ಮಾದಪ್ಪನ ಭಕ್ತರಿಗೂ ಚಿರತೆ ಕಾಟ: ರಸ್ತೆಯ ಬದಿಯೇ ಸೇತುವೆ ಮೇಲೆ ಕುಳಿತ ಚಿರತೆ! ಪಾದಯಾತ್ರೆ ಬರುವ ಭಕ್ತರೇ ಎಚ್ಚರ – Kannada News | Leopard Scare for Male Mahadeshwara Devotees: Big Cat Spotted Sitting on Bridge Along Pilgrimage Route
ಚಾಮರಾಜನಗರ, ಜನವರಿ 16: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಆಗಮಿಸುವ ಮಾದಪ್ಪನ ಭಕ್ತರಲ್ಲಿ ಚಿರತೆ ಭೀತಿ ಹೆಚ್ಚಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಾಳಬೆಟ್ಟ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ರಸ್ತೆಯ ಬದಿಯಲ್ಲೇ ಇರುವ ಸೇತುವೆ ಮೇಲೆ ಚಿರತೆ ಗಂಟೆಗಟ್ಟಲೆ ಕುಳಿತಿದೆ ಎನ್ನಲಾಗಿದೆ. ಚಿರತೆ ರಸ್ತೆ ಬದಿ ಇರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಕಾಣಿಸಿರುವುದರಿಂದಾಗಿ ಇದೀಗ ಪಾದಯಾತ್ರೆ ಮೂಲಕ ಸಾಗುತ್ತಿದ್ದ ಭಕ್ತರು ಭಯಭೀತರಾಗಿದ್ದಾರೆ. ರಾಜ್ಯದ…