ಯಾದಗಿರಿ ಮೈಲಾರಲಿಂಗ ಜಾತ್ರೆಯಲ್ಲಿ ಹಳದಿ ಮಾರುತ: ಭಂಡಾರದೋಕುಳಿಯಲ್ಲಿ ಮುಂದೆದ್ದ ಭಕ್ತರು – Kannada News | Yadagiri Mailaralingana Jatre: Mylapura Ancient Grand Bhandara
ಪಲ್ಲಿಕ್ಕಿ ಮೆರವಣಿಗೆಯನ್ನ ನೋಡುವುದ್ದಕ್ಕೆ ಸಾವಿರಾರು ಜನ ಸುತ್ತಮುತ್ತಲಿನ ಗುಡ್ಡ, ಮನೆಯ ಮಹಡಿ ಮೇಲೆ ಕುಳಿತುಕೊಂಡು ಪಲ್ಲಕ್ಕಿ ಮೇಲೆ ಭಂಡಾರವನ್ನ ಎರಚಿದರು. ಮೈಲಾರಲಿಂಗೇಶ್ವರನ ಪಲ್ಲಕ್ಕಿ ಮೇಲೆ ಕುರಿ ಮರಿಗಳನ್ನ ಎಸೆಯುವ ವಾಡಿಕೆಯಿತ್ತು. ಆದರೆ ಪ್ರಾಣಿ ಹಿಂಸೆ ನಿಷೇಧಿಸಲಾಗಿದೆ. ಇದರ ಜೊತೆಗೆ ರೈತರು ಬೆಳೆದ ಜೋಳದ ದಂಡು (ಸೊಪ್ಪೆ) ಹಾಗೂ ಕುರಿಗಳ ಉಣ್ಣೆಯನ್ನ ಪಲ್ಲಕ್ಕಿ ಮೇಲೆ ಎಸೆಯುತ್ತಿದ್ದರು. ಹೀಗೆ ಮಾಡುವುದರಿಂದ ಕುರಿಗಳಿಗೆ ಯಾವುದೇ ರೋಗ ರುಜಿನ ಬರಲ್ಲ, ಹಾಗೆ ಬೆಳೆ ಕೂಡ ಚೆನ್ನಾಗಿ ಬರುತ್ತೆ ಎನ್ನುವುದು ಭಕ್ತರ ನಂಬಿಕೆ. Source…