ಯೂಟ್ಯೂಬ್ ವಿಡಿಯೋ ನೋಡಿಕೊಂಡು ಗರ್ಭಿಣಿಗೆ ಆಪರೇಷನ್ ಮಾಡಿದ ವೈದ್ಯರು; ಹೆರಿಗೆ ವೇಳೆ ತಾಯಿ ಸಾವು! – Kannada News | Bihar fake doctor performed operation to pregnant woman after watching youtube video she died during delivery
ನವದೆಹಲಿ, ಜನವರಿ 9: ಹೊಟ್ಟೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಗೆ (Pregnant) ನಕಲಿ ವೈದ್ಯರೊಬ್ಬರು ಯೂಟ್ಯೂಬ್ ವಿಡಿಯೋ ನೋಡಿಕೊಂಡು ಆಪರೇಷನ್ ಮಾಡಿದ್ದಾರೆ. ಆ ವೈದ್ಯರ ಹುಚ್ಚಾಟದಿಂದಾಗಿ ಆ ಮಹಿಳೆ ಸಾವನ್ನಪ್ಪಿದ್ದಾರೆ. ಆದರೆ, ಮಗು ಸದ್ಯಕ್ಕೆ ಸುರಕ್ಷಿತವಾಗಿದೆ. ಬಿಹಾರದ ಭಾಗಲ್ಪುರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ನಕಲಿ ವೈದ್ಯ ಯೂಟ್ಯೂಬ್ನಲ್ಲಿ ಪೋಸ್ಟ್ ಮಾಡಲಾಗಿದ್ದ ವಿಡಿಯೋವನ್ನು ನೋಡಿಕೊಂಡು ಹೆರಿಗೆ ನೋವಿನಿಂದ ನರಳುತ್ತಿದ್ದ ಮಹಿಳೆಗೆ ಆಪರೇಷನ್ ಮಾಡಿದ್ದಾರೆ. ಆಪರೇಷನ್ ಸಮಯದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಮಹಿಳೆಯ ಕುಟುಂಬಸ್ಥರು ಹಾಗೂ ಊರಿನವರು…