Headlines

nagaraj11081993

ಪಿಎಂ ಶ್ರೀ ಶಾಲಾ ಯೋಜನೆ: ಪ್ರೆಸಿಡೆನ್ಸಿ ವಿವಿಯಲ್ಲಿ ಶಿಕ್ಷಕರಿಗೆ ನಾವೀನ್ಯತೆ, ಉದ್ಯಮಶೀಲತೆ ಶಿಬಿರ – Kannada News | PM SHRI: Bengaluru Teachers Boost Innovation and NEP 2020 Skills at IDE Camp

ಬೆಂಗಳೂರು, ಜನವರಿ 09: ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಶಿಕ್ಷಣ ಒದಗಿಸುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ‘ಪಿಎಂ ಶ್ರೀ’ ಶಾಲಾ ಯೋಜನೆಯನ್ನು (pm shri scheme) ರೂಪಿಸಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ನಾವೀನ್ಯತೆ, ವಿನ್ಯಾಸ ಮತ್ತು ಉದ್ಯಮಶೀಲತೆ (IDE) ಶಿಬಿರ ನಡೆಯುತ್ತಿದೆ. ಶಿಬಿರದ ಮೂರನೇ ದಿನದಂದು ಕೂಡ ಹಲವು ಗಣ್ಯರು ಭಾಗಿಯಾಗಿದ್ದರು. ಡಿಆರ್‌ಡಿಓದ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ವ್ಯವಸ್ಥೆಗಳ ವಿಶೇಷ ವಿಜ್ಞಾನಿ ಮತ್ತು ಮಹಾನಿರ್ದೇಶಕಿ ಡಾ. ಬಿ. ಕೆ. ದಾಸ್…

Read More

ಪ್ರಧಾನಿ ಮೋದಿಯ ದೃಷ್ಟಿ ಮತ್ತು ನಿಲುವು ಕಂಡು ಅಚ್ಚರಿಗೊಂಡ ಎಐ ಸ್ಟಾರ್ಟಪ್​ಗಳ ಮುಖ್ಯಸ್ಥರು – Kannada News | PM Modi’s AI Vision: Boosting Indian Startups for Global Leadership

ಎಐ ಸ್ಟಾರ್ಟಪ್​ಗಳ ಮುಖಂಡರೊಂದಿಗೆ ಪ್ರಧಾನಿ ಸಂವಾದ ನವದೆಹಲಿ, ಜನವರಿ 9: ಪ್ರಧಾನಿ ನರೇಂದ್ರ ಮೋದಿ (Narendra Modi) ನಿವಾಸದಲ್ಲಿ ನಡೆದ ಎಐ ಸ್ಟಾರ್ಟಪ್​ಗಳ ಸಭೆ, ಅದರಲ್ಲಿ ಭಾಗವಹಿಸಿದವರೆಲ್ಲರ ಹೃದಯ ಹಗುರಾಗಿಸಿದೆ. ಎಐ ವಿಚಾರದಲ್ಲಿ ಪ್ರಧಾನಿ ಹೊಂದಿರುವ ದೃಷ್ಟಿಕೋನ, ನಿಲುವು ಏನು ಎಂಬುದು ಭಾರತೀಯ ಸ್ಟಾರ್ಟಪ್​ಗಳ ಮುಖ್ಯಸ್ಥರ ಅರಿವಿಗೆ ಬಂದಿತ್ತು. ಫೆಬ್ರುವರಿಯಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಪ್ರಧಾನಿಗಳು 12 ಸ್ಟಾರ್ಟಪ್​ಗಳ ಮುಖಂಡರನ್ನು ತಮ್ಮ ನಿವಾಸಕ್ಕೆ ಕರೆಸಿ ವಿಚಾರ ವಿನಿಮಯ ಮಾಡಿದ್ದಾರೆ. ಪ್ರಧಾನಿಯನ್ನು…

Read More

ಬಳ್ಳಾರಿ ಬ್ಯಾನರ್​​ ಗಲಾಟೆ ಕೇಸ್​​ ತನಿಖೆ ಹೊಣೆ ಸಿಐಡಿಗೆ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ – Kannada News | Ballari Banner Firing Case: CID Probe Ordered by Karnataka Government

ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಗಳೂರು, ಜನವರಿ 09: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ವೇಳೆ ಗುಂಡಿನ ದಾಳಿ ಪ್ರಕರಣದ ತನಿಖೆಯನ್ನುಸಿಐಡಿಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಲಾಗಿದೆ. ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಸಿರುವ ಹಿನ್ನೆಲೆ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ. ಬಳ್ಳಾರಿ ಪ್ರಕರಣ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಇಂದೇ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚೆ ಮಾಡ್ತೇನೆ…

Read More

ಹಿಮಾಚಲ ಪ್ರದೇಶದ ಸಿರ್ಮೌರ್‌ನಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ – Kannada News | 9 killed and 40 injured as bus rolled down into deep gorge in Himachal Pradesh

ಶಿಮ್ಲಾ, ಜನವರಿ 9: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ಖಾಸಗಿ ಬಸ್ ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿದೆ. ಇದರ ಪರಿಣಾಮವಾಗಿ 9 ಜನರು ಸಾವನ್ನಪ್ಪಿದ್ದು, ಸುಮಾರು 40 ಮಂದಿ ಗಾಯಗೊಂಡಿದ್ದಾರೆ. ಶಿಮ್ಲಾದಿಂದ ರಾಜ್‌ಗಢ ಮೂಲಕ ಕುಪ್ವಿಗೆ ತೆರಳುತ್ತಿದ್ದ ಬಸ್ ಹರಿಪುರ್ಧರ್ ಗ್ರಾಮದ ಬಳಿ ರಸ್ತೆಯಿಂದ ಜಾರಿ ಕಣಿವೆಗೆ ಉರುಳಿ ಬಿದ್ದಾಗ ಈ ಅಪಘಾತ (Accident) ಸಂಭವಿಸಿದೆ. ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅಪಘಾತದಲ್ಲಿ ಸಾವನ್ನಪ್ಪಿದವರ…

Read More

ಜನವರಿ 30-31ರಂದು ಹೈದರಾಬಾದ್​ನಲ್ಲಿ ಅಪೋಲೋ ಹಾಸ್ಪಿಟಲ್ಸ್​ನಿಂದ ‘ಇಂಟರ್ನ್ಯಾಷನಲ್ ಹೆಲ್ತ್ ಡೈಲೋಗ್’ – Kannada News | Apollo Hospitals organizing International Health Dialogue 2026 on Jan 30 31 at Hyderabad

ಹಿಂದಿನ ವರ್ಷದ ಐಎಚ್​ಡಿ ಸಮಾವೇಶದ ಒಂದು ಚಿತ್ರ ಹೈದರಾಬಾದ್, ಜನವರಿ 9: ಇದೇ ತಿಂಗಳ ಕೊನೆಯ ಎರಡು ದಿನಗಳಂದು ಅಂತಾರಾಷ್ಟ್ರೀಯ ಆರೋಗ್ಯ ಸಂವಾದ ಕಾರ್ಯಕ್ರಮ ನಡೆಯಲಿದೆ. ಅಪೋಲೋ ಹಾಸ್ಪಿಟಲ್ಸ್ ಆಯೋಜಿಸುತ್ತಿರುವ ಇಂಟರ್ನ್ಯಾಷನಲ್ ಹೆಲ್ತ್ ಡೈಲೋಗ್​ನ 13ನೇ ಆವೃತ್ತಿ (IHD- International Health Dialogue) ಜನವರಿ 30-31ರಂದು ನಡೆಯಲಿದೆ. ಹೈದರಾಬಾದ್​ನಲ್ಲಿ ನಡೆಯುವ 2026ರ ಆವೃತ್ತಿಯ ಈ ಕಾರ್ಯಕ್ರಮದ ಥೀಮ್ ‘ಗ್ಲೋಬಲ್ ವಾಯ್ಸಸ್, ಒನ್ ವಿಶನ್’ (ಜಾಗತಿಕ ಧ್ವನಿಗಳು, ಒಂದೇ ದೃಷ್ಟಿ). ಜಾಗತಿಕ ಹೊರಹೊಮ್ಮುವ ಹೊಸ ಐಡಿಯಾಗಳು, ಇನ್ನೋವೇಶನ್​ಗಳು ಮತ್ತು…

Read More

2025ರಲ್ಲಿ ಮೋದಿ, ಟ್ರಂಪ್ 8 ಬಾರಿ ಮಾತನಾಡಿದ್ದರು; ಲುಟ್ನಿಕ್ ಹೇಳಿಕೆಗೆ ಭಾರತ ಸ್ಪಷ್ಟನೆ – Kannada News | PM Modi and Trump spoke 8 times in 2025; MEA rejects Howard Lutnicks claim on India US trade deal

ನವದೆಹಲಿ, ಜನವರಿ 9: ಭಾರತದ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಕರೆ ಮಾಡದ ಕಾರಣದಿಂದಲೇ ಕಳೆದ ವರ್ಷ ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಮುಂದುವರೆಸಲು ಸಾಧ್ಯವವಾಗಲಿಲ್ಲ ಎಂಬ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಸಂದರ್ಶನವೊಂದರಲ್ಲಿ ಹೇಳಿದ್ದರು. ಆದರೆ, ಅವರ ಈ ಹೇಳಿಕೆಯನ್ನು ಭಾರತ ನಿರಾಕರಿಸಿದೆ. ಪರಸ್ಪರ ಪ್ರಯೋಜನಕಾರಿ ಒಪ್ಪಂದವನ್ನು ಮಾಡಿಕೊಳ್ಳಲು ಭಾರತ ಸದಾ ಆಸಕ್ತಿ ಹೊಂದಿತ್ತು ಎಂದು ಭಾರತ ಹೇಳಿದೆ. ಅಮೆರಿಕ ಮತ್ತು ಭಾರತದ…

Read More

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಬಿದ್ದ ಚಿರತೆ, ವಿಲವಿಲ ಒದ್ದಾಡಿ ಪ್ರಾಣಬಿಟ್ಟಿತು – Kannada News | 3 year old leopard dies after being falling in trap in Chikkaballapur

ಚಿಕ್ಕಬಳ್ಳಾಪುರ, (ಜನವರಿ 09): ಕಾಡು ಹಂದಿಗೆ ಹಾಕಲಾಗಿದ್ದ ಉರುಳಿಗೆ ಚಿರತೆ ಸಿಕ್ಕು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೇತೇನಹಳ್ಳಿ ಅರಣ್ಯದಲ್ಲಿ ನಡೆದಿದೆ. ಕೇತೇನಹಳ್ಳಿ ಅರಣ್ಯದಲ್ಲಿ ಕಾಡುಹಂದಿಗೆ ಹಾಕಿದ್ದ ಉರುಳಿಗೆ 3 ವರ್ಷದ ಹೆಣ್ಣು ಚಿರತೆ ಸಿಲುಕಿ ಒದ್ದಾಡಿದೆ. ಕೂಡಲೇ ಚಿರತೆಯನ್ನು ಉರುಳಿನಿಂದ ಬಿಡಿಸಿ ಚಿಕಿತ್ಸೆ ನೀಡಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ….

Read More

ಬಿಗ್​​ಬಾಸ್ ಕನ್ನಡ 12ರ ವಿನ್ನರ್ ಯಾರು: ಪ್ರಶಾಂತ್ ಸಂಬರ್ಗಿ ಹೇಳಿದ್ದು ಹೀಗೆ – Kannada News | Bigg Boss Kannada 12: Prashanth Sambargi pics his contestant

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss) ರ ಫಿನಾಲೆ ಹತ್ತಿರವಾಗುತ್ತಿದೆ. ಮನೆಯಲ್ಲಿ ಸದ್ಯಕ್ಕೆ ಎಂಟು ಮಂದಿ ಸದಸ್ಯರಿದ್ದಾರೆ. ಗಿಲ್ಲಿ ಸದ್ಯದ ವಿನ್ನರ್ ಎನ್ನಲಾಗುತ್ತಿದೆ. ಆದರೆ ಅಶ್ವಿನಿ, ರಕ್ಷಿತಾ, ಧನುಶ್ ಸಹ ವಿನ್ನರ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದೀಗ ಕೆಲವು ಮಾಜಿ ಸ್ಪರ್ಧಿಗಳು ತಮ್ಮ ಮೆಚ್ಚಿನ ಸ್ಪರ್ಧಿ ಯಾರು? ಈ ಬಾರಿ ಗೆಲ್ಲಬಹುದು ಎಂಬ ಊಹೆಯನ್ನು ಸಹ ಮಾಡುತ್ತಿದ್ದಾರೆ. ಎರಡು ಬಾರಿ ಬಿಗ್​​ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಿರುವ ಪ್ರಶಾಂತ್ ಸಂಬರ್ಗಿ ಅವರು ಈ ಬಾರಿ ತಮ್ಮ ಮೆಚ್ಚಿನ…

Read More

ಲಕ್ಷಾಂತರ ರೂ ಲಂಚ ಆರೋಪ: CPRI ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ, ಕೋಟ್ಯಂತರ ರೂ ಪತ್ತೆ – Kannada News | CBI Raids Bengaluru CPRI Official: 3.59 Cr Cash, Foreign Currency Seized

ಬೆಂಗಳೂರು, ಜನವರಿ 09: ಸೆಂಟ್ರಲ್ ಪವರ್ ರಿಸರ್ಚ್‌ ಇನ್ಸ್ಟಿಟ್ಯೂಟ್ ಜಂಟಿ ನಿರ್ದೇಶಕ ರಾಜಾರಾಮ್ ಮೋಹನ್ ರಾವ್ ಚೆನ್ನು ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ (CBI Raid) ಮಾಡಿದ್ದಾರೆ. 9.5 ಲಕ್ಷ ರೂ. ಲಂಚ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದ್ದು, ಈ ವೇಳೆ ಅವರ ನಿವಾಸದಲ್ಲಿ 3.59 ಕೋಟಿ ರೂ ನಗದು ಪತ್ತೆ ಆಗಿದೆ. ವಿದೇಶಿ‌ ಕರೆನ್ಸಿ (Foreign currency) ಮತ್ತು ಚಿನ್ನಾಭರಣಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಮುಖ ದಾಖಲೆಗಳು ವಶಕ್ಕೆ ಲಂಚ…

Read More

Mysuru: ತವರಿಗೆ ಬಂದ್ರೂ ತಪ್ಪಲಿಲ್ಲ ಪತಿ ಕಾಟ; ಬಡಿದು ಪತ್ನಿಯನ್ನೇ ಕೊಂದ ಕುಡುಕ ಗಂಡ! – Kannada News | Husband Arrested for Brutally Killing Wife Over Domestic Dispute in Nanjangud, Mysuru

ಮೈಸೂರು, ಜನವರಿ 09: ತನ್ನಿಂದ ದೂರವಾಗಿ ತವರು ಮನೆ ಸೇರಿದ್ದ ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ. ಸುಧಾ ಮೃತ ಮಹಿಳೆಯಾಗಿದ್ದು, ಮರದ ತುಂಡಿನಿಂದ ಹೊಡೆದು ಮರ್ಡರ್​​ ಮಾಡಿರುವ ಆರೋಪಿ ಮಹೆಶ್​​ನನ್ನು ಪೊಲೀಸರು ಬಂಧಿಸಿದ್ದಾರೆ. ತಾಳಿ ಕಟ್ಟಿದ ಪತಿಯೇ ಪತ್ನಿಯನ್ನು ಕೊಲೆ ಮಾಡಿರೋದು ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ಘಟನೆ ಏನು? 13 ವರ್ಷಗಳ ಹಿಂದೆ ಮಲ್ಲಹಳ್ಳಿ ಗ್ರಾಮದ ಮಹೇಶ್ ಜೊತೆ ವಿವಾಹವಾಗಿದ್ದ ಸುಧಾ ಎರಡು ವರ್ಷಗಳ ಹಿಂದೆ…

Read More