WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟರ್ಗಳಿಂದ. ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸುವ ಮೂಲಕ ಆರ್ಸಿಬಿ ಪಡೆ ಹೊಸ ದಾಖಲೆ ನಿರ್ಮಿಸಿದ್ದಾರೆ.
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟರ್ಗಳಿಂದ. ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸುವ ಮೂಲಕ ಆರ್ಸಿಬಿ ಪಡೆ ಹೊಸ ದಾಖಲೆ ನಿರ್ಮಿಸಿದ್ದಾರೆ.
ಬೆಂಗಳೂರು, ಜನವರಿ 10: ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಸುರಕ್ಷತೆಯ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವರದಿಯಾಗಿದೆ. ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುವ ಯುವತಿಯೊಬ್ಬರು ತಮ್ಮ ನಿವಾಸದಿಂದ ಮಾನ್ಯತಾ ಟೆಕ್ ಪಾರ್ಕ್‌ಗೆ ತೆರಳಲು ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬುಕ್ ಮಾಡಿದ್ದರು. ಪ್ರಯಾಣದ ವೇಳೆ, ಚಾಲಕ ವಿವೇಕ್ ಹಿಂಬದಿಗೆ ಸರಿದು ಆಕೆ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ.
ಯುವತಿ ಆಕ್ಷೇಪಿಸಿದಾಗ, ಆತ ಆಕೆಯ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದ್ದಾನೆ ಮತ್ತು ಎದೆ ಭಾಗಕ್ಕೆ ಕೈ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಯುವತಿ ಕಿರುಚಾಡಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಂತರ, ಪೊಲೀಸರು ಆರೋಪಿ ವಿವೇಕ್‌ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ಘಟನೆ ಬೈಕ್ ಟ್ಯಾಕ್ಸಿ ಬಳಸುವ ಮಹಿಳೆಯರ ಸುರಕ್ಷತೆ ಕುರಿತು ಗಂಭೀರ ಚಿಂತನೆಗೆ ಕಾರಣವಾಗಿದೆ.
ಕಾಂಗ್ರೆಸ್ ಹೈಕಮಾಂಡ್ಗೆ ಅಶೋಕ್ ಪ್ರಶ್ನೆ
ಬೆಂಗಳೂರು, ಜನವರಿ 10: ಕೇರಳದ ‘ಮಲಯಾಳ ಭಾಷಾ ಮಸೂದೆ 2025’ ಇದರಿಂದ ಕರ್ನಾಟಕದ (Karnataka) ಗಡಿ ಪ್ರದೇಶಗಳ, ವಿಶೇಷವಾಗಿ ಕಾಸರಗೋಡು ಮತ್ತು ಮಂಜೇಶ್ವರದ ಕನ್ನಡ ಮಾಧ್ಯಮ ಶಾಲೆ ಮಕ್ಕಳ ಮೇಲೆ ಆಗುವ ಪರಿಣಾಮಗಳ ಬಗ್ಗೆ ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಗ್ಗೆ ಇರುವ ಕಾಳಜಿ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಕಾಸರಗೋಡು ಕನ್ನಡಿಗರ ಬಗ್ಗೆ ಯಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಪ್ರಶ್ನೆ ಮಾಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಪ್ರಕಟಿಸಿರುವ ಅವರು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಪ್ರಿಯಾಂಕ ಗಾಂಧಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ಕೇರಳದಲ್ಲಿ ಆನೆ ತುಳಿತಕ್ಕೆ ಒಳಗಾಗಿ ಸತ್ತರೂ, ವಯನಾಡಿನಲ್ಲಿ ಪ್ರಕೃತಿ ವಿಕೋಪ ಉಂಟಾದರೂ, ಕೇರಳಿಗರ ಪರವಾಗಿ ಕರ್ನಾಟಕ ಸರ್ಕಾರದ ಮೇಲೆ ಸವಾರಿ ಮಾಡುವ ಸಂಸದೆ ಪ್ರಿಯಾಂಕಾ ಗಾಂಧಿ ಅವರು, ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯವರೆಗೆ ಮಲಯಾಳಂ ಅನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆ -2025ರ ವಿರುದ್ಧ ಧ್ವನಿ ಎತ್ತುವ ಮೂಲಕ ಈಗ ಕನ್ನಡಿಗರ ಪರ ನಿಲ್ಲುತ್ತಾರಾ ಎಂದು ಅಶೋಕ್ ಪ್ರಶ್ನಿಸಿದ್ದಾರೆ.
ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸುವ ವಿಷಯದಲ್ಲಿ ಕೇರಳದ ಪರ ತೋರಿದ ಕಾಳಜಿಯನ್ನು ಕರ್ನಾಟಕ ಕಾಂಗ್ರೆಸ್ ನಾಯಕರು ಈಗ ಕನ್ನಡಿಗರ ಪರವಾಗಿ ತೋರುತ್ತಾರಾ ಎಂದು ಅವರು ಪ್ರಶ್ನಿಸಿದ್ದಾರೆ.
ಕೇರಳದಲ್ಲಿ ಆನೆ ತುಳಿತಕ್ಕೆ ಒಳಗಾಗಿ ಸತ್ತರೂ, ವಯನಾಡಿನಲ್ಲಿ ಪ್ರಕೃತಿ ವಿಕೋಪ ಉಂಟಾದರೂ, ಕೇರಳಿಗರ ಪರವಾಗಿ ಕರ್ನಾಟಕ ಸರ್ಕಾರದ ಮೇಲೆ ಸವಾರಿ ಮಾಡುವ ಸಂಸದೆ @priyankagandhi ಅವರು, ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯವರೆಗೆ ಮಲಯಾಳಂ ಅನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆ… pic.twitter.com/saItkUOXPj
— R. Ashoka (@RAshokaBJP) January 10, 2026
ಅಕ್ರಮ ವಲಸಿಗರು ಕರ್ನಾಟಕದ ಭೂಮಿಯನ್ನು ಒತ್ತುವರಿ ಮಾಡಿಕೊಂಡರೂ, ‘ಮಾನವೀಯತೆ’ ದೃಷ್ಟಿಯಿಂದ ಮನೆ ಕೊಡಬೇಕು ಎಂದು ರೋಹಿಂಗ್ಯಗಳು, ಬಾಂಗ್ಲಾದೇಶಿಗಳ ಪರವಾಗಿ ಮಿಡಿಯುವ ಕೆಸಿ ವೇಣುಗೋಪಾಲ್ ಅವರ ಹೃದಯ ಈಗ, ಕಾಸರಗೋಡಿನ ಕನ್ನಡಿಗರ ಪರವಾಗಿ ಮಿಡಿಯುದಿಲ್ಲವೇ? ಕರ್ನಾಟಕದ ಸ್ವಾಭಿಮಾನ, ಆತ್ಮಗೌರವಕ್ಕೆ ಪದೇ ಪದೇ ಧಕ್ಕೆ ತರುತ್ತಿರುವ ಕಾಂಗ್ರೆಸ್ ಪಕ್ಷದ ಕೇರಳ ಪಟಾಲಂ, ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜಕೀಯ ಲಾಭಕ್ಕಾಗಿ, ಯಾರದ್ದೋ ಸ್ವಾರ್ಥಕ್ಕಾಗಿ ಕರ್ನಾಟಕದ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಪದೇ ಪದೇ ಬಲಿ ಕೊಡುತ್ತಿರುವ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಕನ್ನಡಿಗರು ತಕ್ಕ ಪಾಠ ಕಲಿಸುವ ದಿನ ಬಹಳ ದೂರವಿಲ್ಲ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಕೇರಳದ ಮಲಯಾಳ ಭಾಷಾ ಮಸೂದೆಯಲ್ಲೇನಿದೆ? ಕನ್ನಡಿಗರಿಗೆ, ಕನ್ನಡ ಶಾಲೆಗಳಿಗೇಕೆ ಆತಂಕ?
ಕೇರಳದಾದ್ಯಂತ ಮಲಯಾಳವನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ‘ಮಲಯಾಳ ಭಾಷಾ ಮಸೂದೆ 2025’ ಇದರಿಂದ ಕಾಸರಗೋಡು ಹಾಗೂ ಮಂಜೇಶ್ವರದ ಕನ್ನಡ ಮಾಧ್ಯಮ ಮಕ್ಕಳ ಮೇಲೆ ಮಲಯಾಳ ಹೇರಿಕೆಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಈಗಾಗಲೇ ಆಕ್ಷೇಪಿಸಿದ್ದಾರೆ. ಮಸೂದೆ ಹಿಂಪಡೆಯುವಂತೆ ಕೇರಳ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ನಾಳೆಯಿಂದ (ಜ.11) ಶುರುವಾಗಲಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಆದರೆ ಈ ಆಡುವ ಬಳಗದಲ್ಲಿ ಇಬ್ಬರು ಆಟಗಾರರು ಕಾಣಿಸಿಕೊಳ್ಳುವುದಿಲ್ಲ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಇಬ್ಬರು ಆಟಗಾರರು ನ್ಯೂಝಿಲೆಂಡ್ ಸರಣಿಗೆ ಆಯ್ಕೆಯಾಗಿಲ್ಲ. ಹೀಗಾಗಿ ಕಿವೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಪ್ಲೇಯಿಂಗ್ ಇಲೆವೆನ್ನಲ್ಲಿ 2 ಬದಲಾವಣೆ ಕಂಡು ಬರಲಿದೆ.
ಈ ಬದಲಾವಣೆಯೊಂದಿಗೆ ನ್ಯೂಝಿಲೆಂಡ್ ವಿರುದ್ಧ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಅತ್ತ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಗಿಲ್ ಹೊರಗುಳಿದಿದ್ದ ಕಾರಣ ಯಶಸ್ವಿ ಜೈಸ್ವಾಲ್ ಕಣಕ್ಕಿಳಿದಿದ್ದರು. ಇದೀಗ ಶುಭ್ಮನ್ ಅವರ ಆಗಮನದೊಂದಿಗೆ ಜೈಸ್ವಾಲ್ ಮತ್ತೆ ಬೆಂಚ್ ಕಾಯಬೇಕಾಗುತ್ತದೆ.
ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯುವುದು ಖಚಿತ. ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಅಯ್ಯರ್ ಬದಲಿಗೆ ರುತುರಾಜ್ ಗಾಯಕ್ವಾಡ್ ಕಣಕ್ಕಿಳಿದಿದ್ದರು. ಆದರೆ ಅಯ್ಯರ್ ಆಗಮನದೊಂದಿಗೆ ರುತುರಾಜ್ ಗಾಯಕ್ವಾಡ್ ಏಕದಿನ ತಂಡದಿಂದ ಹೊರಬಿದ್ದಿದ್ದಾರೆ.
ಹಾಗೆಯೇ ಐದನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆರನೇ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಏಕೆಂದರೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮೂರನೇ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಿಲಕ್ ವರ್ಮಾ ಕೂಡ ಭಾರತ ಏಕದಿನ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧ ವಾಷಿಂಗ್ಟನ್ ಸುಂದರ್ಗೆ ಚಾನ್ಸ್ ಸಿಗಬಹುದು.
ಇನ್ನು ರವೀಂದ್ರ ಜಡೇಜಾ ಏಳನೇ ಕ್ರಮಾಂಕದಲ್ಲಿ ಕಾಣಿಸಿಕೊಳ್ಳುವುದು ಖಚಿತ. ಇನ್ನುಳಿದಂತೆ ಬೌಲರ್ಗಳಾಗಿ ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್ ಹಾಗೂ ಹರ್ಷಿತ್ ರಾಣಾ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಅದರಂತೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಈ ಕೆಳಗಿನಂತಿದೆ…
ಇದನ್ನೂ ಓದಿ: ಒಂದೇ ಒಂದು ಎಸೆತದಿಂದ ಭರ್ಜರಿ ದಾಖಲೆ ತಪ್ಪಿಸಿಕೊಂಡ ಲಾರೆನ್ ಬೆಲ್
Published On – 12:56 pm, Sat, 10 January 26
ಭಾರತ ಸರ್ಕಾರದ ಸಾರ್ವಜನಿಕ ಸೇವಾ ಪ್ರಸಾರ ಸಂಸ್ಥೆಯಾದ ಪ್ರಸಾರ ಭಾರತಿಯು ವಿವಿಧ ಉದ್ಯೋಗಗಳ ನೇಮಕಾತಿಗೆ ಜಾಹೀರಾತು ಬಿಡುಗಡೆ ಮಾಡಿದೆ. ದೇಶಾದ್ಯಂತ ವಿವಿಧ ಸ್ಥಳಗಳಲ್ಲಿರುವ ಪ್ರಸಾರ ಭಾರತಿ ಕೇಂದ್ರಗಳಲ್ಲಿ ಒಪ್ಪಂದದ ಆಧಾರದ ಮೇಲೆ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕೋರಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 14 ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ಪ್ರಕಾರ ಸಂಬಂಧಿತ ವಿಭಾಗದಲ್ಲಿ MBA ಅಥವಾ MCA ಅಥವಾ PG ಡಿಪ್ಲೊಮಾ ಇನ್ ಮಾರ್ಕೆಟಿಂಗ್‌ನಲ್ಲಿ ಉತ್ತೀರ್ಣರಾಗಿರಬೇಕು. ಅಧಿಸೂಚನೆಯ ಪ್ರಕಾರ ಅವರು ಕೆಲಸದ ಅನುಭವವನ್ನು ಹೊಂದಿರಬೇಕು. ಅಭ್ಯರ್ಥಿಗಳ ಗರಿಷ್ಠ ವಯಸ್ಸಿನ ಮಿತಿ ಜುಲೈ 7, 2026 ರಂತೆ 35 ವರ್ಷಗಳಿಗಿಂತ ಕಡಿಮೆಯಿರಬೇಕು. ಈ ಅರ್ಹತೆಗಳನ್ನು ಪೂರೈಸುವ ಅಭ್ಯರ್ಥಿಗಳು ಜನವರಿ 22, 2026 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಗಡುವಿನ ನಂತರ ಸ್ವೀಕರಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಇದನ್ನೂ ಓದಿ: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕ್ರೆಡಿಟ್ ಆಫೀಸರ್ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ
ಯಾವುದೇ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಂದರೆ, ಮೊದಲು ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಕಿರುಪಟ್ಟಿ ಮಾಡಲಾಗುತ್ತದೆ. ಅದರ ನಂತರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ, ಸಂದರ್ಶನವನ್ನು ನಡೆಸಲಾಗುತ್ತದೆ ಮತ್ತು ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಈ ಉದ್ಯೋಗಗಳಿಗೆ ಆಯ್ಕೆಯಾದವರು ಚೆನ್ನೈ, ಹೈದರಾಬಾದ್, ಮುಂಬೈ, ಕೋಲ್ಕತ್ತಾದಂತಹ ಮೆಟ್ರೋ ನಗರಗಳಲ್ಲಿ ಕೆಲಸ ಮಾಡಬೇಕಾಗುತ್ತದೆ. ಅವರಿಗೆ ತಿಂಗಳಿಗೆ ರೂ. 35,000 ರಿಂದ ರೂ. 50,000 ರವರೆಗೆ ವೇತನ ನೀಡಲಾಗುತ್ತದೆ. ಇತರ ನಗರಗಳಲ್ಲಿ ನೇಮಕಗೊಂಡವರಿಗೆ ತಿಂಗಳಿಗೆ ರೂ. 35,000 ರಿಂದ ರೂ. 42,000 ರವರೆಗೆ ವೇತನ ನೀಡಲಾಗುತ್ತದೆ. ಆನ್‌ಲೈನ್ ಅರ್ಜಿಗಾಗಿ, ನೀವು ಪ್ರಸಾರ ಭಾರತಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಧಿಸೂಚನೆಗೆ ಸಂಬಂಧಿಸಿದ ಇತರ ನಿಯಮಗಳು ಮತ್ತು ಷರತ್ತುಗಳನ್ನು ವೆಬ್‌ಸೈಟ್‌ನಲ್ಲಿ ಎಚ್ಚರಿಕೆಯಿಂದ ಓದಿ ಅರ್ಜಿ ಸಲ್ಲಿಸುವುದು ಉತ್ತಮ.
ಪ್ರಸಾರ ಭಾರತಿ ಉದ್ಯೋಗ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ನಾಳೆಯಿಂದ (ಜ.11) ಶುರುವಾಗಲಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಆದರೆ ಈ ಆಡುವ ಬಳಗದಲ್ಲಿ ಇಬ್ಬರು ಆಟಗಾರರು ಕಾಣಿಸಿಕೊಳ್ಳುವುದಿಲ್ಲ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಇಬ್ಬರು ಆಟಗಾರರು ನ್ಯೂಝಿಲೆಂಡ್ ಸರಣಿಗೆ ಆಯ್ಕೆಯಾಗಿಲ್ಲ. ಹೀಗಾಗಿ ಕಿವೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಪ್ಲೇಯಿಂಗ್ ಇಲೆವೆನ್ನಲ್ಲಿ 2 ಬದಲಾವಣೆ ಕಂಡು ಬರಲಿದೆ.
ಈ ಬದಲಾವಣೆಯೊಂದಿಗೆ ನ್ಯೂಝಿಲೆಂಡ್ ವಿರುದ್ಧ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಅತ್ತ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಗಿಲ್ ಹೊರಗುಳಿದಿದ್ದ ಕಾರಣ ಯಶಸ್ವಿ ಜೈಸ್ವಾಲ್ ಕಣಕ್ಕಿಳಿದಿದ್ದರು. ಇದೀಗ ಶುಭ್ಮನ್ ಅವರ ಆಗಮನದೊಂದಿಗೆ ಜೈಸ್ವಾಲ್ ಮತ್ತೆ ಬೆಂಚ್ ಕಾಯಬೇಕಾಗುತ್ತದೆ.
ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯುವುದು ಖಚಿತ. ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಅಯ್ಯರ್ ಬದಲಿಗೆ ರುತುರಾಜ್ ಗಾಯಕ್ವಾಡ್ ಕಣಕ್ಕಿಳಿದಿದ್ದರು. ಆದರೆ ಅಯ್ಯರ್ ಆಗಮನದೊಂದಿಗೆ ರುತುರಾಜ್ ಗಾಯಕ್ವಾಡ್ ಏಕದಿನ ತಂಡದಿಂದ ಹೊರಬಿದ್ದಿದ್ದಾರೆ.
ಹಾಗೆಯೇ ಐದನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆರನೇ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಏಕೆಂದರೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮೂರನೇ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಿಲಕ್ ವರ್ಮಾ ಕೂಡ ಭಾರತ ಏಕದಿನ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧ ವಾಷಿಂಗ್ಟನ್ ಸುಂದರ್ಗೆ ಚಾನ್ಸ್ ಸಿಗಬಹುದು.
ಇನ್ನು ರವೀಂದ್ರ ಜಡೇಜಾ ಏಳನೇ ಕ್ರಮಾಂಕದಲ್ಲಿ ಕಾಣಿಸಿಕೊಳ್ಳುವುದು ಖಚಿತ. ಇನ್ನುಳಿದಂತೆ ಬೌಲರ್ಗಳಾಗಿ ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್ ಹಾಗೂ ಹರ್ಷಿತ್ ರಾಣಾ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಅದರಂತೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಈ ಕೆಳಗಿನಂತಿದೆ…
ಇದನ್ನೂ ಓದಿ: ಒಂದೇ ಒಂದು ಎಸೆತದಿಂದ ಭರ್ಜರಿ ದಾಖಲೆ ತಪ್ಪಿಸಿಕೊಂಡ ಲಾರೆನ್ ಬೆಲ್
ಗದಗ, ಜನವರಿ 10: ನಗರದ ಹೊಂಬಳ ರಸ್ತೆಯ ಸರ್ವಜ್ಞ ಸರ್ಕಲ್ ಬಳಿ ಕಡಲೆ ಕಳ್ಳತನ ಪ್ರಕರಣದಲ್ಲಿ ರೈತರು ಕಳ್ಳನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ನಡೆದಿದೆ. ಬೆಳಗಿನ ಜಾವ ಜಮೀನಿನಲ್ಲಿ ಕಡಲೆ ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ವಾಯುವಿಹಾರಕ್ಕೆ ಬಂದ ಜನರ ಕಣ್ಣಿಗೆ ಕಳ್ಳ ಬಿದ್ದಿದ್ದು, ತಕ್ಷಣ ರೈತರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ರೈತರು ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಧರ್ಮದೇಟು ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ರೈತರ ಜಮೀನುಗಳಲ್ಲಿ ಕಡಲೆ ಕಳ್ಳತನ ನಡೆಯುತ್ತಿದ್ದು, ಇದರಿಂದ ರೈತರು ಕಂಗಾಲಾಗಿದ್ದರು ಎನ್ನಲಾಗಿದೆ. ಆಕ್ರೋಶಗೊಂಡ ರೈತರು ಕಳ್ಳನ ತಲೆ ಹಾಗೂ ಕೊರಳಿಗೆ ಕಡಲೆ ಗಿಡಗಳ ಮಾಲೆ ಹಾಕಿ ಪಾಠ ಕಲಿಸಿದ್ದಾರೆ. ಮಾಹಿತಿ ಪಡೆದ ಗದಗ ಗ್ರಾಮೀಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ದಳಪತಿ ವಿಜಯ್ (Thalapathy Vijay) ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗುತ್ತಿದೆ. ಜನವರಿ 09ಕ್ಕೆ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್ಸಿಯು ಪ್ರಮಾಣ ಪತ್ರ ನೀಡಲು ಹಿಂಜರಿದ ಕಾರಣ ಚಿತ್ರತಂಡ ನ್ಯಾಯಾಲಯದ ಮೆಟ್ಟಿಲೇರಿತು, ಜನವರಿ 09ರಂದು ಮದ್ರಾಸ್ ಹೈಕೋರ್ಟ್, ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡಬೇಕೆಂದು ಆದೇಶಿಸಿತ್ತು. ಆದರೆ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಮದ್ರಾಸ್ ಹೈಕೋರ್ಟ್ನ ಮತ್ತೊಂದು ಪೀಠ ಆದೇಶಕ್ಕೆ ತಡೆ ನೀಡಿತು. ಹೀಗಾಗಿ ಸಿನಿಮಾ ಬಿಡುಗಡೆ ಮತ್ತಷ್ಟು ಮುಂದೆ ಹೋಗಿದೆ. ಸಿನಿಮಾದ ಬಿಡುಗಡೆಯೇ ಅನಿಶ್ಚತತೆಗೆ ಒಳಗಾಗಿದೆ. ಇದೀಗ ಸಿನಿಮಾದ ನಿರ್ಮಾಪಕ ವೆಂಕಟ್ ಕೆ ನಾರಾಯಣ್ ಅವರು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ಸಿನಿಮಾ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
‘ಜನ ನಾಯಗನ್’ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ನ ಮಾಲೀಕರಾದ ವೆಂಕಟ್ ನಾರಾಯಣ್ ವಿಡಿಯೋನಲ್ಲಿ ಹಂಚಿಕೊಂಡಿರುವ ಮಾಹಿತಿಯಂತೆ ‘ಜನ ನಾಯಗನ್’ ಸಿನಿಮಾವನ್ನು 18 ಡಿಸೆಂಬರ್ 2025 ರಂದು ಸಿಬಿಎಫ್ಸಿಗೆ ಸಲ್ಲಿಕೆ ಮಾಡಲಾಗಿತ್ತು. 22ರ ಡಿಸೆಂಬರ್ ತಿಂಗಳಲ್ಲಿ ಸಿಬಿಎಫ್ಸಿಯು ಇಮೇಲ್ ಮಾಡಿ, ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡುವುದಾಗಿ ತಿಳಿಸಿದ್ದು, ಸಿನಿಮಾಕ್ಕೆ ಕೆಲವು ಕಟ್ಗಳನ್ನು ಸಹ ಸೂಚಿಸಿತ್ತು. ಅದರಂತೆ ಚಿತ್ರತಂಡವು ಸೆನ್ಸಾರ್ ಮಂಡಳಿ ಸೂಚಿಸಿದ ಬದಲಾವಣೆಗಳನ್ನು ಮಾಡಿ ಡಿಸೆಂಬರ್ 22ಕ್ಕೆ ಮತ್ತೆ ಸಿನಿಮಾವನ್ನು ಸಿಬಿಎಫ್ಸಿಗೆ ಸಲ್ಲಿಕೆ ಮಾಡಿತ್ತು.
ವೆಂಕಟ್ ಅವರು ಹೇಳಿರುವಂತೆ, ‘ಸಿಬಿಎಫ್ಸಿಯು, ‘ಜನ ನಾಯಗನ್’ ಬಗ್ಗೆ ಬಂದ ಒಂದು ದೂರನ್ನು ಪರಿಗಣಿಸಿ ಸಿನಿಮಾವನ್ನು ರಿವ್ಯೂ ಕಮಿಟಿಗೆ ಕಳಿಸಲು ನಿರ್ಧಾರ ಮಾಡಿತು. ಆದರೆ ನಮಗೆ ಬಿಡುಗಡೆ ದಿನಾಂಕ ಹತ್ತಿರ ಇದ್ದಿದ್ದರಿಂದ ಹಾಗೂ ದೂರುದಾರರು ಯಾರು ಎಂಬ ಮಾಹಿತಿಯೂ ಸಹ ಇಲ್ಲವಾದ ಕಾರಣ, ನಾವು ಮದ್ರಾಸ್ ಹೈಕೋರ್ಟ್ನ ಮೆಟ್ಟಿಲೇರಿದೆವು. ಜನವರಿ 06 ಮತ್ತು 7 ರಂದು ವಿಚಾರಣೆ ನಡೆಸಿದ ನ್ಯಾಯಾಲಯವು. ಜನವರಿ 09ರಂದು ‘ಜನ ನಾಯಗನ್’ ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡಬೇಕೆಂದು ಆದೇಶ ಹೊರಡಿಸಿತು’ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ತಾವು ಸ್ಪರ್ಧಿಸೋ ಕ್ಷೇತ್ರದ ಹೆಸರು ಘೋಷಿಸಿದ ದಳಪತಿ ವಿಜಯ್; ಮೈತ್ರಿ ವಿಚಾರವಾಗಿ ಅಚ್ಚರಿಯ ಹೇಳಿಕೆ
‘ಆದರೆ ಸಿಬಿಎಫ್ಸಿಯು ಅದೇ ದಿನ ಆದೇಶದ ವಿರುದ್ಧ ಮದ್ರಾಸ್ ಹೈಕೋರ್ಟ್ನಲ್ಲಿಯೇ ಮೇಲ್ಮನವಿ ಸಲ್ಲಿಸಿತು. ಈ ಕಾರಣದಿಂದಾಗಿ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಬೇಕು ಎಂದು ಹೊರಡಿಸಲಾಗಿದ್ದ ಆದೇಶದ ಮೇಲೆ ತಡೆ ನೀಡಲಾಯ್ತು. ವಿಚಾರಣೆಯನ್ನು ಜನವರಿ 27ಕ್ಕೆ ಮುಂದೂಡಲಾಗಿದೆ. ನಮಗೆ ನ್ಯಾಯ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದ್ದು, ಆದಷ್ಟು ಶೀಘ್ರ ನಾವು ಸಿನಿಮಾವನ್ನು ಜನರ ಎದುರು ತರಲಿದ್ದೇವೆ’ ಎಂದಿದ್ದಾರೆ ವೆಂಕಟ್.
‘ದಳಪತಿ ವಿಜಯ್ ಅವರು ದಶಕಗಳ ಕಾಲ ಚಿತ್ರರಂಗಕ್ಕೆ ನೀಡಿದ ಸೇವೆ, ಮನೊರಂಜನೆಗೆ ಒಂದು ಅದ್ಭುತವಾದ ವಿದಾಯವನ್ನು ಸಿನಿಮಾ ಮೂಲಕ ನೀಡುವುದು ನಮ್ಮ ಉದ್ದೇಶವಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅದಕ್ಕೆ ಅಡ್ಡಿಗಳು ಎದುರಾಗಿದೆ. ಇದು ನಮಗೆ ಕಠಿಣವಾದ ಮತ್ತು ಭಾವುಕವಾದ ಸಮಯ. ಇಂಥಹಾ ಸಮಯದಲ್ಲಿ ನಾವು ಸಿನಿಮಾವನ್ನು ಜನರ ಮುಂದೆ ತರಲು ಶಕ್ತಿ ಮೀರಿ ಯತ್ನಿಸುತ್ತಿದ್ದೇವೆ. ಇಂಥಹಾ ಸಮಯದಲ್ಲಿ ಪ್ರೇಕ್ಷಕರು, ಸಿನಿಮಾ ವಿತರಕರು, ಪ್ರದರ್ಶಕರು ಮತ್ತು ನಮ್ಮ ಸಹ ಬಂಡವಾಳದಾರರು ನಮಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ’ ಎಂದಿದ್ದಾರೆ ವೆಂಕಟ್.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On – 12:27 pm, Sat, 10 January 26
ಬೆಂಗಳೂರು, ಜನವರಿ 10: ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ಟೀಸರ್ ಬಿಡುಗಡೆಯಾದ ನಂತರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಟೀಸರ್‌ನಲ್ಲಿನ ಅಸಭ್ಯ ದೃಶ್ಯಗಳು ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ವಕೀಲ ಲೋಹಿತ್ ಕುಮಾರ್ ಅವರು ಕೇಂದ್ರ ಸೆನ್ಸಾರ್ ಮಂಡಳಿಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ‘ಟಿವಿ9’ ಜೊತೆ ಮಾತನಾಡಿದ ಲೋಹಿತ್ ಕುಮಾರ್, ಟೀಸರ್‌ನಲ್ಲಿ ಕಂಡುಬಂದ ದೃಶ್ಯಗಳನ್ನು ಗಮನಿಸಿದರೆ ಈ ಚಿತ್ರವು ಕುಟುಂಬ ಸದಸ್ಯರೊಂದಿಗೆ ನೋಡಲು ಸೂಕ್ತವಲ್ಲ. ಚಿತ್ರಮಂದಿರಗಳಲ್ಲಿ ಎ ಸರ್ಟಿಫಿಕೇಟ್ ಇದ್ದರೆ ಮಕ್ಕಳನ್ನು ಪ್ರವೇಶಿಸದಂತೆ ತಡೆಯಲಾಗುತ್ತದೆ. ಆದರೆ ಯೂಟ್ಯೂಬ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಟೀಸರ್‌ಗಳಿಗೆ ಯಾವುದೇ ಮಾರ್ಗಸೂಚಿಗಳಿಲ್ಲದಿರುವುದು ಸಮಸ್ಯೆಯಾಗಿದೆ ಎಂದು ತಿಳಿಸಿದರು. ಸೆನ್ಸಾರ್ ಮಂಡಳಿ ಟೀಸರ್‌ಗಳಿಗೂ ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸಮಿತಿಯ ಮಾತು ಕೇಳದಿದ್ದಕ್ಕೆ ಸಾಮಾಜಿಕ ಬಹಿಷ್ಕಾರ!
ಕೊಡಗು, ಜನವರಿ 10: ಜಿಲ್ಲೆಯಲ್ಲಿ ಸಾಮಾಜಿಕ ಬಹಿಷ್ಕಾರ ಎಂಬ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಆತಂಕಕಾರಿ ವಿಷಯವಾಗಿ ಹೊರಹೊಮ್ಮಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂತಿ ಗ್ರಾಮದಲ್ಲಿ ಗ್ರಾಮ ಸಮಿತಿಯ ತೀರ್ಮಾನದ ಹೆಸರಿನಲ್ಲಿ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರದ ಶಿಕ್ಷೆ ವಿಧಿಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.
ಗ್ರಾಮದ ಅಜಂತ ಮತ್ತು ನವೀನ್ ಎಂಬುವವರ ಎರಡು ಕುಟುಂಬಗಳನ್ನು ಸಮಿತಿಯ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ ಬಹಿಷ್ಕಾರಕ್ಕೆ ಒಳಪಡಿಸಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಹಿಷ್ಕಾರದ ಪರಿಣಾಮವಾಗಿ ಗ್ರಾಮಸ್ಥರು ಆ ಕುಟುಂಬಗಳೊಂದಿಗೆ ಮಾತನಾಡುವಂತಿಲ್ಲ, ಸಾವು–ಸಮಾರಂಭ, ಸಭೆ, ಮದುವೆ ಸೇರಿದಂತೆ ಯಾವುದೇ ಸಾಮಾಜಿಕ ಕಾರ್ಯಕ್ರಮಗಳಿಗೆ ಅವರು ಹಾಜರಾಗುವಂತಿಲ್ಲ ಎಂದು ಆದೇಶಿಸಲಾಗಿದೆ. ಅಲ್ಲದೆ, ಈ ಕುಟುಂಬಗಳ ತೋಟದ ಕೆಲಸಗಳಿಗೆ ಕಾರ್ಮಿಕರು ತೆರಳದಂತೆ ಸೂಚಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೋ ಓದಿ ‘ಕೊರಗಜ್ಜ’ ಸಿನಿಮಾ ತಂಡದ ವಿರುದ್ಧ ಕೊಡಗಿನ ದೈವಾರಾಧಕರು ಮತ್ತು ನರ್ತಕರು ರೊಚ್ಚಿಗೆದ್ದಿದ್ದೇಕೆ?
ಬಹಿಷ್ಕಾರದ ವಿರುದ್ಧ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದರೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಸಂಪರ್ಕ ಕಡಿತಗೊಂಡ ಪರಿಣಾಮ ಈ ಎರಡು ಕುಟುಂಬಗಳು ಮಾನಸಿಕ ಹಾಗೂ ಆರ್ಥಿಕವಾಗಿ ತೀವ್ರ ಸಂಕಷ್ಟ ಅನುಭವಿಸುತ್ತಿವೆ ಎಂದು ತಿಳಿದುಬಂದಿದೆ. ಇನ್ನೊಂದೆಡೆ, ಕೂತಿ ಗ್ರಾಮ ಸಮಿತಿಯು ಈ ಆರೋಪಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ. ಗ್ರಾಮ ಕಟ್ಟುಪಾಡುಗಳನ್ನು ಮೀರಿ ನಡೆದುಕೊಂಡ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿತ್ತು. ಆದರೆ ದಂಡವನ್ನು ಕಟ್ಟದೆ ಇರುವುದರಿಂದ ಗ್ರಾಮಸ್ಥರು ಸ್ವಯಂಸ್ಪೂರ್ತಿಯಾಗಿ ಸಹಕಾರ ನೀಡುತ್ತಿಲ್ಲ ಎಂದು ಸಮಿತಿ ಸ್ಪಷ್ಟನೆ ನೀಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.