ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್ಗಿಲ್ಲ ಜಾಗ – Kannada News | No Darshan photo in Mahesh Babu’s AMB Cinemas Bengaluru
ಮಹೇಶ್ ಬಾಬು (Mahesh Babu) ಭಾರತೀಯ ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರು. ಸ್ಟಾರ್ ನಟರಾಗಿರುವ ಜೊತೆಗೆ ಮಹೇಶ್ ಬಾಬು ಒಳ್ಳೆಯ ಉದ್ಯಮಿಯೂ ಹೌದು. ಹಲವು ಉದ್ಯಮಗಳಲ್ಲಿ ಹಣ ಹೂಡಿಕೆ ಮಾಡಿದ್ದಾರೆ ಮಹೇಶ್ ಬಾಬು. ಅವುಗಳಲ್ಲಿ ಚಿತ್ರಮಂದಿರ ಪ್ರದರ್ಶನವೂ ಹೌದು. ಮಹೇಶ್ ಬಾಬು ಅವರು ಎಎಂಬಿ ಹೆಸರಿನಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳನ್ನು ನಡೆಸುತ್ತಾರೆ. ಈಗಾಗಲೇ ಹೈದರಾಬಾದ್ನಲ್ಲಿ ಹಾಗೂ ಇನ್ನೂ ಕೆಲವೆಡೆ ಐಶಾರಾಮಿ ಮಲ್ಟಿಪ್ಲೆಕ್ಸ್ಗಳನ್ನು ಮಹೇಶ್ ಬಾಬು ಹೊಂದಿದ್ದು, ಇದೀಗ ಬೆಂಗಳೂರಿನಲ್ಲೂ ಎಎಂಬಿಯನ್ನು ಪ್ರಾರಂಭಿಸಿದ್ದಾರೆ. ಬೆಂಗಳೂರಿನ ಐಕಾನಿಕ್ ಚಿತ್ರಮಂದಿರಗಳಲ್ಲಿ ಒಂದಾಗಿದ್ದ ಕಪಾಲಿ…