ಮಂಗಳೂರು: ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ – Kannada News | Karnataka CM Siddaramaiah Addresses Malayalam Imposition and Returned Bills in Mangaluru
ಮಂಗಳೂರು, ಜ.11: ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ. ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಮಾತೃಭಾಷೆಯನ್ನು ಕಡ್ಡಾಯವಾಗಿ ಹೇರುವುದು ಸರಿಯಲ್ಲ. ಮಾತೃಭಾಷೆ ಮಾತನಾಡುವವರಿಗೆ ಮಲಯಾಳಂ ಅನ್ನು ಮೊದಲ ಭಾಷೆಯಾಗಿ ಕಲಿಯುವಂತೆ ಒತ್ತಾಯಿಸುವುದು ಸರಿಯಲ್ಲ. ಒಂದು ವೇಳೆ ರಾಜ್ಯಪಾಲರು ಇಂತಹ ಮಸೂದೆಗೆ ಸಹಿ ಹಾಕಿ ಕಾನೂನಾಗಿಸಿದರೆ, ಕರ್ನಾಟಕ ಸರ್ಕಾರವು ಹೋರಾಟ ನಡೆಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಮತ್ತು…