪಿಗಳು, ದುಡ್ಡಿಗಾಗಿ ಪೀಡಿಸಿದ್ದರು. ಹಣ ನೀಡದಿದ್ದರೆ ಜಾಲತಾಣದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಕೆ ಹಾಕಿದ್ದರು. ನೊಂದ ಯುವತಿಯ ಕಡೆಯವರು ಲಕ್ಕವಳ್ಳಿ ಪೊಲೀಸರಿಗೆ ನೀಡಿದ್ದ ದೂರಿನ ಅಧಾರದಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಅಕ್ಷಯ್…