ಬೆಂಗಳೂರಿನಲ್ಲಿ ಕರಗ ವೈಭವ! ಮಲ್ಲಿಗೆ ಹೂವಿನ ಅಲಂಕಾರದಲ್ಲಿ ಕಂಗೊಳಿಸಿದ ದ್ರೌಪದಮ್ಮ; ಭಕ್ತಸಾಗರದಲ್ಲಿ ಮೊಳಗಿದ ಗೋವಿಂದ ನಾಮ
ಬೆಂಗಳೂರಿನ ಧಾರ್ಮಿಕ ವೈಭವದ ಪ್ರತೀಕವಾದ 'ಬೆಂಗಳೂರು ಕರಗ' ಉತ್ಸವವು ತಡರಾತ್ರಿ ಅತ್ಯಂತ ಅದ್ಧೂರಿಯಾಗಿ ಮತ್ತು ಸಾಂಪ್ರದಾಯಿಕವಾಗಿ ಸಂಪನ್ನಗೊಂಡಿದೆ. ತಿಗಳರಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಆರಂಭವಾದ ಈ ಶಕ್ತ್ಯೋತ್ಸವವನ್ನು ಕಣ್ಣುಂಬಿಕೊಳ್ಳಲು ಭಕ್ತಸಾಗರವೇ ಹರಿದುಬಂದಿತ್ತು. ಅರ್ಚಕ ಎ. ಜ್ಞಾನೇಂದ್ರ ಅವರು ಸತತ 16ನೇ ಬಾರಿಗೆ ಮಲ್ಲಿಗೆ ಹೂವಿನಿಂದ ಅಲಂಕೃತಗೊಂಡ ದ್ರೌಪದಮ್ಮನ ಕರಗವನ್ನು ಹೊತ್ತು ಸಾಗಿದರು. ಧಾರ್ಮಿಕ ವಿಧಿವಿಧಾನಗಳ ನಂತರ ಹಸಿ ಕರಗ ದೇವಸ್ಥಾನದಿಂದ ಹೊರಬರುತ್ತಿದ್ದಂತೆ ಭಕ್ತರ ಹರ್ಷೋದ್ಗಾರ ಮುಗಿಲುಮುಟ್ಟಿತ್ತು. ಕೈಯಲ್ಲಿ ಖಡ್ಗ ಹಿಡಿದು 'ಗೋವಿಂದ.. ಗೋವಿಂದ..' ಎಂದು ನಾಮಸ್ಮರಣೆ ಮಾಡುತ್ತಿದ್ದ…